Breaking News
Home / 2021 / ಜೂನ್ (page 38)

Monthly Archives: ಜೂನ್ 2021

ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ

ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಠಕ್ಕೆ ಬರಲಾಗದ ಭಕ್ತರು https://www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ …

Read More »

ಭಾರೀ ಮಳೆ- ಬೆಳಗಾವಿಯ 3 ಸೇತುವೆಗಳು ಜಲಾವೃತ ,ಗದ್ದೆಗೆ ಉರುಳಿದ ಕ್ರೂಸರ್

ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರಂಭದಲ್ಲೇ ಧಾರಾಕಾರ ಮಳೆಯಾಗುತ್ತಿದೆ. ಮಲೆನಾಡು ಭಾಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೂರು ಸೇತುವೆಗಳು ಜಲಾವೃತವಾಗಿದೆ.     ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ವರ್ಷಧಾರೆಯಿಂದ, ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಮೂಡಲಗಿ ತಾಲೂಕಿನ ಹಲವು ಸೇತುವೆಗಳು ಜಾಲಾವೃತಗೊಂಡಿವೆ. ತಾಲೂಕಿನ ಸುಣಧೋಳಿ, ಕಮಲದಿನ್ನಿ, ಅವರಾದಿ …

Read More »

ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ

ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ …

Read More »

ತಾವೊಬ್ಬ ದುರ್ಬಲ ನಾಯಕರೆಂದು ಮೋದಿ ಸಾಬೀತುಪಡಿಸಿದ್ದಾರೆ : ಸಿದ್ದು ವ್ಯಂಗ್ಯ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿಗೆ ಬಂದು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲವೆಂದು ಸ್ಪಷ್ಟಪಡಿಸಿದರೂ ಕೂಡ ರಾಜ್ಯ ಬಿಜೆಪಿಯ ಸ್ಥಿತಿ ಬೂದಿಯೊಳಗಿನ ಕೆಂಡದಂತಾಗಿದೆ. ನಾಯಕತ್ವ ಬದಲಾವಣೆಯ ವಿಚಾರವಾಗಿ ಶಾಸಕರ ಹಾಗೂ ಸಚಿವರುಗಳ ಭಿನ್ನಾಭಿಪ್ರಾಯದ ಹೇಳಿಕೆಗಳು ಇಂದು ಕೂಡ ಮುಂದುವರಿದಿದ್ದು, ರಾಜ್ಯ ಬಿಜೆಪಿಯ ಆಡಳಿತ ಚುಕ್ಕಾಣಿಯ ಭವಿಷ್ಯ ಹೇಗೆ ಎನ್ನುವ ಪ್ರಶ್ನೆ ಎದ್ದಿದೆ.   ಪರಸ್ಪರ ಕಚ್ಚಾಡುತ್ತಿರುವ @BJP4Karnataka …

Read More »

ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೋವಿಡ್ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ …

Read More »

ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?

ಬೆಂಗಳೂರು: ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಅರವಿಂದ ಬೆಲ್ಲದ ಅವರದ್ದು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ಅವರನ್ನು ಕೆಲವರು ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿಸುತ್ತಿದ್ದಾರೆ. ದೆಹಲಿ ಭೇಟಿ- ಆರ್ ಎಸ್‌ಎಸ್ ನಾಯಕ ಭೇಟಿ ಎಂದು ಸದ್ಯ ಕೆಲವು ದಿನಗಳಿಂದ ಪ್ರಚಾರದಲ್ಲಿರುವ ಬೆಲ್ಲದ ಅವರಿಗೆ ವಂಚಕ ಜೈಲಿನಲ್ಲಿರುವ ವಂಚಕ ಯುವರಾಜ್ ಸ್ವಾಮಿಯಿಂದ ಕರೆಗಳು ಬರುತ್ತಿದೆಯಂತೆ! ಈ ಬಗ್ಗೆ ಸ್ವತಃ ಶಾಸಕ …

Read More »

B.S.Y. ಉತ್ತಮ ಕೆಲಸ ಮಾಡಿದ್ದಾರೆ ; ಅರುಣ್‌ ಸಿಂಗ್‌

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೊವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಎರಡು ಪ್ಯಾಕೇಜ್​ಗಳನ್ನು ಘೋಷಿಸಿದೆ. ಆ ಮೂಲಕ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗಿದೆ. …

Read More »

ರಮೇಶ್‌ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ

ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು. ‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ-ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು …

Read More »

ಬಸವಣ್ಣನವರ ವಚನದ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ ಹೆಚ್‌ಡಿಕೆ

ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಕಿತ್ತಾಟ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಸರಣಿ ಟ್ವೀಟ್ ಮಾಡಿ, ಬಸವಣ್ಣನವರ ವಚನದ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜನೆ ಅಂತ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಕೂಡಲ …

Read More »

ಆಸ್ಪತ್ರೆಯಲ್ಲೇ ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೆ ಒಳಗಾದ ಮಹಿಳೆ ಸಾವು

ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದರಿಂದ ಪರಾರಿಯಾಗಿದ್ದ. ಆಸ್ಪತ್ರೆ ಸಿಬ್ಬಂದಿ ಆತನನ್ನು ಹಿಡಿಯಲು ಸಾಧ್ಯವಾಗಿರಲಿಲ್ಲ. ಕಲಬುರ್ಗಿಯ ಫಿಲ್ಟರ್ ಶೆಡ್ ನಿವಾಸಿ ಪ್ರೇಮ್ ಕುಮಾರ್(25) ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕೊರೋನಾ …

Read More »