Breaking News

Daily Archives: ಜೂನ್ 27, 2021

‘ಕಬ್ಜ’ ನ್ಯೂ ಲುಕ್ ರಿಲೀಸ್ : ಉಪ್ಪಿ-ಕಿಚ್ಚನ ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟರಾಗಿ ಅಭಿನಯಿಸುತ್ತಿರುವ ಹಾಗೂ ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಹೊಸ ಪೋಸ್ಟರ್ ಇಂದು ( ಜೂನ್ 27) ಬಿಡುಗಡೆಯಾಗಿದೆ. ‘ಐ ಲವ್ ಯು’ ಚಿತ್ರದ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್.ಚಂದ್ರು ಕಾಂಬಿನೇಶನ್ ನಲ್ಲಿ ‘ಕಬ್ಜ’ ಸಿನಿಮಾ ರೆಡಿಯಾಗುತ್ತಿದೆ. ಭೂಗತ ಲೋಕದ ಕಥಾಹಂದರ ಹೊಂದಿರುವ ‘ಕಬ್ಜ’ ಚಿತ್ರದಲ್ಲಿ ಉಪೇಂದ್ರ …

Read More »

ಆರಾಧನಾ ಸಮಿತಿಗೆ ಸರ್ಕಾರೇತರ ಸದಸ್ಯರನ್ನಾಗಿ ಮೇದಾರ ಓಣಿ ಬೆಳಗಾವಿಯ ಸತೀಶ ಕಾಕತಿಕರ ನೇಮಕ..!

ಬೆಳಗಾವಿ ಮಹಾನಗರ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಹಾಗೂ ಯುವ ಮುಖಂಡರಾದ ಸತೀಶ ಕಾಕತಿಕರ ಅವರನ್ನು ರಾಜ್ಯ ಸರ್ಕಾರ ಬೆಳಗಾವಿ ಉತ್ತರ ವಿಧಾನ ಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸರ್ಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ (nominate) ಮಾಡಿ ಆದೇಶ ಜಾರಿಗೊಳಿಸಿದೆ. ಮಾನ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಮುಜರಾಯಿ) ಇವರ ಆದೇಶ ಅನುಸಾರ ಕಳೆದ ವಾರದಲ್ಲಿ ಬೆಳಗಾವಿ ತಹಶಿಲ್ದಾರ ಕಚೇರಿಯಿಂದ ಸತೀಶ ಕಾಕತಿಕರ ಅವರಿಗೆ ಆದೇಶ ಪತ್ರವನ್ನು ಅಂಚೆ ಇಲಾಖೆ …

Read More »

ವೀಕೆಂಡ್ ಕರ್ಫ್ಯೂಗೂ ಡೋಂಟ್ ಕೇರ್: ಮಾರುಕಟ್ಟೆಗಳಲ್ಲಿ ಖರೀದಿಗೆ ಮುಗಿಬಿದ್ದ ಜನರು..!

ಬೆಂಗಳೂರು : ಬೆಂಗಳೂರಿನಲ್ಲಿ ಹಂತ ಹಂತವಾಗಿ ಅನ್ ಲಾಕ್ ಘೋಷಣೆ ಬೆನ್ನಲ್ಲೇ ಜನರು ಕೋವಿಡ್ ನಿಯಮಾವಳಿಯನ್ನ ಗಾಳಿಗೆ ತೂರಿದ್ದಾರೆ. ರಾಜಧಾನಿಯ ಮಾರುಕಟ್ಟೆಗಳಲ್ಲಿ ಕೊರೊನಾ ಭಯವಿಲ್ಲದೆ ಜನರು ಖರೀದಿಯಲ್ಲೇ ಫುಲ್ ಬ್ಯುಸಿ ಆಗಿದ್ರು. ವೀಕೆಂಡ್ ಕರ್ಫ್ಯೂ ಇದ್ರೂ ಕೂಡ ಶಿವಾಜಿನಗರದಲ್ಲಿ ಜನಜಂಗುಳಿಯೇ ಸೇರಿತ್ತು. ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ಮಟನ್, ಚಿಕ್ಕನ್ ಖರೀದಿಗೆ ಜನರು ಮುಗಿಬಿದ್ರು. ಸಣ್ಣ ಪುಟ್ಟ ರಸ್ತೆಗಳಲ್ಲೂ ಜನರು ತುಂಬಿದ್ರು. ಬೈಕ್, ಆಟೋ ಸಂಚಾರಕ್ಕೆ ಬ್ರೇಕ್ ಅನ್ನೋದೆ ಇರಲಿಲ್ಲ.. ಸಾಮಾಜಿಕ …

Read More »

ಉತ್ತರ ಕನ್ನಡದ ಮಹಿಳೆಯಿಂದ ಅಂಗಾಂಗ ದಾನ; ಧಾರವಾಡದಿಂದ ಬೆಂಗಳೂರಿಗೆ ಮಹಿಳೆಯ ಲಿವರ್ ಏರ್​ಲಿಫ್ಟ್

ಧಾರವಾಡ: ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಲಿವರ್​ನ್ನು ಏರ್‌ಲಿಫ್ಟ್ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಬೆಂಗಳೂರಿಗೆ ಮೂಲಕ ರವಾನಿಸಲಾಗಿದೆ. ಲೀವರ್​ನ್ನು ಹುಬ್ಬಳಿಯ ವಿಮಾನ ನಿಲ್ದಾಣಕ್ಕೆ ರವಾನಿಸಲು ಗ್ರೀನ್ ಕಾರಿಡಾರ್ ಮೂಲಕ ಅಂಬ್ಯುಲೆನ್ಸ್‌ಗೆ ಪೊಲೀಸರು ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಅಂಗಾಗ ದಾನ ಮಾಡಿದ ಮಹಿಳೆಯ ಜತೆ ಪೊಲೀಸ್ ಇಲಾಖೆಯೂ ಮಾನವೀಯ ಕಾರ್ಯದಲ್ಲಿ ಕೈಜೋಡಿಸಿದೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಗ ದಾನ ಮಾಡಲಾಗಿದೆ. ಉತ್ತರ …

Read More »

ಹುಬ್ಬಳ್ಳಿಯಲ್ಲಿ 10 ಜನರ ಕಣ್ಣು ಕಿತ್ತುಕೊಂಡ ಬ್ಲ್ಯಾಕ್ ಫಂಗಸ್- ಒಟ್ಟು 46 ಮಂದಿಗೆ ದೃಷ್ಟಿ ದೋಷ

ಹುಬ್ಬಳ್ಳಿ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿರುವ ಸೋಂಕಿನ ತೀವ್ರತೆ ಕಡಿಮೆಯಾಗುವ ಮೊದಲೇ ಕರಿ ಮಾರಿ ಬ್ಲ್ಯಾಕ್​ ಫಂಗಸ್​ ತನ್ನ ಕರಾಳತೆಯನ್ನು ತೋರುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೂ 10 ಮಂದಿ ಫಂಗಸ್​​ನಿಂದ ಸಂಪೂರ್ಣ ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ 46 ಜನರಿಗೆ ದೃಷ್ಟಿ ದೋಷ ಕಂಡು ಬಂದಿತ್ತು. ಕೊರೊನಾದಿಂದ ಗುಣಮುಖರಾದ ವ್ಯಕ್ತಿಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡು ಬರುತ್ತಿದ್ದು, ಹಲವರಿಗೆ ಮೂಗಿನ ಮೂಲಕವೂ ಬ್ಲ್ಯಾಕ್ ಹಬ್ಬಿ, ಕಣ್ಣಿನ ನರಗಳಿಗೆ …

Read More »

ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ …

Read More »

ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ ಸಸಿ ನೆಡುವ ಕಾರ್ಯಕ್ರಮಕ್ಕೆ ರಮೇಶ್ ಜಾರಕಿಹೊಳಿ ಚಾಲನೆ

ಗೋಕಾಕ: ಸದ್ಯಕ್ಕೆ ಗೋಕಾಕ ನಗರದ ಎಲ್ಲಾ ರೀತಿಯ ಅಭಿವೃದ್ಧಿ ಹಾಗೂ, ಇನ್ನಿತರ ಕೆಲಸ ಕಾರ್ಯ ಗಳಲ್ಲಿ ರಮೇಶ್ ಜಾರಕಿಹೊಳಿ ಹೆಚ್ಚಿನ ಒತ್ತನ ಕೊಡುತ್ತಿದ್ದಾರೆ. ಇಂದು ಗೋಕಾಕ ನಗರದ ಗ್ರಾಮೀಣ ಮಂಡಲದ ರೈತ ಮೋರ್ಚಾ ವತಿಯಿಂದ ಗೋಕಾಕ ನಗರದ ಹೊರವಲಯದ ಯೋಗಿ ಕೊಳ್ಳ ರಸ್ತೆ ಮಾರ್ಗದಲ್ಲಿ 200 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾದ ಸಾಹುಕಾರ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯ ಕ್ರಮಕ್ಕೆ ಸಸಿ …

Read More »

ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು.ಮಕ್ಕಳ ಮನೆಯ ಅಂಗಳದ ಆಟಕ್ಕೆ ಬ್ರೇಕ್

ಬೆಳಗಾವಿ- ಬೆಳಗಾವಿ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ವಿಪರೀತವಾಗಿದೆ.ಪ್ರತಿಯೊಂದು ಬಡವಾಣೆಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ನಗರದಲ್ಲಿ ಭೌ…ಬೌ..ಚಳುವಳಿ ಶುರುವಾಗಿದೆ. ಪ್ರಾಣಿ ದಯಾಮಯಿಗಳ ವಿಶೇಷ ಕಾಳಜಿಯಿಂದಾಗಿ ಬೆಳಗಾವಿಯಲ್ಲಿ ಬೀದಿ ನಾಯಿಗಳ ಸಂತತಿ ಹೆಚ್ಚಾಗಿದ್ದು.ಮಕ್ಕಳು ಮನೆಯ ಅಂಗಳದಲ್ಲಿ ಆಟ ಆಡುವದೇ ಕನಸಿನ ಮಾತಾಗಿದೆ.ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು.ಮಕ್ಕಳ ಮನೆಯ ಅಂಗಳದ ಆಟಕ್ಕೆ ಬ್ರೇಕ್ ಬಿದ್ದಿದೆ. ನಾಯಿಗಳ ಸಂತತಿ ಕಂಟ್ರೋಲ್ ಮಾಡಲು,ಬೆಳಗಾವಿ ಮಹಾನಗರ ಪಾಲಿಕೆ ಪ್ರತಿ ವರ್ಷ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ …

Read More »

ಕೋವಿಡ್ ಸಂಕಟದ ಸಮಯದಲ್ಲಿ ನೆರವಿಗೆ ಧಾವಿಸದ ಕಾಂಗ್ರೆಸ್ನಿಂದ ಮೊಸಳೆ ಕಣ್ಣೀರು: ಕ್ಯಾ.ಕಾರ್ಣಿಕ್

ಬೆಂಗಳೂರು: ತಾವು ಆಯ್ಕೆಯಾದ ಕ್ಷೇತ್ರದ ಜನರ ಸಹಾಯಕ್ಕೆ ಕೋವಿಡ್ ಸಂಕಟದ ಸಂದರ್ಭದಲ್ಲಿ ಧಾವಿಸದ ಕಾಂಗ್ರೆಸ್‍ನ ಮಹಾನ್ ನಾಯಕರುಗಳು ಈಗ “ಡೆತ್ ಆಡಿಟ್”ನ ಕುರಿತಾಗಿ ಮಾತನಾಡುತ್ತ ರಾಜ್ಯಾದ್ಯಂತ ಪ್ರವಾಸ ಮಾಡುವ ಹೇಳಿಕೆ ನೀಡಿರುವುದು ರಾಜಕೀಯ ಸೋಗಲಾಡಿತಕ್ಕೆ ಒಂದು ಸ್ಪಷ್ಟ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಟೀಕಿಸಿದ್ದಾರೆ. ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಸಂತ್ರಸ್ತ ಜನರ ನೆರವಿಗೆ ಧಾವಿಸದ ಕಾಂಗ್ರೆಸ್ ಕೇವಲ ಟ್ವಿಟರ್ ಅಭಿಯಾನದ ಮೂಲಕ ಕೇಂದ್ರ …

Read More »

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ನದಿಯಂತಾದ ಮಸ್ಕಿ ರಸ್ತೆಗಳು. ಮನೆಗಳಿಗೆ ನುಗ್ಗಿದ ನೀರು

ರಾಯಚೂರು: ರಾಯಚೂರು ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಸ್ಕಿ ಪಟ್ಟಣದ ಗಾಂಧಿನಗರ ಬಡಾವಣೆಯಲ್ಲಿ ಭಾರಿ ಮಳೆಯ ಕಾರಣ ಭಾರಿ ಪ್ರಮಾಣದ ನೀರು ರಸ್ತೆ ಮೇಲೆ ಹರಿದು ಮನೆಗಳಿಗೆ ನುಗ್ಗಿದ್ದು ನಿವಾಸಿಗಳಿಗೆ ತೊಂದರೆಯಾಗಿದೆ. ಮಸ್ಕಿಯ ಅನೇಕ ರಸ್ತೆ, ಬಡಾವಣೆಗಳು ನದಿಗಳಾಂಗಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ, ಅವಾಂತರ ಸೃಷ್ಟಿಸಿದ್ದು, ಮನೆಯಿಂದ ನೀರು ಹೊರಹಾಕಲು ಜನ ಹರಸಾಹಸ ನಡೆಸಿದ್ದಾರೆ. ಮಸ್ಕಿ ಪಟ್ಟಣ ಅನೇಕ ಭಾಗದಲ್ಲಿ …

Read More »