Breaking News

Monthly Archives: ಜೂನ್ 2021

ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರ ಸಹಾಯ ಮಾಡದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ನೆಲಮಂಗಲ: ರಾಜ್ಯ ಸರ್ಕಾರ ಗೂಡ್ಸ್ ವಾಹನ ಚಾಲಕರಿಗೆ ವಾಹನಗಳ ವಿಮಾಕಂತು ಹಾಗೂ ತೆರಿಗೆಗಳನ್ನು ಒಂದು ವರ್ಷ ಮುಂದೂಡುವ ಜೊತೆ ಚಾಲಕರಿಗೆ ಸಹಾಯವನ್ನು ಸರ್ಕಾರ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘ ಸಂಸ್ಥಾಪಕ ಅಧ್ಯಕ್ಷ ಎಂಪಿ ರವೀಶ್ ಎಚ್ಚರಿಕೆ ನೀಡಿದ್ದಾರೆ. ನೆಲಮಂಗಲ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಮಾದವಾರದ ಬಳಿ ಕರ್ನಾಟಕ ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘ ವತಿಯಿಂದ …

Read More »

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ-ಸಿದ್ದರಾಮಯ್ಯ

ಬೆಂಗಳೂರು: ‘ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಭೂ ಹಗರಣ ಕಾರಣ. ಅದರ ಬಗ್ಗೆ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು. ವರ್ಗಾವಣೆ ಶಿಕ್ಷೆ ಅಲ್ಲ. ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮೈಸೂರು ಮಹಾ ನಗರಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಬಿಜೆಪಿಯ …

Read More »

ಮುಂಗಾರು ಅಬ್ಬರ.ಮುಂಬಯಿಯಲ್ಲಿ ಧಾರಾಕಾರ ಮಳೆ; ಟ್ರಾಫಿಕ್ ಜಾಮ್, ರೈಲು ಸಂಚಾರ ವ್ಯತ್ಯಯ

ಮುಂಬಯಿ: ನಿಗದಿತ ಸಮಯಕ್ಕಿಂತ ಒಂದು ದಿನ ಮೊದಲೇ ಮುಂಗಾರು ಮಳೆ ಮುಂಬಯಿ ನಗರಿಯನ್ನು ಪ್ರವೇಶಿಸಿದ್ದು, ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅಲ್ಲದೇ ಸ್ಥಳೀಯ ಬಸ್ ಮತ್ತು ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿರುವುದಾಗಿ ಬುಧವಾರ(ಜೂನ್ 09) ಅಧಿಕಾರಿಗಳು ತಿಳಿಸಿದ್ದಾರೆ.   ಇಂದು ಮುಂಬಯಿಗೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುಂಬಯಿ ಕಚೇರಿಯ ವರಿಷ್ಠ ಡಾ.ಜಯಂತ್ ಸರ್ಕಾರ್ ತಿಳಿಸಿರುವುದಾಗಿ ಪಿಟಿಐ ವರದಿ …

Read More »

ಅನ್ ಲಾಕ್ ಗೆ ಸಿದ್ಧತೆ: ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೌಂಟ್ ಡೌನ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಒಂದೂವರೆ ತಿಂಗಳಿಂದ ಮನೆಯಲ್ಲೇ ಬಂಧಿಯಾದಂತಾಗಿದ್ದ ಜನರಿಗೆ ಬಿಡುಗಡೆ ಸಿಗಲಿದೆ. ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಪ್ರಸ್ತುತ ರಾಜ್ಯ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ಜೂನ್ 14ಕ್ಕೆ ಮುಗಿಯಲಿದ್ದು, ಜೂನ್ 14ರ ಬಳಿಕ ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ …

Read More »

COVID ಪಾಸಿಟಿವಿಟಿ ರೇಟ್ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟಿದೆ?

ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಜೂನ್ 7 ರ ವರೆಗೆ ಇದ್ದ ಲಾಕ್​ಡೌನ್​ನನ್ನು ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇನ್ನು ಒಂದು ವಾರ ವಿಸ್ತರಿಸಿದೆ. ಜೊತೆಗೆ ಯಾವ ಯಾವ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5 ಕ್ಕೆ ಬರುತ್ತದೋ ಆ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಳಿದ್ದಾರೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ …

Read More »

ಬಿಜೆಪಿ ಬಗ್ಗು ಬಡಿಯಲು ಇಬ್ರಾಹಿಂ ಹೊಸ ಅಸ್ತ್ರ.. ‘ಮೌನವೇ ಜಾಣ್ಮೆ’ಯೆಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿ ವಿರುದ್ಧ ಹೋರಾಟಕ್ಕೆ ಸನ್ನದ್ಧವಾಗಿರೋ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಸಿಎಂ ಇಬ್ರಾಹಿಂ ಜಾತ್ಯಾತೀತ ಸಲಹೆ ನೀಡಿದ್ದಾರೆ. ಇಬ್ರಾಹಿಂ ಅವರ ಈ ಸಲಹೆಯನ್ನ ಮಾಜಿ ಸಿಎಂ ಸ್ವೀಕರಿಸಿ, ಮತ್ತೊಂದು ಹೊಸ ಅಧ್ಯಾಯ ಬರೆಯುತ್ತಾರೆ ಅನ್ನೋ ಚರ್ಚೆ ರಾಜಕೀಯ ವಲಯದಲ್ಲಿ ಇದೀಗ ಶುರುವಾಗಿದೆ.     ಕಾಂಗ್ರೆಸ್ ಪಕ್ಷದ ಶಾಸಕರ ವೀಡಿಯೋ ‌ಕಾನ್ಪರೆನ್ಸ್ ಸಭೆಯಲ್ಲೇ ಸಿದ್ದರಾಮಯ್ಯಗೆ ಇಬ್ರಾಹಿಂ ಈ ಸಲಹೆಯನ್ನ ನೀಡಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿರೋ ರಾಜ್ಯ ಸರ್ಕಾರಕ್ಕೆ …

Read More »

ಸಚಿವರ ವಿರುದ್ಧ ಭ್ರಷ್ಟಾಚಾರದ ದೂರು ಇದ್ದರು ಎಸಿಬಿ ನಿಷ್ಕ್ರಿಯ: ಸಿದ್ದರಾಮಯ್ಯ

ಬೆಂಗಳೂರು, ಜೂ.9- ಹಲವಾರು ಸಚಿವರುಗಳ ವಿರದ್ಧ ಭ್ರಷ್ಟಚಾರದ ದೂರುಗಳಿರುವುದರಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹ ದಳವನ್ನು ನಿಷ್ಕ್ರಿಯ ಮಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರ ಎಸಿಬಿ ರಚನೆ ಮಾಡುವಾಗಲೇ ಬಿಜೆಪಿಯವರು ವಿರೋಧಿಸಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಎ.ಸಿ.ಬಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು …

Read More »

ಬರೀ 25 ಸಾವಿರ ರೂಪಾಯಿಗೆ ಹೊಂಡಾ ಆಯಕ್ಟೀವಾ ಖರೀದಿಸಿ; ಬಂಪರ್​ ಆಫರ್ ಪಡೆಯಲು ಹೀಗೆ ಮಾಡಿ

ಕೊರೊನಾ ಸಂದರ್ಭದಲ್ಲಿ ಸ್ವಂತ ವಾಹನ ಅತ್ಯವಶ್ಯಕ ಎನ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆರ್ಥಿಕ ಚಟುವಟಿಕೆಗಳೆಲ್ಲಾ ಸ್ಥಗಿತಗೊಂಡಿರುವ ಸಂದರ್ಭದಲ್ಲಿ ಒಮ್ಮೆಲೆಗೆ ದೊಡ್ಡ ಮೊತ್ತದ ಹಣ ನೀಡಿ ವಾಹನ ಖರೀದಿಗೆ ಕೈ ಹಾಕುವುದೆಂದರೆ ಸಾಮಾನ್ಯ ಜನರ ಜೇಬಿಗೆ ಬಲುಭಾರವಾಗುತ್ತದೆ. ಇಂತಹ ಹೊತ್ತಿನಲ್ಲಿ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಪ್ರಸಿದ್ಧವಾಗಿರುವ ಹೋಂಡಾ ಕಂಪೆನಿಯ ವಾಹನವೊಂದರ ಮೇಲೆ ಭಾರೀ ಆಫರ್​ ನೀಡಲಾಗಿದೆ. ಈ ಆಫರ್​ ಅಡಿಯಲ್ಲಿ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಹೋಂಡಾ ಆಯಕ್ಟೀವಾವನ್ನು ಕೇವಲ …

Read More »

ಸೂರ್ಯಗ್ರಹಣ ಸಮಯ ಆಚರಣೆ ಗರ್ಭಿಣಿಯರಿಗೆ ಎಚ್ಚರಿಕೆ ಮತ್ತು 4 ರಾಶಿಗೆ ಶುಕ್ರದೆಶೆಯ ಶ್ರೀಮಂತರಾಗುವಿರಿ!

ಸೂರ್ಯಗ್ರಹಣ ಸಮಯ ಆಚರಣೆ ಗರ್ಭಿಣಿಯರಿಗೆ ಎಚ್ಚರಿಕೆ ಮತ್ತು 4 ರಾಶಿಗೆ ಶುಕ್ರದೆಶೆಯ ಶ್ರೀಮಂತರಾಗುವಿರಿ! ನಮಸ್ಕಾರ ಬಂಧುಗಳೇ ಜೂನ್ 10ರಂದು ನಡೆಯಲಿದ್ದು ಸೂರ್ಯ ಗ್ರಹಣ ಈ ನಾಲ್ಕು ರಾಶಿಯವರಿಗೆ ಅದೃಷ್ಟವೇ ಅದೃಷ್ಟವು 2021 ರ ಮೊದಲ ಸೂರ್ಯ ಗ್ರಹಣವು ಜ್ಯೇಷ್ಠ ಮಾಸ, ಅಮಾವಾಸ್ಯೆ ತಿಥಿಯಲ್ಲಿ ನಡೆಯಲಿದೆ. ಈ ಗ್ರಹಣದಿಂದ ವಿಶೇಷವಾದ ಘಟನೆಗಳು ನಡೆಯಲಿದೆ. ಸೂರ್ಯ ಗ್ರಹಣದಂದು ಶನಿಯು ವಕ್ರ ವ್ಯವಸ್ಥೆಯಲ್ಲಿ ಇರುವ ಕಾರಣ ಸಂಯೋಗಕ್ಕೆ ಬಂದು ಅದ್ಭುತ ರಾಜ ಯೋಗ ಆರಂಭವಾಗಲಿದೆ. …

Read More »

ಕಲಬುರಗಿ: ವರದಕ್ಷಿಣೆ ಕಿರುಕುಳ; 21 ವರ್ಷದ ಗೃಹಿಣಿ ನೇಣಿಗೆ ಶರಣು

ಕಲಬುರಗಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ. 21 ವರ್ಷದ ರಚಿತಾ ಎಂಬುವವರೇ ಸಾವಿಗೆ ಶರಣಾದ ಗೃಹಿಣಿ. ಕಳೆದ ಎರಡೂವರೆ ವರ್ಷದ ಹಿಂದೆಯಷ್ಟೇ ವೀರಣ್ಣ ಎಂಬುವರ ಜೊತೆ ರಚಿತಾ ಮದುವೆಯಾಗಿತ್ತು. ಸಿವಿಲ್ ಇಂಜಿನಿಯರ್ ಆಗಿರುವ ವೀರಣ್ಣ, ಮದುವೆ ಬಳಿಕ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಕೂಡ ಹಣ ತವರು ಮನೆಯಿಂದ ಹಣ ತರುವಂತೆ …

Read More »