ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೊಂದು ಆಕ್ಸಿಜನ್ ದುರ್ಘಟನೆ ಸಂಭವಿಸಿದೆ. ಆಕ್ಸೀಜನ್ ಕೊರತೆಯಿಂದ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಕೋವಿಡ್ ಸೋಂಕಿತರು ಅಸುನೀಗಿದ್ದಾರೆ. ಅಫಜಲಪುರ ತಾಲೂಕಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಕಾಣಿಸಿಕೊಂಡಿದೆ. ಅಫಜಲಪುರ ತಾಲೂಕ ಆಸ್ಪತ್ರೆಯಲ್ಲಿ ಒಟ್ಟು 32 ಸೋಂಕುತರನ್ನು ತೀವ್ರ ನಿಗಾದಲ್ಲಿಟ್ಟು, ಆಕ್ಸಿಜನ್ ನೀಡಲಾಗುತ್ತಿತ್ತು. ಆದರೆ, ಮಧ್ಯರಾತ್ರಿಯ ನಂತರ ಆಸ್ಪತ್ರೆಯಲ್ಲಿನ ಆಕ್ಸಿಜನ್ ಖಾಲಿಯಾಗಿದೆ ಎನ್ನಲಾಗಿದೆ. ಪರಿಣಾಮ …
Read More »Monthly Archives: ಮೇ 2021
ಚಾಮರಾಜನಗರ ದುರಂತ: ಜಿಲ್ಲಾಸ್ಪತ್ರೆ, ಆಕ್ಸಿಜನ್ ಪ್ಲಾಂಟ್ನಲ್ಲಿ ತನಿಖಾಧಿಕಾರಿ ಕಳಸದ್ ಪರಿಶೀಲನೆ
ಚಾಮರಾಜನಗರ: ನಿನ್ನೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದ ಬಗ್ಗೆ ಹಾಗೂ 20ಕ್ಕೂ ಅಧಿಕ ಕೊರೊನಾ ರೋಗಿಗಳು ಮೃತಪಟ್ಟ ಹಿನ್ನೆಲೆ ವಿಚಾರಣಾಧಿಕಾರಿ ಶಿವಯೋಗಿ ಕಳಸದ್ ಇಂದಿನಿಂದ ತನಿಖೆ ಆರಂಭಿಸಿದ್ದಾರೆ. ಇಂದು ಕಳಸದ್ ಜಿಲ್ಲಾಸ್ಪತ್ರೆಗೆ ಹಾಗೂ ಆಕ್ಸಿಜನ್ ಪ್ಲಾಂಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೊತೆಗೆ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ರೋಗಿಗಳಿಂದ ಮಾಹಿತಿ ಪಡೆದರು. ಆಕ್ಸಿಜನ್ ಪ್ಲಾಂಟ್ ಸಾಮರ್ಥ್ಯ ಹಾಗೂ ಆಕ್ಸಿಜನ್ ಪೂರೈಕೆ ಬಗ್ಗೆ ಜಿಲ್ಲಾಸ್ಪತ್ರೆ ಡೀನ್ರಿಂದ ಮಾಹಿತಿ ಕೇಳಿದ್ರು. …
Read More »ಸೋನು ಸೂದ್ ಮೋಸಗಾರ ಎಂಬ ಟ್ವಿಟ್ಟರ್ ಪೋಸ್ಟ್ ಗೆ ಲೈಕ್ ಕೊಟ್ಟು ಟ್ರೋಲ್ ಆದ ಕಂಗನಾ..!
ನವದೆಹಲಿ : ನಟಿ ಕಂಗನಾ ರಣಾವತ್ ಸುಖಾಸುಮ್ಮನೆ ತನಗೆ ಸಂಬಂಧವಿಲ್ಲದೇ ಇರುವ ವಿಚಾರವಾಗಿ ಮಾತನಾಡಿ ಟ್ವೀಟ್ ಮಾಡಿ ಸದಾ ಕಾಂಟ್ರವರ್ಸಿ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಎಲ್ಲಾ ವಿಚಾರಗಳಲ್ಲೂ ಮೂಗು ತೂರಿಸಿ ವಿವಾದ ಮೈಮೇಲೆ ಎಳೆದುಕೊಳ್ಳುವ ಕಂಗನಾ ಅನೇಕ ಶತ್ರುಗಳನ್ನ ಸಂಪಾದಿಸಿಕೊಂಡಿದ್ಧಾರೆ. ಬಹುತೇಕ ಎಲ್ಲಾ ತಾರಯರ ಜೊತೆಗೂ ಕಂಗನಾ ಕಿರಿಕ್ ಮಾಡಿಕೊಂಡಿದ್ದಾರೆ. ಹಾಗೆಯೇ ಬಡವರ ಪಾಲಿನ ರಿಯಲ್ ಹೀರೋ ಸೋನು ಸೂದ್ ಜೊತೆಗೂ ಗಲಾಟೆ ಮಾಡಿಕೊಂಡು ಸೋನು ಸೂದ್ ಅವರನ್ನ ಮಣಿಕರ್ಣಿಕಾ ಸಿನಿಮಾದಿಂದಲೇ …
Read More »ವಿಶ್ವದ ಶ್ರೀಮಂತ ದಂಪತಿ ಡಿವೋರ್ಸ್: 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಬಿಲ್ ಗೇಟ್ಸ್!
ವಾಷಿಂಗ್ಟನ್: ಟೆಕ್ ದೈತ್ಯ ಕಂಪನಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಪತ್ನಿ ಮೆಲಿಂಡಾ ಗೇಟ್ಸ್ ಡಿವೋರ್ಸ್ ಪಡೆದುಕೊಂಡಿರುವುದಾಗಿ ಸೋಮವಾರ ಘೋಷಿಸಿದ್ದು, 27 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಬಿಲ್ ಗೇಟ್ಸ್ ಮತ್ತು ಮೆಲಿಂಡಾ ವಿಶ್ವದ ಶ್ರೀಮಂತ ದಂಪತಿಗಳಲ್ಲಿ ಒಬ್ಬರಾಗಿದ್ದರು. ಇಬ್ಬರ ಆಸ್ತಿ ಮೌಲ್ಯ 130 ಬಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ. ಗೇಟ್ಸ್ ಪರೋಪಕಾರಿ ಗುಣವುಳ್ಳ ವ್ಯಕ್ತಿಯಾಗಿದ್ದು, ತಮ್ಮ ಭಾರಿ ಪ್ರಭಾವಶಾಲಿ ಅಡಿಪಾಯದ ಮೂಲಕ ವಿಶ್ವದಾದ್ಯಂತ ಶತಕೋಟಿ ಹಣವನ್ನು …
Read More »ಹೋಟೆಲ್, ರೆಸ್ಟೋರೆಂಟ್ ನಲ್ಲಿ ನೀರಿನ ಬಾಟಲಿಯನ್ನು ಖರೀದಿಸುತ್ತೀರಾ..?ಹಾಗಾದ್ರೆ ಈ ಸ್ಟೋರಿ ನೋಡಿ
ಹೋಟೆಲ್‌ಗಳಲ್ಲಿ MRP – ಗಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ . ಇದನ್ನು ಪ್ರಶ್ನಿಸಿದ ಕೇಂದ್ರ ಸರ್ಕಾರಕ್ಕೆ ನ್ಯಾ . ಎಫ್ ನಾರಿಮನ್ ಪೀಠ , ಹೋಟೆಲ್ , ರೆಸ್ಟೋರೆಂಟ್ – ಗೆ ಯಾರೂ ಕುಡಿಯವ ನೀರನ್ನು ಖರೀದಿಸಲು ಹೋಗುವುದಿಲ್ಲ ಎಂದು ಉತ್ತರಿಸಿದೆ . ಫೆಡರೇಷನ್ ಆಫ್ ಹೋಟೆಲ್ ಅಂಡ್ ರೆಸ್ಟೋರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ ( FHRAI ) ಸಲ್ಲಿಸಿದ್ದ ಅರ್ಜಿ ವಿಚಾರಣೆ …
Read More »ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ
ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೊಡಲಾಗುವ ರೆಮಿಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವಂತೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದರು. ರೆಮ್ ಡಿಸಿವಿರ್ ಕೊರತೆ ಬಗ್ಗೆ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. …
Read More »ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.
ಹೊಸದಿಲ್ಲಿ:ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ಸ್ಥಗಿತಗೊಳಿಸಲಾಗಿದೆ, ಮುಂದೆ ಮತ್ತೆ ಕೂಟ ಆಯೋಜಿಸಲು ಪ್ರಯತ್ನಿಸುತ್ತೇವೆ. ಆದರೆ ರದ್ದು ಮಾಡಿಲ್ಲ ಎಂದಿದ್ದಾರೆ. ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ …
Read More »ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ : ಕಂಗನಾ ರಣಾವತ್ ಟ್ವಿಟ್ಟರ್ ಅಮಾನತು
ನವದೆಹಲಿ : ಮೈಕ್ರೊ ಬ್ಲಾಗಿಂಗ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ಟ್ವೀಟ್ ಮಾಡಿದ ಕಾರಣ ನಟಿ ಕಂಗನಾ ರಣಾವತ್ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಸರಣಿ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ನಟಿಯ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡಲಾಗಿದೆ. 2021ರ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಟಿಎಂಸಿ ಗೆದ್ದಿದೆ. ಇದೇ ಹಿನ್ನೆಲೆಯಲ್ಲಿ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತವನ್ನು ತರಬೇಕು ಎಂದು ಕಂಗನಾ ಒತ್ತಾಯ …
Read More »ದ್ವಿತೀಯ PUC ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ತೇರ್ಗಡೆ, ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ – ಸಚಿವ ಸುರೇಶ್ ಕುಮಾರ್ ಘೋಷಣೆ
ಬೆಂಗಳೂರು : ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು …
Read More »ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ …
Read More »