Breaking News
Home / 2021 / ಮೇ (page 64)

Monthly Archives: ಮೇ 2021

ಕೋವಿಡ್ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ಎಷ್ಟು ದಿನಗಳ ನಂತರ ಎರಡನೇ ಡೋಸ್‌ ತೆಗೆದುಕೊಳ್ಳಬೇಕು?

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ವಿರುದ್ಧದ ವ್ಯಾಕ್ಸಿನೇಷನ್ ಅಭಿಯಾನವು ಕಳೆದ ಒಂದೂವರೆ ತಿಂಗಳಲ್ಲಿ ವೇಗವನ್ನು ಪಡೆದುಕೊಂಡಿದೆ. ಪ್ರತಿದಿನ 20 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಈವರೆಗೆ 17.52 ಮಿಲಿಯನ್ ಕೊರೋನಾ ಲಸಿಕೆಗಳನ್ನು ನೀಡಲಾಗಿದೆ. ಎರಡೂ ಲಸಿಕೆ ಪ್ರಮಾಣವನ್ನು ತೆಗೆದುಕೊಂಡ ಲಕ್ಷಾಂತರ ಜನರಿದ್ದಾರೆ. ಲಸಿಕೆಯ ಎರಡನೇ ಪ್ರಮಾಣವನ್ನು ಯಾವಾಗ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಜನರಲ್ಲಿ ಇನ್ನೂ ಗೊಂದಲವಿದೆ. ವಿಶೇಷವಾಗಿ ಹೆಚ್ಚಿನ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಲಭ್ಯವಿರುವ ಕೋವಿಶೀಲ್ಡ್ …

Read More »

ಗ್ರಾಹಕರಿಗೆ ಶುಭ ಸುದ್ದಿ ನೀಡಿದ ಟಾಟಾ ಮೋಟಾರ್ಸ್ !

ಮುಂಬೈ: ದೇಶದಲ್ಲಿ ಕರೋನಾ ಮಹಾಮಾರಿಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳು ಲಾಕ್‌ಡೌನ್‌ಗಳನ್ನು ವಿಧಿಸಿವೆ. ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶೀಯ ವಾಹನ ದೈತ್ಯ ಟಾಟಾ ಮೋಟಾರ್ಸ್ ತನ್ನ ಗ್ರಾಹಕರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಟಾಟಾ ಮೋಟಾರ್ಸ್ ಪ್ರಕಟಣೆಯ ಪ್ರಕಾರ, ಏಪ್ರಿಲ್ 31, 2021 ಮತ್ತು ಮೇ 31, 2021 ರ ಅವಧಿಯವರೆಗೆ ಮುಕ್ತಾಯಗೊಳ್ಳುವ ಕಾರುಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ಪರಿಷ್ಕೃತವಾಗಿ 2021 ರ ಜೂನ್ …

Read More »

ಸುದ್ದಿ ವಿಶ್ಲೇಷಣೆ | ಕೊವಿಡ್​ ಸುನಾಮಿ ಮಧ್ಯೆ ರಾಜ್ಯದ ಐಎಎಸ್ ಅಧಿಕಾರಿಗಳ ವಿಫಲತೆ ಬಗ್ಗೆ ಮಾತನಾಡುವವರು ಯಾರು?​

ಇದನ್ನು ಓದಿದರೆ ನಿಮಗೆ ಆಶ್ಚರ್ಯ ಆಗಬಹುದು ಅಥವಾ ಶಾಕ್ ಆಗಬಹುದು. ಕರ್ನಾಟಕದಲ್ಲಿ ಆಮ್ಲಜನಕದ ಕೊರತೆ ಮಾತ್ರ ಇದೆ ಎಂದುಕೊಂಡಿರಾ? ಸದ್ಯ ಅದು ಎಲ್ಲರಿಗೂ ಗೊತ್ತಿರುವ ಸಂಗತಿ. ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಕೊರತೆಯೂ ಇದೆ. ನಿಮಗೆ ಇದನ್ನು ಕೇಳಿದರೆ ಅಚ್ಚರಿ ಮತ್ತು ಶಾಕ್ ಎರಡೂ ಆಗುತ್ತೆ ಅಲ್ಲವೇ? ನೀವು ತುಂಬಾ ಸಿನಿಕರಾಗಿದ್ದರೆ, ಐಎಎಸ್ ಅಧಿಕಾರಿಗಳು ಎಂದರೆ ಬಿಳಿ ಆನೆ ಇದ್ದಂತೆ, ಅವರ ಬಗ್ಗೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು. ಅವರಿಂದ ನಮಗೇನು ಪ್ರಯೋಜನ ಇಲ್ಲ …

Read More »

ರಂಜಾನ್ ಹಬ್ಬ : ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರ ಸೂಚನೆ

ಬೆಂಗಳೂರು : ನಾಳೆ ದೇಶಾದ್ಯಂತ ರಂಜಾನ್ ಹಬ್ಬವಿದ್ದು ಸಾಮೂಹಿಕ ಪ್ರಾರ್ಥನೆ ಮಾಡದಂತೆ ನಗರ ಪೊಲೀಸರು ಸೂಚಿಸಿದ್ದಾರೆ. ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮಸೀದಿಯ ಹಜರತ್​ ಗಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಹಜರತ್ ಗಳಿಗೆ ಹೇಳಿರುವ ಪೊಲೀಸರು, ಮಸೀದಿಗೆ ಜನರು ಬರದಂತೆ ಹೇಳಿ. ಪ್ರಾರ್ಥನೆಯನ್ನು ಮನೆಯಲ್ಲಿಯೇ ಮಾಡಿ ಎಂದು ತಿಳಿಸಿ ಎಂದು ಹೇಳಿದ್ದಾರೆ. ಆಯಾ ಹಜಾರತ್ ಗಳು ತಮ್ಮ ಸುತ್ತ ಮುತ್ತ ಇರುವ ಮುಸಲ್ಮಾನ ಬಾಂಧವರಿಗೆ ತಿಳಿಸುವಂತೆ ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. …

Read More »

ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾರ್ಯಶೈಲಿಗೆ ಕಟೀಲು ಮೆಚ್ಚುಗೆ

ಬೆಂಗಳೂರು: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು …

Read More »

ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಗಾಯದ ಮೇಲೆ ಬರೆ : ಕುರುಬೂರು ಶಾಂತಕುಮಾರ್

ಬೆಂಗಳೂರು : ರಸಗೊಬ್ಬರ ಬೆಲೆ ಏರಿಕೆ ಕೇಂದ್ರ ರಾಜ್ಯ ಸರ್ಕಾರಗಳ ಗೋಮುಖ ವ್ಯಾಘ್ರ ನಡವಳಿಕೆ. ಯಾವುದೇ ಕಾರಣಕ್ಕೂ ರಸಗೊಬ್ಬರ ಬೆಲೆ ಏರಿಕೆ ಮಾಡುವುದಿಲ್ಲ ಹಳೆಯ ದರದಲ್ಲಿಯೇ ರಸಗೊಬ್ಬರಗಳು ಮಾರಾಟವಾಗುತ್ತದೆ. ರೈತರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳುತ್ತಲೇ ಬೆಲೆ ಏರಿಕೆ ಮಾಡಿ ರೈತರನ್ನು ಮೋಸಗೊಳಿಸಿದ್ದಾರೆ. ಹೊಸ ದರ ನಿಗದಿಯಾಗಿದೆ ಡಿಎಪಿ ಪ್ರತಿ ಚೀಲಕ್ಕೆ 1200 ರಿಂದ ಏರಿಕೆ …

Read More »

ಕೊರೊನಾ ಸಂಕಷ್ಟದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ :ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು, ಮೇ 13-ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಸಂಬಂಧಿಸಿದ ಜಮೀನಿನ ರೈತರಿಗೆ ನೇರವಾಗಿ ಪರಿಹಾರ ಧನವನ್ನು ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಶಿವಮೊಗ್ಗ- ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ -13, ಮುಧುಗಿರಿ- ಆಂಧ್ರಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234, ಕೊಳ್ಳೆಗಾಲ- ಕೇರಳ …

Read More »

ಹರಿಹರ ಆಸ್ಪತ್ರೆಯಲ್ಲಿ ರೋಗಿಗೆ ಸಿಗದ ಸೂಕ್ತ ಚಿಕಿತ್ಸೆ: ಗೋಳಾಟದ ವಿಡಿಯೋ ವೈರಲ್

ದಾವಣಗೆರೆ, ಮೇ 12: ದಾವಣಗೆರೆ ಜಿಲ್ಲೆ ಹರಿಹರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ರೋಗಿಯೊಬ್ಬರ ಸಂಬಂಧಿಕರು ಗೋಳಾಡುವ ವಿಡಿಯೋ ವೈರಲ್ ಆಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಹಾಗೂ ಕೋವಿಡೇತರ ರೋಗಿಗಳು ಹೆಚ್ಚಾಗಿ ಬರುತ್ತಿದ್ದು, ಕೊರೊನಾ ಸೋಂಕಿಗೆ ಜನರು ಬಲಿಯಾಗುತ್ತಿದ್ದಾರೆ. ಚಿಕಿತ್ಸೆಗೆ ಬಂದರೆ ವೈದ್ಯರಾಗಲಿ, ದಾದಿಯರಾಗಲಿ ತಕ್ಷಣಕ್ಕೆ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಹಲವು ರೀತಿಯ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿದೆ. ಯಾವ ಆರೋಗ್ಯ ಅಧಿಕಾರಿಗಳು ಇತ್ತ …

Read More »

ಲಾಕ್‌ಡೌನ್: ಪೊಲೀಸ್ ಹೊಡೆತ ತಪ್ಪಿಸಲು ಸೈಕ್ಲಿಸ್ಟ್‌ಗಳ ಮಾಸ್ಟರ್ ಪ್ಲಾನ್

ಉಡುಪಿ, ಮೇ 12: ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಯಾರಾದರೂ ಬೈಕ್ ಅಥವಾ ವಾಹನಗಳಲ್ಲಿ ಹೊರಬಂದರೆ ಪೊಲೀಸರ ಲಾಠಿ ಏಟು ಬೀಳುವುದು ಗ್ಯಾರಂಟಿಯಾಗಿತ್ತು. ಆದರೆ, ಪೊಲೀಸರಿಂದ ಲಾಠಿ ಏಟು ತಪ್ಪಿಸುವುದಕ್ಕಾಗಿ ಉಡುಪಿಯ ವ್ಯಕ್ತಿಯೊಬ್ಬರು ತಾತ್ಕಾಲಿಕ ಹಿಂಭಾಗದ ರಕ್ಷಣೆ, ಹೆಲ್ಮೆಟ್ ಮತ್ತು ಮಾಸ್ಕ್ ನೊಂದಿಗೆ ಸೈಕಲ್ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪತ್ರಕರ್ತ ನೋಲನ್ ಪಿಂಟೊ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಸೈಕಲ್‌ನಲ್ಲಿ ಹೋಗುವಾಗ ವ್ಯಕ್ತಿಯೊಬ್ಬ ತನ್ನ …

Read More »

ಆಮ್ಲಜನಕ ಕೊರತೆ: ಯೋಗಿ ಸರ್ಕಾರದ ಹುಳುಕು ಬಹಿರಂಗಪಡಿಸಿದ ಹೈಕೋರ್ಟ್

ಲಕ್ನೋ, ಮೇ 12: ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ನೀಡಿರುವ ಅಂಕಿ ಅಂಶಗಳ ದೋಷವನ್ನು ಅಲಹಾಬಾದ್ ಹೈಕೋರ್ಟ್ ಬಹಿರಂಗಪಡಿಸಿದೆ. ಆಸ್ಪತ್ರೆಯ ಹಾಸಿಗೆಗಳ ಲಭ್ಯತೆಯ ಬಗ್ಗೆ ಸರ್ಕಾರದ ಸಹಾಯವಾಣಿ ಮತ್ತು ಪೋರ್ಟಲ್ ನಡುವೆ ಸರಿಯಾದ ಹೊಂದಾಣಿಕೆಯಿಲ್ಲ,ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಉತ್ತರ ಪ್ರದೇಶ ಆಡಳಿತ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಯೋಗಿ ಸರ್ಕಾರದ ಹುಳುಕನ್ನು ಕೋರ್ಟ್ ಬಹಿರಂಗಪಡಿಸಿದೆ. ”ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯಾಗದೆ ಕೋವಿಡ್‌ …

Read More »