ಕೊಪ್ಪಳ: ನಗರದಲ್ಲಿ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ತುಂಬು ಗರ್ಭಿಣಿಯು ಆಸ್ಪತ್ರೆಗೆ ತೆರಳಲು ಪರದಾಡಿದ ಪ್ರಸಂಗ ಸೋಮವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ನರೇಗಲ್ ಗ್ರಾಮದ ಲಕ್ಷ್ಮೀ ಪೂಜಾರ ಅವರು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ಚೆಕಪ್ ಗೆ ಹೋಗಬೇಕಿತ್ತು. ಆದರೆ ಪೊಲೀಸರು ಎಲ್ಲ ವಾಹನಗಳನ್ನ ಹಿಡಿದು ಜಪ್ತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಎಲ್ಲ ವಾಹನ ಚಾಲಕರು ಪೊಲೀಸರಿಗೆ ಹೆದರಿ ಗರ್ಭಿಣಿಯನ್ನ ಆಸ್ಪತ್ರೆಗೆ ಕರೆ ತರಲು ನಿರಾಕರಿಸಿದ್ದರು. ಇದರಿಂದ ಗ್ರಾಮದಿಂದ 7 …
Read More »Monthly Archives: ಮೇ 2021
ವೆಂಟಿಲೇಟರ್ ಸಿಗದೇ ಮುಂಡರಗಿಯಲ್ಲಿ ಮೂವರು ಸಾವು
ಮುಂಡರಗಿ (ಗದಗ): ಜಿಲ್ಲೆಯಲ್ಲಿ ವೆಂಟಿಲೇಟರ್ ಸಮಸ್ಯೆ ಉಲ್ಭಣಿಸಿದೆ. ವೆಂಟಿಲೇಟರ್ ಸಿಗದೇ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಪಟ್ಟಣದ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಬೂದಿಹಾಳ ಗ್ರಾಮದ ಕನಕಪ್ಪ ತಳವಾರ (87 ವ), ಬಿದರಹಳ್ಳಿಯ ಕಸ್ತೂರೆವ್ವ ವಿ.ಪುತ್ತೂರು ಹಾಗೂ ಕೊಪ್ಪಳ ಜಿಲ್ಲೆಯ ಭೈರಾಪುರ ಗ್ರಾಮದ ನೀಲಮ್ಮ ಮೇಟಿ (48 ವ) ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತರು ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿತರಿಗೆ ರವಿವಾರ ಸಂಜೆಯಿಂದ ಉಸಿರಾಟದಲ್ಲಿ …
Read More »10 ಸಾವಿರ ರೂ. ಪರಿಹಾರ ನೀಡಲು ನಾವು ದುಡ್ಡು ಪ್ರಿಂಟ್ ಮಾಡ್ತೀವಾ?: ಸಚಿವ ಈಶ್ವರಪ್ಪ
ಶಿವಮೊಗ್ಗ: ದುಡಿಯುವ ವರ್ಗಕ್ಕೆ 10 ಸಾವಿರ ರೂ. ಪರಹಾರ ನೀಡಬೇಕೆಂಬ ವಿಪಕ್ಷಗಳ ಬೇಡಿಕೆಗೆ ಗರಂ ಆದ ಸಚಿವ ಕೆ.ಎಸ್.ಈಶ್ವರಪ್ಪ “ಪ್ರಿಂಟ್ ಮಾಡ್ತೀವಾ” ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ 14 ದಿನ ಬಾಯಿಗೆ ಬೀಗ ಹಾಕಿಕೊಳ್ಳಬೇಕು. ನೀವು ಬಾಯಿಗ ಬೀಗ ಹಾಕಿಕೊಂಡರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. ಅದಾದ ಮೇಲೆ ನಾವು, ನೀವು ಯಾವ ಭಾಷೆಯಲ್ಲಿ ಬೇಕಾದರೂ ಮಾತನಾಡಿಕೊಳ್ಳೋಣ ಎಂದರು. ರಾಜ್ಯದ ಜನ …
Read More »ಕೊರೋನಾ ವಿರುದ್ಧ ಹೋರಾಟಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ
ಬೆಂಗಳೂರು: ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, ನವದೆಹಲಿ ಮತ್ತು ತಿರುವನಂತಪುರಂಗೆ …
Read More »‘ಪ್ರಚಾರ ಮಂತ್ರಿ’ ಮೋದಿ; ಪ್ರಧಾನಿ ವಿರುದ್ಧ ಕಾಂಗ್ರೆಸ್ ಕಿಡಿ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ‘ಪ್ರಚಾರ ಮಂತ್ರಿ’ ಎಂದು ವ್ಯಂಗ್ಯವಾಡಿದೆ. ಈ ಕುರಿತು ಮಾಡಿರುವ ಟ್ವೀಟ್‌ನಲ್ಲಿ, ಬಂಗಾಳದ ಚುನಾವಣೆಗೆ ಹತ್ತಿಪ್ಪತ್ತು ಪ್ರಚಾರ ಸಭೆ ನಡೆಸಿದ ‘ಪ್ರಚಾರ ಮಂತ್ರಿ’ ಮೋದಿಯವರು ಇದುವರೆಗೂ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ನೋಡಲಿಲ್ಲ, ಆಕ್ಸಿಜನ್ ಪೂರೈಕೆ ಪರಿಸ್ಥಿತಿಯ ಅವಲೋಕನ ಸಭೆ ನಡೆಸಲಿಲ್ಲ, ವೈದ್ಯಕೀಯ ತಜ್ಞರ, ವಿಜ್ಞಾನಿಗಳ ಸಭೆ ನಡೆಸಲಿಲ್ಲ, ಪತ್ರಿಕಾಗೋಷ್ಠಿ ನಡೆಸಿ …
Read More »ಕೆಲಸವೇ ಇಲ್ಲ: ಇಲ್ಲಿದ್ದು ಏನ್ಮಾಡೋದು… ಮುಂದುವರಿದ ಕಾರ್ಮಿಕರ ವಲಸೆ
ಬೆಂಗಳೂರು: ಲಾಕ್‌ಡೌನ್ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವವರ ಸಂಖ್ಯೆ ಹೆಚ್ಚಿರುವ ಕಾರಣ ಭಾನುವಾರವೂ ರೈಲು ನಿಲ್ದಾಣದ ಎದುರು ಮತ್ತು ಟೋಲ್‌ಗಳ ಬಳಿ ಭಾರಿ ಸಂಖ್ಯೆಯಲ್ಲಿ ಜನ ಮತ್ತು ವಾಹನಗಳ ಸಂದಣಿ ಕಂಡು ಬಂದಿತು. ಕಾರ್ಮಿಕರು ಕುಟುಂಬದೊಂದಿಗೆ ಗಂಟು ಮೂಟೆ ಹೊತ್ತು ನಿಲ್ದಾಣದತ್ತ ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೂರದ ಊರಿಗೆ ಹೊರಟಿದ್ದ ವ್ಯಕ್ತಿಯೊಬ್ಬರು ಪ್ರಯಾಣದ ವೇಳೆ ದಾಹ ನೀಗಿಸಿಕೊಳ್ಳಲು ನೀರು ತುಂಬಿದ್ದ ದೊಡ್ಡ ಕ್ಯಾನ್‌ವೊಂದನ್ನು ಮನೆಯಿಂದಲೇ ಹೊತ್ತು ತಂದಿದ್ದರು. ಹಲವರು ದ್ವಿಚಕ್ರ ಹಾಗೂ …
Read More »ಸ್ಮಶಾನದಿಂದ ಮೃತದೇಹದ ಬಟ್ಟೆಗಳನ್ನು ಕದ್ದುಮಾರುತ್ತಿದ್ದ ಏಳು ಜನರ ಬಂಧನ
ಬಾಗಪತ್: ಪಶ್ಚಿಮ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಶವಸಂಸ್ಕಾರ ಹಾಗೂ ಸ್ಮಶಾನ ಸ್ಥಳಗಳಿಂದ ಸತ್ತವರ ಬಟ್ಟೆಗಳನ್ನು ಕದಿಯುತ್ತಿದ್ದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. “ಏಳು ಜನರನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಬಂಧಿತರು ಸತ್ತವರ ಬೆಡ್‌ಶೀಟ್‌ಗಳು, ಸೀರೆಗಳು, ಬಟ್ಟೆಗಳನ್ನು ಕದಿಯುತ್ತಿದ್ದರು ಎಂದು ತಿಳಿದುಬಂದಿದೆ. 520 ಬೆಡ್‌ಶೀಟ್‌ಗಳು, 127 ಕುರ್ತಾಗಳು, 52 ಬಿಳಿ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ವೃತ್ತ ಅಧಿಕಾರಿ ಅಲೋಕ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಕದ್ದ ವಸ್ತುಗಳನ್ನು ಚೆನ್ನಾಗಿ …
Read More »ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್
ಕೋಲಾರ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಕೋಲಾರದ ಲಕ್ಷ್ಮೀ ಆಸ್ಪತ್ರೆಯಲ್ಲಿ 11 ದಿನಕ್ಕೆ 3.9 ಲಕ್ಷ ಬಿಲ್ ಮಾಡಿರುವುದು ಬೆಳಕಿಗೆ ಬಂದಿದೆ. ಅರವಿಂದ್ ಎಂಬ ಸೋಂಕಿತನ ಹೆಸರಲ್ಲಿ ಲಕ್ಷಗಟ್ಟಲೆ ಬಿಲ್ ಮಾಡಲಾಗಿದ್ದು, 3 ಲಕ್ಷ 90 ಸಾವಿರ ಬಿಲ್ ಮಾಡಿರುವ ರಸೀದಿ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ …
Read More »ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ
ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೇ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ರಾತ್ರಿ 55 ವರ್ಷದ ಮಹಿಳೆ ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸೋಂಕಿತರು …
Read More »ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ ಪೊಲೀಸರು!
ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಆರಂಭವಾಗಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲು ಪೊಲೀಸರು ನಸುಕಿನ ಜಾವದಿಂದಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 20ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿ ಅನಗತ್ಯವಾಗಿ ಹೊರಗೆ ಬರೋರಿಗೆ ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ವಿವಿಧ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸುತ್ತಿದ್ದು ಅನಗತ್ಯವಾಗಿ ಓಡಾಡುವ ವಾಹನಗಳನ್ನ ಸೀಜ್ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ನಸುಕಿನ ಜಾವದಿಂದಲೇ ಪೊಲೀಸರು ಬೈಕ್ ಗಳನ್ನು …
Read More »