Breaking News
Home / 2021 / ಜೂನ್ / 08 (page 2)

Daily Archives: ಜೂನ್ 8, 2021

ಡೀಸೆಲ್‌ ದರ ಹೆಚ್ಚಾದರೂ ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲ್ಲ ; ಸಚಿವ ಸವದಿ

ಬೆಂಗಳೂರು: ಸದ್ಯಕ್ಕೆ ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನಾಲ್ಕೂ ನಿಗಮಗಳು ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿತ್ತು. ಆವಾಗ ಬಿಎಂಟಿಸಿ ದರ ಹೆಚ್ಚಳ ಮಾಡಿಲ್ಲವೆಂದು ಶೇ.15 ರಷ್ಟು ದರ ಹೆಚ್ಚಿಸುವಂತೆ ಸಂಸ್ಥೆ ಕೋರಿದೆ. ಆದರೆ ಕೋವಿಡ್ ಪರಿಸ್ಥಿತಿ, ಲಾಕ್ ಡೌನ್ ನಿಂದ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. …

Read More »

, ಆಗಸ್ಟ್ 28, 29ರಂದು C.E.T. ಪರೀಕ್ಷೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಿಗದಿಯಾಗಿದ್ದು, ಆಗಸ್ಟ್ 28, 29ರಂದು ಪರೀಕ್ಷೆ ನಡೆಸಲಾಗುತ್ತಿದ್ದು ಈ ಹಿಂದಿನಂತೆಯೇ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಸಿಇಟಿ ಬಗ್ಗೆ ಇಂದು ನಡೆದ ಸಭೆ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಕೋರ್ಸ್ ಗಳಿಗೂ ಸಿಇಟಿ ಅಂಕ ಪರಿಗಣಿಸಲು ನಿರ್ಧರಿಸಲಾಗಿದೆ. ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು …

Read More »

ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಕಿತ್ತಾಟದ ಬಗ್ಗೆ ತನಿಖೆ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಬ್ಬ ಎಂಪಿಯಾಗಿ ಅಧಿಕಾರಿಗಳ ಬೆಂಬಲಿಸೋದು ಅಥವಾ ವಿರೋಧಿಸೋದು ಸರಿಯಾ? ಅವರದೇ ಸರ್ಕಾರ ಇದೆ. ಅಲ್ಲದೆ ಅವರು ಎಂಪಿ, ಮಾನ ಮರ್ಯಾದೆ ಇರೋರು ಹೀಗೆಲ್ಲ ಮಾಡಲ್ಲ, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು …

Read More »

ಸಿಎಂ ಆಪ್ತರ ಮೇಲೆ ಹೈಕಮಾಂಡ್ ಗರಂ

ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ. ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ. ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. …

Read More »

2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಎಚ್​.ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ: ಆಂಧ್ರ ಜ್ಯೋತಿಷಿ ಭವಿಷ್ಯ

ಬೆಂಗಳೂರು: ಜೆಡಿಎಸ್ ನಾಯಕ ಎಚ್​.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ. ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್​​ಡಿಕೆ …

Read More »

ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಾಲಗಾರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಾಲಗಾರು ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ,ಬೀದರ್ ಲೋಕಸಭಾ …

Read More »

ಗಾಂಧೀಜಿ ಮರಿಮೊಮ್ಮಗಳಿಗೆ ಆಫ್ರಿಕಾ ನ್ಯಾಯಾಲಯದಿಂದ ಜೈಲು ಶಿಕ್ಷೆ

ಜೊಹಾನ್ಸ್‌ಬರ್ಗ್‌(ದಕ್ಷಿಣ ಆಫ್ರಿಕಾ): ಹಣಕಾಸು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಮಾಡಿದ ಆರೋಪದಲ್ಲಿ ಮಹಾತ್ಮ ಗಾಂಧೀಜಿ ಅವರ 56 ವರ್ಷದ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್‌ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆರು ದಶಲಕ್ಷ ಆಫ್ರಿಕನ್‌ ರಾಂಡ್‌ ( ಅಂದಾಜು ₹3.22 ಕೋಟಿ) ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣದಲ್ಲಿ ಗಾಂಧಿ ಮರಿ ಮೊಮ್ಮಗಳು ಆಶಿಶ್ ಲತಾ ರಾಮ್‌ಗೋಬಿನ್ ಅವರು ತಪ್ಪಿತಸ್ಥರು ಎಂದು ನ್ಯಾಯಾಲಯ …

Read More »

ಸಿ.ಟಿ.ರವಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು – ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿನೆ ಮಾಡಿದ್ದ ಆರೋಪ ಸಂಬಂಧ ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ. ಸಿ.ಟಿ.ರವಿ ಮತ್ತು ಅವರ ಮೂವರು ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ದತ್‌ …

Read More »

ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಯಾದಗಿರಿ: ಒಳ ಹರಿಯುವ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನೀರು ಬಿಡುಗಡೆ ಮಾಡಿರುವುದರಿಂದ ನದಿ ಪಾತ್ರದ ಗ್ರಾಮಸ್ಥರಿಗೆ ನದಿ ಹತ್ತಿರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಯಾದಗಿರಿ ಜಿಲ್ಲೆಯ ನಾರಾಯಣಪುರ ಗ್ರಾಮದ ಬಳಿ ಇರುವ ಬಸವಸಾಗರ ಜಲಾಶಯ ಇದಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 33.33 TMC, 492.25 ಮೀ ಇದ್ದು, ಇಂದಿನ ನೀರಿನ ಸಂಗ್ರಹ 21.38 TMC …

Read More »

ಬಿಕರಿಗೆ ಇದೆ ಡೆತ್ ಸರ್ಟಿಫಿಕೇಟ್ – ಆನ್‍ಲೈನ್‍ನಲ್ಲಿ ಆಪಾಯಿನ್‍ಮೆಂಟ್ ಫಿಕ್ಸ್, ಶವ ಸಂಸ್ಕಾರಕ್ಕೆ ಟೈಮೂ ಫಿಕ್ಸ್! ಕೋವಿಡ್ ಬೇಕಾ, ನಾನ್ ಕೋವಿಡ್ ಬೇಕಾ?

ಬೆಂಗಳೂರು: ಬೆಡ್ ಬ್ಲಾಕಿಂಗ್, ರೆಮ್‍ಡಿಸಿವಿರ್, ಅಂಬುಲೆನ್ಸ್ ದಂಧೆ ಬಳಿಕ ಇದೀಗ ಅಂತ್ಯಸಂಸ್ಕಾರ ಹಾಗೂ ಡೆತ್ ಸರ್ಟಿಫಿಕೇಟ್ ಡೀಲ್ ಬೆಳಕಿಗೆ ಬಂದ್ದಿದ್ದು, ಒಂದು ಡೆತ್ ಸರ್ಟಿಫಿಕೇಟ್ ನೀಡಲು ಬರೋಬ್ಬರಿ 20-30 ಸಾವಿರ ರೂ.ಗಳನ್ನು ಖದೀಮರು ಪೀಕುತ್ತಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್‍ನಲ್ಲಿ ಬಹಿರಂಗವಾಗಿದ್ದು, ನಗರದ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‍ನಲ್ಲಿ ಹೆಣಗಳ ಮೇಲೆ ಡೀಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೋವಿಡ್ ಆಗ್ಲಿ, ನಾನ್ ಕೋವಿಡ್ ಆಗ್ಲಿ ಕಾಸು ಕೊಟ್ರೆ ಶವಕ್ಕೆ …

Read More »