Breaking News
Home / 2021 / ಜೂನ್ / 17 (page 3)

Daily Archives: ಜೂನ್ 17, 2021

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪರೇ ಮುಖ್ಯಮಂತ್ರಿ ಆಗಿರ್ತಾರೆ ಹಾಗೂ ಮುಂದಿನ ಚುನಾವಣೆಯನ್ನೂ ನಾವು ಯಡಿಯೂರಪ್ಪರ ಸಮ್ಮುಖದಲ್ಲೇ ಎದುರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ನಾವು ಯಡಿಯೂರಪ್ಪ ಹಾಗೂ ಅಮಿತ್​ ಷಾರನ್ನ ನಂಬಿಯೇ ಬಿಜೆಪಿಗೆ ಬಂದಿದ್ದೇವೆ. ಬಿಜೆಪಿಯ ಎಲ್ಲಾ ಶಾಸಕರೂ ಒಂದು ಕುಟುಂಬದವರಂತೆ ಇದ್ದೇವೆ. ಯಡಿಯೂರಪ್ಪ ಎಲ್ಲರನ್ನೂ …

Read More »

ವಿಶ್ವನಾಥ್ ಅರೆ ಹುಚ್ಚ, ತಿಕ್ಕಲು ಬುದ್ಧಿ – ಎಸ್.ಆರ್.ವಿಶ್ವನಾಥ್

ಬೆಂಗಳೂರು: ಎಚ್ ವಿಶ್ವನಾಥ್ ಅವರಿಗೆ ಅರೆ ಹುಚ್ಚು ಹಿಡಿದಿದೆ. ಅವರು ರೋಡಲ್ಲಿ ಓಡಾಡುವ ಮಾತನಾಡುವ ಅರೆ ಹುಚ್ಚ ಆಗಿದ್ದಾರೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೆಚ್.ವಿಶ್ವನಾಥ್ ಹೇಳಿಕೆ ಅಶಿಸ್ತನ್ನು ತೋರಿಸುತ್ತದೆ. ತಿಂದ ಮನೆಗೆ ದ್ರೋಹ ಬಗೆಯುವುದು ಅವರ ಹುಟ್ಟು ಗುಣ ಎಂದು ಕಿಡಿಕಾರಿದರು.   ಸಾರಾ ಮಹೇಶ್ ಅವರನ್ನು ಒಮ್ಮೆ ಹೊಗಳುತ್ತಾರೆ ಮತ್ತೆ ವಿರೋಧ ಮಾಡುತ್ತಾರೆ. ಕೊರೊನಾಗಿಂತಲೂ …

Read More »

‘ಬಿಎಸ್‌ವೈ ಪದಚ್ಯುತಗೊಳಿಸಿದರೆ ಪರಿಣಾಮ ನೆಟ್ಟಗಿರಲ್ಲ’

ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ ಮಠಾಧೀಶರು ದೆಹಲಿಯ ಸಂಸತ್ತಿನ ಎದುರು ಮೆರವಣಿಗೆ ನಡೆಸಬೇಕಾ ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು. ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು ದಿಲ್ಲ. …

Read More »

ಲಸಿಕೆ ಕೊರತೆ ಮುಚ್ಚಿ ಹಾಕಲು ಲಸಿಕೆ ನಡುವೆ ಅಂತರ ಹೆಚ್ಚಿಸಿದ ಸರ್ಕಾರ

ನವದೆಹಲಿ: ಕೊವಿಶೀಲ್ಡ್ ಲಸಿಕೆ 2ನೇ ಡೋಸ್ ನಡುವಿನ ಅಂತರ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರವನ್ನು ಟೀಕಿಸಿ ಟ್ವೀಟ್ ಮಾಡಿದ್ದಾರೆ. ಲಸಿಕೆ ಕೊರತೆ ಮತ್ತು ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಭಾರತಕ್ಕೆ ಶೀಘ್ರವಾಗಿ, ಸಂಪೂರ್ಣ ಲಸಿಕೆ ನೀಡಬೇಕು. ಹಲವರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ …

Read More »

ಸಿ.ಎಂ ಆಗೋ ಆಸೆ ನಂಗೂ ಇದೆ: ಕಂದಾಯ ಸಚಿವ ಆರ್‌. ಅಶೋಕ

ದೇವನಹಳ್ಳಿ: ‘ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ನನಗೂ ಸಿ.ಎಂ ಆಗುವ ಆಸೆ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರ್ತಾರೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ …

Read More »

ಬಿಎಸ್​ವೈರನ್ನ ಸಿಎಂ ಮಾಡಿದ್ದು ನಾನೇ..?-ಚಂದ್ರಕಾಂತ ‌ಬೆಲ್ಲದ್​

ಹುಬ್ಬಳ್ಳಿ: ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು ಎಂದು ಮಾಜಿ ಶಾಸಕ ಚಂದ್ರಕಾಂತ ‌ಬೆಲ್ಲದ್​​ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಐದು ಬಾರಿ ಶಾಸಕನಾಗಿದ್ದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಟ್ಟು ಮಾಡಿ ಅಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಯಡಿಯೂರಪ್ಪನವರ ಬೆಳವಣಿಗೆಗೆ ಯಾರು ಕಾರಣರು ಎಂಬುದನ್ನು ಅವರೇ ತಿಳಿದುಕೊಳ್ಳಬೇಕು. ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ನಾನೂ ಕೂಡ ಅಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದ್ರೆ, ಸಚಿವ ಸ್ಥಾನ …

Read More »

“ಬಿಜೆಪಿಯಲ್ಲಿ ಶಾಸಕರು – ಸಚಿವರ ಮಧ್ಯೆ ಗೊಂದಲವಿರೋದು ನಿಜ” : ಈಶ್ವರಪ್ಪ

ಬೆಂಗಳೂರು : ಕರ್ನಾಟಕದ ಭಾರತೀಯ ಜನತಾ ಪಾರ್ಟಿಯಲ್ಲಿ ಶಾಸಕರು ಸಚಿವರ ನಡುವೆ ಸ್ವಲ್ಪ ಗೊಂದಲ ಇರುವುದು ನಿಜ. ನಾಯಕತ್ವ ಬದಲಾವಣೆ ಅನ್ನೋದು ನೂರಕ್ಕೆ ನೂರು ಸುಳ್ಳು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಅರುಣ್ ಸಿಂಗ್ ಭೇಟಿ ಬಗ್ಗೆ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ನಮ್ಮ ಪಾರ್ಟಿಯಲ್ಲಿ ಶಾಸಕರು ಸಚಿವರ ನಡುವೆ ಸ್ವಲ್ಪ ಗೊಂದಲ ಇರುವುದು ನಿಜ. ಅದರ ಬಗ್ಗೆ ಮಾತುಕತೆ ನಡೆಸಿ ಗೊಂದಲ ನಿವಾರಣೆ ಮಾಡಲು ಅರುಣ್ ಸಿಂಗ್ ಬರುತ್ತಿದ್ದಾರೆ. ಮುಖ್ಯಮಂತ್ರಿ …

Read More »

B.S.Y. ಅವರನ್ನು ಇಟ್ಟುಕೊಳ್ತೀರಾ..? ಕಿತ್ತು ಹಾಕ್ತೀರಾ..? : ಸಿದ್ಧರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ನಿರ್ವಹಣೆ ಸರಿಯಾಗಿ ನಡೆದಿಲ್ಲ, ರಾಜ್ಯದ ಆಡಳಿತ ನೇತೃತ್ವದ ಬದಲಾಗಬೇಕು ಎಂಬ ಮಾತುಗಳ ಕೆಲವು ತಿಂಗಳುಗಿಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆಯಾದರೂ, ಕೆಲವು ದಿನಗಳಿಂದ ಅದು ತಾರಕಕ್ಕೇರಿದೆ. ನಾಯಕತ್ವದ ಬದಲಾವಣೆಯ ವಿಚಾರ ಹೈಕಮಾಂಡ್ ಗೆ ಕೂಡ ತಲುಪಿದ್ದು, ರಾಜ್ಯ ಬಿಜೆಪಿಯ ಸ್ಥಿತಿ ವಲಸೆ ವರ್ಸಸ್ ಮೂಲ ನಿವಾಸಿಗಳು ಎಂಬಂತಾಗಿದೆ.   ಆಡಳಿತ ಪಕ್ಷ ಬಿಜೆಪಿಯಲ್ಲಿ ಭಿನ್ನಮತ ಸ್ಪಷ್ಟವಾಗಿ ಕಾಣಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ದೊಡ್ಡ …

Read More »

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ

ಕೊಪ್ಪಳ: ತಾಲೂಕಿನ ಬಸಾಪುರ ಗ್ರಾಮದಲ್ಲಿ ಮದ್ಯ ವ್ಯಸನಿಯೋರ್ವನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕೆಡವಿ ಭಾರಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಜರುಗಿದ್ದು, ಸ್ಥಳಕ್ಕೆ ಡಿಎಸ್‌ಪಿ ಹಾಗೂ ಕೊಪ್ಪಳ ತಹಸೀಲ್ದಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮುನಿರಾಬಾದ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸುವ ಸಿದ್ದತೆಯಲ್ಲಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮಹೇಶ ಕಲ್ಯಾಣಪ್ಪ ಓಜಿನಹಳ್ಳಿ ಎಂದು ಗುರುತಿಸಲಾಗಿದ್ದು, ಈತನು ನಿತ್ಯವೂ ಮದ್ಯ ಸೇವಿಸಿ ಊರಲ್ಲಿ …

Read More »

ಲವರ್ ಜೊತೆಗೆ ಐಷಾರಾಮಿಯಾಗಿ ಬದುಕಲು ಗಾಂಜಾ ಮಾರಾಟಕ್ಕಿಳಿದು ಸಿಕ್ಕಿಬಿದ್ದ ಪದವೀಧರೆ..!

ಬೆಂಗಳೂರು: ಅವರಿಬ್ಬರೂ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದರು. ಇಬ್ಬರಿಗೂ ಕಾಲೇಜಿನ ಕಾರಿಡಾರ್ ನಲ್ಲಿ ಲವ್ ಶುರುವಾಗಿತ್ತು. ಆದರೆ ಪ್ರಿಯಕರನ ಐಷರಾಮಿ ಜೀವನದ ಮೋಡಿಗೆ ಬಿದ್ದ ಯುವತಿ ಈಗ ಗಾಂಜಾ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದಾಳೆ‌. ಜೈಲುಪಾಲಾಗಿರುವ ಯುವರಿಯ ಹೆಸರು ರೇಣುಕಾ. ಇನ್ನೂ 25 ವರ್ಷ, ಸಿವಿಲ್ ಇಂಜಿನಿಯರಿಂಗ್ ಪದವೀಧರೆ. ರೇಣುಕಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದು, ಕೈತುಂಬಾ ಸಂಬಳ ಬರ್ತಿತ್ತು. ಆದ್ರೆ ಪ್ರೀತಿ ಎಂಬ ಮಾಹೆಗೆ ಸಿಲುಕಿದ ರೇಣುಕಾ ಪ್ರಿಯಕರ ಸಿದ್ದಾರ್ಥ …

Read More »