Breaking News

Monthly Archives: ಮೇ 2021

ಕುಂಟು ನೆಪ ಹೇಳಿ ರಸ್ತೆಗಿಳಿದವ್ರಿಗೆ ಬಿಸಿ ಮುಟ್ಟಿಸುತ್ತಿರೋ ಪೊಲೀಸ್​, ಸಾಲು ಸಾಲು ವಾಹನಗಳು ಸೀಜ್

ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಲಾಕ್​ಡೌನ್ ಜಾರಿಯಾಗಿದೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಸುಖಾಸುಮ್ಮನೆ ವಾಹನಗಳಲ್ಲಿ ರಸ್ತೆಗಿಳಿಯದಂತೆ ಸೂಚಿಸಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಕುಂಟು ನೆಪಗಳನ್ನ ಹೇಳಿಕೊಂಡು ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಜೊತೆಗೆ ವಾಹನಗಳನ್ನ ಸೀಜ್ ಮಾಡ್ತಿದ್ದಾರೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲ ಜನರು ಅನಾವಶ್ಯಕ ಓಡಾಡೋದಲ್ಲದೆ ಪೊಲೀಸರ ಜೊತೆ ವಾಗ್ವಾದ ಮಾಡ್ತಿದ್ದಾರೆ. …

Read More »

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

ಭೋಪಾಲ್​: ಆತ್ಮಹತ್ಯೆ ಮಾಡಿಕೊಂಡ ಮಗಳ ಮೃತದೇಹವನ್ನು ತಂದೆ ಮಂಚದ ಮೇಲೆ ಮಲಗಿಸಿ, ಕಟ್ಟಿಕೊಂಡು ಸುಮಾರು 35 ಕಿಮೀ ಹೊತ್ತು ನಡೆದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ನಡೆದಿದೆ. ಮಗಳ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ಶವವನ್ನು ಸಾಗಿಸಲು ಒಂದು ವಾಹನದ ವ್ಯವಸ್ಥೆ ಮಾಡಲು ಸಾಧ್ಯವಾಗದೆ ಮಗಳ ಶವವನ್ನು ಹೊತ್ತು 35 ಕಿಮೀ ದೂರವನ್ನು ಏಳು ಗಂಟೆಗಳಲ್ಲಿ ಕ್ರಮಿಸಿದ್ದಾರೆ. ಇವರೊಂದಿಗೆ ಹಳ್ಳಿಯ ಕೆಲವರೂ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ …

Read More »

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

ದೆಹಲಿ: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ನೀತಿ ಆಯೋಗ (National Institution for Transforming India-NITI Aayog) ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ. ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ …

Read More »

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.   ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ …

Read More »

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ …

Read More »

ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್; ಶೀಘ್ರ ಸಮಸ್ಯೆಗೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್

  ಬೆಳಗಾವಿ;-ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಮೇ 9) ನಡೆದ ಅಧಿಕಾರಿಗಳ …

Read More »

ವಿಟ್ಲ: ಎರಡು ಬಟ್ಟೆ ಅಂಗಡಿಗಳ ಮಾಲಕರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಕೋವಿಡ್‌-19 ಸೋಂಕು ಹರಡದಂತೆ ಸರ್ಕಾರವು ರೂಪಿಸಿರುವ ಸೂಚನೆಗಳನ್ನು ಹಾಗೂ ದ.ಕ.ಜಿಲ್ಲಾ ದಂಡಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೇ ಉಲ್ಲಂಘಿಸಿದ ವಿಟ್ಲ ಕಸಬಾ ಗ್ರಾಮದ, ಪುತ್ತೂರು ರಸ್ತೆಯಲ್ಲಿರುವ ಕ್ಯೂಬಿ ಮತ್ತು ಫಿಟ್‌ ಫ್ಯಾಷನ್‌ ಬಟ್ಟೆ ಅಂಗಡಿಗಳ ಮಾಲಕರು ಮೇ 7ರಂದು ಬೆಳಗ್ಗೆ 7 ಗಂಟೆಗೆ ಬಾಗಿಲು ತೆರೆದು ಗ್ರಾಹಕರಿಗೆ ಬಟ್ಟೆಯನ್ನು ಮಾರಾಟ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ. ಕ್ಯೂಬಿ ಬಟ್ಟೆ ಅಂಗಡಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ದಾಳಿ …

Read More »

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ

ನವದೆಹಲಿ : ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ. …

Read More »

ಹೊಳೆನರಸೀಪುರದ ಛತ್ರಕ್ಕೆ ಬಂದ ಶಿರಸ್ತೇದಾರ್‌- ಮದುಮಕ್ಕಳಿಗೆ ಗಿಫ್ಟ್‌ ಬದಲು ಕೊಟ್ಟರು ದಂಡದ ಬಿಲ್‌!

ಹಾಸನ: ಕರೊನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ವಿವಾಹ ಸೇರಿದಂತೆ ಎಲ್ಲ ಸಭೆ – ಸಮಾರಂಭಗಳಿಗೆ ಮಾರ್ಗಸೂಚಿ ಹೊರಡಿಸಿ ತಿಂಗಳೇ ಕಳೆದಿದೆ. ಮದುವೆ ಸಮಾರಂಭಗಳಲ್ಲಿ 50 ಜನಕ್ಕಿಂತ ಹೆಚ್ಚಿನ ಮಂದಿ ಇರಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಆದರೆ ಜೀವನದಲ್ಲಿ ಒಮ್ಮೆ ಆಗುವ ಮದುವೆಗೆ ಜನರನ್ನು ಕರೆಯದಿದ್ದರೆ ಹೇಗೆ ಎಂದುಕೊಂಡು ತಮಗೇನೂ ಆಗುವುದಿಲ್ಲ ಎಂದುಕೊಂಡು ಅಲ್ಲಲ್ಲಿ ಈ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಮದುವೆಗೆ ಭರ್ಜರಿ ತಯಾರಾಗಿ ಬಂದವರು ಮಾಸ್ಕ್‌ ಧರಿಸದಿದ್ದರೆ, ಮದುವೆ ಮನೆಯಲ್ಲಿ …

Read More »

ಡಿಸಿ ನಿವಾಸದಲ್ಲಿ ಸ್ವಿಮ್ಮಿಂಗ್​ ಪೂಲ್​, ಜಿಮ್​! ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡನ ಗಂಭೀರ ಆರೋಪ

ಮೈಸೂರು: ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಸ್ವಿಮ್ಮಿಂಗ್​ ಪೂಲ್​ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡ ಕೆ.ವಿ. ಮಲ್ಲೇಶ್​ ಗಂಭೀರ ಆರೋಪ ಮಾಡಿದ್ದಾರೆ. ​ ಡಿಸಿ ಅಧಿಕೃತ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ. ಜಲದರ್ಶಿನಿ ಅತಿಥಿ ಗೃಹ ಪಾರಂಪರಿಕ ಕಟ್ಟಡಗಳ ವ್ಯಾಪ್ತಿಗೆ ಸೇರಿದೆ. ಕರೊನಾ ಸಂಕಷ್ಟ ಕಾಲದಲ್ಲಿ ಇಂತಹ ಮೋಜು ಮಸ್ತಿ ಏಕೆ …

Read More »