ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನ ಸಮ ಸೆಮಿಸ್ಟರ್ ತರಗತಿಗಳಿಗೆ ಬೋಧಿಸಲು ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಹಿಂದೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಆದ್ಯತೆ ನೀಡಿ ಅಥವಾ ಹೊಸ ಅಭ್ಯರ್ಥಿಗಳಿಂದ ಅರ್ಜಿ ಪಡೆದು ಕಾಲೇಜು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ವಿಭಾಗ ಮುಖ್ಯಸ್ಥರುಉ ಹಿರಿಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಸದಸ್ಯರನ್ನು …
Read More »Monthly Archives: ಮೇ 2021
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ : ಪಂಚಾಯಿತಿಗಳಿಗೆ 475 ಕೋಟಿ ರೂ. ನೆರವು
ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 25 ರಾಜ್ಯಗಳಿಗೆ 8,923 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 475 ಕೋಟಿ ರೂ. ಲಭಿಸಿದೆ. ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಹಂಚಿಕೆ ಆಗಲಿದೆ. ಗ್ರಾಮೀಣಾ ಭಾಗದ ಸ್ಥಳೀಯ ಸಂಸ್ಥೆಗಳು ಕೊರೊನಾ ಸಾಂಕ್ರಮಿಕ ನಿಯಂತ್ರಣಕ್ಕೆ …
Read More »ಸರಿಗಮಪ ಶೋ ಮೂಲಕ ಫೇಮಸ್ ಆಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಪತ್ನಿ ಕೊರೊನಾ ಸೋಂಕಿಗೆ ಬಲಿ
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಶೋ ಮೂಲಕ ಫೇಮಸ್ ಆಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಪತ್ನಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಸುಬ್ರಮಣಿ ಪತ್ನಿಯವರಿಗೆ ಕೊರೊನಾ ಧೃಡಪಟ್ಟಿದ್ದು, ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಪತ್ನಿಗೆ ಚಿಕಿತ್ಸೆ ಕೊಡಿಸಲು ಸುಬ್ರಮಣಿ ಬೆಂಗಳೂರಿನಲ್ಲಿ ಆಸ್ಪತ್ರೆಗಳನ್ನು ಸುತ್ತಾಡಿದ್ದರು. ಆದ್ರೆ ಬೆಂಗಳೂರಿನ ಯಾವುದೇ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಕ್ಕಿರಲಿಲ್ಲ. ಕೊನೆಗೆ ಹೊಸಕೋಟೆಯ …
Read More »ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ 14 ದಿನ ಮುಂದೂಡಿಕೆ?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇ. 10 ರಿಂದ 24 ರವರೆಗೆ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ಲಸಿಕೆ ಪಡೆಯಲು ಬರಲು ಸಮಸ್ಯೆ ಅಗುತ್ತದೆ ಹೀಗಾಗಿ 14 ದಿನ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಬೆಂಗಳುರು ಸೇರಿದಂತೆ …
Read More »ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್
ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …
Read More »ಜಗತ್ತಿನ ಅತಿ ದೊಡ್ಡ ನೆಟ್ವರ್ಕ್ ಈ ಒಂದು ಪ್ರದೇಶ ದಲ್ಲಿಲ್ಲ…?
ಜಮಖಂಡಿ: ಏರ್ಟೆಲ್ ಹಾಗೂ ಜಿಯೋ. ಜಗತ್ತಿನ ಅತ್ಯಂತ ದೊಡ್ಡ ನೆಟ್ವರ್ಕ್ ಅಂತ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಜಾಹೀರಾತು ಹಾಗೂ ಇನ್ನಿತರ ಮೂಲದ ಮೂಲಕ ಜನರಿಗೆ ತಲುಪಿಸುವ ಹಾಗೆ ದೃಶ್ಯ ಮಾಧ್ಯಮ, ಪ್ರಿಂಟ್ ಮೀಡಿಯಾ, ಹಾಗೂ ಡಿಜಿಟಲ್ ಮೀಡಿಯಾ ಮೂಲಕ ತಮ್ಮ ಪ್ರಚಾರ ಮಾಡ್ತೀರಿ, ಇದನ್ನ ಲಕ್ಷಾಂತರ ಜನ ಕೂಡ ವೀಕ್ಷಣೆ ಮಾಡುತ್ತಾರೆ ಆದ್ರೆ ಇವತ್ತು ಕಳೆದ ವರ್ಷ ದಿಂದ ಶಾಲೆ ಮಕ್ಕಳಿಗೆ ರಜೆ ಕೊಟ್ಟ ಹಾಗೆ ನಮ್ಮ ರಾಜ್ಯ …
Read More »ಪ್ಲೀಸ್ ಲಸಿಕೆ ಕೊಡಿ- ಆಸ್ಪತ್ರೆ ಮುಂದೆ ಸಾಲು ನಿಂತ 800ಕ್ಕೂ ಹೆಚ್ಚು ಜನ
ಬೆಂಗಳೂರು: ನಗರ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಲಸಿಕೆ ಹಾಕಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗಲಿದೆ ಎಂದು ಪ್ರಕಟಿಸಿದ ಬೆನ್ನಲ್ಲೇ ಒಂದೇ ಬಾರಿಗೆ 800ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ಲಗ್ಗೆ ಇಟ್ಟಿದ್ದಾರೆ. ಕೆಲವರು ಆನ್‍ಲೈನ್ ಮೂಲಕ ನೋಂದಣಿ ಮಾಡಿದ್ದರೆ ಇನ್ನು ಕೆಲವರು ಎರಡನೇ ಡೋಸ್ ಪಡೆಯಲು ಆಸ್ಪತ್ರೆಗೆ ಸೇರಿದ್ದರು. ಬೆಳಗ್ಗಯಿಂದಲೂ ಜನ ಲಸಿಕೆ ಹಾಕಿಸಿಕೊಳ್ಳಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ 45 …
Read More »ತಮಿಳುನಾಡು ಮಾದರಿ ಪರಿಹಾರ ನೀಡಲಿ: ಸತೀಶ ಜಾರಕಿಹೊಳಿ
ಬೆಳಗಾವಿ – ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದರು. ಸತೀಶ ಅವರೊಂದಿಗೆ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಅವರು ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳು, ಸದ್ಯದ ಸ್ಥಿತಿಗತಿ ಕುರಿತು ಸುಧೀರ್ಘವಾಗಿ ಚರ್ಚೆ ಮಾಡಿದರು. …
Read More »ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿ ,ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ
ಹುಬ್ಬಳ್ಳಿ ಬೆಳಗಾವಿ: ಎರಡನೇ ಹಂತದ ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನಗಳ ಸಂಚಾರ ಕೂಡ ಕಡಿಮೆಯಾಗಿದೆ. ವಿನಾಕಾರಣ ರಸ್ತೆಗಳಿದ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಬೆಳಿಗ್ಗೆ 7:೦೦ ಗಂಟೆಯಿಂದಲೇ ಪೊಲೀಸರು ರಸ್ತೆಗಿಳಿದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಅಗತ್ಯ ವಸ್ತುಗಳ ಖರೀದಿಗೆ ತಂದಿದ್ದ ಸುಮಾರು 87 ವಾಹನಗಳನ್ನು ಜಪ್ತಿ ಮಾಡಲಾಗಿದೆ. 10 ಗಂಟೆಯ ನಂತರ ಚೆಕ್ ಪೋಸ್ಟ್ ಗಳನ್ನು ಬಿಗಿಗೊಳಿಸಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕಾಲ್ನಡಿಗೆಯಲ್ಲಿ …
Read More »ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆ
ದೆಹಲಿ:ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೋಮವಾರವೂ(ಮೇ 10) ಹೆಚ್ಚಳವಾಗಿದ್ದು, ಮಹಾರಾಷ್ಟ್ರದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಕಳೆದ ಒಂದು ವಾರದಲ್ಲಿ ತೈಲ ಬೆಲೆ ಐದು ಬಾರಿ ಏರಿಕೆಯಾಗಿದ್ದು, ಮಹಾರಾಷ್ಟ್ರದ ಪರ್ಭಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆಯಾಗಿದೆ. ಭೋಪಾಲ್ ನಲ್ಲಿ ಪೆಟ್ರೋಲ್ ಬೆಲೆ 99.55 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ರಾಜಸ್ಥಾನದ ಗಂಗಾನಗರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ …
Read More »