Breaking News

Daily Archives: ಜೂನ್ 20, 2021

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …

Read More »

ಸಚಿವ ಮುರುಗೇಶ್ ನಿರಾಣಿಗೆ ಬಂಪರ್ ಆಫರ್..!

ಬೆಂಗಳೂರು,ಜೂ.20- ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿ ಹೊರಹೊಮ್ಮುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಸದ್ಯದಲ್ಲೇ ಮಹತ್ವದ ಹುದ್ದೆ ಲಭಿಸಲಿದೆ ಎನ್ನಲಾಗುತ್ತಿದೆ.ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ವರಿಷ್ಠರು ಕಳೆದ ಎರಡು ತಿಂಗಳಿನಿಂದ ಮುರುಗೇಶ್ ನಿರಾಣಿ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಸಂಘಪರಿವಾರದ ಪ್ರಮುಖರ …

Read More »

ರಾಮಮಂದಿರ ಟ್ರಸ್ಟ್ ಇನ್ನಷ್ಟು ಭೂ ಹಗರಣ ಬಯಲಿಗೆ

ಲಕ್ನೋ, ಜೂನ್ 20: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ನಿರ್ವಹಣೆ ಹೊಣೆ ಹೊತ್ತುಕೊಂಡಿರುವ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿರುದ್ಧ ಗಂಭೀರ ಭೂಹಗರಣದ ಆರೋಪ ಕೇಳಿ ಬಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಈ ಟ್ರಸ್ಟ್‌ನ ಮೂಲಕ ಮಾಡಲಾಗುತ್ತಿದೆ. ಇದರಲ್ಲಿ 15 ಮಂದಿ ಸದಸ್ಯರಿದ್ದು ಇದರಲ್ಲಿ 12 ಮಂದಿ ಸದಸ್ಯರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ”ಆಸ್ತಿ ಖರೀದಿಯಲ್ಲಿ ಸುಮಾರು 16. 5ಕೋಟಿ ರು ಅವ್ಯವಹಾರ ನಡೆದಿದೆ,” …

Read More »

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದ ಭಕ್ತರಿಗೆ ಪೊಲೀಸರ ಎಚ್ಚರಿಕೆ

ಮಂಗಳೂರು, ಜೂನ್ 20; ಲಾಕ್‌ಡೌನ್ ನಡುವೆಯೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ದೇವಾಲಯಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ ನೊಟೀಸ್ ಕೊಟ್ಟಿದ್ದರು. ಈಗ ತೆರೆದಿದ್ದ ದೇವಾಲಯಗಳು ಪುನಃ ಬಾಗಿಲು ಮುಚ್ಚಿವೆ. ಈಗ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಗಳಿಗೆ ಬರುವ ಭಕ್ತರ ವಾಹನವನ್ನು ಸೀಝ್ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ …

Read More »

ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಅಧಿಸೂಚನೆ ಪ್ರಕಟ

ಬೆಂಗಳೂರು, ಜೂನ್ 19: ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್‌ ಘೋಷಣೆಯಾಗುತ್ತಿದ್ದಂತೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್ 21ರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಎಲ್ಲ ಸಿಬ್ಬಂದಿ ಸಂಪೂರ್ಣವಾಗಿ ಹಾಜರಾಗಲು ಆದೇಶಿಸಲಾಗಿದೆ. ಉಳಿದ ಇಲಾಖೆಗಳ ಎಲ್ಲ ಗ್ರೂಪ್ ಎ ಅಧಿಕಾರಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ …

Read More »

ದಿಗ್ಗಜನಿಲ್ಲದ SRS ಟ್ರಾವೆಲ್ಸ್ ವಾರಸುದಾರನಿಲ್ಲದೆ ಎದುರಾಯ್ತು ಸಂಕಷ್ಟ?

ಬೆಂಗಳೂರು, ಜೂನ್ 20: ಏಷ್ಯಾ ಖಂಡದಲ್ಲಿಯೇ ಅತಿ ದೂರ ಪ್ರಯಾಣ ಸೇವೆ ಒದಗಿಸಿದ ಹೆಮ್ಮೆಯ ಸಂಸ್ಥೆ ಒಬ್ಬ ಕನ್ನಡಿಗ ಕಟ್ಟಿದ ಎಸ್‌ಆರ್‌ಎಸ್‌ ಟ್ರಾವೆಲ್ಸ್ ದು. ದಕ್ಷಿಣ ಭಾರತದ ದೈತ್ಯ ಸಾರಿಗೆ ಸೇವೆಯ ಕಂಪನಿ ಎಸ್‌ಆರ್‌ಎಸ್‌. ಸಾಮಾನ್ಯ ಸೇವೆಯಿಂದ ಐಶರಾಮಿ ಸೇವೆ ಒದಗಿಸುವ ಎಸ್‌ಆರ್‌ಎಸ್ ಟ್ರಾವೆಲ್ಸ್ ದಿಗ್ಗಜ ಕಳೆದುಕೊಂಡ ಬಳಿಕ ವಾರಸುದಾರನಿಲ್ಲದೇ ಅನಾಥವಾಗುವ ಹಾದಿ ಹಿಡಿದಿದೆ. ಎಸ್‌ಆರ್‌ಎಸ್‌ ದೈತ್ಯ ಕಂಪನಿ ಹುಟ್ಟು ಹಾಕಿದ ಮಾಗಡಿ ಮೂಲದ ಕೆ.ಟಿ ರಾಜಶೇಖರ್ ಅವರನ್ನು ಕೊರೊನಾ …

Read More »

ಬಾಲಕಿಗೆ ವಿಚಿತ್ರ ಪೂಜೆ ಮಾಡಿ ವಾಮಾಚಾರ ಮಾಂತ್ರಿಕ ನಾಪತ್ತೆ – ಬಾಲಕಿಯ ರಕ್ಷಣೆ

ಬೆಂಗಳೂರು: ದುಷ್ಟ ಶಕ್ತಿಯನ್ನು ಪಡೆಯಲು ಬಾಲಕಿಯನ್ನು ಬಳಸಿಕೊಂಡು ವಾಮಾಚಾರ ಮಾಡಿರುವ ಘಟನೆ, ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಒಂದು ಪುಟ್ಟ ಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾಲಕಿಯ ರಕ್ಷಣೆ ಮಾಡಲಾಗಿದೆ. ಕೊರೊನಾ ಲಾಕ್‍ಡೌನ್ ನಡುವೆ ಮಂತ್ರವಾದಿಗಳ ಕುತಂತ್ರ ಬೆಳಕಿಗೆ ಬಂದಿದೆ. ಕೆಲವು ಸ್ಥಳೀಯರು ಸೇರಿದಂತೆ ಮಾಂತ್ರಿಕನ ನೆರವಿನಿಂದ ದುಷ್ಟ ಶಕ್ತಿಯನ್ನು ಪಡೆಯಲು ಬಾಲಕಿಗೆ ವಿಚಿತ್ರವಾದ ಪೂಜೆ ಮಾಡಿ ವಾಮಾಚಾರ ಮಾಡಿ ನರಬಲಿ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ …

Read More »

ಕುಂದಾನಗರಿ ಬೆಳಗಾವಿಯಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ದರ!

ಬೆಳಗಾವಿ: ಒಂದೂವರೆ ತಿಂಗಳ ಕಾಲ ಲಾಕ್ ಡೌನ್ ಗ್ರಹವಾಸ ಅನುಭವಿಸಿ ಇನ್ನೇನು ಅನ್ ಲಾಕ್ ಆಗಿ ವಾಹನ ತೆಗೆದುಕೊಂಡು ಹೊರ ಬರಬೇಕೆಂಬ ಖುಷಿಯಲ್ಲಿದ್ದ‌ ಜನರಿಗೆ ಪೆಟ್ರೋಲ್ ದರ ಶಾಕ್ ನೀಡಿದ್ದು, ರವಿವಾರ ಕುಂದಾನಗರಿ ಬೆಳಗಾವಿಯಲ್ಲಿ ಪೆಟ್ರೋಲ್ ದರ ಶತಕದ ಗಡಿ ದಾಟಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ರವಿವಾರ ಬೆಳಗ್ಗೆ 7:00 ಗಂಟೆಗೆ ಬೆಳಗಾವಿಯಲ್ಲಿ ಪ್ರಕಟವಾದ ಪೆಟ್ರೋಲ್ ದರ ಪಟ್ಟಿಯಲ್ಲಿ ನೂರರ ಗಡಿ ದಾಟಿದೆ. …

Read More »

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಕಾಡಪ್ಪ ಪ್ರದಾನಿ ರಂಗಾಪಪುರೆ(48), ಹೆಣ್ಣುಮಕ್ಕಳಾದ ಕೀರ್ತಿ(18) ಹಾಗೂ ಸ್ಪೂರ್ತಿ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರದ ಹಿಂದೆ ಚೆನ್ನವ್ವ ರಂಗಾಪುರೆ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.   …

Read More »

81 ದಿನಗಳ ಬಳಿಕ 60 ಸಾವಿರಕ್ಕಿಂತ ಕಡಿಮೆ ಕೋವಿಡ್‌ ಪ್ರಕರಣ

ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ಕಳೆದ 24ಗಂಟೆಗಳಲ್ಲಿ 58,419 ಕೋವಿಡ್ ಪ್ರಕರಣ ವರದಿಯಾಗಿದ್ದು, 1,576 ಮಂದಿ ಸಾವನ್ನಪ್ಪಿದ್ದಾರೆ. 81 ದಿನಗಳಲ್ಲಿ ಇದೇ ಮೊದಲ ಬಾರಿಗೆ 60 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣ ವರದಿಯಾಗಿದೆ. ದೇಶದ ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದೆ ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ಕೇರಳದಲ್ಲಿ 12,443 ಪ್ರಕರಣ, ಮಹಾರಾಷ್ಟ್ರದಲ್ಲಿ 8,912 ಕೋವಿಡ್ …

Read More »