Breaking News
Home / 2021 / ಮೇ (page 67)

Monthly Archives: ಮೇ 2021

ಓಲಾ ಕ್ಯಾಬ್‌ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ:

ಬೆಂಗಳೂರು, ಮೇ12-ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಲನೆ ನೀಡಿದರು. ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರ್ಕಾರದ ಜತೆ ಗಿವ್‌ ಇಂಡಿಯಾ ಹಾಗೂ ಓಲಾ ಕ್ಯಾಬ್‌ ಕಂಪನಿಗಳು ಕೈಜೋಡಿಸಿವೆ.ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಇಡೀ ರಾಜ್ಯದಲ್ಲಿಯೇ ಮೊತ್ತ …

Read More »

ಮಾಧ್ಯಮಗಳ ಮೇಲೆ ನಿರ್ಭಂಧ ಸಾದ್ಯವಿಲ್ಲ ಎಂದ ಕೋರ್ಟ್‌

ಬೆಂಗಳೂರು: ಕರೊನಾದ ಭೀಕರತೆಯ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿರುವುದರಿಂದ ಟಿ.ವಿ ಚಾನೆಲ್‌ಗಳನ್ನೇ ದೂಷಿಸಿ ದಿನನಿತ್ಯವೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುವುದು ಹೊಸತೇನಲ್ಲ. ಯಾವುದೇ ವಿಷಯಗಳನ್ನು ಮಾಧ್ಯಮಗಳು ವರದಿ ಮಾಡಿದಾಗಲೂ ಇಂಥ ಟೀಕೆಗಳು ಬರುತ್ತವೆ.ಕರೊನಾದ ಕರಾಳ ಮುಖವನ್ನು ಬಿಚ್ಚಿಡುವ ಚಾನೆಲ್‌ಗಳನ್ನು ಎಡಬಿಡದೇ ನೋಡುತ್ತಾ ಅದರ ವಿರುದ್ಧ ದೂಷಿಸುವವರೇ ಹೆಚ್ಚಾಗಿ ಈ ರೀತಿಯ ಕಮೆಂಟ್‌ಗಳನ್ನು ಮಾಡುವುದು ತಿಳಿದ ವಿಷಯವೇ. ಹೀಗೆ ಮಾಧ್ಯಮಗಳನ್ನು ದೂಷಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ರೀತಿಯ …

Read More »

ರಾಜ್ಯಕ್ಕೆ 12 ದಿನಗಳಲ್ಲಿ 8 ಲಕ್ಷ ಡೋಸ್‌ ಲಸಿಕೆ ಪೂರೈಕೆ: ಮುಖ್ಯ ಕಾರ್ಯದರ್ಶಿ

ಬೆಂಗಳೂರು: ’45 ವರ್ಷ ದಾಟಿದವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುತ್ತಿದ್ದು, ಪ್ರತಿ 15 ದಿನಕ್ಕೆ 15 ಲಕ್ಷ ಡೋಸ್‌ ಲಸಿಕೆ ಕೊಡಬೇಕಿತ್ತು. ಆದರೆ, ರಾಜ್ಯಕ್ಕೆ 12 ದಿನಗಳಲ್ಲಿ 8 ಲಕ್ಷ ಮಾತ್ರ ಬಂದಿದೆ’ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ತಿಳಿಸಿದ್ದಾರೆ. ‘ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಕೊಡುತ್ತೇವೆ. 45 ವರ್ಷ ದಾಟಿದವರಿಗೆ ಕೊಡಲು 15 ದಿನಗಳಲ್ಲಿ 80 ಸಾವಿರ ಡೋಸ್‌ ಮಾತ್ರ ಕೋವ್ಯಾಕ್ಸಿನ್‌ ಲಸಿಕೆ ಬಂದಿದೆ. …

Read More »

ಡಿಸಿಎಂ ಸವದಿ ಸಹೋದರನ ಪುತ್ರ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು; ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಡಿಸಿಎಂ ಸವದಿ ಅವರ ಸಹೋದರ ಪರಪ್ಪ ಸವದಿ ಅವರ ಪುತ್ರ ವಿನೋದ್ ಸವದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕೇವಲ 36 ವರ್ಷದ ವಿನೋದ್ ಸವದಿ ಕೊರೊನಾಗೆ ಬಲಿಯಾಗಿರುವುದು ಕುಟುಂಬದವರಿಗೆ ಬರಸಿಡಿಲುಬಡಿದಂತಾಗಿದೆ.

Read More »

ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡದ ‘ಆಯುಷ್ಮಾನ್ ಭಾರತ್’ ಯಾವ ಪುರುಷಾರ್ಥಕ್ಕೆ.? ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶವಿಲ್ಲವೆಂದ ಮೇಲೆ ಕೇಂದ್ರದ ಆಯುಷ್ಮಾನ್ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲ ಎಂದಾದರೆ ಈ ಯೋಜನೆ ಇರುವುದು ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರು ಉಚಿತವಾಗಿ …

Read More »

ಕೊರೋನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ?: ಎಂ.ಬಿ. ಪಾಟೀಲ್ ಪ್ರಶ್ನೆ

ವಿಜಯಪುರ: ದೇಶದಲ್ಲಿ ಜನರು ಸಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರಾಜಪಥ ಅಭಿವೃದ್ಧಿ, ಪ್ರಧಾನಮಂತ್ರಿಗಳ ನಿವಾಸ, ಉಪರಾಷ್ಟ್ರಪತಿಗಳ ನಿವಾಸದ ಪ್ರಗತಿಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿಯವರು ಈ ಹಿಂದೆ ಯಾವ ಮಹಾರಾಜರು ಮಾಡದ ರೀತಿಯಲ್ಲಿ ವರ್ತಿಸುತ್ತಿದ್ದಾರೆ‌. …

Read More »

ತಜ್ಞರ ಎಚ್ಚರಿಕೆ ಕಡೆಗಣಿಸಿ ಜನರನ್ನು ಸಾವಿನ ದವಡೆಗೆ ನೂಕಿದ ಸರ್ಕಾರ; ಲಸಿಕೆ ಕೊಡುವಲ್ಲೂ ವಿಫಲ: ಬದುಕು ಹಸನಾಗುವುದಿರಲಿ ಸತ್ತರೂ ಸಂಸ್ಕಾರವಿಲ್ಲದ ಸ್ಥಿತಿ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ಆಕ್ಸಿಜನ್, ಐಸಿಯು ಆಯ್ತು ಈಗ ವ್ಯಾಕ್ಸಿನ್ ಗಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಜ್ಞರ ಎಚ್ಚರಿಕೆ ಕಡೆಗಣಿಸಿ ಜನರನ್ನು ಸಾವಿನ ದವಡೆಗೆ ದೂಡಿದ್ದೂ ಅಲ್ಲದೇ ಲಸಿಕೆ ಹಂಚಿಕೆಯಲ್ಲಿಯೂ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದೆ. ಆಕ್ಸಿಜನ್, ಐಸಿಯು, ರೆಮಿಡಿಸಿವಿರ್, ಬೆಡ್, ಚಿಕಿತ್ಸೆ ಕೊಡಲಾಗದೆ ಜನರನ್ನು ಹಾದಿ ಬೀದಿಯಲ್ಲಿ ಕೊಲ್ಲುತ್ತಿರುವ ರಾಜ್ಯ ಸರ್ಕಾರ ಲಸಿಕೆ ವೈಫಲ್ಯದ …

Read More »

ಹಿರಿಯ ಕಾಂಗ್ರೆಸ್ ಮುಖಂಡರೂ, ಮಾಜಿ ಪತ್ರಕರ್ತರೂ ಆಗಿದ್ದ ಹುಕ್ಕೇರಿಯ ಪ್ರಕಾಶ ದೇಶಪಾಂಡೆ ನಿಧನರಾಗಿದ್ದಾರೆ.

ಹುಕ್ಕೇರಿ – ಹಿರಿಯ ಕಾಂಗ್ರೆಸ್ ಮುಖಂಡರೂ, ಮಾಜಿ ಪತ್ರಕರ್ತರೂ ಆಗಿದ್ದ ಹುಕ್ಕೇರಿಯ ಪ್ರಕಾಶ ದೇಶಪಾಂಡೆ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಕೊರೋನಾದಿಂದಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿವಿಧ ಪತ್ರಿಕೆಗಳಿಗೆ ಬಿಡಿ ವರದಿಗಾರರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ, ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಸೇವಾದಳದಲ್ಲಿ ಕೆಲಸ ಮಾಡಿದ್ದರು. ಸಧ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹುಕ್ಕೇರಿ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ. …

Read More »

ಇಂದಿರಾ ಕ್ಯಾಂಟೀನ್’ನಲ್ಲಿ ‘ಉಚಿತ ಊಟ’ ಕೊಡ್ತಾರೆ ಅಂತ ಹೋದವರಿಗೆ ಕಾದಿತ್ತು ಶಾಕ್ : ‘ಕಟ್ಟಿಕೊಟ್ಟ ಪೊಟ್ಟಣ’ದಲ್ಲಿ ಇದ್ದ ಊಟ ಎಷ್ಟು ಗೊತ್ತಾ.?

ಬೆಂಗಳೂರು : ಇಂದಿನಿಂದ ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಉಚಿತ ಊಟದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ಬೆಳಿಗ್ಗೆ ತಿಂಡಿಗಾಗಿ ಇಂದಿರಾ ಕ್ಯಾಂಟೀನ್ ಮುಂದೆ ನೂರಾರು ಜನರು ಕ್ಯೂ ಕೂಡ ನಿಂತು ಇಂದಿರಾ ಕ್ಯಾಂಟೀನ್ ನೀಡುವಂತ ಆಹಾರದ ಪೊಟ್ಟಣವನ್ನು ಪಡೆದು, ಖುಷಿಯಿಂದ ತೆರಳಿ, ಓಪನ್ ಮಾಡಿದ ಅನೇಕರಿಗೆ, ಶಾಕ್ ಕಾದಿತ್ತು. ಅದೇನ್ ಅಂತ ಮುಂದೆ ಓದಿ.. ನಗರದಾಧ್ಯಂತ …

Read More »

‘ನರೇಗಾ’ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಮೇ 24 ರವರೆಗೆ ಕೆಲಸ ಸ್ಥಗಿತ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ನರೇಗಾ ಕೆಲಸವನ್ನು ಸ್ಥಗಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೇ 24ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಹೆಚ್ಚು ಜನ ಗುಂಪುಗೂಡಬಾರದೆಂದು ಆದೇಶ ಹೊರಡಿಸಲಾಗಿದೆ. ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಜನ ತೆರಳಿದ್ದು, ಬಹುತೇಕರು ನರೇಗಾ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳ ಆತಂಕ ಹಿನ್ನೆಲೆಯಲ್ಲಿ ಮೇ 24ರ ವರೆಗೆ …

Read More »