Breaking News

Daily Archives: ಜೂನ್ 16, 2021

ಹಾವೇರಿ ಜಿಲ್ಲೆಯಲ್ಲಿ ತುಂತುರು ಮಳೆ – ಮನೆಯ ಗೋಡೆಗಳಿಗೆ ಹಾನಿ

ಹಾವೇರಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಮೋಡಕವಿದ ವಾತಾವರಣದೊಂದಿಗೆ ಆಗಾಗ ತುಂತುರು ಮಳೆ ಆಗುತ್ತಿದೆ. ತುಂತುರು ಮಳೆಗೆ ಮನೆಯ ಹಳೆಯ ಗೋಡೆಗಳು ನೆನೆದು ಬಿದ್ದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ. ನೆರಗಲ್ ಗ್ರಾಮದ ತಿರಕಪ್ಪ ಗೋದಿ ಎಂಬವರ ಮನೆಯ ಗೋಡೆ ನೆಲಕಚ್ಚಿದೆ. ಅರಳೇಶ್ವರ ಗ್ರಾಮದ ಗಂಗಯ್ಯ ಹಿರೇಮಠ ಹಾಗೂ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದ ರಾಜು ಪಗಡೆ ಎಂಬವರ ಮನೆಯ ಗೋಡೆ ನೆಲಕಚ್ಚಿದೆ. ಮೂರು ಮನೆಯ ಗೋಡೆಗಳು …

Read More »

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು, ಜೂನ್ 16: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ ಮಾಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯ ವೆಬ್​ಸೈಟ್ www.sslc.Karnataka.gov.in ನಲ್ಲಿ ಪ್ರಕಟವಾಗಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆ ಪ್ರಕಟವಾಗಿದೆ. ಪ್ರಸಕ್ತ ವರ್ಷ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿದ್ದರಿಂದ ಜೂನ್ …

Read More »

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು ಗೊತ್ತಾ..?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಗರಿಗೆದರಿರುವಂತ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಯ ಹಿನ್ನಲೆಯಲ್ಲಿ, ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಮದಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊರೋನಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್ ಸಹಿಸದೇ ಬರೀ ವಾಗ್ದಾಳಿ ನಡೆಸುತ್ತಿದೆ. ಜೆಡಿಎಸ್ ಮಾತ್ರ ಐಸೋಲೇಷನ್ ನಲ್ಲಿ ಇದೆ. …

Read More »

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ಬೆಂಗಳೂರು: “ಅಜ್ಜಿಗೆ ಅರಿವೆ ಚಿಂತೆ, ಮೊಮ್ಮಗಳಿಗೆ ಡಾಬಿನ ಚಿಂತೆ” ಎನ್ನುವಂತೆ ರಾಜ್ಯದ ಜನತೆಗೆ ಬದುಕಿನ ಚಿಂತೆ, ಬಿಜೆಪಿಗೆ ಕುರ್ಚಿ ಕದನದ ಚಿಂತೆಯಾಗಿದೆ. ಒಂದು ಕಡೆ ಸಹಿ ಸಂಗ್ರಹಿಸುವವರು, ಮತ್ತೊಂದು ಕಡೆ ಪತ್ರ ಬರೆಯುವವರು, ಇನ್ನೊಂದು ಕಡೆ ಆ’ಸಂತೋಷಗೊಂಡವರು! ಎಂದಿಗೂ ಜನಪರವಾಗಿರದ ಬಿಜೆಪಿಗೆ ಅಧಿಕಾರ ಸಿಗುವುದು ರಾಜ್ಯಕ್ಕೆ ‘ಶಾಪ’ ತಟ್ಟಿದಂತೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ. ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗೈಯಲಾಗಿದೆ. ಅರುಣ್ ಸಿಂಗ್ ಅವರೇ, …

Read More »

ಪೊಲೀಸರ ಮೇಲೆ ಹಲ್ಲೆ ನಡೆಸಿದ -ಗುಂಪು ಪರಾರಿ

ಬೆಳಗಾವಿ: ಆಟೋ ರಿಕ್ಷಾದಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ಯುವಕರಿಗೆ ಮನೆಗೆ ಹೋಗುವಂತೆ ಹೇಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿಯ ದರ್ಬಾರ್‌ ಗಲ್ಲಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಲಾಕ್‌ಡೌನ್‌ ವೇಳೆ ನಗರದೆಲ್ಲೆಡೆ ಗಸ್ತು ತಿರುಗುತ್ತಿದ್ದ ಮಾರ್ಕೆಟ್‌ ಠಾಣೆ ಸಿಬ್ಬಂದಿಗಳಾದ ಮಹಾಂತೇಶ ಅಂಗಳಗಿ, ಸೋಮು ದುರ್ಗಿ ಹಾಗೂ ಸಂಜೀವ ಪಾತ್ರೋಟ ಎಂಬುವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆಸಿದ ಗುಂಪು ಪರಾರಿಯಾಗಿದ್ದಾರೆ. ದರ್ಬಾರ್‌ ಗಲ್ಲಿಯಲ್ಲಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾದ ದೃಶ್ಯಗಳ …

Read More »

ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ: ಯೋಧನಿಂದ ಜಿಲ್ಲಾಧಿಕಾರಿಗೆ ದೂರು

ಬೆಳಗಾವಿ: ‘ದೇವಸ್ಥಾನದ ಜಾಗದ ವಿಚಾರವಾಗಿ ಗ್ರಾಮದ ಪಂಚಸಮಿತಿಯವರು ತಮ್ಮ ಕುಟುಂಬಕ್ಕೆ ಆರು ತಿಂಗಳಿಂದಲೂ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ’ ಎಂದು ಯೋಧ, ತಾಲ್ಲೂಕಿನ ಗೌಂಡವಾಡದ ದೀಪಕ್ ಪಾಟೀಲ ಆರೋಪಿಸಿದರು. ಸೇನಾ ಸಮವಸ್ತ್ರದಲ್ಲಿ ಕುಟುಂಬ ಸಮೇತವಾಗಿ ಬಂದು ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮದ್ರಾಸ್ ರೆಜಿಮೆಂಟ್‌ಗೆ ಸೇರಿದ ನಾನು ಶ್ರೀನಗರದಲ್ಲಿ ಹವಾಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಗ್ರಾಮದವರು ಕೇಳುತ್ತಿರುವ 5 ಎಕರೆ ಜಮೀನು ನಮ್ಮ ಕಾಕಾ ಅಶೋಕ ಪಾಟೀಲ …

Read More »

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್

ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮದುವೆ ನಿಗದಿಯಾಗಿತ್ತು. ಮಕ್ಕಳ ಸಹಾಯವಾಣಿಗೆ ಬಂದ ಕರೆಯ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ಗ್ರಾಮಕ್ಕೆ ತೆರಳಿದ್ದು, ನಿಗದಿಯಾಗಿದ್ದ ಮದುವೆಯನ್ನು ತಡೆದಿದ್ದಾರೆ. ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಅಪ್ರಾಪ್ತೆಯನ್ನು ಬಾಲಮಂದಿರಕ್ಕೆ ದಾಖಲಿಸಲಾಗಿದೆ. ಬಾಲ್ಯವಿವಾಹ ಮಾಡದಂತೆ ಪೋಷಕರಿಗೆ ತಾಕೀತು …

Read More »

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಂದು ಅಥವಾ ನಾಳೆ ನಿರ್ಧಾರ;

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಣ ರಾಜಕೀಯ, ಅಸಮಾಧಾನಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಲಿದ್ದು, ಎಲ್ಲಾ ಗೊಂದಲಗಳನ್ನು ಬಗೆಹರಿಸಲಿದ್ದಾರೆ. ಮೂರು ದಿನಗಳ ರಾಜ್ಯ ಭೇಟಿಗಾಗಿ ಇಂದು ಮಧ್ಯಾಹ್ನ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಯತ್ನಿಸಲಿದ್ದಾರೆ. ಈ ನಿಟ್ಟಿನಲ್ಲಿ ಸಚಿವರನ್ನು ಪ್ರತ್ಯೇಕವಾಗಿ ಕರೆಸಿ ಚರ್ಚೆ ನಡೆಸಲು ಅರುಣ್ ಸಿಂಗ್ ಮುಂದಾಗಿದ್ದು, ಸಚಿವರನ್ನು ಹೊರತುಪಡಿಸಿ ಬೇರಾರಿಗೂ ಬಿಜೆಪಿ …

Read More »

ಶನಿವಾರದಿಂದ ಸೋಮವಾರ ಮುಂಜಾನೆಯವರೆಗೆ ಸಂಪೂರ್ಣ ಬಂದ್

ಬೆಳಗಾವಿ – ಜೂನ್ 19, 20 ರಂದು ಬೆಳಗಾವಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಶನಿವಾರ ಮುಂಜಾನೆ 6 ಗಂಟೆಯಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳ ಮಾರಾಟ ಹಾಗೂ ಖರೀದಿ ಇರುವುದಿಲ್ಲ. ಆಸ್ಪತ್ರೆಗೆ ತೆರಳುವುದನ್ನು ಹೊರತುಪಡಿಸಿ ಬೇರೆ ಓಡಾಟಗಳಿಗೆ ಕೂಡ ಅವಕಾಶವಿಲ್ಲ.

Read More »

ಮದುವೆ ಮಾಡಿಸುತ್ತೇನೆ ಎಂದು ಕರೆದೊಯ್ದು ಬಾಲಕಿ ಕೊಂದ ಸೋದರಮಾವ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ಇಣಚಗಲ್ ಸೇತುವೆ ಕೆಳಗೆ ಇತ್ತೀಚೆಗೆ ಪತ್ತೆಯಾದ ಯುವತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಸೋದರಮಾವನನ್ನು ಬಂಧಿಸಿದ್ದಾರೆ. ಜೂನ್​​​​​ 9 ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್​​​ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ ಆರತಿ ಮಲ್ಲಪ್ಪ ಬಿಲ್ಲಾಡ (17) ಎಂಬ ಯುವತಿ ಹತ್ಯೆ ಪ್ರಕರಣದಲ್ಲಿ ಸೋದರಮಾವ ಸಿದ್ರಾಮಪ್ಪ ಕಲ್ಲಪ್ಪ ಅವಟಿ (43) ಬಂಧಿಸಲಾಗಿದೆ. ಕೊಲೆಯಾದ ದಿನದಿಂದ ದೇವರಹಿಪ್ಪರಗಿಯ ಮಲ್ಲಯ್ಯನ …

Read More »