Breaking News
Home / 2021 / ಜೂನ್ (page 26)

Monthly Archives: ಜೂನ್ 2021

ಪೆಟ್ರೋಲ್ ಬೆಲೆ 101 ರೂ – 101 ತೆಂಗಿನಕಾಯಿ ಕಾಯಿ ಒಡೆದು ಪ್ರತಿಭಟನೆ

ಮಡಿಕೇರಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ದಿನದಿಂದ ದಿನಕ್ಕೆ 100 ಗಡಿದಾಟುತ್ತಿದೆ. ಸದ್ಯ ಪೆಟ್ರೋಲ್ ಬೆಲೆ 101ರೂ ಆಗಿದ್ದು, ಇದನ್ನು ಖಂಡಿಸಿ ನಾಟ್ ಔಟ್ ಕರ್ನಾಟಕ ಕಾವಲು ಪಡೆ ಸಂಘಟನೆಯ ಕಾರ್ಯಕರ್ತರು ದೇವಾಲಯದಲ್ಲಿ 101 ತೆಂಗಿನಕಾಯಿ ಕಾಯಿ ಒಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕುಶಾಲನಗರದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ, ವಿನೂತನ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ ಆಕ್ರೋಶ ವ್ಯಕ್ತಪಡಿಸಿದರು. ದಿನನಿತ್ಯ ಲಕ್ಷಾಂತರ ಜನರು ಉಪಯೋಗಿಸುವ ಅಡುಗೆ …

Read More »

ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್ ವ್ಯವಸ್ಥೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚನೆ ಮಾಡದೇ, ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ. ಸಾರಿಗೆ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‍ಡೌನ್ ಬಳಿಕ ರಾಜ್ಯದಲ್ಲಿ ಅನ್‍ಲಾಕ್ ಘೋಷಣೆಯಾಗಿದೆ. ಪ್ರಾರಂಭದಲ್ಲಿ ಈ …

Read More »

ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

ಬೆಳಗಾವಿ :  ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ.   ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …

Read More »

ಕಿರಿಯ ವಯಸ್ಸಿನಲ್ಲಿ ವಾಯು ಸೇನೆಗೆ ಬೆಳಗಾವಿ ಯುವಕ ಆಯ್ಕೆ.

ಬೆಳಗಾವಿ:-ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಶ ಸದಾಶಿವ ಬಿಳ್ಳೂರ ಎನ್ ಡಿಎ ಪರೀಕ್ಷೆ ಪಾಸಾಗಿದ್ದು, ವಾಯು ಸೇನೆಯ ಪ್ಲಾಯಿಂಗ್ ಆಪೀಸರ್( ಫೈಟರ್ ಪೈಲಟ್) ಹುದ್ದೆಯನ್ನು ಅಲಂಕರಿಸಲಿದ್ದಾರೆ. ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆ ಗಿರೀಶ ಆಯ್ಕೆಯಾಗಿದ್ದು, ಶೀಘ್ರವೇ ಹೈದರಾಬಾದಿನ ದುಂಡಿಗಲ್ ಕೇಂದ್ರದಲ್ಲಿ ತರಬೇತಿ ಪಡೆದು, ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆ ಸಲ್ಲಿಸಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಬೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ …

Read More »

ಬೆಳಗಾವಿ| 18 ವರ್ಷದ ಎಲ್ಲರಿಗೂ ಇಲ್ಲ, 45 ವರ್ಷ ಮೇಲಿನವರಿಗಷ್ಟೆ ಕೋವಿಡ್‌ ಲಸಿಕೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದಂತೆ ಉಚಿತ ಲಸಿಕಾ ಕಾರ್ಯಕ್ರಮದ ಅನ್ವಯ ಜಿಲ್ಲೆಯಾದ್ಯಂತ ಸೋಮವಾರದಿಂದ ಕೋವಿಡ್ ನಿರೋಧಕ ಲಸಿಕೆ ಮೇಳ ಆರಂಭವಾಗಿದೆ. ಆದರೆ, 45 ವರ್ಷ ಮೇಲಿನವರಿಗಷ್ಟೆ ಕೊಡಲಾಗುತ್ತಿದೆ. 18ರಿಂದ 44 ವರ್ಷದ ಎಲ್ಲರಿಗೂ ಲಸಿಕೆ ದೊರೆಯಲಿಲ್ಲ. ಆದ್ಯತಾ ಗುಂಪಿನಲ್ಲಿರುವ 18ರಿಂದ 44 ವರ್ಷದವರಿಗೆ ಯಥಾಪ್ರಕಾರ ಲಸಿಕಾ ಕಾರ್ಯಕ್ರಮ ನಡೆಯಿತು. ಸರ್ಕಾರದ ಘೋಷಣೆ ಆಧರಿಸಿ ಆಸ್ಪತ್ರೆಗಳಿಗೆ ಬಂದಿದ್ದ 18 ವರ್ಷ ಮೇಲಿನ ಯುವಜನರು ಲಸಿಕೆ ದೊರೆಯದೆ ಬರಿಗೈಲಿ ವಾಪಸಾಗಬೇಕಾಯಿತು. …

Read More »

ಸಾರಿಗೆ ಸಂಚಾರ ಯಥಾಸ್ಥಿತಿ – ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು : ಸದ್ಯಕ್ಕೆ 2 ಡೋಸ್ ಕೊರೋನಾ ಲಸಿಕೆ ಪಡೆದಂತ ಸಿಬ್ಬಂದಿಗಳನ್ನು ಬಳಸಿಕೊಂಡು, ಸಾರಿಗೆ ಸಂಚಾರ ಆರಂಭಿಸಲಾಗಿದೆ. ಈಗ 2 ಡೋಸ್ ಲಸಿಕೆ ಪಡೆದಂತ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿ, ಸಂಚಾರ ಆರಂಭಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆಯಾಗದಂತೆಯಥಾಸ್ಥಿತಿ ಸಂಚಾರ ಆರಂಭ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ವಿಧಾನ ಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು, BMTC ಸ್ಪಲ್ಪ …

Read More »

ಬೆಳಗಾವಿಯಲ್ಲಿ ಅಭಿಮಾನಿ ಕೈಯಿಂದ ಶೂ ಹಾಕಿಸಿಕೊಂಡ ಸಚಿವ ‘ಶ್ರೀಮಂತ’ ಪಾಟೀಲ; ಜನ ವಲಯದಲ್ಲಿ ಆಕ್ರೋಶ

ಬೆಳಗಾವಿ: ಜನಪ್ರತಿನಿಧಿ ಅಂದರೆ ಜನರ ಸೇವಕರು. ಆದರೆ ಸಚಿವ ಶ್ರೀಮಂತ ಪಾಟೀಲ ಮಾತ್ರ ಅಭಿಮಾನಿ ಒಬ್ಬರಿಂದ ಕಾಲಿಗೆ ಶೂ ಹಾಕಿಸಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಸಚಿವ ಶ್ರೀಮಂತ ಪಾಟೀಲ ಅರ್ಚಕರನ್ನು ಕರೆಸಿ ಬಾಗಿಲು ತೆಗೆಸಿದ್ದಾರೆ. ಮಾತ್ರವಲ್ಲ ಪೂಜೆಯನ್ನೂ ಮಾಡಿಸಿದ್ದಾರೆ. ಸಚಿವರು ಪೂಜಾ ಕೈಂಕರ್ಯ …

Read More »

ಹುಬ್ಬಳ್ಳಿ: ಒಂದೇ ಕಾಲಿನ ಅಪರೂಪದ ಮಗು ಜನನ

ಹುಬ್ಬಳ್ಳಿ, ಜೂನ್ 21: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಅಪರೂಪದ ಮಗುವಿನ ಜನನವಾಗಿದೆ. ಈ ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರದಾಡಿದ್ದು, ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದೆ. ಹಳೇ ಹುಬ್ಬಳ್ಳಿಯ ಮಹಿಳೆ ಒಬ್ಬರು ಹೆರಿಗೆ ನೋವು ಕಾಣಿಕೊಂಡ ಕಾರಣ ಕಿಮ್ಸ್ ಆಸ್ಪತ್ರೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿತ್ತು. ವಿಚಿತ್ರ ರೀತಿಯಲ್ಲಿ ಒಂಟಿ ಕಾಲಿನ ಮಗು ಜನಿಸಿದ್ದು, ಆಸ್ಪತ್ರೆಯ ವೈದ್ಯರಿಗೂ ಸಹ ಅಚ್ಚರಿ ಮೂಡುವಂತೆ ಮಾಡಿದೆ. ಆದರೆ, ಕೆಲವೇ ಹೊತ್ತಿನ …

Read More »

ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ …

Read More »

2024ರ ಸಾರ್ವತ್ರಿಕ ಚುನಾವಣೆ ಗುರಿ: ಎರಡನೇ ಬಾರಿ ಶರದ್ ಪವಾರ್, ಪ್ರಶಾಂತ್ ಕಿಶೋರ್ ಚರ್ಚೆ

ಮುಂಬಯಿ: ಭಾರತೀಯ ಜನತಾ ಪಕ್ಷದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡುವ ನಿಟ್ಟಿನಲ್ಲಿ 2024ರ ಚುನಾವಣೆಯ ಪೂರ್ವಸಿದ್ಧತೆಗಾಗಿ ಎರಡು ವಾರಗಳ ಅವಧಿಯಲ್ಲಿ ಚುನಾವಣಾ ನೀತಿ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಎನ್ ಸಿಪಿ ಮುಖಂಡ ಎರಡನೇ ಬಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬಯಿಯ ಶರದ್ ಪವಾರ್ ನಿವಾಸದಲ್ಲಿ ಜೂನ್ 11ರಂದು ಕಿಶೋರ್ ಜತೆ ಚರ್ಚೆ ನಡೆಸಿದ ನಂತರ ಇದೀಗ ದೆಹಲಿಯಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ವರದಿ …

Read More »