Breaking News
Home / 2021 / ಮೇ (page 66)

Monthly Archives: ಮೇ 2021

ಕೊರೊನಾ ಸೋಂಕು ವರದಿ ನೆಗೆಟಿವ್‌ ಬರುತ್ತಿದ್ದಂತೆ ಮಕ್ಕಳನ್ನು, ಕುಟುಂಬದವರನ್ನು ಭೇಟಿಯಾದ ಅಲ್ಲು ಅರ್ಜುನ್‌..!

ನವದೆಹಲಿ: ಕೊರೊನಾ ಸೋಂಕು ದೃಢಪಟ್ಟು ಕ್ವಾರಂಟೈನ್‌ನಲ್ಲಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌‌ ಅವರ ವರದಿ ನೆಗೆಟಿವ್‌ ಬರುತ್ತಿದ್ದಂತೆ ತಮ್ಮ ಮಕ್ಕಳನ್ನು ಮುದ್ದಾಡಿದ್ದಾರೆ. ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕಳೆದ 14 ದಿನಗಳ ಹಿಂದೆ ಕೊರೊನಾ ಸೋಂಕು ಹಿನ್ನೆಲೆ ಕ್ವಾರಂಟೈನ್‌ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಸೋಂಕಿನಿಂದ ಗುಣಮುಖರಾಗಿದ್ದು, ಅವರ ಪರೀಕ್ಷಾ ವರದಿಯಲ್ಲಿ ನೆಗೆಟಿವ್‌ ಬಂದಿದೆ. 15 ದಿನಗಳ ಬಳಿಕ ಅವರು ತಮ್ಮ ಮಕ್ಕಳನ್ನು ಹಾಗೂ ಕುಟುಂಬದರನ್ನು …

Read More »

ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ?:I.C.M.R.

ನವದೆಹಲಿ: ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಮಾಡಬೇಕು ಎಂದು ಐಸಿಎಂಆರ್ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಕೇಂದ್ರ ಸರ್ಕಾರಕ್ಕೆ ಸಲಹೆ ನಿಡಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಮುಂದಿನ 6-8 ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡುವುದು ಒಳ್ಳೆಯದು. ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಅಗತ್ಯವಿದೆ ಎಂದು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ ಅಭಿಪ್ರಾಯಪಟ್ಟಿದ್ದಾರೆ. …

Read More »

ಕಿತ್ತೂರು, ಬೈಲಹೊಂಗಲ ತಾಲ್ಲೂಕಿನ ‌ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಉಸ್ತುವಾರಿ ಸಚಿವ ಕಾರಜೋಳ

ಬೆಳಗಾವಿ: ಜಿಲ್ಲೆಗೆ ಅಗತ್ಯವಿರುವ ಕೋವಿಡ್ ಲಸಿಕೆ ಪೂರೈಕೆಯಾದ ತಕ್ಷಣವೇ ಈಗಾಗಲೇ ಮೊದಲ ಡೋಸ್ ಪಡೆದುಕೊಂಡವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ(ಮೇ 12) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲ ಡೋಸ್ ಲಸಿಕೆ ಪಡೆದುಕೊಂಡಿರುವವರು …

Read More »

ಸಿಇಟಿ ಪರೀಕ್ಷೆ ಮುಂದೂಡಿಕೆ: ದಿನಾಂಕ ಮರು ನಿಗದಿ ಮಾಡಲಾಗಿದೆ.

ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ. ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆಯಾದ ಕಾರಣ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ …

Read More »

ಕೊರೋನಾಗೆ ಬಲಿಯಾದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್

ಬೆಂಗಳೂರು,ಮೇ.12- ದಕ್ಷತೆಗೆ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್(70) ಅವರು ಕೊರೊನಾಗೆ ಬಲಿಯಾಗಿದ್ದಾರೆ. ದಿ. ಮಾಜಿ ವಿಧಾನ ಪರಿಷತ್ ಸದಸ್ಯ ವೀರಣ್ಣ ಗೌಡ ಅವರ ಪುತ್ರರಾದ ಕೆ.ವಿ.ಆರ್. ಠಾಗೂರ್ ಅವರು ಸದಾ ಹಸನ್ಮುಖಿಯಾಗಿ, ಉತ್ಸಾಹದಿಂದಲೇ ಎಲ್ಲರನ್ನು ಬೆನ್ನುತಟ್ಟಿ ಬೆಳೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸರಳ,ಸಜ್ಜನ ಅಧಿಕಾರಿಯೆಂದೇ ಗುರುತಿಸಿ ಕೊಂಡಿದ್ದ ಠಾಗೂರರು ಸಾಹಿತ್ಯ …

Read More »

ಹೆಲ್ಮೆಟ್ ಧರಿಸದ ಬೈಕ್​ ಸವಾರನಿಗೆ ದಂಡ ಹಾಕಿದ ಎಸ್​ಐಗೆ ನಡುರಸ್ತೆಯಲ್ಲೇ ಎಸಿ, ತಹಸೀಲ್ದಾರ್ ಅವಾಜ್​! ವಿಡಿಯೋ ವೈರಲ್​

ಮಂಡ್ಯ: ಹೆಲ್ಮೆಟ್​ ಹಾಕದೆ ಬೈಕ್​ನಲ್ಲಿ ಬಂದ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕಿದ ಸಬ್​ಇನ್​ಸ್ಪೆಕ್ಟರ್​ಗೆ ನಡು ರಸ್ತೆಯಲ್ಲೇ ನಿಂತು ಎಸಿ ಮತ್ತು ತಹಸೀಲ್ದಾರ್ ಅವಾಜ್​ ಹಾಕಿರುವ ವಿಡಿಯೋ ವೈರಲ್​ ಆಗಿದೆ. ಇನ್ನುಂದೆ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕದಂತೆ ಪೊಲೀಸರಿಗೆ ಎಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಕುಂಞ ಅಹಮದ್ ವಾರ್ನಿಗ್​ ಮಾಡಿರುವ ಘಟನೆ ನಾಗಮಂಗಲದಲ್ಲಿ ಸಂಭವಿಸಿದೆ.  ನಾಗಮಂಗಲ ಟೌನ್ ಪೊಲೀಸ್ ಠಾಣೆ ಎಸ್‌ಐ ರವಿಶಂಕರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡುತ್ತಿದ್ದರು, …

Read More »

ಹಳೆ ವೀಡಿಯೋಗೆ ಧ್ವನಿ ; ಪೊಲೀಸರಿಂದ ಪದ್ಮಾ ಹರೀಶ್ ವಿಚಾರಣೆ

ಬೆಂಗಳೂರು, : ಮುಂಬೈ ಪೊಲೀಸರು ವೃದ್ಧ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋಗೆ ಹಿನ್ನೆಲೆ ಧ್ವನಿ ಕೊಟ್ಟಿದ್ದ ಕೈ ಪಕ್ಷದ ಮಹಿಳಾ ಮಣಿ ತೊಂದರೆಯಲ್ಲಿ ಸಿಲುಕಿದ್ದಾರೆ. ಕರ್ನಾಟಕ ಪೊಲೀಸರಿಗೆ ಛೀಮಾರಿ ಹಾಕಿ ವೈರಲ್ ಮಾಡಿದ್ದ ಕೈ ಪಕ್ಷದ ಮಹಿಳಾ ಮಣಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಕುರಿತು ನಗರ ಪೊಲೀಸ್ ಆಯುಕ್ತ ಕಮಲಪಂತ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕೈ ಪಕ್ಷದ ನಾಯಕಿ ಇದೀಗ …

Read More »

She for Society: ಕೊರೋನಾ ವಾರಿಯರ್ಸ್ ಆದ ಬೆಂಗಳೂರಿನ ಮಹಿಳಾ ಬೈಕರ್ಸ್; ಸೋಂಕಿತರಿಗೆ ಉಚಿತ ಆಂಬುಲೆನ್ಸ್ ಸೇವೆ…

ಕೊರೋನಾ ವಿರುದ್ಧದ ಹೋರಾಟಕ್ಕೆ ಹಲವಾರು ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಅವುಗಳಲ್ಲಿ ಬೆಂಗಳೂರಿನ ಮಹಿಳಾ ಬೈಕರ್‌ಗಳ ತಂಡ ಕೂಡ ಒಂದು. ಹೌದು, ಕಳೆದ ಒಂದು ವಾರದಿಂದ ಉಚಿತ ಆಂಬುಲೆನ್ಸ್ ಸೇವೆ ನೀಡುತ್ತಿರುವ ಈ ಲೇಡಿ ಬೈಕರ್ಸ್ ಗ್ಯಾಂಗ್ ಎಲ್ಲರಿಗೂ ಮಾದರಿಯಾಗಿದೆ. ‘ಶೀ ಫಾರ್ ಸೊಸೈಟಿ’ ಸೈನಿಕರ ಹಾಗೂ ಸೈನಿಕರ ಕುಟುಂಬಗಳಿಗೆ ನೆರವಾಗಲು ಕೆಲ ವರ್ಷಗಳ ಹಿಂದೆ ಪ್ರಾರಂಭವಾದ ತಂಡ. ಹರ್ಷಿಣಿ ವೆಂಕಟೇಶ್ ಸಾರಥ್ಯದಲ್ಲಿ ಹತ್ತು ಜನರ ಮಹಿಳಾ ಬೈಕರ್‌ಗಳು ಸೇರಿ …

Read More »

ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟ ಸ್ಥಗಿತ

ಪಣಜಿ, : ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.ಗೋವಾದಲ್ಲಿರುವ ಏಕಮಾತ್ರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಾಬೊಲಿಮ್‌ನಲ್ಲಿ ಸೆಪ್ಟೆಂಬರ್ ವರೆಗೆ ರಾತ್ರಿ ಹೊತ್ತು ವಿಮಾನ ಸಂಚಾರ ನಿಷೇಧಿಸಲಾಗಿದೆ. ಟಾಟಾ ಪವರ್ ಎಸ್‌ಡಿ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ, ಸಂಜೆಯ ಸಮಯದಲ್ಲಿ ಕಾಮಗಾರಿಯನ್ನು ನಡೆಸುತ್ತಿದೆ. ರಾತ್ರಿ ಹೊತ್ತು ವಿಮಾನ ಹಾರಾಟ ನಿಷೇಧಿಸುವುದರಿಂದ ನಾಗರಿಕ ವಿಮಾನ ಕಾರ್ಯಾಚರಣೆಗೆ ಅಷ್ಟೊಂದು ತೊಂದರೆಯಾಗುವುದಿಲ್ಲ ಎಂದು ಗೋವಾ ಏರ್‌ಪೋರ್ಟ್ ನಿರ್ದೇಶಕ ಗಗನ್ ಮಲಿಕ್ ಹೇಳಿದ್ದಾರೆ. ನವೀಕರಣ ನಡೆಯುತ್ತಿರುವ …

Read More »

ಮೈಸೂರು ತಲುಪಿದ ಆಮ್ಲಜನಕ ಟ್ಯಾಂಕ್‌

ಮೈಸೂರು: ಕೇಂದ್ರ ಸರ್ಕಾರವು ಆಮ್ಲಜನಕ ಎಕ್ಸ್‌ಪ್ರೆಸ್‌ನಲ್ಲಿ ಮಂಗಳವಾರ ಬೆಂಗಳೂರಿಗೆ ಸಾಗಿಸಿದ್ದ ಆಮ್ಲಜನಕದ ಒಂದು ಕಂಟೈನರ್‌ ಅನ್ನು (ಟ್ಯಾಂಕ್‌) ಬುಧವಾರ ಬೆಳಿಗ್ಗೆ ಮೈಸೂರಿಗೆ ತರಲಾಯಿತು. ಈ ಕಂಟೈನರ್‌ನಲ್ಲಿ 20 ಸಾವಿರ ಲೀಟರ್ ಆಮ್ಲಜನಕ ತುಂಬಿದೆ. ಈ ಆಮ್ಲಜನಕವನ್ನು ಸ್ಥಳೀಯವಾಗಿ ಶೇಖರಿಸಿ ಕೂಡಲೇ ಕಂಟೈನರ್‌ ಹಿಂದಿರುಗಿಸಬೇಕಿತ್ತು. ಆದರೆ, ಇಷ್ಟು ಆಮ್ಲಜನಕವನ್ನು ಸಂಗ್ರಹಿಸಲು ಬೇಕಾದ ಶೇಖರಣಾ ಘಟಕ ಮೈಸೂರು ಜಿಲ್ಲೆಯಲ್ಲಿ ಇರಲಿಲ್ಲ. ಹೀಗಾಗಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಕೋಪ ನಿರ್ವಹಣೆ ಕಾಯ್ದೆ ಪ್ರಯೋಗಿಸಿ …

Read More »