ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಶುಕ್ರವಾರ ಇಲ್ಲಿಯ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ಪೀಡಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಆಸ್ಪತ್ರೆಯಲ್ಲಿ ಸೋಂಕಿತರು ಸವಲತ್ತುಗಳಿಂದ ವಂಚಿತರಾಗಬಾರದು. ಅಗತ್ಯವಿರುವುದನ್ನು ಮೊದಲೇ ಸಂಗ್ರಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಸ್ಪತ್ರಗೆ ದಾಖಲಾದವರು ಮತ್ತು ಬಿಡುಗಡೆಯಾದವರ ಸಂಖ್ಯೆ, ಲಭ್ಯವಿರುವ ಔಷಧಿ, ಎಷ್ಟು ಪ್ರಮಾಣದಲ್ಲಿ …
Read More »Monthly Archives: ಮೇ 2021
ಬೆಟ್ಟದ ಹೂವು’ ಖ್ಯಾತಿಯ ಪೋಷಕ ನಟ, ಹಿರಿಯ ಕಲಾವಿದ ‘ಶಂಖನಾದ’ ಅರವಿಂದ್ ಕೊರೋನಾಗೆ ಬಲಿ
ಬೆಟ್ಟದ ಹೂವು” ಖ್ಯಾತಿಯ ಹಿರಿಯ ಕಲಾವಿದ ಶಂಖನಾದ ಅರವಿಂದ್ (70 ) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 13 ದಿನಗಳ ಹಿಂದೆ ಕೊರೊನಾ ಸೊಂಕಿಗೆ ತುತ್ತಾಗಿ ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅರವಿಂದ್ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಕಲಾವಿದ ಅರವಿಂದ್ ಮೃತಪಟ್ಟಿರುವ ಬಗ್ಗೆ ಅವರ ಪುತ್ರಿ ಮಾನಸ ಹೊಳ್ಳ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. “ಸತತ 13 ದಿನಗಳು …
Read More »ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್’ ಕೊರೋನಾ ಸೋಂಕಿಗೆ ಬಲಿ
ದೆಹಲಿ : ನಗರ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಭೂಗತ ಪಾತಕಿ ಮತ್ತು ದರೋಡೆಕೋರ ಛೋಟಾ ರಾಜನ್ ಅವರು ಶುಕ್ರವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸೇವೆಗಳ ಸಂಸ್ಥೆಯಲ್ಲಿ (ಏಮ್ಸ್) ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಯಿಂದಾಗಿ ನಿಧನರಾದರು. ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ಅವರನ್ನು ಏಪ್ರಿಲ್ 26 ರಂದು ಏಮ್ಸ್ ಗೆ ದಾಖಲಿಸಲಾಯಿತು. …
Read More »ಎಲ್ಲರನ್ನು ಕಳುಹಿಸಿ ಕೊನೆಗೆ ಮನೆ ತಲುಪಿದ ಧೋನಿ
ರಾಂಚಿ: ಕೊರೊನಾದಿಂದಾಗಿ 14ನೇ ಆವೃತ್ತಿಯ ಐಪಿಎಲ್ ಅರ್ಧದಲ್ಲೇ ಸ್ಥಗಿತಗೊಂಡಿದೆ. ಆಟಗಾರರೆಲ್ಲ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ತಂಡದ ಆಟಗಾರೆಲ್ಲ ಮನೆಗೆ ಸೇರಿದ ಬಳಿಕ ಕೊನೆಯವರಾಗಿ ಮನೆಗೆ ತೆರಳಿದ್ದಾರೆ. ಸಿಎಸ್‍ಕೆ ತಂಡದ ಆಟಗಾರರೆಲ್ಲರನ್ನು ಕೂಡ ಸುರಕ್ಷಿತವಾಗಿ ಮನೆಗೆ ತಲುಪಿಸುವ ಹೊಣೆ ಹೊತ್ತಿದ್ದ ಚೆನ್ನೈ ಫ್ರಾಂಚೈಸಿ, ಆಟಗಾರರನ್ನು ಮನೆಗೆ ತಲುಪಿಸಲು ವಿಮಾನದ ವ್ಯವಸ್ಥೆ ಮಾಡಿತ್ತು. ಈ ವಿಮಾನದಲ್ಲಿ ಮೊದಲು …
Read More »ಹಾಸಿಗೆ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿ ಹಸ್ತಕ್ಷೇಪ
ಬೆಂಗಳೂರು: ‘ಸರ್ಕಾರಿ ಕೋಟಾದ ಹಾಸಿಗೆ ಹಂಚಿಕೆ ಮಾಡುವ ಬಿಬಿಎಂಪಿಯ ಕೋವಿಡ್ ವಾರ್ ರೂಂ ಸಿಬ್ಬಂದಿ ಹಾಸಿಗೆ ಮಾರಾಟ ದಂಧೆ ನಡೆಸುತ್ತಿದ್ದಾರೆ’ ಎಂದು ಧ್ವನಿ ಎತ್ತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿ ಅವರೇ ಈಗ ಹಾಸಿಗೆ ಹಂಚಿಕೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ರೆಡ್ಡಿ ತಮ್ಮ ಬೆಂಬಲಿಗ ಬಾಬು ಎಂಬವರನ್ನು ಎಚ್‌ಎಸ್‌ಆರ್ ಬಡಾವಣೆಯಲ್ಲಿರುವ ಬೊಮ್ಮನಹಳ್ಳಿ ವಲಯ ದ ವಾರ್ ರೂಂಗೆ ಕಳುಹಿಸಿ ಅವರ ಮೂಲಕ ಹಾಸಿಗೆ …
Read More »ಬೆಳಗಾವಿ: ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ
ಬೆಳಗಾವಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆವರಣದಲ್ಲಿ ನಡೆಯುತ್ತಿದ್ದ ವ್ಯಾಪಾರ-ವಹಿವಾಟು ವೇಳೆ ಜನದಟ್ಟಣೆ ಆಗುತ್ತಿದೆ ಎಂಬ ನೆಪವೊಡ್ಡಿ ಇಡೀ ಮಾರುಕಟ್ಟೆಯನ್ನೇ ಇಕ್ಕಟ್ಟಾದ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದರಿಂದ ಇಲ್ಲಿಯೂ ಜನದಟ್ಟಣೆಗೆ ಮತ್ತಷ್ಟು ಆಸ್ಪದ ನೀಡಿದಂತಾಗಿದೆ. ಇತ್ತ ಹಗ್ಗ ಹರಿಯಲಿಲ್ಲ, ಹಾವು ಸಾಯಲಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅತಿ ದೊಡ್ಡ ಆವರಣ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿಯ ಎಪಿಎಂಸಿ ಆವರಣದಲ್ಲಿ ನಿತ್ಯವೂ ಸಗಟು ತರಕಾರಿ ಮಾರುಕಟ್ಟೆ ನಡೆಯುತ್ತಿದೆ. ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ …
Read More »ದೇಶದಲ್ಲಿ ಒಂದೇ ದಿನ 4,14,188 ಹೊಸ ಕೇಸ್, 3,915 ಸಾವು..!
ನವದೆಹಲಿ, ಮೇ 7 – ಒಂದು ದಿನದಲ್ಲಿ ದಾಖಲೆಯ 4,14,188 ಹೊಸ ಕೊರೊನಾವೈರಸ್ ಸೋಂಕಿತರು ಭಾರತದಲ್ಲಿ ಪತ್ತೆಯಾಗಿದೆ , 3,915 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದ ಒಟ್ಟು ಕೋವಿಡ್ ಪ್ರಕರಣಗಳು 2,14,91,598 ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,76,12,351 ಕ್ಕೆ ಏರಿದರೆ ಆದರೆ ಪ್ರಸ್ತುತ ಚೇತರಿಕೆ ಪ್ರಮಾಣವು ಶೇಕಡಾ 81.95 ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ 853, …
Read More »ಆಕ್ಸಿಜನ್ ಪೂರೈಕೆ; ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ
ಬೆಂಗಳೂರು, ಮೇ 07; ರಾಜ್ಯಕ್ಕೆ ಪ್ರತಿ ದಿನಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರ್ನಾಟಕ ರಾಜ್ಯದ ಆಕ್ಸಿಜನ್ ಪಾಲನ್ನು ಪ್ರತಿದಿನದ 965 ಮೆಟ್ರಿಕ್ ಟನ್‌ಗಳಿಂದ 1,200 ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸಲು ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಿ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಕೋವಿಡ್ …
Read More »ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿ ಹಲವು ಪೊಲೀಸರು ಮುಂಬೈನಿಂದ ವರ್ಗಾವಣೆ!
ಮುಂಬೈ: ಎನ್ ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್ ಅಧಿಕಾರಿ ದಯಾ ನಾಯಕ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ಉಗ್ರ ನಿಗ್ರಹ ದಳದಲ್ಲಿದ್ದ ದಯಾ ನಾಯಕ್ ಅವರನ್ನು ಗೊಂಡಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮಹಾರಾಷ್ಟ್ರ ಎಡಿಜಿ ಅವರು ಈ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ದಯಾ ನಾಯಕ್ ಅವರು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ತನಿಖೆ ನಡೆಸಿದ್ದರು. ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಈ …
Read More »ಜನರ ಜೀವ ಉಳಿಸಲು ಲಾಕ್ ಡೌನ್ ಅನಿವಾರ್ಯ : ಸುಧಾಕರ್
ಬೆಂಗಳೂರು : ಸೋಂಕು ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಅನಿವಾರ್ಯ. ಲಾಕ್ ಡೌನ್ ಮಾಡದಿದ್ರೆ ಸಾವು ನೋವು ಜಾಸ್ತಿಯಾಗುತ್ತದೆ ಎಂದು ಬೆಂಗಳೂರಿನಲ್ಲಿ ಶುಕ್ರವಾರ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ. ಕೋವಿಡ್ ಚೈನ್ ಲಿಂಕ್ ಮುರಿಯಲೇ ಬೇಕು. ಲಾಕ್ ಡೌನ್ ಬೇಕೆಂದು ಆರೋಗ್ಯ ಇಲಾಖೆ ಬಲವಾಗಿ ಹೇಳುತ್ತೆ. ತಜ್ಞರು ಕೂಡ ಲಾಕ್ ಡೌನ್ ಮಾಡುವಂತೆ ಹೇಳಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ. ಲಾಕ್ ಡೌನ್ ವಿಚಾರವಾಗಿ ಸಿಎಂ ಯಡಿಯೂರಪ್ಪ ಜೊತೆಯಲ್ಲೂ ಮಾತುಕತೆ ನಡೆಸಲಾಗುತ್ತದೆ. …
Read More »