Breaking News
Home / 2021 / ಜೂನ್ / 13 (page 3)

Daily Archives: ಜೂನ್ 13, 2021

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ದೊರೆತ ಪುಲಿಟ್ಜರ್‌ ಪ್ರಶಸ್ತಿ

ನ್ಯೂಯಾರ್ಕ್‌: ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಈ ಬಾರಿಯ ಪ್ರತಿಷ್ಠಿತ ‘ಪುಲಿಟ್ಜರ್‌ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಆಕೆ ಮುಸ್ಲಿಮರನ್ನು ಸೆರೆಯಲ್ಲಿಡಲು ಷಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಬೃಹತ್‌ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸುವ ಮೂಲಕ ಚೀನಾದ ಕ್ರಮವನ್ನು ಜಗತ್ತಿಗೆ ತಿಳಿಸಿದ್ದು, ತನ್ನ ವಿನೂತನ ತನಿಖಾ ವರದಿಗಳ ಮೂಲಕ ಮೌಲ್ಯಯುತ ಸುದ್ದಿಗಳನ್ನು ಪ್ರಸ್ತುಪಡಿಸಿದ ಕಾರಣಕ್ಕಾಗಿ ಮೇಘಾ ರಾಜಗೋಪಾಲನ್ ಸೇರಿ ಮೂವರು ಪತ್ರಕರ್ತರನ್ನು ಪತ್ರಿಕೋದ್ಯಮ ಕ್ಷೇತ್ರದ ಈ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. …

Read More »

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. …

Read More »

ವೈದ್ಯಕೀಯ ವಸ್ತುಗಳ ಮೇಲಿನ ತೆರಿಗೆ ಕಡಿತ: ನಿರ್ಮಲಾ ಸೀತಾರಾಮನ್

ನವದೆಹಲಿ: ಇಂದು ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಆಮ್ಲಜನಕದ ಸರಕುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಕುರಿತು ಚರ್ಚಿಸಲಾಗಿದೆ. Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ. ಈ ಕುರಿತು ಮಾತನಾಡಿದ …

Read More »

ಮಾನಸಿಕ ಅಸ್ವಸ್ಥನ ಲಾಕಪ್ ಡೆತ್- ಎಂಟು ಪೊಲೀಸರು ಅಮಾನತು

ಮಡಿಕೇರಿ: ವಿರಾಜಪೇಟೆಯಲ್ಲಿ ನಡೆದಿದ್ದ ರಾಯ್ ಡಿಸೋಜ ಅವರ ಸಾವಿನ ಪ್ರಕರಣ ಸಂಬಂಧ ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಭೇಟಿ ನೀಡಿ, ಸ್ಥಳ ಪರಿಶೀಲಿಸಿದ್ದು, ಮೇಲ್ನೋಟಕ್ಕೆ ತಪ್ಪಿತಸ್ಥ ಹೆಡ್ ಕಾನ್‍ಸ್ಟೇಬಲ್ ಸೇರಿ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತುಗೊಳಿಸಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಪ್ರವೀಣ್ ಪವಾರ್ ತಿಳಿಸಿದ್ದಾರೆ.   ಶನಿವಾರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭ ಘಟನೆ ನಡೆದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮದವರಿಗೆ ಮಾಹಿತಿ …

Read More »

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ ಮಹಮೈತ್ರಿ ಅಗತ್ಯವಿದೆ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್

ಮುಂಬೈ: 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ “ಮಹಾಮೈತ್ರಿ” ರಚಿಸುವ ಅವಶ್ಯಕತೆಯಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ. ಕಿಶೋರ್ ಅವರು ಮುಂಬೈನ ನಿವಾಸದಲ್ಲಿ ಶುಕ್ರವಾರ ಪವಾರ್ ಅವರನ್ನು ಭೇಟಿಯಾಗಿದ್ದು, ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಸಭೆ ರಾಜಕೀಯ ವಲಯಗಳಲ್ಲಿ …

Read More »

ಜೂನ್ 14ರಿಂದಲೇ ಇತರ ಜಿಲ್ಲೆಗಳಂತೆ ಬೆಳಗಾವಿಯಲ್ಲೂ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಎಂದು ಮನವಿ

ಬೆಳಗಾವಿ – ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ. ಆದರೆ ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳು ಸೋಮವಾರ (ಜೂ.14) ದಿಂದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಅಲ್ಲದೆ ಯಾವ …

Read More »

ನೀಷೆಧಾಜ್ಞೆಯನ್ನು ಜೂನ್ ೨೧ ರ ಬೆಳಿಗ್ಗೆ ೬ ಗಂಟೆಯವರೆಗೆ ವಿಸ್ತರಿಸಲಾಗಿದೆ: ಎಂ.ಜಿ.ಹಿರೇಮಠ

ಬೆಳಗಾವಿ : ಕೋವಿಡ್-೧೯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ ೨೧ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ ೭ ರ ಬೆಳಿಗ್ಗೆ ೬ ಗಂಟೆಯಿಂದ ಜೂನ್ ೧೪ ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ …

Read More »

ಆರೋಪಿಗಳಾದ ನರೇಶ್, ಶ್ರವಣ್ ವಿಚಾರಣೆಯಿಂದ ಮಹತ್ವದ ಸತ್ಯ ಬಯಲು!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿ ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಮಾಡಿದ ಸಿಟಿ ಪ್ರಕರಣ ಸಂಬಂಧ ಇಂದು ಮಹತ್ವದ ವಿಚಾರಣೆ ನಡೆಯಿತು. ತಿಂಗಳಾನುಗಟ್ಟಲೇ ತಲೆಮರೆಸಿಕೊಂಡು, ಕೋರ್ಟ್​​ನಿಂದ ಜಾಮೀನು ಪಡೆದಿರುವ ಆರೋಪಿಗಳಾದ ನರೇಶ್​ಗೌಡ ಹಾಗೂ ಶ್ರವಣ್​​​​ ಇಂದು ವಿಚಾರಣೆಗೆ ಹಾಜರಾಗಿದ್ದರು. ಆಡುಗೋಡಿ ಟೆಕ್ನಿಕಲ್ ಸೆಲ್​​ನಲ್ಲಿ ಇಬ್ಬರು ಆರೋಪಿಗಳನ್ನು ಪ್ರತ್ಯೇಕವಾಗಿ ಎಸಿಪಿ ಧರ್ಮೇಂದ್ರ ವಿಚಾರಣೆ ನಡೆಸಿದರು. ನ್ಯಾಯಾಲಯದ ಆದೇಶದ ಪ್ರತಿ ಹಾಗೂ ಷರತ್ತುಗಳನ್ನು ಪೂರೈಕೆ ಮಾಡಿರುವ ಬಗ್ಗೆ ಪರಿಶೀಲನೆ ಬಳಿಕ …

Read More »