Breaking News

Daily Archives: ಜೂನ್ 8, 2021

ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್: ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ-ಬರುವ ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ,ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರತಿ ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಮಾಡುತ್ತ ಬಂದಿದ್ದು ಬರುವ ಶನಿವಾರ ದಿನಾಂಕ,12 ಹಾಗೂ 13 ರಂದು ಎರಡೂ ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜೂನ್ 14 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ.

Read More »

ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ : ಸಿದ್ದರಾಮಯ್ಯ

ಬೆಂಗಳೂರು: “ಬಿಜೆಪಿ ಸರ್ಕಾರವು ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು, ಈಗ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರು ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲ್ಲುವುದು ಖಚಿತ, ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, “ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ. ಜನರಿಗೂ ಅವರ ನಾಟಕ ತಿಳಿಸಿದೆ. ಅದಕ್ಕಾಗಿ ಬಿಎಸ್‌ವೈಯವರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ” ಎಂದರು. “ಯಡಿಯೂರಪ್ಪ …

Read More »

CD ಕೇಸ್​​; ಆರೋಪಿಗಳಿಗೆ ಸಿಕ್ತು ನಿರೀಕ್ಷಣಾ ಜಾಮೀನು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ CD ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ಆರೋಪಿಗಳಾದ ನರೇಶ್​​ ಗೌಡ ಹಾಗೂ ಶ್ರವಣ್​ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್‌ಮೇಲ್ ಆರೋಪ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಎರಡೂ ಕಡೆ ವಾದ-ಪ್ರತಿವಾದ ಆಲಿಸಿತ್ತು. ಜೂನ್ 2 ರಂದು ವಾದ-ಪ್ರತಿವಾದವನ್ನ ಅಂತಿಮಗೊಳಿಸಿದ್ದ ನ್ಯಾಯಾಲಯವು ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು.

Read More »

ಸಿಎಂ ಬದಲಾವಣೆ ಕಾಂಗ್ರೆಸ್‌ನ ಹಗಲುಗನಸು: ಗೋವಿಂದ ಕಾರಜೋಳ ಲೇವಡಿ

ಬಾಗಲಕೋಟೆ: ರಾಜ್ಯದಲ್ಲಿ ಇನ್ನೇನು ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು, ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅಭ್ಯರ್ಥಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಅಜೆಂಡಾ ಇಲ್ಲ. ಈ ವಿಚಾರ ಯಾರೂ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಸರ್ಕಾರದ ಮುಂದಿನ ಅವಧಿಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ …

Read More »

ನಾಯಿ ಜೊತೆ ಬಂದ ಯುವತಿ ಪೊಲೀಸರ ಜೊತೆಗೆ ಫುಲ್ ಜಗಳ..!

ಮೈಸೂರು: ಕೊರೊನಾ ಕಂಟ್ರೋಲ್ ಗೆ ಅಂತ ಜಾರಿಯಲ್ಲಿರುವ ಲಾಕ್ಡೌನ್ ಇನ್ನು ಜಾರಿಯಲ್ಲಿದೆ. ಆದ್ರೆ ಜನ ಕೊರೊನಾಗೂ ಹೆದರುತ್ತಿಲ್ಲ, ಲಾಕ್ಡೌನ್ ಗೂ ಕ್ಯಾರೆ ಎನ್ನುತ್ತಿಲ್ಲ. ಕಾವಲಿಗೆಂದು ಇರುವ ಪೊಲೀಸರಿಗೂ ಅವಾಸ್ ಹಾಕಿಕೊಂಡು ಓಡಾಡುತ್ತಿದ್ದಾರೆ. ಇಂಥದ್ದೇ ಘಟನೆ ಜಿಲ್ಲೆಯಲ್ಲೂ ನಡೆದಿದೆ. ಯುವತಿಯೊಬ್ಬಳು ನಾಯಿಯನ್ನು ಕರೆದುಕೊಂಡು ಸಿಟಿ ರೌಂಡ್ಸ್ ಬಂದಿದ್ದಾಳೆ. ಅದು ಬೈಕ್ ನಲ್ಲಿ. ಅಡ್ಡಾದಿಡ್ಡಿ ಓಡಾಡುವ ಹಾಗೆ ಇಲ್ಲ ಎಂದಾಗಲೇ ಆ ಸಮಯದಲ್ಲೇ ಒಡಾಟ ನಡೆಸಿದ್ದಾಳೆ. ಪೊಲೀಸರು ಸಹಜವಾಗಿಯೇ ತಪಾಸಣೆ ಮಾಡಿದಾಗ ಸಿಕ್ಕಿಬಿದ್ದಿದ್ದಾಳೆ. …

Read More »

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್; ಜೂನ್ 14ರ ಗಡುವಿನ ಅರ್ಥವೇನು.?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ.   ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ …

Read More »

ಪೆಟ್ರೋಲ್, ಡೀಸೆಲ್ ಖರೀದಿಗೆ ಸಾಲ ನೀಡಿ: ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಆಗ್ರಹ

ದಾವಣಗೆರೆ: ಪೆಟ್ರೋಲ್, ಡೀಸೆಲ್ ಖರೀದಿಸಲು ಬ್ಯಾಂಕ್‌ಗಳು ಸಾಲ ನೀಡಬೇಕು ಎಂದು ಭಾರತೀಯ ಯುವ ಕಾಂಗ್ರೆಸ್ ಇಲ್ಲಿನ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂದೆ ಆಗ್ರಹಿಸಿತು. ಯುವ ಕಾಂಗ್ರೆಸ್ ವಕ್ತಾರ ಎಚ್.ಜೆ. ಮೈನುದ್ದೀನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಪ್ರದರ್ಶಿಸಿ ಸಾಲ ನೀಡುವಂತೆ ಒತ್ತಾಯಿಸಿದರು. ‘ಲಾಕ್‌ಡೌನ್‌ನಿಂದಾಗಿ ಅಂಗಡಿಗಳು ಬಂದ್ ಆಗಿವೆ. ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ.ಪೆಟ್ರೋಲ್ ದರ ಒಂದು ಲೀಟರ್‌ಗೆ ₹ 100, ಡೀಸೆಲ್ ದರ ಒಂದು ಲೀಟರ್‌ಗೆ ₹ 90ರ ಗಡಿ ದಾಟಿದೆ. ₹ …

Read More »

ಹುಬ್ಬಳ್ಳಿಯ ಕಿಮ್ಸ್ನ 11 ಜನ ವೈದ್ಯರು ಸರ್ಕಾರ ನೀಡೋ ಲಕ್ಷ ಲಕ್ಷ ಸಂಬಳ ಎಣಿಸಿ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ವೃತ್ತಿಗೆ ದ್ರೋಹ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ನ 11 ಜನ ವೈದ್ಯರು ಸರ್ಕಾರ ನೀಡೋ ಲಕ್ಷ ಲಕ್ಷ ಸಂಬಳ ಎಣಿಸಿ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ವೃತ್ತಿಗೆ ದ್ರೋಹ ಬಗೆಯುತ್ತಿದ್ರು. ಈ ಬಗ್ಗೆ ಟಿವಿ9 ವರದಿ ಮಾಡಿದ್ದು ಎಚ್ಚೆತ್ತ ಕಿಮ್ಸ್ ನಿರ್ದೇಶಕರು 11 ವೈದ್ಯರಿಗೆ ನೋಟಿಸ್ ಜಾರಿಗೊಳಿಸಿ ತಕ್ಷಣವೇ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಸದ್ಯ ಹುಬ್ಬಳ್ಳಿಯ ಕಿಮ್ಸ್ ವೈದ್ಯರಿಂದ ನೋಟಿಸ್‌ಗೆ ಉತ್ತರ ಬಂದಿದೆ. 11 ವೈದ್ಯರ ಪೈಕಿ 9 ವೈದ್ಯರಿಂದ ನೋಟಿಸ್‌ಗೆ …

Read More »

ಹಾನಗಲ್ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಅವರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. 77 ವರ್ಷದ ಉದಾಸಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ಸಿ.ಎಂ.ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು. ಮುಖ್ಯ ಮಂತ್ರಿಗಳ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ …

Read More »

ಗಂಡನನ್ನ ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟ ತಾಯಿ ಮಕ್ಕಳಿಗೆ ಜೀವಾವಧಿ ಶಿಕ್ಷೆ…

ಉಡುಪಿ, : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿದೆ. ಕರಾವಳೀ ಭಾಗದಲ್ಲಿ ಈ ಕೊಲೆ ಭಾರೀ ಸಂಚಲನ ಸೃಷ್ಟಿಸಿತ್ತು. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ಪ್ರಕಟವಾಗಿದೆ. ಮೂವರು ಪ್ರಮುಖ ಆರೋಪಿಗಳಿಗೆ …

Read More »