ನವದೆಹಲಿ:17 ರಾಜ್ಯಗಳಿಗೆ, 9 9,871 ಕೋಟಿ ಆದಾಯ ಕೊರತೆ ಅನುದಾನದ ಎರಡನೇ ಮಾಸಿಕ ಕಂತನ್ನು ಹಣಕಾಸು ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ. ಎರಡನೇ ಕಂತಿನ ಬಿಡುಗಡೆಯೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಲ್ಲಿ ಒಟ್ಟು, 7 19,742 ಕೋಟಿ ಮೊತ್ತವನ್ನು ರಾಜ್ಯಗಳಿಗೆ ವಿತರಣಾ ಆದಾಯ ಕೊರತೆ ಅನುದಾನವಾಗಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಕೇಂದ್ರವು ಸಂವಿಧಾನದ 275 ನೇ ವಿಧಿ ಅಡಿಯಲ್ಲಿ ರಾಜ್ಯಗಳಿಗೆ ವಿತರಣಾ ನಂತರದ ಆದಾಯ …
Read More »Monthly Archives: ಮೇ 2021
ಬಿಜೆಪಿಯಲ್ಲಿ ಅಂತರ್ಯುದ್ಧ: ಬಿ.ಎಲ್. ಸಂತೋಷ್ ನಿಷ್ಠರ ಸಮರ
ಬೆಂಗಳೂರು: ಕೋವಿಡ್ ಎರಡನೇ ಅಲೆ ಸಮಯದಲ್ಲೇ ಬಿಜೆಪಿಯಲ್ಲಿ ಅಂತರ್ಯುದ್ಧ ಆರಂಭವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಳಿತದ ವಿರುದ್ಧ ಸ್ವಪಕ್ಷೀಯರೇ ಕಿಡಿ ಕಾರಲಾರಂಭಿಸಿದ್ದಾರೆ. ಚಾಮರಾಜನಗರದ ದುರ್ಘಟನೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ‘ದುರಂತಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ತಪ್ಪಿತಸ್ಥರಾದರೆ ಆರೋಗ್ಯ ಸಚಿವರ ವಿರುದ್ಧವೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಹೇಳಿದ್ದರು. ಮತ್ತೊಂದೆಡೆ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ದುಡ್ಡಿಗಾಗಿ ಹಾಸಿಗೆ ಕಾಯ್ದಿರಿಸುವ ಹಗರಣವನ್ನು ಬಯಲಿಗೆಳೆದು …
Read More »ಇದೊಂದು ದರಿದ್ರ ಸರ್ಕಾರ.. ಬಾಹುಬಲಿ ರೀತಿ ಯುವ ಸಂಸದ ಪ್ರಚಾರ ಪಡ್ಕೊಂಡ’ -HDK ಗುಡುಗು
ಬೆಂಗಳೂರು: ನಗರದಲ್ಲಿ ಇಂದು ಮಹಿಳೆಯೊಬ್ಬರು ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸಿದ ಬಳಿಕ ಬೆಡ್ ಸಿಕ್ಕರೂ ಆಕೆಯ ಗಂಡ ಆಯಂಬುಲೆನ್ಸ್ನಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇದಕ್ಕೆಲ್ಲಾ ರಾಜ್ಯ ಸರ್ಕಾರವೇ ಉತ್ತರ ಕೊಡಬೇಕು ಎಂದಿದ್ದಾರೆ. ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಹೆಚ್ಡಿಕೆ, ಇದೊಂದು ದರಿದ್ರ ಸರ್ಕಾರ. ಯಾವುದೇ ಮುನ್ನೆಚ್ಚರಿಕೆ ವಹಿಸದ ದರಿದ್ರ ಸರ್ಕಾರ ಎಂದು ಹರಿಹಾಯ್ದರು. ಮೊನ್ನೆ ಎಲ್ಲಾ ಬೆಡ್ ಬ್ಲಾಕ್ ಬಗ್ಗೆ ಪ್ರದರ್ಶನ ಕೊಟ್ಟರು. …
Read More »ನಾವು ಪಂಚರ್ ಹಾಕುವವರೇ.. ನಿಮ್ಮ ಗಾಡಿನೂ ಒಂದಿನ ಪಂಚರ್ ಆಗುತ್ತದೆ’
ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ದಾಖಲೆಗಳಿಲ್ಲದೇ ಮಾತನಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಬೆಡ್ ಬ್ಲಾಕಿಂಗ್ ಹಗರಣದಲ್ಲಿ ನಿಮ್ಮದೇ ಶಾಸಕ ಸತೀಶ್ ರೆಡ್ಡಿ ಪಿಎ ಶಾಮೀಲಾಗಿದ್ದಾರೆ ಇದಕ್ಕೇನು ಉತ್ತರಿಸುತ್ತೀರಿ ತೇಜಸ್ವಿ ಸೂರ್ಯ? ತಪ್ಪುಗಳಾದಾಗ ನಿಮಗೆ ಕೇವಲ ಮುಸ್ಲಿಂಮರು ಮಾತ್ರ ಕಾಣುತ್ತಾರೆ. ನಿಮ್ಮಲ್ಲಿ ಅದೆಷ್ಟು ವಿಷ ಇಟ್ಟುಕೊಂಡಿದ್ದೀರಿ. ವಾರ್ ರೂಂ …
Read More »ಆತ ಅಮಾವಾಸ್ಯೆ ಗಿರಾಕಿ -ತೇಜಸ್ವಿ ಸೂರ್ಯ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ
ಬೆಂಗಳೂರು: ‘ಬೆಡ್ ಬ್ಲಾಕ್ ದಂಧೆ ಪ್ರಕರಣದಲ್ಲಿ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಪ್ರಕರಣ ಬಯಲು ಮಾಡಿದ ಸಂಸದ ತೇಜಸ್ವಿ ಸೂರ್ಯ, ಒಂದು ಕೋಮಿನ 17 ಜನರನ್ನು ಮಾತ್ರ ಉಲ್ಲೇಖಿಸಿರುವುದು ಹಾಗೂ ಪ್ರಕರಣದಲ್ಲಿ ಬಿಜೆಪಿ ಶಾಸಕರ ಕೈವಾಡದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ತೇಜಸ್ವಿ ಸೂರ್ಯ ಓದಿಕೊಂಡಿರುವವನು. ಒಳ್ಳೆಯ ಕೆಲಸ ಮಾಡಿದ್ದಾನೆ ಎಂದುಕೊಂಡಿದ್ದೆ. ಆತ ಅಮಾವಾಸ್ಯೆ ಗಿರಾಕಿ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಳೆಸನ್ನು ಕರೆದುಕೊಂಡು …
Read More »ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆಪರೇಷನ್ ಆಕ್ಸಿಜನ್, ತಪ್ಪಿದ ಭಾರೀ ಅನಾಹುತ, ಉಳಿಯಿತು 200 ಸೋಂಕಿತರ ಜೀವ
ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆ ಸಿಬ್ಬಂದಿಯ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ಸಂಭವೀಯ ಬಹುದೊಡ್ಡ ಆಕ್ಸಿಜನ್ ಕೊರತೆ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಈ ದುರಂತ ತಪ್ಪಿದ್ದು, ಇಡೀ ರಾತ್ರಿ ಡಿಸಿಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆಮ್ಲಜನಕದ ವ್ಯವಸ್ಥೆ ಮಾಡಲಾಗಿದ್ದು, ಈ ಮೂಲಕ ವೆಂಟಿಲೇಟರ್ ಹಾಗೂ ಆಕ್ಸಿಜನ್ ಬೆಡ್‌ಗಳ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಒಟ್ಟು 200 (100 ಬೆಡ್ ಐಸಿಯು …
Read More »ಮೃತಪಟ್ಟ ಕೋವಿಡ್ ರೋಗಿಯ ಶವವನ್ನು ರಸ್ತೆಯಲ್ಲೇ ಬಿಟ್ಟು ಹೋದ ಆಸ್ಪತ್ರೆ
ಸೂರತ್:ಕೋವಿಡ್ ಪಾಸಿಟಿವ್ ರೋಗಿಯ ಶವವನ್ನು ರಸ್ತೆಯಲ್ಲಿ ಬಿಟ್ಟಿದ್ದಕ್ಕಾಗಿ ಸೂರತ್‌ನ ಪಾಂಡೇಸರ ಪ್ರದೇಶದ ಖಾಸಗಿ ಆಸ್ಪತ್ರೆಯ ವಿರುದ್ಧ ದೂರು ದಾಖಲಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ವೈರಲ್ ಆಗಿದ್ದು, ಮೃತರು ಒಡಿಶಾ ಮೂಲದವರು ಎಂದು ತಿಳಿದುಬಂದ ನಂತರ ಸಮುದಾಯದ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮೃತರು ಪಾಂಡೇಸರದ ಪ್ರಿಯಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಮಗನ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬವು ಒಂದು ಪರೀಕ್ಷೆಗೆ …
Read More »ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ವಲಸೆ ಕಾರ್ಮಿಕರ ನೆರವಿಗೆ
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ನಿಂದ ಭಾರತ ನಲುಗುತ್ತಿದೆ. ಇದರ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಕೆಲವೆಡೆ ಲಾಕ್ ಡೌನ್ ಮಾಡಿರುವ ಪರಿಣಾಮ ಅನೇಕ ಮಂದಿ ವಲಸೆ ಕಾರ್ಮಿಕರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇಂತವರಿಗೆ ಅನೇಕ ಮಂದಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅಂತೆಯೇ ಇದೀಗ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ. ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಸದಾ ಕಷ್ಟಕ್ಕೆ ಮಿಡಿಯುವ ಸನ್ನಿ …
Read More »ಎಲೆಕ್ಷನ್ ಡ್ಯೂಟಿಗೆ ಹಾಜರಾಗಿದ್ದ 2 ಸಾವಿರ ಜನರು ಕೊರೊನಾಗೆ ಬಲಿ – 700ಕ್ಕೂ ಹೆಚ್ಚು ಶಿಕ್ಷಕರು
ಲಕ್ನೊ: ಚುನಾವಣೆ ಡ್ಯೂಟಿಗೆ ಹಾಜರಾಗಿದ್ದ ಸುಮಾರು ಎರಡು ಸಾವಿರ ಉದ್ಯೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದರಲ್ಲಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ಪತ್ರಿಕೆಯೊಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆಯ ನಡುವೆಯೂ ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆ ನಡೆದಿದೆ. ಆದ್ರೆ ಡ್ಯೂಟಿಗೆ ಹಾಜರಾಗಿದ್ದ ಬಹುತೇಕ ನೌಕರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 706 ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕವನ್ನ ಶಿಕ್ಷಣ ಇಲಾಖೆ ಹೊರ …
Read More »ಬೆಡ್ ಸಿಗದೇ ವಿಧಾನಸೌಧಕ್ಕೇ ಸೋಂಕಿತೆಯನ್ನು ಕರೆತಂದ ಕುಟುಂಬಸ್ಥರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸ್ಥಿತಿ ಕೇಳುವವರಿಲ್ಲದಂತಾಗಿದೆ. ಒಂದೆಡೆ ಆಸ್ಪತ್ರೆಗಳಿಗೆ ಅಲೆದಾಡಿದರೂ ಬೆಡ್ ಸಿಗುತ್ತಿಲ್ಲ, ಇನ್ನೊಂದೆಡೆ ಸಾವನ್ನಪ್ಪಿದರೆ ಚಿತಾಗಾರವೂ ಸಿಗದ ಘೋರ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಗದ ಕಾರಣ ಸೋಂಕಿತ ಮಹಿಳೆಯೊಬ್ಬರು ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೆ ಆಗಮಿಸಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಕಳೆದ ಎರಡುದಿನಗಳಿಂದ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳಿಗೂ ಅಲೆದಾಡಿದರೂ ಬೆಡ್ ವ್ಯವಸ್ಥೆ ಸಿಕ್ಕಿಲ್ಲ. ಇದರಿಂದ ಬೇಸತ್ತ ಕುಟುಂಬದವರು ಸೋಂಕಿತ ಮಹಿಳೆಯನ್ನು …
Read More »