Breaking News
Home / 2021 / ಜೂನ್ / 03 (page 4)

Daily Archives: ಜೂನ್ 3, 2021

ಮೆಗಾಸಿಟಿ ವಂಚನೆ ; ಸಚಿವ ಯೋಗೇಶ್ವರ್‌ ವಿರುದ್ದ ಸಿಐಡಿಗೆ ದೂರು

ಬೆಂಗಳೂರು: ಮೆಗಾಸಿಟಿ ಡೆವಲಪರ್ಸ್‌ ಕಂಪನಿಯ ಗ್ರಾಹಕರಿಗೆ ವಂಚಿಸಿರುವ ಪ್ರಕರಣದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಕ್ರಮ ಜರುಗಿಸಿ, ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಮೆಗಾಸಿಟಿ ನಿವೇಶನ ಸದಸ್ಯರ ಹಿತರಕ್ಷಣಾ ಸಂಘದ ಅಧ್ಯಕ್ಷ ರವೀಂದ್ರ ಬೆಲೆಯೂರು ಸಿಐಡಿ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ‘1995-2000ದ ಅವಧಿಯಲ್ಲಿ 9,000 ಜನರಿಂದ ₹ 70 ಕೋಟಿ ಸಂಗ್ರಹಿಸಿ ವಂಚಿಸಿರುವ ಆರೋಪ ಮೆಗಾಸಿಟಿ ಡೆವಲಪರ್ಸ್‌ ಮೇಲಿದೆ. 25 ವರ್ಷಗಳಾದರೂ ವಂಚನೆಗೊಳಗಾದ ಗ್ರಾಹಕರಿಗೆ ನ್ಯಾಯ ದೊರಕಿಲ್ಲ. ಕೇಂದ್ರ …

Read More »

ಮಹಾರಾಷ್ಟ್ರದಿಂದ ಕಳ್ಳ ಮಾರ್ಗವಾಗಿ ಬೆಳಗಾವಿ ಜಿಲ್ಲೆಗೆ ಸಂಚಾರ ಮಾಡುತ್ತಿದ್ದ ರಸ್ತೆಯನ್ನ ಬಂದ್ ಮಾಡಿಸಿದ ಜಿಲ್ಲಾಡಳಿತ

ಬೆಳಗಾವಿ ಜಿಲ್ಲಾಡಳಿತ ಮಹಾರಾಷ್ಟ್ರದಿಂದ ಕಳ್ಳ ಮಾರ್ಗವಾಗಿ ಬೆಳಗಾವಿ ಜಿಲ್ಲೆಗೆ ಸಂಚಾರ ಮಾಡುತ್ತಿದ್ದ ರಸ್ತೆಯನ್ನ ಬಂದ್ ಮಾಡಿಸಿದೆ. ಮಹಾರಾಷ್ಟ್ರದ ನಾಗನೂರು ಹಾಗೂ ಕರ್ನಾಟಕ ರಾಜ್ಯದ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಕಳ್ಳ ಮಾರ್ಗವನ್ನ ಪೊಲೀಸರು ಗುಂಡಿ ತೋಡುವುದರ ಮೂಲಕ ಬಂದ್ ಮಾಡಿಸಿದ್ದಾರೆ. ಆರ್‌ಟಿಪಿಸಿಆರ್‌ ವರದಿ ನೆಗೆಟಿವ್ ಇದ್ದರೆ ಮಾತ್ರ ರಾಜ್ಯ ಪ್ರವೇಶ ಹಿನ್ನೆಲೆಯಲ್ಲಿ ಕಳ್ಳ ಮಾರ್ಗದ ಮೂಲಕ ಜನ ಸಂಚಾರ ಮಾಡುತ್ತಿದ್ದರು. ಕೊರೊನಾ ವರದಿ ಇಲ್ಲದೇ ಜನ ಸಂಚಾರ …

Read More »

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದ ಸಿಎಂ B.S.Y.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯ ಧವಳಗಿರಿಯ ಮನೆ ನವೀಕರಣ ಹಿನ್ನೆಲೆ ಇಂದು ಮನೆ ನೋಡಲು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ಲಾಕ್‍ಡೌನ್ ಬಗ್ಗೆ ಕೇಳಿದ ಪ್ರಶ್ನೆಗೆ, ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಉತ್ತರಿಸಿದರು. ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಲಾಕ್‍ಡೌನ್‍ನಲ್ಲಿ ಏನು ಮಾಡಬೇಕು ಎನ್ನುವುದರ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ. ಕೈಗಾರಿಕೆಗಳ …

Read More »

ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆ- ಗೆದ್ದ ಗ್ರಾಮಗಳಿಗೆ 50 ಲಕ್ಷ ಬಹುಮಾನ

ಮುಂಬೈ: ದೇಶಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇನ್ನೂ ಭಯಾನಕ ವಿಚಾರ ಎಂಬಂತೆ ಹಳ್ಳಿಗಳಿಗೂ ಸಹ ಮಹಾಮಾರಿ ಆವರಿಸುತ್ತಿದೆ. ಹೀಗಾಗಿ ಹಳ್ಳಿಗಳಿಗೆ ಕೊರೊನಾ ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದ್ದು, ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆಯ ಪರಿಕಲ್ಪನೆಯನ್ನು ಜಾರಿಗೆ ತಂದಿದೆ. ಸ್ಥಳೀಯ ಆಡಳಿತವನ್ನು ಪ್ರೋತ್ಸಾಹಿಸುವುದು ಹಾಗೂ ಹಳ್ಳಿಗಳಿಗೆ ಕೊರೊನಾ ವ್ಯಾಪಿಸದಂತೆ ತಡೆಯುವುದು, ಈ ಮೂಲಕ ಕೊರೊನಾ ಮುಕ್ತ ರಾಜ್ಯವನ್ನಾಗಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. ಹೀಗಾಗಿ …

Read More »

ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು

ಬಾಗಲಕೋಟೆ: ವಾರದ ಅಂತರದಲ್ಲಿ ಕೋವಿಡ್ ಗೆ ದಂಪತಿ ಬಲಿಯಾದ ಕಾರಣ, ಎಂಟು ಜನ ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಪ್ಪ ಹೂಗಾರ, ದುಂಡವ್ವ ಹೂಗಾರ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಮೇ 29 ರಂದು ದುಂಡವ್ವ ಹೂಗಾರ ಮೃತರಾದರೆ, ಬಳಿಕ ಪತಿ ದುಂಡಪ್ಪ ಸಾವನ್ನಪ್ಪಿದ್ದಾರೆ. ಕಾರಣ ಎಂಟು ಜನ ಮಕ್ಕಳು ಅನಾಥರಾಗಿದ್ದಾರೆ. ದಂಪತಿಗೆ ಏಳು ಜನ ಹೆಣ್ಣು ಮಕ್ಕಳು, …

Read More »

ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕ ಸಾವು: ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಕುಟುಂಬಸ್ಥರು

ಚಿಕ್ಕಮಗಲೂರು: ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕನ ಸಾವಿನ ಪ್ರಕರಣದಲ್ಲಿ ವೈದ್ಯರನ್ನು ಕೊಲೆ ಯತ್ನದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಡಾ.ದೀಪಕ್ (50) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ತಾರಿಕೆರೆ ಪಟ್ಟಣದಲ್ಲಿ ಸೋಮವಾರ ಡೆಂಗ್ಯೂ ಪೀಡಿತ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಹದಗೆಟ್ಟಾಗ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಸಾವಿನ …

Read More »