ಚಿಕ್ಕೋಡಿ: ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭಿಸಲಾಗಿದ್ದು, ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಹಿತ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ವತಿಯಿಂದ ಆರಂಭಿಸಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು. ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ತೆರೆಯಲಾಗಿದೆ. ಈ ಆಸ್ಪತ್ರೆಯಲ್ಲಿ ಕೊವಿಡ್ …
Read More »Monthly Archives: ಮೇ 2021
ಚುನಾವಣಾ ಪ್ರಚಾರದ ವೆಳೆ ಸಿಎಂ ಪ್ರಾಥಮಿಕ ಸಂಪರ್ಕದಲ್ಲಿದ್ದ ಹೋಟೆಲ್ ಸಿಬ್ಬಂದಿ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆ
ಬೆಳಗಾವಿ: ಕೆಲ ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಅಂದು ಸಿಎಂ ಯಡಿಯೂರಪ್ಪನವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆಯಾಗಿದೆ. ಏಪ್ರಿಲ್ 16ರಂದೆ ಈ ಸಿಬ್ಬಂದಿಗಳ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತಾದರೂ 20 ದಿನಗಳ ಬಳಿಕ ವರದಿ ಬಂದಿದ್ದು, ಇದೀಗ 12 ಜನರಲ್ಲಿ ಸೋಂಕು ದೃಢ್ಪಟ್ಟಿದೆ. …
Read More »ಧಾರವಾಡ : ಗ್ರಾಮಗಳ ತುಂಬಾ ಕೊರೊನಾಯಣ
ಧಾರವಾಡ: ಅಮ್ಮ ಮೈಗೆ ಹಚ್ಚುವ ಸೋಪುಗಳು ಯಾಕೆ ವಾಸನೆ ಬರುತ್ತಿಲ್ಲ? ಎಂದು ಪ್ರಶ್ನೆ ಕೇಳುತ್ತಿರುವ ಹಳ್ಳಿಯ ಮಕ್ಕಳು. ಗುಟಕಾವೂ ರಚಿಸುತ್ತಿಲ್ಲವಲ್ಲೋ ಎಂದು ಪರಸ್ಪರ ಸ್ನೇಹಿತರನ್ನು ಕೇಳಿಕೊಳ್ಳುತ್ತಿರುವ ಹಳ್ಳಿಯ ಪಡ್ಡೆ ಹುಡುಗರು. ಮೈ ಕೈ ನೋವು, ನೆಗಡಿ, ಕೆಮ್ಮಿನಿಂದ ಬಳಲುತ್ತಿರುವ ರೈತ ಸಮೂಹ. ಒಟ್ಟಿನಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶವನ್ನು ಕೋವಿಡ್ ಸಣ್ಣಗೆ ಪ್ರವೇಶ ಮಾಡಿಯಾಗಿದ್ದು, ಇನ್ನೇನಿದ್ದರೂ ಅದನ್ನು ಎದುರಿಸುವುದೊಂದೇ ದಾರಿ. ಹೌದು, ಇದು ವಾಸ್ತವ. ಹೆಚ್ಚು ಕಡಿಮೆ ಒಂದು ತಿಂಗಳ ಮೊದಲು …
Read More »ಚಿತಾಗಾರಗಳ ಅಕ್ಕಪಕ್ಕದಲ್ಲಿ ಮೃತದೇಹಗಳ ಅವಶೇಷಗಳು..!
ಬೆಂಗಳೂರು,ಮೇ.5-ಕೊರೊನಾ ಸೋಂಕಿನಿಂದ ಮೃತಪಟ್ಟ ನಿಮ್ಮ ಕುಟುಂಬ ಸದಸ್ಯರ ಮೃತದೇಹಗಳ ಶವಸಂಸ್ಕಾರ ಸಮರ್ಪಕವಾಗುತ್ತಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲ ಅಂದರೆ ಮೃತದೇಹಗಳ ಅರೆಬೆಂದ ದೇಹದ ಭಾಗಗಳು ನಾಯಿ ನರಿ ಪಾಲಾಗಲಿದೆ.ಹೇಗೆ ಅಂತಿರಾ. ಹಾಗಾದರೆ ಈ ಸುದ್ದಿ ಓದಿ.. ನಗರದಲ್ಲಿ ದಿನೇ ದಿನೇ ನೂರಾರು ಮಂದಿ ಕೊರೊನಾ ಸೋಂಕಿನಿಂದ ಬಲಿಯಾಗುತ್ತಿದ್ದಾರೆ. ಸಾಯುತ್ತಿರುವವರ ಶವಗಳ ಸಂಸ್ಕಾರ ಮಾಡಲು ನಗರದಲ್ಲಿ ಸ್ಮಶಾನಗಳು ಸಾಕಾಗುತ್ತಿಲ್ಲ. ಹೀಗಾಗಿ ಪ್ರತಿನಿತ್ಯ ನೂರಾರು ಶವಗಳನ್ನು ಬೇಕಾಬಿಟ್ಟಿ ಸುಡಲಾಗುತ್ತಿದೆ. ಈಗಾಗಲೇ ಸುಮನಹಳ್ಳಿ ರುದ್ರಭೂಮಿಯಲ್ಲಿ ತಾಂತ್ರಿಕ …
Read More »ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ
ಹೊಸಪೇಟೆ (ವಿಜಯನಗರ): ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ರೋಟರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಕ್ಷನ್ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ರೋಟರಿ ವೃತ್ತದಲ್ಲಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು. ‘ಪೊಲೀಸ್ ಇಲಾಖೆಯಿಂದ ಅನುಮತಿ …
Read More »ಸಮಯಪ್ರಜ್ಞೆ ಮೆರೆದು 300 ಜನರ ಜೀವ ಉಳಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತಪಟ್ಟ ಘಟನೆ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಉಪ ವಿಭಾಗದ ಪೊಲೀಸರು ಸಾಹಸ ಮಾಡಿ 300 ಜನರ ಜೀವ ಕಾಪಾಡಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ 300 ಮಂದಿ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಮಂಗಳವಾರ ರಾತ್ರಿ ಆಕ್ಸಿಜನ್ ಕಡಿಮೆಯಾಗಿ ಪಡೆಯಲು ಆಸ್ಪತ್ರೆ ವಾಹನ ಹೊಸಕೋಟೆ ಪಿಲ್ಲಗುಂಪೆಗೆ ತೆರಳಿದ್ದು, ಕೇರಳದಿಂದ …
Read More »ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳ ಬಂಧನ
ದುಬೈ: ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ದುಬೈ ಪೊಲೀಸರ ಒಳನುಸುಳುವಿಕೆ ವಿಭಾಗದ ನಿರ್ದೇಶಕ ಕರ್ನಲ್ ಅಲಿ ಸೇಲಂ, ಓಡಿಹೋದ ಕೆಲಸಗಾರರನ್ನು ನೇಮಕ ಮಾಡುವುದರ ವಿರುದ್ಧ ಸಮಾಜಕ್ಕೆ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ಎಚ್ಚರಿಸಿದರು. ಅಭಿಯಾನದ ಭಾಗವಾಗಿ ರಂಜಾನ್ ಆರಂಭದಿಂದಲೂ ವಿವಿಧ ರಾಷ್ಟ್ರೀಯತೆಗಳಿಂದ ಓಡಿಹೋದ 54 ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ಈ ಸಮಯದಲ್ಲಿ ಗೃಹ ಕಾರ್ಮಿಕರು ಕಾನೂನು ಉಲ್ಲಂಘಿಸುವ ಹೆಚ್ಚಳವಿದೆ, …
Read More »ಕೊರೊನಾ ಸೋಂಕಿತೆಗೆ ಬೆಡ್ ಕೊಡಿಸಿದ್ದಕ್ಕೆ 1.20 ಲಕ್ಷ ರೂ. ಸುಲಿಗೆ
ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ. ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ …
Read More »ಆಯಂಬುಲೆನ್ಸ್ ಕಾದು ಕಾದು ರಸ್ತೆಯಲ್ಲೇ ಕುಸಿದು ಮೃತಪಟ್ಟ ಯುವಕ;
ಕೊಡಗು: ಎರಡು ದಿನಗಳಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಗೆ ತೆರಳಲು ಆಯಂಬುಲೆನ್ಸ್ಗಾಗಿ ಕಾದು ಕಾದು ಕೊನೆಗೆ ರಸ್ತೆಯಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆ ಬಜಗುಂಡಿಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿಯ ಯುವಕ ಮನು ಮೃತ ಯುವಕ. ಎರಡು ದಿನಗಳಿಂದ ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಯುವಕ ಮನು ಮೊನ್ನೆಯಷ್ಟೇ ಸೋಮವಾರಪೇಟೆ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದನಂತೆ. ಆದರೆ ಯುವಕನಿಗೆ ತೀವ್ರವಾಗಿ ಜ್ವರ ಮತ್ತು ಕೆಮ್ಮು ಇದ್ದಿದ್ದರಿಂದ ಆತನನ್ನು ಮಡಿಕೇರಿ …
Read More »ವಿಜಯಪುರ : ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ವಿಜಯಪುರ: ರಾಜ್ಯಾದ್ಯಂತ ಹಲವೆಡೆ ಬುಧವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಭಾರಿ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಜೊತೆಗೆ ನಾಲ್ಕು ಆಡುಗಳು ಸಿಡಿಲಿನಿಂದ ಸಾವನಪ್ಪಿವೆ. ಅಶೋಕರಾಮ ಕಾರಜೋಳ(48), ಬಾಷಾಸಾಬ್ ಕರಜಗಿ(40) ಮತ್ತು ಜಾವಿದ್ ಹಾಜಿಸಾಬ್ ಜಾಲಗೇರಿ(33) ಸಾವಿಗೀಡಾಗಿದ್ದಾರೆ. ಸಬೀನಾ ಮತ್ತು ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಲದಿಂದ ಬರುವ ವೇಳೆ ಗಾಳಿ, ಮಳೆ ಆರಂಭವಾದ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಟಕ್ಕೆ ದರ್ಗಾ …
Read More »