ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ. ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು. ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, …
Read More »Monthly Archives: ಮೇ 2021
ಇನ್ನೆರಡು ದಿನಗಳಲ್ಲಿ ಸಂಪೂರ್ಣ ಲಾಕ್ ಆಗಲಿದೆಯಾ ಕರುನಾಡು..?
ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಅಷ್ಟೇನೂ ಪರಿಣಾಮಕಾರಿಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ ಹೇಳುವ ಮೂಲಕ ಲಾಕ್ ಡೌನ್ ಹೇರುವ ಮುನ್ಸೂಚನೆ ಕೊಟ್ಟಿದ್ದಾರೆ. 12 ನೇ ತಾರೀಖಿನಂದು ಜಾರಿಯಲ್ಲಿರುವ ಕರ್ಫ್ಯೂ ಮುಕ್ತಾಯವಾಗಲಿದ್ದು, ಇನ್ನೆರಡು ದಿನಗಳಲ್ಲಿ ಮುಂದಿನ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸರ್ಕಾರದ …
Read More »1 ಕೋಟಿ ಮಂದಿಗೆ ಲಸಿಕೆ! : ಲಸಿಕೆ ಪಡೆದವರಲ್ಲಿ ಸ್ತ್ರೀಯರೇ ಹೆಚ್ಚು
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಂದು ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ. ಅಭಿಯಾನದಲ್ಲಿ ಒಟ್ಟು 84.6 ಲಕ್ಷ ಮಂದಿ ಲಸಿಕೆ ಪಡೆದಿದ್ದು, 18.5 ಲಕ್ಷ ಮಂದಿ ಎರಡೂ ಡೋಸ್ ಪೂರ್ಣಗೊಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭವಾಗಿ 110 ದಿನಗಳಾಗಿವೆ. ಗುರುವಾರದ ಅಂತ್ಯಕ್ಕೆ ಒಟ್ಟು 84.6 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಈ ಪೈಕಿ 18.5 ಲಕ್ಷ ಮಂದಿ 2ನೇ ಡೋಸ್ ಪೂರ್ಣಗೊಳಿಸಿದ್ದಾರೆ. ಒಟ್ಟು 1,03,01,805 ಡೋಸ್ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ …
Read More »ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲಿ ಬಿಸಿಯೂಟದ ಬದಲು ಪಡಿತರ ವಿತರಣೆ!
ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …
Read More »ಸರಕಾರದ ಆರೋಗ್ಯ ಇಲಾಖೆ ಕೊಟ್ಟ ಲೆಕ್ಕ ಸುಳ್ಳು :ಶಿವರಾಮ ಹೆಬ್ಬಾರ್
ಕಾರವಾರ : ಕೋವಿಡ್-೧೯ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ವ್ಯಾಪಾರ-ವಹಿವಾಟಿಗೆ ಈ ಹಿಂದೆ ಮಾಡಲಾಗಿದ್ದ ಬೆಳಿಗ್ಗೆ ೬ ರಿಂದ ೧೨ರ ಸಮಯವನ್ನು ಮತ್ತೆ ಮೇ. ೭ ರಿಂದ ಪ್ರತಿದಿನ ಬೆಳಿಗ್ಗೆ ೬ ರಿಂದ ೧೦ ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ತಿಳಿಸಿದ್ದಾರೆ. ಜೊತೆಗೆ ತಮ್ಮದೇ ಸರಕಾರದ ಆರೋಗ್ಯ ಇಲಾಖೆ ನೀಡಿದ ಒಂದೇ ದಿನ …
Read More »ಆಕ್ಸಿಜನ್ ಸಮಸ್ಯೆಯಿಂದ ಬೀದರ್‌ನಲ್ಲಿ ವ್ಯಕ್ತಿ ಸಾವು
ಬೀದರ್: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ. ಅಬ್ದುಲ್ ಮನ್ನಾನ್ ಸೇಠ್(63) ಆಕ್ಸಿಜನ ಸಿಗದೆ ಇಂದು ಸಾವನ್ನಪ್ಪಿದ್ದಾರೆ. ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಬಿಬಿಎಸ್ ಆಸ್ಪತ್ರೆಯಲ್ಲಿ ತಡರಾತ್ರಿ ಆಕ್ಸಿಜನ್ ಮುಗಿದರು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯ ಮಹಾ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಆಕ್ಸಿಜನ್ ವ್ಯವಸ್ಥೆಮಾಡಿ 13 …
Read More »ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್‌ನಲ್ಲಿ ಇಬ್ಬರ ಬಂಧನ
ಬೀದರ್: ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿದ್ದ ಶೇಖ್ ಅಬ್ದುಲ್ಲಾ ಹಾಗೂ ಆರೋಗ್ಯ ಇಲಾಖೆಯ ಜೊತೆ ಸಂಪರ್ಕದಲ್ಲಿರುವ ಮಹಮ್ಮದ್ ವಾಸಿಂ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ಬೀದರ್ ನ ಓಲ್ಡ್ ಸಿಟಿಯ ಗವಾನ್ ಚೌಕ್ ಬಳಿ ದಾಳಿ ಮಾಡಿ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ. ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂಬ ಮಾಹಿತಿ ಪಡೆದ …
Read More ».ಈಶ್ವರಪ್ಪನವರೇ ತೇಜಸ್ವಿ ಸೂರ್ಯಗೆ ಎಚ್ಚರಿಕೆ ನೀಡಿದ ಜಮೀರ್ ಅಹ್ಮದ್
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪನವರೇ ಮುಸಲ್ಮಾನ್, ಮುಸಲ್ಮಾನ್ ಅಂತ ಸಾಯಬೇಡಿ. ಸಂಸದ ತೇಜಸ್ವಿ ಸೂರ್ಯ ಅವರೇ ನಿಮ್ಮ ಕಣ್ಣಿಗೆ ಕೇವಲ ಮುಸಲ್ಮಾನರು ಕಾಣಿಸ್ತಾರಾ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸಲ್ಮಾನರೇ ಕಾಣೋದಾ ನಿಮ್ಮ ಕಣ್ಣಿಗೆ?: ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದ 17 ಮುಸ್ಲಿಂ ಯುವಕರನ್ನ ಜೊತೆಗೆ ಕರೆದುಕೊಂಡು ಶಾಸಕ ಜಮೀರ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿದರು. ಮಾನ್ಯ ಗ್ರೇಟ್ ಎಂಪಿಯವರು ಒಳ್ಳೆ ಕೆಲಸ ಮಾಡಿದ್ದೀರಿ. ಕಾಂಗ್ರೆಸ್ …
Read More »ಖಾಸಗಿ ಆಸ್ಪತ್ರೆಗೆ ಒಬ್ಬ ಕೆಎಎಸ್ ಅಧಿಕಾರಿ ನೇಮಕ :ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದುವ ಕೋವಿಡ್ ಸೋಂಕಿತರು ಮತ್ತು ಖಾಲಿ ಆಗುವ ಹಾಸಿಗೆಗಳ ಸ್ಟೇಟಸ್ ಅನ್ನು ಇನ್ನು ಮುಂದೆ ಪ್ರತಿದಿನ ಕೋವಿಡ್ ವಾರ್ ರೋಂ ಮತ್ತು ಆಪ್ತಮಿತ್ರ ಪೋರ್ಟಲ್ ಗೆ ನೀಡುವಂತೆ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಕೋವಿಡ್ ಚಿಕಿತ್ಸಾ ಹಾಸಿಗೆ ಉಸ್ತುವಾರಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. …
Read More »ಒಂದು ಬೆಡ್‍ಗೆ 50 ಸಾವಿರ ಲಂಚ..!
ಬೆಂಗಳೂರು,ಮೇ.6- ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಪಾಲ್ಗೊಂಡವರು ಅಮಾಯಕರಿಂದ ಒಂದು ಬೆಡ್‍ಗೆ 40 ರಿಂದ 50 ಸಾವಿರ ಹಣ ಪೀಕುತ್ತಿದ್ದರೂ ಎಂಬ ಬೆಳಕಿಗೆ ಬಂದಿದೆ.ಒಂದು ಬೆಡ್‍ನಿಂದ ಸಿಗುತ್ತಿದ್ದ ಹಣದಲ್ಲಿ ಮಧ್ಯವರ್ತಿಗಳಿಗೆ ಶೇ.10 ರಷ್ಟು ಕಮಿಷನ್ ಸಿಗುತಿತ್ತು. ಉಳಿದ ಹಣವನ್ನು ವಾರ್ ರೂಮ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ವೈದ್ಯರು ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ದಂಧೆಯಲ್ಲಿ ಕೆಲ ವೈದ್ಯರೇ ಕಿಂಗ್‍ಪಿನ್‍ಗಳಾಗಿದ್ದುಅವರ ಸೂಚನೆಯಂತೆ ಕೆಲವು ವಾರ್ ರೂಮ್ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ವಾರ್ …
Read More »
Laxmi News 24×7