ನವದೆಹಲಿ: ಲಸಿಕೆಯನ್ನು ತಯಾರಿಸುವ ಪೂರ್ವದಲ್ಲಿ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಕೆಲವು ದೇಶಗಳಿಗೆ ಭಾರತವು ಇದಾಗಲೇ ಲಸಿಕೆಯನ್ನು ರಫ್ತು ಮಾಡಿದೆ. ಈ ಕುರಿತು ಕೇಂದ್ರ ಸರ್ಕಾರ ಇದಾಗಲೇ ಹಲವಾರು ಬಾರಿ ಸ್ಪಷ್ಟನೆಯನ್ನೂ ನೀಡಿದೆ. ಇದರ ಹೊರತಾಗಿಯೂ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿಗೆ ಧಕ್ಕೆ ಬರಲು ಉದ್ದೇಶಪೂರ್ವಕವಾಗಿ ಅವರ ವಿರುದ್ಧ ಪೋಸ್ಟರ್ ಹಂಚಿಕೆ ಕಾರ್ಯ ನಿರಾತಂಕವಾಗಿ ನಡೆದಿದೆ. ಕೋವಿಡ್ ಲಸಿಕೆಯನ್ನು ವಿದೇಶಕ್ಕೆ ನೀಡಿರುವುದನ್ನು ವಿರೋಧಿಸಿ ಪ್ರಧಾನಿ ವಿರುದ್ಧ ಮಾಡಿರುವ …
Read More »Monthly Archives: ಮೇ 2021
ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ
ಚಿತ್ರನಟ ಉಪೇಂದ್ರ ಅವರು ಕೋವಿಡ್ ಸೋಂಕಿನಿಂದ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ್ದಾರೆ. ಈ ಬಗ್ಗೆ ಟ್ವಿಟರಿನಲ್ಲಿ ಬರೆದುಕೊಂಡಿರುವ ‘ ನಿಮ್ಮೆಲ್ಲರರೈತರ ಗಮನಕ್ಕೆ, ನಿಮ್ಮೆಲ್ಲರ ಅದ್ಭುತ ಪ್ರತಿಕ್ರಿಯೆಗೆ ಧನ್ಯವಾದಗಳು. ಬೆಳೆದ ಬೆಳೆ ವ್ಯಾಪಾರವಾಗದೇ ನಾಶವಾಗುವ ಬೆಳೆಯನ್ನು ನಾವು ಕೊಂಡು ಅದನ್ನು ಸಂಕಷ್ಟದಲ್ಲಿರುವ ಜನರಿಗೆ ಉಚಿತವಾಗಿ ಹಂಚುತ್ತಿದ್ದೇವೆ. ಇದು ವ್ಯಾಪಾರ ಎಂದು ದಯವಿಟ್ಟು ತಿಳಿಯಬೇಡಿ. ಅಂತಹ ಸಂಕಷ್ಟದಲ್ಲಿರುವ ರೈತರು ಮಾತ್ರ ಈ …
Read More »ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ: 50 ಸಾವಿರ ರೂ. ವೈಯಕ್ತಿಕ ನೆರವು; ಸಚಿವ ಬಿ.ಸಿ. ಪಾಟೀಲ್
ಬೆಂಗಳೂರು: ಹಿರೇಕರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರಾದ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ. ಹಿರೇಕೆರೂರು ಮತ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು 18 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ. ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ. ಇನ್ನು ಕೆಲವು …
Read More »ಕೊರೋನಾ ತಡೆಗೆ ಮತ್ತೊಂದು ಕ್ರಮ: 17 ಜಿಲ್ಲೆಗಳ ಡಿಸಿಗಳೊಂದಿಗೆ ಪ್ರಧಾನಿ ಮೋದಿ, ಸಿಎಂ BSY ಸಂವಾದ
ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇ 18 ರಂದು ಬೆಳಗ್ಗೆ 11 ಕ್ಕೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ …
Read More »ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದವರಿಗೆ ಬಿಗ್ ಶಾಕ್: ಮದುವೆ ನಿಷೇಧಿಸಿ ಆದೇಶ
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮೇ 17 ರಿಂದ 24 ರ ವರೆಗೆ ಮದುವೆ ಆಯೋಜಿಸುವದನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಮದುವೆ ಸಮಾರಂಭಗಳು ಜರುಗುತ್ತಿದ್ದು, ಸಾರ್ವಜನಿಕರು ಹೆಚ್ಚಾಗಿ ಪಾಲ್ಗೊಂಡು ಕೋವಿಡ್-19 ರ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದೆ ಇರುವುದರಿಂದ ಕೋವಿಡ್-19 ರ ಸೋಂಕು ಹೆಚ್ಚಾಗಿ ಹರಡುತ್ತಿರುವುದು ಕಂಡುಬರುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮೇ.17 ರಿಂದ 24 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳನ್ನು …
Read More »ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಆಕ್ಸಿಜನ್ ಬಸ್ ಸೇವೆ
ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. …
Read More »ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಡಿಸಿಎಂ ಸವದಿ
ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ …
Read More »ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ
ಬೆಂಗಳೂರು: ‘ಬಿಗ್ ಬಾಸ್ – ಸೀಸನ್ 8’ ರಿಯಾಲಿಟಿ ಶೋ ರದ್ದಾಗಿದೆ. ಎಲ್ಲ ಸ್ಪರ್ಧಿಗಳು ಅವರವರ ಮನೆ ತಲುಪಿದ್ದಾರೆ. ಒಂದಷ್ಟು ಮಂದಿ ಮನೆಯಿಂದ ಹೊರಬಂದು ಕೈಲಾದ ಸಹಾಯಕ್ಕೆ ಧುಮುಕಿದ್ದಾರೆ. ಇನ್ನು ಕೆಲವರು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಸಂಬರಗಿ ‘ಬಿಗ್ ಬಾಸ್’ನಿಂದ ಹೊರಬರುತ್ತಿದ್ದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರಂತೆ! ಈ ಪೈಕಿ ಮೊದಲನೆಯದು ಹಂಸಲೇಖ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದಲ್ಲದೆ, ರವಿ ಶ್ರೀವತ್ಸ ನಿರ್ದೇಶನದ ಮತ್ತೊಂದು ಚಿತ್ರ ಮತ್ತು ಎನ್ …
Read More »ಬಿಜೆಪಿ ಮುಖಂಡ, ಡಿವೈಎಸ್‍ಪಿ ನಡುವೆ ಮಾತಿನ ಚಕಮಕಿ
ತಿಪಟೂರು: ನಿರ್ಗತಿಕರಿಗೆ, ಕೋವಿಡ್ ವಾರಿಯರ್ಸ್‌ಗಳಿಗೆ ಊಟ ವಿತರಣೆ ಮಾಡುವಾಗ ಮಾರ್ಗಸೂಚಿ ಉಲ್ಲಂಘನೆ ವಿಚಾರವಾಗಿ ಬಿಜೆಪಿ ಮುಖಂಡ ಲೋಕೇಶ್ವರ್ ಹಾಗೂ ಡಿವೈಎಸ್‍ಪಿ ನಡುವೆ ಮಾತಿನ ಚಕಮಕಿ ನಡೆದಿದೆ. ಲಾಕ್‌ಡೌನ್ ಆರಂಭವಾದಾಗಿನಿಂದ ಲೋಕೇಶ್ವರ್ ನೇತೃತ್ವದಲ್ಲಿ ಆಹಾರ ವಿತರಿಸುತ್ತಿದ್ದಾರೆ. ಅದರಂತೆ ಶನಿವಾರವೂ ಆಹಾರ ವಿತರಣೆ ತೆರಳಿದ್ದಾಗ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಸಂಬಂಧ ಪೊಲೀಸರು ಯುವಕರ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಕೆಲ ಗಂಟೆಗಳ ನಂತರ ಡಿವೈಎಸ್‍ಪಿ ಚಂದನ್ ಕುಮಾರ್ ಎನ್., ಕಲ್ಲೇಶ್ವರ ದೇವಾಲಯದ …
Read More »ಲಾಕ್‌ಡೌನ್ ನಡುವೆ ಹೆಣ್ಣು ಮಕ್ಕಳ ಕಳ್ಳಸಾಗಾಟ: ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ!
ಮಲ್ಕಂಗಿರಿ: ಲಾಕ್‌ಡೌನ್ ನಡುವೆಯೇ ಕೆಲ ದುಷ್ಕರ್ಮಿಗಳು ನೀಚ ಕೃತ್ಯಕ್ಕೆ ಕೈ ಹಾಕಿದ್ದು, ಅಮಾಯಕ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆ ನೂಕಲ ಅವರನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಹೆಣ್ಣುಮಕ್ಕಳನ್ನು ಒಡಿಶಾದ ಭೈರಾಪುತ್ರ ವಲಯದ ಕುಡುಮುಲುಗುಮ್ಮ ಗ್ರಾಮದಿಂದ ಕದ್ದು ಸಾಗಿಸಲಾಗುತ್ತಿತ್ತು. ಲಾಕ್‌ಡೌನ್ ಪರಿಶೀಲನೆ ವೇಳೆ ಶುಕ್ರವಾರ ಘಟನೆ ಬೆಳಕಿಗೆ ಬಂದಿದೆ. ಮಲ್ಕಂಗಿರಿ ತಹಸೀಲ್ದಾರ್ ವಿಜಯ್ ಮಂದಾಂಗಿ ಲಾಕ್‌ಡೌನ್ ಪರಿಶೀಲನೆ ಮಾಡುವಾಗ ವಾಹನವೊಂದರಲ್ಲಿ ಹೆಣ್ಣು ಮಕ್ಕಳು ಕುಳಿತಿದ್ದನ್ನು ಗಮನಿಸಿದ್ದಾರೆ. ಅವರ ಬಳಿ …
Read More »