Breaking News
Home / 2021 / ಜೂನ್ / 21 (page 2)

Daily Archives: ಜೂನ್ 21, 2021

ಬೆಳಗಾವಿಯಲ್ಲಿ ಅಭಿಮಾನಿ ಕೈಯಿಂದ ಶೂ ಹಾಕಿಸಿಕೊಂಡ ಸಚಿವ ‘ಶ್ರೀಮಂತ’ ಪಾಟೀಲ; ಜನ ವಲಯದಲ್ಲಿ ಆಕ್ರೋಶ

ಬೆಳಗಾವಿ: ಜನಪ್ರತಿನಿಧಿ ಅಂದರೆ ಜನರ ಸೇವಕರು. ಆದರೆ ಸಚಿವ ಶ್ರೀಮಂತ ಪಾಟೀಲ ಮಾತ್ರ ಅಭಿಮಾನಿ ಒಬ್ಬರಿಂದ ಕಾಲಿಗೆ ಶೂ ಹಾಕಿಸಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಸಚಿವ ಶ್ರೀಮಂತ ಪಾಟೀಲ ಅರ್ಚಕರನ್ನು ಕರೆಸಿ ಬಾಗಿಲು ತೆಗೆಸಿದ್ದಾರೆ. ಮಾತ್ರವಲ್ಲ ಪೂಜೆಯನ್ನೂ ಮಾಡಿಸಿದ್ದಾರೆ. ಸಚಿವರು ಪೂಜಾ ಕೈಂಕರ್ಯ …

Read More »

ಹುಬ್ಬಳ್ಳಿ: ಒಂದೇ ಕಾಲಿನ ಅಪರೂಪದ ಮಗು ಜನನ

ಹುಬ್ಬಳ್ಳಿ, ಜೂನ್ 21: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಅಪರೂಪದ ಮಗುವಿನ ಜನನವಾಗಿದೆ. ಈ ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರದಾಡಿದ್ದು, ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದೆ. ಹಳೇ ಹುಬ್ಬಳ್ಳಿಯ ಮಹಿಳೆ ಒಬ್ಬರು ಹೆರಿಗೆ ನೋವು ಕಾಣಿಕೊಂಡ ಕಾರಣ ಕಿಮ್ಸ್ ಆಸ್ಪತ್ರೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿತ್ತು. ವಿಚಿತ್ರ ರೀತಿಯಲ್ಲಿ ಒಂಟಿ ಕಾಲಿನ ಮಗು ಜನಿಸಿದ್ದು, ಆಸ್ಪತ್ರೆಯ ವೈದ್ಯರಿಗೂ ಸಹ ಅಚ್ಚರಿ ಮೂಡುವಂತೆ ಮಾಡಿದೆ. ಆದರೆ, ಕೆಲವೇ ಹೊತ್ತಿನ …

Read More »

ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ …

Read More »

2024ರ ಸಾರ್ವತ್ರಿಕ ಚುನಾವಣೆ ಗುರಿ: ಎರಡನೇ ಬಾರಿ ಶರದ್ ಪವಾರ್, ಪ್ರಶಾಂತ್ ಕಿಶೋರ್ ಚರ್ಚೆ

ಮುಂಬಯಿ: ಭಾರತೀಯ ಜನತಾ ಪಕ್ಷದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡುವ ನಿಟ್ಟಿನಲ್ಲಿ 2024ರ ಚುನಾವಣೆಯ ಪೂರ್ವಸಿದ್ಧತೆಗಾಗಿ ಎರಡು ವಾರಗಳ ಅವಧಿಯಲ್ಲಿ ಚುನಾವಣಾ ನೀತಿ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಎನ್ ಸಿಪಿ ಮುಖಂಡ ಎರಡನೇ ಬಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬಯಿಯ ಶರದ್ ಪವಾರ್ ನಿವಾಸದಲ್ಲಿ ಜೂನ್ 11ರಂದು ಕಿಶೋರ್ ಜತೆ ಚರ್ಚೆ ನಡೆಸಿದ ನಂತರ ಇದೀಗ ದೆಹಲಿಯಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ವರದಿ …

Read More »

ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10 ರಷ್ಟು ಹೆಚ್ಚು ಲಾಭ: ಸಚಿವ ಗೋಪಾಲಯ್ಯ

ಬೆಂಗಳೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ.10 ರಷ್ಟು ಹೆಚ್ಚು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ 18 ರಿಂದ 44 ವಯಸ್ಸಿನವರಿಗೆ 3 ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಲಾಕ್ ಡೌನ್ ಆದ ಮೇಲೆ ಏಪ್ರಿಲ್ 1 ರಿಂದ ಜೂನ್ 15 ರವರೆಗೆ ಅಬಕಾರಿ ಇಲಾಖೆಗೆ …

Read More »

ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತ

ಖಾನಾಪುರ: ಶನಿವಾರ ಇಡೀ ದಿನ ಸತತ ವರ್ಷಧಾರೆಯ ಪರಿಣಾಮ ತಾಲ್ಲೂಕಿನ ಲೋಂಡಾ ಗ್ರಾಮದ ಬಳಿ ಹರಿಯುವ ಪಾಂಡರಿ ನದಿಯಲ್ಲಿ ಪ್ರವಾಹವೇರ್ಪಟ್ಟಿದ್ದರಿಂದ ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನದ ಬಳಿಕ ಲೋಂಡಾ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪಾಂಡರಿ ನದಿಯ ನೀರು ಹರಿದುಬಂದಿದ್ದರಿಂದ ಕೆಳ ಸೇತುವೆ, ಪ್ರವೇಶದ್ವಾರ, ರೈಲ್ವೆ ಹಳಿಗಳು, ಮೊದಲ ಪ್ಲಾಟ್ ಫಾರ್ಮ್ ಸೇರಿದಂತೆ ರೈಲು ನಿಲ್ದಾಣ ಮತ್ತು ಅಕ್ಕಪಕ್ಕದ …

Read More »

ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ : ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 7ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು …

Read More »

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಬಿಎಸ್​ವೈ ಚಾಲನೆ

ಬೆಂಗಳೂರು: ಇಂದು ಇಡೀ ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ನಿವಾಸದಲ್ಲೇ ಯೋಗ ಮಾಡಿದ ಸಿಎಂ ಬಿಎಸ್​ವೈ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿ ಎನ್ನುವ ಸಂದೇಶ ನೀಡಿದರು.

Read More »

3 ವರ್ಷಗಳ ಹಿಂದಿನ ಖೋಟಾನೋಟು ಪ್ರಕರಣಕ್ಕೆ ಟ್ವಿಸ್ಟ್: ಪ್ರಮುಖ ಬಾಂಗ್ಲಾದ ಆರೋಪಿ ಅರೆಸ್ಟ್

ಬೆಂಗಳೂರು: ಕರ್ನಾಟಕದಲ್ಲಿ‌ ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಎಂಬಾತನನ್ನ ಎನ್​ಐಎ ಬಂಧಿಸಿದೆ. ಈತನನ್ನ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬಾಪುರದಲ್ಲಿ ಬಂಧಿಸಲಾಗಿದೆ.. ಬಾಂಗ್ಲಾ ಮೂಲದ ವ್ಯಕ್ತಿಗಳಿಂದ ಈತ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಹಾಗೂ ಕರ್ನಾಟಕದಲ್ಲಿ ಆ ಖೋಟಾನೋಟುಗಳನ್ನ ಚಲಾವಣೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದ ಎನ್ನಲಾಗಿದೆ. ಏನಿದು ಪ್ರಕರಣ..? 2018 ರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಖೋಟಾನೋಟು ಚಲಾವಣೆ ಪ್ರಕರಣ ದಾಖಲಾಗಿತ್ತು. …

Read More »

ಆಂಬುಲೆನ್ಸ್ ನಿಂದ ಜಿಗಿದು ರಸ್ತೆ ಮಧ್ಯೆದಲ್ಲೇ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ!

ಚಲಿಸುತ್ತಿದ್ದ ಆಂಬುಲೆನ್ಸ್ ನಿಂದ ಜಿಗಿದ ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಮಧ್ಯೆದಲ್ಲೇ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರು ಜಿಲ್ಲೆಯ ತಿ‌. ನರಸೀಪುರ ತಾಲೂಕಿನಲ್ಲಿ ನಡೆದಿದೆ. ತಿ. ನರಸೀಪುರ ತಾಲೂಕಿನ ಕನ್ನಳ್ಳಿ ಮೋಳೆ ಗ್ರಾಮದ ಶಿವಣ್ಣ (42) ಮೃತ ವ್ಯಕ್ತಿ.‌ ಮಾನಸಿಕ‌ ಅಸ್ವಸ್ಥ ಶಿವಣ್ಣನನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಯಬುಲೆನ್ಸ್​ನಿಂದ ಜಿಗಿದು ರಸ್ತೆ ಮಧ್ಯೆ ಕುಳಿತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ‌. ಈತನ ವರ್ತನೆ ಕಂಡು ಸಾರ್ವಜನಿಕರು …

Read More »