Breaking News
Home / 2021 / ಮೇ (page 62)

Monthly Archives: ಮೇ 2021

ಭಾರೀ ಚರ್ಚೆಗೆ ಕಾರಣವಾದ ಸದಾನಂದ ಗೌಡರ ಲಸಿಕೆ ಹೇಳಿಕೆ

ಬೆಂಗಳೂರು, ಮೇ 13; “ಕಂಪನಿಗಳು ಅಗತ್ಯ ಪ್ರಮಾಣದಷ್ಟು ಲಸಿಕೆ ತಯಾರು ಮಾಡದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?” ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ನೀಡಿದ ಹೇಳಿಕೆ ಬಗ್ಗೆ ಭಾರೀ ಚರ್ಚೆಗಳು ಆರಂಭವಾಗಿದೆ. ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಸದಾನಂದ ಗೌಡರು, “ಹೈಕೋರ್ಟ್ ನಾಳೆಯೇ ಲಸಿಕೆ ಬೇಕು ಎನ್ನುತ್ತದೆ. ಕಂಪನಿಗಳು ಅಗತ್ಯ ಪ್ರಮಾಣದಷ್ಟು ಲಸಿಕೆ ತಯಾರು ಮಾಡದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?” …

Read More »

ಆಮ್ಲಜನಕದ ಸಿಲಿಂಡರ್‌ಗೆ ಪ್ರತಿಯಾಗಿ ಲೈಂಗಿಕತೆಯನ್ನು ಕೇಳಿದ ವ್ಯಕ್ತಿ; ನೆಟ್ಟಿಗರ ಆಕ್ರೋಶ

ನವದೆಹಲಿ: COVID-19_ ಸಾಂಕ್ರಾಮಿಕದ ಎರಡನೇ ಅಲೆಯ ಅಡಿಯಲ್ಲಿ ರಾಷ್ಟ್ರವು ಕಂಗಾಲಾಗಿರುವ ಈ ಸಮಯದಲ್ಲಿ, ಅಮಾನವೀಯ ನಡವಳಿಕೆಗಳ ಘಟನೆಗಳು, ಕಿರುಕುಳಗಳು ಹೆಚ್ಚಾಗುತ್ತಿವೆ. ಈ ಸವಾಲಿನ ಸನ್ನಿವೇಶಗಳು ಮಾನವೀಯತೆಯ ಕೆಟ್ಟದ್ದನ್ನು ಹೊರತಂದಿವೆ. ರಾಷ್ಟ್ರದಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರಿದಂತೆ, ಕೆಲವೇ ವ್ಯಕ್ತಿಗಳು ಕಾಸ್ಟಿಂಗ್ ಕೌಚ್ ತರಹದ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ಇನ್ನೊಬ್ಬರ ನೋವು ಮತ್ತು ಅಸಹಾಯಕತೆಯನ್ನು ಬಳಸುತ್ತಿದ್ದಾರೆ. ಅಂತಹ ಒಂದು ಆಘಾತಕಾರಿ ಘಟನೆಯನ್ನು ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ. ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ಎನ್ನುವ ಖಾತೆಯಲ್ಲಿ …

Read More »

ಸಿಎಂ, ಸಚಿವರ 1 ವರ್ಷದ ವೇತನ ಕೋವಿಡ್ ಪರಿಹಾರ ನಿಧಿಗೆ

ಬೆಂಗಳೂರು, ಮೇ 13; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಭಾರೀ ಆಘಾತವನ್ನು ಉಂಟು ಮಾಡಿದೆ. ಸರ್ಕಾರ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ 14 ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದೆ. ಪರಿಹಾರ ಕಾರ್ಯಗಳಿಗಾಗಿ ಸಚಿವರ ವೇತನವನ್ನು ಪರಿಹಾರ ನಿಧಿಗೆ ನೀಡಲಾಗುತ್ತದೆ. ಗುರುವಾರ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಸಂಪುಟದ 32 ಸಚಿವರು ಒಂದು ವರ್ಷದ ವೇತನವನ್ನು ಕೋವಿಡ್ -19 ಪರಿಹಾರ ನಿಧಿಗೆ ನೀಡಲಿದ್ದಾರೆ. …

Read More »

ಕೋವಿಡ್: 12ದಿನದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು; ಇಬ್ಬರು ಮಕ್ಕಳು ಅನಾಥ

ನವದೆಹಲಿ: ಭಾರತದಲ್ಲಿ ಕೋವಿಡ್ ನ ಎರಡನೇ ರೂಪಾಂತರಿ ಅಲೆ ತೀವ್ರಗತಿಯಲ್ಲಿ ಹರಡುತ್ತಿದೆ. ಕೋವಿಡ್ ಸೋಂಕಿನಿಂದ ಕುಟುಂಬಗಳು ಒಡೆದು ಹೋಗಿದ್ದು, ಜನರ ಬದುಕು ಹಳಿತಪ್ಪಿದ ರೈಲಿನಂತಾಗಿದೆ ಎಂದು ತಿಳಿಸಿದೆ. ಕೋವಿಡ್ ಸೋಂಕಿನಿಂದ ಸಂಭವಿಸಿದ ಹೃದಯವಿದ್ರಾವಕ ಘಟನೆಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದು, ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲೂ ಇಂತಹ ಘಟನೆಯೊಂದು ನಡೆದಿದೆ. ಕೋವಿಡ್ ಸೋಂಕಿನಿಂದಾಗಿ ತಂದೆ, ತಾಯಿ ಮತ್ತು ಅಜ್ಜ, ಅಜ್ಜಿ ನಿಧನರಾಗಿದ್ದು, ಇದರ ಪರಿಣಾಮ ಅರು ಮತ್ತು ಎಂಟು ವರ್ಷದ ಇಬ್ಬರು ಹೆಣ್ಣುಮಕ್ಕಳು …

Read More »

ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ – KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು : ‘ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ‘ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು …

Read More »

ಒಂದು ಪರ್ಸೆಂಟ್ ಜನಕ್ಕೆ ವ್ಯಾಕ್ಸಿನ್ ಕೊಡಲು ಸಾಧ್ಯವಾಗಿಲ್ಲ ಯಾಕೆ?: ಹೈಕೋರ್ಟ್ ತರಾಟೆ

ಬೆಂಗಳೂರು, ಮೇ. 13: ರಾಜ್ಯದ ಜನತೆಗೆ ಯಾವಾಗ ವ್ಯಾಕ್ಸಿನ್ ಕೊಡ್ತೀರಿ ? 31 ಲಕ್ಷ ಮಂದಿಗೆ ಎರಡನೇ ಡೋಸ್ ವ್ಯಾಕ್ಸಿನ್ ಯಾವಾಗ ನೀಡ್ತೀರಾ? ನಿಮಗೆ ನೀಡಲು ಸಾಧ್ಯವಿಲ್ಲ ಎನ್ನುವುದಾದರೆ ಹೇಳಿ. ನಿಮ್ಮ ಹೇಳಿಕೆಯನ್ನು ಹಾಗೇ ನ್ಯಾಯಾಲಯ ದಾಖಲಿಸಿಕೊಳ್ಳುತ್ತದೆ ! ಕೊರೊನಾ ಎರಡನೇ ಅಲೆಗೆ ತುತ್ತಾಗಿರುವ ಜನರ ಆರೋಗ್ಯ ರಕ್ಷಣೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಎಡವಿದೆ. …

Read More »

ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ : ಕಾಂಗ್ರೆಸ್

ಬೆಂಗಳೂರು: ಕೊವೀಡ್ ನಿರ್ವಹಣೆಯ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಮಾಡುತ್ತಿರುವ ಟೀಕಾ ಪ್ರಹಾರವನ್ನು ಮುಂದುವರಿಸಿರುವ ಕಾಂಗ್ರೆಸ್ , ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ ಎಂದು ಕಿಡಿಕಾರಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ” ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು, ತಿಕ್ಕಲು ಸಚಿವರಿಗೆ ಪರಿಜ್ಞಾನ, …

Read More »

ಮತ್ತೊಮ್ಮೆ ನಿರೀಕ್ಷೆ ಹುಸಿಯಾಗಿಸಿದ ಸರ್ಕಾರ; ವಿಶೇಷ ಪ್ಯಾಕೇಜ್ ಘೋಷಿಸದ ಸಿಎಂ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕಠಿಣ ಕ್ರಮಗಳಿಂದಾಗಿ ರಾಜ್ಯದಲ್ಲಿ ಹಲವರು ಸಂಕಷ್ಟಕ್ಕೀಡಾಗಿದ್ದು, ಬಡವರಿಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ನಿರೀಕ್ಷೆಯನ್ನು ಸರ್ಕಾರ ಮತ್ತೊಮ್ಮೆ ಹುಸಿಯಾಗಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಶೇಷ ಪ್ಯಾಕೇಜ್ ಬಗ್ಗೆ ಪರೋಕ್ಷವಾಗಿ ನಿರಾಕರಿಸಿದ್ದಾರೆ. ಯಾವುದೇ ಆರ್ಥಿಕ ಪ್ಯಾಕೇಜ್ ಪ್ರಸ್ತಾಪಿಸದ ಸಿಎಂ, ಕೊರೊನಾ ಹೆಚ್ಚಾಗುತ್ತಿರುವುದರಿಂದ ಸೋಂಕಿತರ ಜೀವ ಉಳಿಸುವುದು ಸರ್ಕಾರದ ಮೊದಲ ಆದ್ಯತೆ ಎಂದಿದ್ದಾರೆ. ಕಠಿಣ ಕ್ರಮ ಜಾರಿ ಮಾಡಿರುವುದರಿಂದ ಜನರು ತೊಂದರೆಗೀಡಾಗಿದ್ದಾರೆ ನಿಜ. …

Read More »

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿ

ಬೆಂಗಳೂರು : ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿರುವ ಅವರು, ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ …

Read More »

ಸುಮಾರು 50 ಲಕ್ಷ ರೂಪಾಯಿಗಳಲ್ಲಿ 60 ಬೆಡ್ ಗಳ ಉಚಿತ ಕೋವಿಡ್ ಕೇರ್ ಸೆಂಟರ್

ಬೆಳಗಾವಿ: ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ  ತಿಳಿಸಿದರು. ಕೊರೊನಾ ಮಹಾಮಾರಿಯಿಂದ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ …

Read More »