Breaking News

Daily Archives: ಜೂನ್ 7, 2021

ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 11,958 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,38,824 ಸಕ್ರಿಯ ಪ್ರಕರಣಗಳು ಇವೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಳಿಮುಖವಾಗಿದೆ. 199 ಮಂದಿ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 1992 ಜನರಿಗೆ …

Read More »

ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ : ಬಿ ಸಿ ಪಾಟೀಲ್

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ಈ ವಿಷಯ …

Read More »

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ನೀಡಿರುವ ಆಹಾರ ಧಾನ್ಯಗಳ ಕಿಟ್‍ ವಿತರಣೆ

ಗೋಕಾಕ: ಕೊರೋನಾ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಹಾಯ ಹಸ್ತ ನೀಡುವುದರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ಹೇಳಿದರು. ಸೋಮವಾರದಂದು ನಗರದ ಮುಪ್ಪಯ್ಯನಮಠದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯವರು ಹಮ್ಮಿಕೊಂಡ ಗೋಕಾಕ ತಾಲೂಕಿನ ಕೊರೋನಾ ಸಂಕಷ್ಟದಲ್ಲಿರುವ 500 ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜನತೆ ಧೈರ್ಯದಿಂದ ಕೊರೋನಾ …

Read More »

ಅಪಘಾತ ಪೀಡಿತ ಪ್ರದೇಶಗಳಲ್ಲಿ “ಮೃತ್ಯುಂಜಯ ಧೂತ್‌’ ತಂಡ ನಿಯೋಜನೆ

ಮುಂಬಯಿ: ಥಾಣೆ, ರಾಯಗಢ, ಪುಣೆ ಮತ್ತು ನಾಗಪುರ ಜಿಲ್ಲೆಯಾದ್ಯಂತ ಅಪಘಾತ ಪೀಡಿತ ಪ್ರದೇಶಗಳಲ್ಲಿ “ಮೃತ್ಯುಂಜಯ ಧೂತ್‌’ ತಂಡಗಳನ್ನು ನಿಯೋಜಿಸಿರುವ ಹೆದ್ದಾರಿ ಪೊಲೀಸರು. ಈ ಮೂಲಕ ಕಳೆದ ಮೂರು ತಿಂಗಳಲ್ಲಿ 277 ಮಂದಿಯ ಜೀವ ಉಳಿಸಲು ಸಹಾಯವಾಗಿದೆ ಎಂದು ತಿಳಿಸಿದೆ. ಈ ತಂಡಗಳಲ್ಲಿ ಹತ್ತಿರದ ಹಳ್ಳಿಗಳ ಸಾಮಾ ನ್ಯ ಜನರು, ಪೆಟೊ›àಲ್‌ ಪಂಪ್‌ ಮತ್ತು ಡಾಬಾ ಗಳಲ್ಲಿ ಕೆಲಸ ಮಾಡುವವರು ಹಾಗೂ ಸಾಮಾಜಿಕ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿರುವವರನ್ನು ಧೂತ್‌ ಕಾರ್ಯಕರ್ತ ರನ್ನಾಗಿ …

Read More »

ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿ ವಿಕೃತಿ: ಕೊನೆಗೂ ಸಿಕ್ಕಿಬಿದ್ದರು ಖದೀಮರು

ರಾಮನಗರ: ಕರೊನಾದಿಂದ ಶಾಲೆಗಳು ಬಂದ್ ಆಗಿರುವ ಪರಿಣಾಮ ಮಕ್ಕಳ ಭವಿಷ್ಯದ ಬಗ್ಗೆ ಪಾಲಕರು ಕಂಗಾಲಾಗಿರುವ ಸಂದರ್ಭದಲ್ಲೇ ಮಕ್ಕಳಿಗೆ ಮದ್ಯಪಾನ ಮಾಡಿಸಿ ಮತ್ತಿನಲ್ಲಿ ಅವರು ಆಡುವ ಆಟಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಪ್ರಕರಣ ರಾಮನಗರ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿತ್ತು. ಬಾಳೆತೋಟವೊಂದರ ತೋಟದ ಮನೆ ಬಳಿ 10 ವರ್ಷದೊಳಗಿನ 7 ಮಕ್ಕಳಿಗೆ ಬಾಡೂಟದ ಜತೆ ಮದ್ಯ ನೀಡಿ ಕುಡಿಯುವಂತೆ ಉತ್ತೇಜಿಸುತ್ತಿರುವ ದೃಶ್ಯವನ್ನೊಳಗೊಂಡ ವಿಡಿಯೋ ಸೇರಿ 3 ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. …

Read More »

ತುಮಕೂರಿನಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿ: ಮಹಿಳೆ ಸೇರಿ ಇಬ್ಬರು ಸಾವು

ತುಮಕೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕು ಸಾಗರನಹಳ್ಳಿ ಗೇಟ್ ಸಮೀಪ ನಡೆದಿದೆ. ಮೃತರನ್ನು ಬೈಕ್ ಸವಾರ ರಾಮಚಂದ್ರ (30) ಹಾಗೂ ಪ್ರಿಯಾ (25) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ಕಡೂರು ತಾಲೂಕು ಬೀರೂರಿನವರಾಗಿದ್ದು ಬೆಂಗಳೂರು ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 206ರ ಸಾಗರನಹಳ್ಳಿ ಗೇಟ್ ಸಮೀಪ ಅಪಘಾತವಾಗಿದ್ದು ಬೈಕ್ …

Read More »

ಮನೆ ಮೇಲೆ ಕಟ್ಟಡದ ಗೋಡೆ ಕುಸಿತ: ಒಬ್ಬರ ಸಾವು, 17 ಮಂದಿ ರಕ್ಷಣೆ

ಮುಂಬೈ: ಬಾಂದ್ರಾದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯು ಪಕ್ಕದ ಎರಡು ಅಂತಸ್ತಿನ ಮನೆಯ ಮೇಲೆ ಕುಸಿದಿರುವ ಪರಿಣಾಮ ಸಂಭವಿಸಿರುವ ದುರಂತದಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ (ಪೂರ್ವ) ಖೇರ್ವಾಡಿ ರಸ್ತೆಯಲ್ಲಿರುವ ರಜಾಕ್ ಚಾವ್ಲ್‌ನಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. 28 ವರ್ಷದ ರಿಯಾಸ್ ಅಹ್ಮದ್ ಎಂಬವರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯು ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಅವಘಡ ಸಂಭವಿಸಿದ …

Read More »

ಸಂಪೂರ್ಣ ಚೇತರಿಸಿಕೊಂಡ ಸಿದ್ದರಾಮಯ್ಯ; ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.   ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಡೆಸಿದ ಕೋವಿಡ್ ಪರೀಕ್ಷೆಗಳಲ್ಲಿ ನೆಗಟಿವ್ ವರದಿಯಾಗಿತ್ತು.

Read More »

ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ: ಸಚಿವ ಬಿ.ಸಿ. ಪಾಟೀಲ್

ಬೆಳಗಾವಿ: ಯಾರೋ ದೆಹಲಿಗೆ ಹೋಗಿ ಬಂದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಪಕ್ಷದ ವರಿಷ್ಠರು ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ …

Read More »

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗ ಆರಂಭ; ಕೊರೊನಾ 3ನೇ ಅಲೆಗೆ ಸಿದ್ಧತೆ

ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ಇಳಿಮುಖವಾಗುತ್ತಿರು ಮಧ್ಯೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬ ಎಚ್ಚರಿಕೆ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಇದೀಗ ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ ಆರಂಭವಾಗಿದೆ. ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗಿಸಲಾಗುತ್ತಿದ್ದು, ದೆಹಲಿಯ ಏಮ್ಸ್ ಹಾಗೂ ಮಹಾರಾಷ್ಟ್ರದ ನಾಗ್ಪುರದಲ್ಲಿಯೂ ಪ್ರಯೋಗ ಆರಂಭವಾಗಿದೆ. 12-18 ವರ್ಷದ 175 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, 3 ಗ್ರೂಪ್ …

Read More »