Breaking News

Daily Archives: ಜೂನ್ 1, 2021

ಸಿ.ಪಿ.ಯೋಗೇಶ್ವರ್ ಅವರನ್ನು ವಜಾ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಶಕ್ತಿ ಯಡಿಯೂರಪ್ಪನವರಿಗಿಲ್ಲ:ಯತ್ನಾಳ್

ವಿಜಯಪುರ: ರಾಜ್ಯದಲ್ಲಿರುವುದು ಸಿಎಂ ಬಿ.ಎಸ್.ಯಡಿಯೂರಪ್ಪನವರ ಸರ್ಕಾರವಲ್ಲ, ಬಿ.ವೈ.ವಿಜಯೇಂದ್ರ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕೆಂಡಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪನವರು ದೆಹಲಿಗೆ ಹೋಗಬೇಕಿತ್ತು. ಆದರೆ ಅವರ ಪುತ್ರ ಬಿ.ವೈ.ವಿಜಯೇಂದ್ರ ದೆಹಲಿಗೆ ಹೋಗಿ ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ. ರಾಜ್ಯದಲ್ಲಿರುವುದು ಬಿಎಸ್ ವೈ ಸರ್ಕಾರವಲ್ಲ, ವಿಜಯೇಂದ್ರ ಸರ್ಕಾರ ಎಂಬುದು ಇದರಿಂದಲೇ ಸಾಬೀತಾಗುತ್ತದೆ ಎಂದರು. ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ವಜಾ …

Read More »

ಸೋಂಕು ಕಡಿಮೆ ಆಗದಿದ್ದರೆ ಅನ್ ಲಾಕ್ ಇಲ್ಲ: ಡಿಸಿಎಂ ಸವದಿ

ಬೆಂಗಳೂರು, ಜೂ. 1- ರಾಜ್ಯದಲ್ಲಿ ಏಕ ಕಾಲಕ್ಕೆ ಅನ್ ಲಾಕ್ ಬೇಡ. ಹಂತ ಹಂತವಾಗಿ ಅನ್ ಲಾಕ್ ಮಾಡಿದರೆ ಸೂಕ್ತ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದರು‌. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್ ಡೌನ್ ಮಾಡಿದ್ದರಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ. ಅನ್ …

Read More »

ವೃತ್ತಿಪರ ಕುಲಕಸುಬನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನೊಳಗಂಡ ಎಲ್ಲ ರೀತಿಯ ದುಡಿಯುವ ವರ್ಗಕ್ಕೆ 10 ಸಾವಿರ ರೂಗಳ ಆರ್ಥಿಕ ನೆರವು ನೀಡಬೇಕು: ವಿಷ್ಣು ಲಾತೂರ

ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ತೀವೃ ಸಂಕಷ್ಟದಲ್ಲಿರುವ ಹಿಂದುಳಿದ ವರ್ಗಗಳ ಸಂಘಟಿತ ಹಾಗೂ ಅಸಂಘಟಿತ ಸಂಪ್ರದಾಯಿಕ ವೃತ್ತಿಪರ ಕುಲಕಸುಬನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನೊಳಗಂಡ ಎಲ್ಲ ರೀತಿಯ ದುಡಿಯುವ ವರ್ಗಕ್ಕೆ 10 ಸಾವಿರ ರೂಗಳ ಆರ್ಥಿಕ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದುಡಿಯುವ ವರ್ಗಕ್ಕೆ ಮೂಗಿಗೆ ತುಪ್ಪ …

Read More »

ಸೋಂಕಿತ ಮಹಿಳೆಯ ಮೇಲೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ ; ವಾರ್ಡ್‌ ಬಾಯ್‌ ಬಂಧನ

ಹುಬ್ಬಳ್ಳಿ: ಇಲ್ಲಿನ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೊಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶ್ವಸಿಯಾಗಿದ್ದಾರೆ.ಬಂಧಿತನನ್ನು ಅಶೋಕ್ ಹಲಗಿ ಎಂದು ಗುರುತಿಸಲಾಗಿದೆ. ಕಳೆದ 23ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೊಂಕಿತ ಮಹಿಳೆಯ ಮೇಲೆ ವಾರ್ಡಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಸೋಂಕಿತ ಮಹಿಳೆ ಪುತ್ರನಿಗೆ ಈ ಕುರಿತು ಮಾಹಿತಿ ನೀಡಿದ್ದಳು. ಘಟನೆ ಬೆಳಕಿಗೆ ಬಂದ ನಂತರ ಸೊಂಕಿತ ಮಹಿಳೆಯ …

Read More »

ಸೊಂಕಿತರೊಂದಿಗೆ ವೈದ್ಯೆ ಡ್ಯಾನ್ಸ್ – ಜನರಿಂದ ಮೆಚ್ಚುಗೆ

ಚಿತ್ರದುರ್ಗ: ಆತ್ಮಸ್ಥೈರ್ಯ ತುಂಬಲು ಜಿಲ್ಲೆಯ ವೈದ್ಯರು ಸೋಂಕಿತರ ಜೊತೆ ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಕೋವಿಡ್ ಕೇರ್ ಕೇಂದ್ರದಲ್ಲಿ ಕಳೆದ ಹತ್ತು ದಿನಗಳಿಂದ ಕೊರೊನಾ ಸೋಂಕಿತರಿಗೆ ವೈದ್ಯೆ ಶೃತಿ ನೃತ್ಯ ವ್ಯಾಯಾಮ ಮಾಡಿಸುತ್ತಿದ್ದಾರೆ. ಪ್ರತಿ ದಿನ ಹಿಂದಿ ಹಾಡೋಂದಕ್ಕೆ ನೃತ್ಯ ಮಾಡಿಸುವ ವೈದ್ಯೆ ಶೃತಿ, ನಾಗಿನಿ ನಾಗಿನಿ ಹಾಡಿಗೆ ಕೊರೊನಾ ಸೋಂಕಿತರೊಟ್ಟಿಗೆ ಹೆಜ್ಜೆ ಹಾಕಿಸುವ ಮೂಲಕ ಗಮನ ಸೆಳೆದಿದ್ದಾರೆ. …

Read More »

ಕೊರೊನಾ ಪಾಸಿಟಿವ್ ಇದ್ದರೂ ಅನಗತ್ಯವಾಗಿ ಕಾರಿನಲ್ಲಿ ಕುಟುಂಬ ಸಮೇತ ಓಡಾಡುತ್ತಿದ್ದ ವ್ಯಕ್ತಿ

ಚಿಕ್ಕೋಡಿ: ಕೊರೊನಾ ಪಾಸಿಟಿವ್ ಇದ್ದರೂ ಅನಗತ್ಯವಾಗಿ ಕಾರಿನಲ್ಲಿ ಕುಟುಂಬ ಸಮೇತ ಓಡಾಡುತ್ತಿದ್ದ ವ್ಯಕ್ತಿಯನ್ನು ಪೆÇಲೀಸರುವ ತಡೆದು ಆಸ್ಪತ್ರೆಗೆ ರವಾನಿಸಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ಪಟ್ಟಣದ ಕೋರ್ಟ್ ವೃತ್ತದಲ್ಲಿ ಹುಕ್ಕೇರಿ ಸಿಪಿಐ ರಮೇಶ್ ಚಾಯಾಗೋಳ ನೇತೃತ್ವದಲ್ಲಿ ತಪಾಸಣೆ ನಡೆಸುವ ಸಂದರ್ಭದಲ್ಲಿ ಪಾಸಿಟಿವ್ ಇರುವ ವ್ಯಕ್ತಿ ಕುಟುಂಬ ಸಮೇತ ಪರ ಊರಿಗೆ ತೆರಳುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಪಾಸಿಟಿವ್ ಇರುವುದನ್ನ ಸ್ವತಃ ರೋಗಿಯೇ ಹೇಳುತ್ತಿದ್ದಂತೆ ಗರಂ ಆದ …

Read More »

ಲಸಿಕೆ ಮ್ಯಾಜಿಕ್: ಕೊರೊನಾ ನಿಯಂತ್ರಿಸುವಲ್ಲಿ​​​ ಪರಪ್ಪನ ಅಗ್ರಹಾರ ಅಧಿಕಾರಿಗಳು ಸಕ್ಸಸ್​​

ಬೆಂಗಳೂರು: ಪರಪ್ಪನ ಅಗ್ರಹಾರದ ಕೈದಿಗಳಿಗೆ ಕಳೆದ ಒಂದು ತಿಂಗಳಿನಿಂದ ಹಂತ ಹಂತವಾಗಿ ಕೊರೊನಾ ಲಸಿಕೆ ನೀಡಲಾಗ್ತಿದೆ. ಈಗಾಗಲೇ 2500ಕ್ಕೂ ಹೆಚ್ಚು ಕೈದಿಗಳಿಗೆ ಮೊದಲ ಡೋಸ್​ ವ್ಯಾಕ್ಸಿನೇಷನ್​ ಮುಗಿದಿದೆ. ಇದರ ಬೆನ್ನಲ್ಲೇ ಜೈಲಿನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಅಂತ ಹೇಳಲಾಗ್ತಿದೆ. ಜೈಲಿನಲ್ಲಿ ನೂರಕ್ಕೂ ಹೆಚ್ಚಿದ್ದ ಕೊರೊನಾ ಸೋಂಕಿನ ಪ್ರಮಾಣ ಈಗ ದಿಢೀರ್​ ಇಳಿಕೆಯಾಗಿದೆ. ಕೇವಲ 12 ಮಂದಿ ವಿಚಾರಣಾಧೀನ ಕೈದಿಗಳು ಮಾತ್ರ ಈಗ ಸೋಂಕಿತರಾಗಿದ್ದಾರೆ ಅಂತ ತಿಳಿದುಬಂದಿದೆ. ಜೈಲಧಿಕಾರಿಗಳು ಕೈಗೊಂಡ ಕ್ರಮಗಳು …

Read More »

ಕಿಲ್ಲರ್ ಕೊರೊನಾ ಸೋಂಕಿಗೆ ಸ್ಯಾಂಡಲ್ವುಡ್ ನಟ ‘ಅಜಯ್ ರಾವ್’ ಮೇಕಪ್ ಮ್ಯಾನ್ ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಾವಿನ ಸರಣಿ ಮುಂದುವರೆದಿದ್ದು, ಸಾವಿರಾರು ಮಂದಿ ಹೆಮ್ಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದೀಗ ಕಿಲ್ಲರ್ ಕೊರೊನಾ ಸೋಂಕಿಗೆ ಸ್ಯಾಂಡಲ್ವುಡ್ ನಟ ಅಜಯ್ ರಾವ್ ಮೇಕಪ್ ಮ್ಯಾನ್ ಜಯರಾಮ್ ಮೃತಪಟ್ಟಿದ್ದಾರೆ. ಈ ಕುರಿತು ನಟ ಅಜಯ್ ರಾವ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಯರಾಮನ್ ನನ್ನ ಪರ್ಸನಲ್ ಮೇಕಪ್ ಮ್ಯಾನ್ ಆಗಿದ್ದರು, ಕಳೆದ 11 ವರ್ಷಗಳದಿಂದ ನನ್ನ ಜೊತೆ ಕೆಲಸ ಮಾಡುತ್ತಿದ್ದರು. …

Read More »

ದೇಶದಲ್ಲೇ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಚಿತ್ರದುರ್ಗದಲ್ಲಿ ಪತ್ತೆ

ಚಿತ್ರದುರ್ಗ, ಜೂನ್ 1: ಕೊರೊನಾ ಸೋಂಕಿನ ನಂತರ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್​, ಯೆಲ್ಲೋ ಫಂಗಸ್‌ನಂತಹ ನಾನಾ ಸೋಂಕಿನ ಸುಳಿಗೆ ಜನ ಸಿಲುಕುತ್ತಿದ್ದು, ಈಗ ಚರ್ಮ ಫಂಗಸ್‌ನ್ನು ಎದುರಿಸುವಂತಾಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ದೇಶದ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಚಿತ್ರದುರ್ಗದ 54 ವರ್ಷದ ರೋಗಿಯಲ್ಲಿ ಸ್ಕಿನ್ ಮ್ಯೂಕರ್ ಮೈಕೋಸಿಸ್ ಪತ್ತೆಯಾಗಿದೆ ಎಂದು ಇಎನ್‌ಟಿ ತಜ್ಞ ಡಾ.ಪ್ರಹ್ಲಾದ್ ತಿಳಿಸಿದ್ದಾರೆ. 54 ವರ್ಷದ ಪಂಚಾಕ್ಷರಪ್ಪ ಒಂದು‌ ತಿಂಗಳ ಹಿಂದೆ …

Read More »

ಬೆಂಗಳೂರಲ್ಲಿ ಸೋಂಕು ನಿವಾರಕ ಸಿಂಪಡಣೆಗೆ ತಡೆ

ಬೆಂಗಳೂರು, ಜೂನ್ 01; ಬಿಬಿಎಂಪಿ ವಿಮಾನದ ಮೂಲಕ ಬೆಂಗಳೂರು ನಗರದಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಣೆ ಮಾಡುವ ಪ್ರಯೋಗಕ್ಕೆ ತಾತ್ಕಾಲಿಕ ತಡೆ ನೀಡಿದೆ. ನಗರದ ಆಯ್ದ ಪ್ರದೇಶದಲ್ಲಿ ಇದನ್ನು ಜಾರಿಗೊಳಿಸಬೇಕಿತ್ತು. ಸೋಮವಾರದಿಂದ ಬುಧವಾರದ ತನಕ ನಗರದ ಆಯ್ದ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಣೆ ಮಾಡಲು ಏರಿಯಲ್ ವರ್ಕ್ಸ್ ಏರೋ ಎಲ್‍ಎಲ್‍ಪಿ ಸಂಸ್ಥೆಯ ಮುಂದಾಗಿತ್ತು. ಬಿಬಿಎಂಪಿ ಆಯುಕ್ತ ಗೌರವ ಗುಪ್ತ ಸೂಚನೆ ಅನ್ವಯ ಪ್ರಾಯೋಗಿಕ ಯೋಜನೆಗೆ ತಡೆ ನೀಡಲಾಗಿದೆ. ಕೆಲವು …

Read More »