Breaking News

Monthly Archives: ಮೇ 2021

ಕೋವಿಡ್ ವಾರ್​ ರೂಮ್​ಗೆ ಒಂದೇ ಸಮುದಾಯದವರೇಕೆ?: ಸಿಬ್ಬಂದಿ ಪಟ್ಟಿ ನೋಡಿ ತೇಜಸ್ವಿ ಸೂರ್ಯ ಫುಲ್ ಗರಂ

ಬೆಂಗಳೂರು: ರಾಜಧಾನಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದ ಸಂಸದ-ಶಾಸಕರು ಆ ನಂತರ ಕೋವಿಡ್​ ವಾರ್​ ರೂಮ್​ಗೆ ನೇಮಿಸಲಾಗಿರುವ ಸಿಬ್ಬಂದಿಯ ಪಟ್ಟಿ ನೋಡಿ ಕೆಂಡಾಮಂಡಲವಾಗಿದ್ದಾರೆ. ಅವರನ್ನೆಲ್ಲ ನೇಮಿಸಿದ್ದು ಯಾರು, ಹೇಗೆ ನೇಮಿಸಿಕೊಳ್ಳಲಾಗಿದೆ ಎಂದು ಹೆಲ್ಪ್​ಲೈನ್ ಉಸ್ತುವಾರಿಗಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ವಾರ್ ರೂಮ್​ಗೆ ನೇಮಿಸಲ್ಪಟ್ಟಿರುವ 17 ಮಂದಿಯ ಪಟ್ಟಿಯಲ್ಲಿದ್ದ ಹೆಸರುಗಳನ್ನು ಸಂಸದ ತೇಜಸ್ವಿ ಸೂರ್ಯ ಓದಿದ್ದಾರೆ. ಆ ಪಟ್ಟಿಯಲ್ಲಿ ಇದ್ದ ಹೆಸರುಗಳನ್ನು ಓದಿದ ತೇಜಸ್ವಿ ಸೂರ್ಯ, ಅಲ್ಲಿ ಬರೀ …

Read More »

ಹುಬ್ಬಳ್ಳಿಯಲ್ಲಿ ಐವರು ಕೋವಿಡ್ ಸೋಂಕಿತರ ಸಾವು ! ದುರಂತಕ್ಕೆ ಆಕ್ಸಿಜನ್ ಕೊರತೆ ಆರೋಪ

ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಐವರು ಕೋವಿಡ್ ಸೋಂಕಿತರು ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಕುಟುಂದವರು ಆಕ್ಸಿಜನ್ ಕೊರತೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆ ಮೂಲಗಳು ಇದನ್ನು ನಿರಾಕರಿಸಿವೆ. ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಕುರಿತು ಪರಿಶೀಲಿಸಿದರು. ಮೃತರ ಕುಟುಂಬದವರು ಆಕ್ಸಿಜನ್ ಕೊರತೆಯಿಂದಲೇ ಮೃತಪಟ್ಟಿದ್ದಾರೆಂದು ಆರೋಪಿಸಿದರು. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ …

Read More »

ಚಾಮರಾಜನಗರ: ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಯುವಕ ಸಾವು: ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರೋಶ

ಚಾಮರಾಜನಗರ: ರಕ್ತದ ಆಮ್ಲಜನಕ ಮಟ್ಟ ಕಡಿಮೆಯಾಗಿ ಉಸಿರಾಟದ ತೊಂದರೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಯುವಕನಿಗೆ ಬೆಡ್ ದೊರಕದೇ ಮೃತಪಟ್ಟ ಘಟನೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಯುವಕನ ಕಡೆಯವರು ಜಿಲ್ಲಾಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ ಅಭಿಷೇಕ್ (25) ಮೃತ ಯುವಕ. ಕಳೆದ ಆರು ದಿನದ ಹಿಂದೆಯೇ ಯುವಕನಿಗೆ ಸೋಂಕು ಧೃಢಪಟ್ಟಿತ್ತು. ಹೋಂ ಐಸೋಲೇಷನ್ ನಲ್ಲಿದ್ದರು. ಉಸಿರಾಟದ …

Read More »

ಇಂದು ದೀದಿ ಪ್ರಮಾಣ ವಚನ : 3ನೇ ಬಾರಿ ಮುಖ್ಯಮಂತ್ರಿಯಾಗುತ್ತಿರುವ ಮಮತಾ ಬ್ಯಾನರ್ಜಿ

ಕೊಲ್ಕತ್ತಾ : ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 2021ರ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ದೀದಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. …

Read More »

ಹೊಸ ಗೈಡ್ ಲೈನ್ ಬಿಡುಗಡೆ: ಆರೋಗ್ಯವಂತರಿಗೆ, ಸೋಂಕಿತರಾಗಿದ್ದವರಿಗೆ ಕೋವಿಡ್ ಟೆಸ್ಟ್ ಬೇಕಿಲ್ಲ

ನವದೆಹಲಿ: ಐಸಿಎಂಆರ್ ನಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಪಾಸಿಟಿವ್ ಬಂದವರಿಗೆ ಟೆಸ್ಟ್ ಮಾಡಬೇಕಿಲ್ಲ. ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ ಎಂದು ಕೊರೋನಾ ಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಮ್ಮೆ ಪಾಸಿಟಿವ್ ಆದವರಿಗೆ ಮತ್ತೆ ಟೆಸ್ಟ್ ಮಾಡಬೇಕಿಲ್ಲ ಎಂದು ಹೇಳಲಾಗಿದೆ. ಆರೋಗ್ಯವಂತರು ಅಗತ್ಯ ಕಾರ್ಯಗಳಿಗಾಗಿ ಅಂತರಾಜ್ಯ ಪ್ರಯಾಣಮಾಡುವಾಗ ಅವರಿಗೆ RTPCR ಪರೀಕ್ಷೆ ಕಡ್ಡಾಯ ಬೇಡವೆಂದು ಕೇಂದ್ರ ಸರ್ಕಾರ ಹೊಸ ಕೋವಿಡ್ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯೋಗಾಲಯಗಳ ಮೇಲೆ ಹೆಚ್ಚಿನ …

Read More »

ಚಾಮರಾಜನಗರ ದುರಂತ’ ಬೆನ್ನಲ್ಲೇ ಆರೋಗ್ಯ ಸಚಿವರ ಎಲ್ಲಾ ಜವಾಬ್ದಾರಿ ಕಿತ್ತುಕೊಂಡ ‘ಸಿಎಂ ಯಡಿಯೂರಪ್ಪ’

ಬೆಂಗಳೂರು : ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಹಿನ್ನೆಲೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಚಾಮರಾಜನಗರ ದುರಂತಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಿಎಂ ಬಿ ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿದ್ದ ಎಲ್ಲಾ ಜವಾಬ್ದಾರಿಯನ್ನು ಸಿಎಂ ವಾಪಸ್ ತೆಗೆದುಕೊಂಡಿದ್ದಾರೆ. ಯೆಸ್, ಆರೋಗ್ಯ ಸಚಿವ ಡಾ, ಸುಧಾಕರ್ ಗೆ ಆರೋಗ್ಯ ಖಾತೆಯೊಂದೇ ಉಳಿದಿದ್ದು, ಕೊರೊನಾ …

Read More »

ಜನತಾ ಕರ್ಫ್ಯೂ ಮುಂದುವರಿಕೆ; ಪತ್ರಕರ್ತರನ್ನು ‘ಕೋವಿಡ್ ವಾರಿಯರ್ಸ್’ ಆಗಿ ಘೋಷಣೆ: ಸಿಎಂ ಬಿಎಸ್ ವೈ

ಬೆಂಗಳೂರು: ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿ ಮತ್ತು ಆಕ್ಸಿಜನ್ ಸರಬರಾಜು ಕುರಿತಂತೆ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮೇ 22ರವರೆಗೂ ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಂದುವರೆಯಲಿದ್ದು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಹೇಳಿದರು. ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ‘ಜಿಲ್ಲೆಗಳಲ್ಲಿ ಕೊವಿಡ್ …

Read More »

ಸಂಸದ ತೇಜಸ್ವಿಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂಸದ ತೇಜಸ್ವಿಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕ್ ದಂಧೆಯನ್ನು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ಡಿಕೆಶಿ ಈ ಅಭಿನಂದನೆಯನ್ನು ತಿಳಿಸಿದ್ದಾರೆ. I congratulate MP Tejasvi Surya, MLAs Satish Reddy, Ravi Subramanya & Uday Garudachar for EXPOSING CORRUPTION in bed allocation by their party govt …

Read More »

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …

Read More »

ಚಾಮರಾಜನಗರ ದುರಂತ: ಆರೋಗ್ಯ ಸಚಿವರ ತಪ್ಪಿದ್ದರೆ ಕ್ರಮ ಜರುಗಿಸಲಿ -ಸಿ.ಟಿ.ರವಿ

ಬೆಂಗಳೂರು: ‘ಚಾಮರಾಜನಗರ ದುರಂತಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲೇ ಬೇಕು. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರೆ ಅದರ ಹೊಣೆಯನ್ನು ಸರ್ಕಾರ ಹೊರಬೇಕಾಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ‘ಈ ದುರಂತಕ್ಕೆ ಕಾರಣರಾದವರಿಗೆ ಕಠಿಣ ಕ್ರಮ ಜರುಗಿಸಿದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದನ್ನು ತಪ್ಪಿಸಬಹುದು. ಆರೋಗ್ಯ ಸಚಿವರು ತಪ್ಪು ಮಾಡಿದ್ದರೆ ಅವರ ವಿರುದ್ಧವೂ ಕ್ರಮ ಆಗಬೇಕು. ಕೂಡಲೇ ತನಿಖೆ ನಡೆಸಿ ಶಿಸ್ತು ಕ್ರಮ ತೆಗೆದುಕೊಳ್ಳಲು …

Read More »