ದೇವಾಸ್ : ಕೋವಿಡ್ 19 ಸೋಂಕಿತರ ಚಿಕಿತ್ಸೆ ನೀಡಲು ಬಳಸಿದ ರೆಮ್ ಡೆಸಿವಿರ್ ಇಂಜೆಕ್ಶನ್ ನನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ದಾದಿಯರು ಮತ್ತು ಮೆಡಿಕಲ್ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಧ‍್ಯಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋವಿಡ್ 19 ಸೋಂಕು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾದ ಕಾರಣದಿಂದ ಇಂತಹ ಪ್ರಕರಣಗಳು ಹೆಚ್ಚಾಗಿವೆ. ದುಬಾರಿ ಬೆಲೆಗೆ ಹಾಗೂ ಸೋಂಕಿತರಿಗೆ ಬಳಸಲಾದ …
Read More »Monthly Archives: ಮೇ 2021
1912 ಹೆಲ್ಪ್‌ಲೈನ್ ಸರಿಯಾಗಲು 2 ದಿನ ಗಡುವು ನೀಡಿದ ಡಿಸಿಎಂ
ಬೆಂಗಳೂರು: ಎರಡು ದಿನಗಳ ಒಳಗಾಗಿ ಬೆಂಗಳೂರು ಮಹಾನಗರದಲ್ಲಿ ಕೋವಿಡ್‌ಗೆ ಸಂಬಂಧಿತ ಎಲ್ಲ ಸೇವೆಗಳನ್ನು 1912 ಹೆಲ್ಪ್‌ಲೈನ್‌ಗೆ ಜೋಡಿಸಬೇಕು; ಬೆಡ್ ಹಂಚಿಕೆ ಪಾರದರ್ಶಕಗೊಳಿಸಬೇಕು ಎಂದು \ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಡೆಡ್‌ಲೈನ್ ವಿಧಿಸಿದರು. ಬೆಂಗಳೂರಿನಲ್ಲಿ ದಿನವಿಡೀ ಕೋವಿಡ್ ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡ ಅವರು, ಮಾಹಿತಿ ಮತ್ತು ಸೌಲಭ್ಯಗಳ ಕೊಂಡಿಯಾಗಿರುವ ಹೆಲ್ಪ್‌ಲೈನ್ ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶದಿಂದ ಸೋಮವಾರ ಸಂಜೆ ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಬೆಂಗಳೂರು ನಗರದಲ್ಲಿರುವ ಕೋವಿಡ್ ಬೆಡ್‌ಗಳ ಪ್ರಮಾಣ, ಹಂಚಿಕೆ …
Read More »ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅಣ್ಣ ಕೋವಿಡ್‌ನಿಂದ ನಿಧನ
ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಅಣ್ಣ ಕಿರಣ್(44), ಕೋವಿಡ್-19ನಿಂದ ಮೃತಪಟ್ಟಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್ ಜನ್ಯ, ‘ಅಣ್ಣ ಕೋವಿಡ್‌ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು. ಕಳೆದ …
Read More »ಮುಖ್ಯಮಂತ್ರಿ B.S.Y.ರಾಜೀನಾಮೆ ನೀಡಲಿ- ಸಿದ್ದರಾಮಯ್ಯ
ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ …
Read More »ಆಮ್ಲಜನಕ ದುರಂತ: ನಿರ್ಲಕ್ಷ್ಯ ವಹಿಸಿತೇ ಜಿಲ್ಲಾಡಳಿತ?
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಪದೇ ಪದೇ ಆಮ್ಲಜನಕದ ಕೊರತೆ ಆಗುತ್ತಿದ್ದರೂ; ಅದರ ಬಗ್ಗೆ ಗಮನ ಹರಿಸದೇ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದ್ದೇ ದುರಂತ ನಡೆಯಲು ಕಾರಣವಾಯಿತೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಆಮ್ಲಜನಕ ಕೊರತೆಯಾಗಿ ಕೊನೆ ಕ್ಷಣದಲ್ಲಿ ಮೈಸೂರಿನಿಂದ ಬಂದು ಅಥವಾ ಹತ್ತಿರದ ಆಸ್ಪತ್ರೆಗಳಿಂದ ತಂದು ವೈದ್ಯರು ರೋಗಿಗಳಿಗೆ ಆಮ್ಲಜನಕ ವ್ಯವಸ್ಥೆ ಮಾಡಿದ ಪ್ರಸಂಗಗಳು ಸಾಕಷ್ಟಿವೆ. 6 ಸಾವಿರ ಲೀಟರ್ ಸಾಮರ್ಥ್ಯದ ಆಮ್ಲಜನಕ ಘಟಕ ಸ್ಥಾಪನೆಯಾದ ಬಳಿಕ ಒಂದು ವಾರಕ್ಕೆ …
Read More »ಜೀವಂತ ಇದ್ದರೂ ಸತ್ತನೆಂದು ಬೇರೆಯವರ ಮೃತದೇಹ ಕೊಟ್ಟು ಆಸ್ಪತ್ರೆ ಎಡವಟ್ಟು
ಬೆಳಗಾವಿ: ಕೋವಿಡ್ ಸೋಂಕಿನಿಂದ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಮೃತಪಟ್ಟಿದ್ದಾನೆ ಎಂದು ಹೇಳಿ ಅವರ ಕುಟುಂಬದವರಿಗೆ ಬೇರೆ ಮೃತದೇಹ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ ಘಟನೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ಮೋಳೆ ಗ್ರಾಮದ ಪಾಯಪ್ಪ ಸತ್ಯಪ್ಪ ಹಳ್ಳೋಳ್ಳಿ (82) ಈ ವೃದ್ಧ ಕೆಲ ಹೊತ್ತಿನ ನಂತರ ಮನೆಯವರಿಗೆ ಕರೆ ಮಾಡಿ ಇನ್ನೂ ಏಕೆ ಊಟ ತಂದು ಕೊಟ್ಟಿಲ್ಲ ಎಂದು ಕೇಳಿದಾಗ ಆಸ್ಪತ್ರೆ ಸಿಬ್ಬಂದಿ ಮಾಡಿರುವ ಎಡವಟ್ಟು …
Read More »ನನ್ನ ತಾಯಿಗೇ ಬೆಡ್ ಕೊಡ್ತಿಲ್ಲ ಎಂದು ಸಿದ್ದರಾಮಯ್ಯ ಬಳಿ ಕಣ್ಣೀರಿಟ್ಟ ಶಾಸಕಿ ಕುಸುಮಾ ಶಿವಳ್ಳಿ!
ಬೆಂಗಳೂರು: ಕರ್ನಾಟಕದ ಪಾಲಿಗೆ ಇಂದು ಕರಾಳ ದಿನ. ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 24 ಮಂದಿ ರೋಗಿಗಳು ನರಳಾಡಿ ಪ್ರಾಣ ಬಿಟ್ಟಿದ್ದಾರೆ. ಇನ್ನು ಸೋಂಕಿತರಿಗೆ ಬೆಡ್ ಸಿಗದೇ ಪರದಾಡುತ್ತಿರುವುದು ಸಾಮಾನ್ಯವೇನೋ ಎನ್ನುವಂತಾಗಿದೆ. ಸಚಿವರು, ಶಾಸಕರು, ಸೆಲೆಬ್ರೆಟಿಗಳು ಕೂಡ ತಮ್ಮವರಿಗಾಗಿ ಬೆಡ್ ಹೊಂದಿಸಲಾಗದೇ ದಿಕ್ಕೆಟ್ಟಿದ್ದಾರೆ. ತಮ್ಮೆಲ್ಲಾ ಪ್ರಭಾವನ್ನು ಬಳಸಿದರೂ ಆಸ್ಪತ್ರೆಗಳಲ್ಲಿ ಒಂದು ಬೆಡ್ ಸಿಗುತ್ತಿಲ್ಲ. ಇದಕ್ಕೆ ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕುಸುಮಾ ಶಿವಳ್ಳಿಯೂ ಹೊರತಾಗಿಲ್ಲ. ತಮ್ಮ ಸೋಂಕಿತ ತಾಯಿಗೆ …
Read More »ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಸುರೇಶ್ ಕುಮಾರ್ ವಿರುದ್ಧ ಸಿಎಂ ಗರಂ
ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ನಾಳೆ ಸಂಜೆ 4 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದು, ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ, ಆಕ್ಸಿಜನ್ ವ್ಯವಸ್ಥೆ, ಬೆಡ್, ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ತಮ್ಮದೇ ಉಸ್ತುವಾರಿ ಜಿಲ್ಲೆಯಲ್ಲಿ …
Read More »ರಾಜ್ಯ ಸರ್ಕಾರ ಜನರಿಗೆ ಆಸೆ ತೋರಿಸುವ ಕೆಲಸ ಮಾಡ್ತಿದೆ ಎಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ
ಮೈಸೂರು : ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸರ್ಕಾರಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಚಾಮರಾಜನಗರದ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಎಲ್ಲಾ ಜಿಲ್ಲೆಗಳ್ಲಲೂ ಇದೇ ರೀತಿಯ ಪರಿಸ್ಥಿತಿ ಇದೆ. ಸರ್ಕಾರ ಜನರಿಗೆ ಆಸೆ ತೋರಿಸುವ ಕೆಲಸ ಮಾಡ್ತಿದೆ. ಆದರೆ ಬಹುತೇಕ ರೋಗಿಗಳಿಗೆ ಚಿಕಿತ್ಸೆಯೇ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ಕೊವಿಡ್ ಮೊದಲ ಅಲೆಯ …
Read More »ಜಿಲ್ಲಾವಾರು ಕೋವಿಡ್-19 ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆಗಳು
ಬಾಗಲಕೋಟೆ – 08354-236240, 08354-236240/1077 ಬಳ್ಳಾರಿ – 08392-1077, 08392-277100, 8277888866 (Whatsapp no) ಬೆಳಗಾವಿ – 0831-2407290(1077), 0831-2424284 ಬೆಂಗಳೂರು ನಗರ – 080-1077, 080-22967200 ಬೆಂಗಳೂರು ಗ್ರಾಮಾಂತರ – 080-29781021 ಬೀದರ್ – 18004254316 ಚಾಮರಾಜನಗರ – 08226-1077, 08226-223160 ಚಿಕ್ಕಬಳ್ಳಾಪುರ – 08156-1077/277071 ಚಿಕ್ಕಮಗಳೂರು – 08262-238950, 08262-1077 ಚಿತ್ರದುರ್ಗ – 08194-222050/222044/222027/222056/222035 ದಾವಣಗೆರೆ – 08192-234034, 08192-1077 ಧಾರವಾಡ – 0836-1077/2447547 ಗದಗ …
Read More »