Breaking News
Home / 2021 / ಜೂನ್ (page 7)

Monthly Archives: ಜೂನ್ 2021

ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ

ಹಾವೇರಿ: ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಮತ್ತು ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾಲ್ಕು ಮೆಡಿಕಲ್ ಶಾಪ್, ಒಂದು ಕಿರಾಣಿ ಮತ್ತು ತರಕಾರಿ ಅಂಗಡಿ ಸೇರಿದಂತೆ ಎಂಟು ಅಂಗಡಿಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ನಾಲ್ಕು ಅಂಗಡಿಗಳಲ್ಲಿ ಒಂದು ಸಾವಿರ, ಐದು ಸಾವಿರ ಹೀಗೆ ಕೈಗೆ ಸಿಕ್ಕಷ್ಟು ಹಣವನ್ನ ದೋಚಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಇನ್ನು ನಾಲ್ಕು ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದರೂ ಏನೂ ಸಿಗದೇ …

Read More »

ಇಮ್ಯುನಿಟಿ ಮಾತ್ರೆ ಎಂದು ವಿಷದ ಮಾತ್ರೆ ನೀಡಿ ಮೂವರ ಹತ್ಯೆ

ಚೆನ್ನೈ: ಕರೊನಾ ಸೋಂಕು ಹೆಚ್ಚಾಗುತ್ತಿದೆ. ದೇಹದಲ್ಲಿ ಇಮ್ಯುನಿಟಿ ಇದ್ದರೆ ಮಾತ್ರ ನೀವು ಕರೊನಾ ಗೆಲ್ಲಬಹುದು, ಅದಕ್ಕಾಗಿ ಈ ಮಾತ್ರೆ ತಿನ್ನಿ ಎಂದು ನಕಲಿ ಆರೋಗ್ಯ ಸಿಬ್ಬಂದಿ ಕೊಟ್ಟ ಮಾತ್ರೆ ತಿಂದವರು ಇದೀಗ ಸಾವಿಗೀಡಾಗುತ್ತಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್​ನಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಕರುಪ್ಪಂಕೌಂಡರ್ (72 ವರ್ಷ) ಹೆಸರಿನ ವ್ಯಕ್ತಿಯ ಮನೆಗೆ ಜೂನ್ 26ರಂದು ಬಂದ ಶಬರಿ ಹೆಸರಿನ ನಕಲಿ ಆರೋಗ್ಯ ಸಿಬ್ಬಂದಿ, ಮನೆಯಲ್ಲಿ ಎಲ್ಲರೂ ಹುಷಾರಾಗಿದ್ದಾರಾ ಎಂದು …

Read More »

ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಇನ್ನಿಬ್ಬರ ಬಂಧನ; ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಹೋದರಿ ಮಾಲಾ ಮತ್ತು ಪುತ್ರ ಅರುಳ್ ಅವರುಗಳನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ 3 ದಿನಗಳಿಂದ ತೀವ್ರ ವಿಚಾರಣೆ ನಡೆಸಿದ್ದ ಪೊಲೀಸರು ರೇಖಾ ಕದಿರೇಶ್ ಹತ್ಯೆಯಲ್ಲಿ ಮಾಲಾ, ಅರುಳ್ ಪಾತ್ರದ ಬಗ್ಗೆ ಸಾಕ್ಷ್ಯ ದೊರಕಿದ ಕಾರಣ ಬಂಧಿಸಿದ್ದಾರೆ. ಈಮೂಲಕ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಕೇಸ್‌ನಲ್ಲಿ ಈವರೆಗೆ ಬಂಧಿತರ ಸಂಖ್ಯೆ 7ಕ್ಕೆ …

Read More »

ಕದ್ದ ನಾಯಿ ಮಾರಲು ವಾಟ್ಸ್‌ ಅಪ್‌ ಗೆ ಫೋಟೋ ಹಾಕಿ ಸಿಕ್ಕಿ ಬಿದ್ದ ಕಳ್ಳ

ಹಾಸನ: ಹಾಸನ ಹೊರವಲಯದ ಹೊನ್ನೇನಹಳ್ಳಿ ರಸ್ತೆಯಲ್ಲಿರುವ GRR ಕೆನಲ್ಸ್ ನಾಯಿ ಫಾರಂನಿಂದ ದುಬಾರಿ ಬೆಲೆಯ ನಾಯಿಗಳನ್ನು ಕಳ್ಳತನ ಮಾಡಿದ್ದ ಕಳ್ಳರು ಅಂದರ್ ಆಗಿದ್ದಾರೆ. ಕಳ್ಳನ ಪತ್ತೆಗೆ ಸಹಕಾರಿಯಾಗಿದ್ದು ವಾಟ್ಸಾಪ್ ಗ್ರೂಪ್. ಹಾಸನ ನಗರದ ಹೊರವಲಯದ ಗೆಂಡೆಕಟ್ಟೆ ಫಾರೆಸ್ಟ್ ಬಳಿ ದಿವಾಕರ್ ಎಂಬವರಿಗೆ ಸೇರಿದ GRR ಕೆನಲ್ಸ್ ನಾಯಿ ಫಾರಂನಲ್ಲಿ ಜೂ.18ರ ರಾತ್ರಿ ಒಂದೂವರೆ ಲಕ್ಷ ರೂ. ಮೌಲ್ಯದ ನಾಲ್ಕು ನಾಯಿಗಳನ್ನು ನಾಲ್ವರು ಸೇರಿ ಕದ್ದೊಯ್ದಿದ್ದರು. ರಾಟ್ ವೀಲರ್, ಲ್ಯಾಬ್ರಡಾರ್, ಡ್ಯಾಶೌಂಡ್ …

Read More »

ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ

ಬೆಳಗಾವಿ: ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೋಮವಾರ 32 ಕಡೆ 10,500 ಜನರಿಗೆ ಲಸಿಕಾ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬೆಳಗಾವಿ ಹುಕ್ಕೇರಿ ಹಿರೇಮಠದ‌ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಜಿಲ್ಲಾಡಳಿತದೊಂದಿಗೆ ವಿಶೇಷವಾಗಿ ಇರುವ ಸ್ಪಂದನೆ ಮತ್ತು ಇಡೀ ರಾಜ್ಯದಲ್ಲಿ ಮಠಾಧೀಶರೊಬ್ಬರು ಪ್ರಪ್ರಥಮಬಾರಿಗೆ …

Read More »

ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.: ‌ಪಾಲಿಕೆ‌ ಆಯುಕ್ತ ಜಗದೀಶ್ ಕೆ.ಎಚ್

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.   ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್‌ವಾರು ಕರಡು ಮತದರಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಾನಗರ ‌ಪಾಲಿಕೆ‌ ಆಯುಕ್ತ ಜಗದೀಶ್ ಕೆ.ಎಚ್.ತಿಳಿಸಿದ್ದಾರೆ. ಮಹಾನಗರ ಪಾಲಿಕೆಗೆ 2011 ರ ಸಾಲಿನ ಜನಗಣತಿಯನ್ನು ಆಧರಿಸಿ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ, ಅಂತಿಮ ಅಧಿಸೂಚನೆಯನ್ನು ಏಪ್ರಿಲ್‌ 19 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಡಿ ಪ್ರಕಟಿಸಿ, ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆ ಹಾಗೂ …

Read More »

ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾಡಬಾರದು: ವಾಟಾಳ್ ನಾಗರಾಜ್

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ ಎರಡನೇ ವಾರ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಇದನ್ನು ನಾನು ಸ್ಪಷ್ಟವಾಗಿ ವಿರೋಧ ಮಾಡುವೆ, ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾಡಬಾರದು. ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 10 ಲಕ್ಷ ವಿದ್ಯಾರ್ಥಿಗಳು ,ಪೋಷಕರು, ಸಿಬ್ಬಂದಿ ಸೇರಿ 25 ಲಕ್ಷ ಪರೀಕ್ಷೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ರಾಜ್ಯದಲ್ಲಿ ಕೋವಿಡ್ …

Read More »

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಂತ್ರಾಲಯ.. ಮದ್ವೆಗೆ ಬಂದು ಫಜೀತಿಗೆ ಸಿಲುಕಿದ ಜನ

ರಾಯಚೂರು: ಮಳೆಯ ಅಬ್ಬರ ಜೋರಾಗಿರೋ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಇಂದು ಅವಾಂತರ ಸೃಷ್ಟಿಯಾಗಿತ್ತು. ಮಂತ್ರಾಲಯದ ಮದುವೆ ಮಂಟಪಕ್ಕೆ ಮಳೆ ನೀರು ನುಗ್ಗಿದ್ದರಿಂದ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದ್ದರಿಂದ ಮದುವೆಗೆ ಬಂದಿದ್ದ ಜನರು ಫಜಿತಿಗೆ ಸಿಲುಕಿದ್ರು. ಇನ್ನು ಮಂತ್ರಾಲಯದಲ್ಲಿನ ಕರ್ನಾಟಕ ಭವನಕ್ಕೂ ಮಳೆ ನೀರು ನುಗ್ಗಿತ್ತು. ರಸ್ತೆ ತುಂಬಾ ನೀರು ನಿಂತಿದ್ದರಿಂದ ವಾಹನ ಸವಾರರೂ ಪರದಾಟ ನಡೆಸಿದ್ರು. ಅಲ್ಲದೇ ಕೆಲವು ವಾಹನ ಸವಾರರು ನೀರಿನಲ್ಲಿ ಗಾಡಿ ಚಲಾಯಿಸುವ ದುಸ್ಸಾಹಸ …

Read More »

ಜೀವಂತ ಪುಟ ಎನಿಸಿದ ಹಂಪಿ

ಚರಿತ್ರೆಯ ಜೀವಂತ ಪುಟ ಎನಿಸಿದ ಹಂಪಿಯನ್ನು ನೀವು ಹೀಗೆ ನೋಡಿರುವುದು ಸಾಧ್ಯವೇ ಇಲ್ಲಬಿಡಿ. ಮುಂಗಾರಿನ ಮೊದಲ ಮಳೆ ಸುರಿದ ಕೆಲವು ದಿನಗಳ ಬಳಿಕ ಸೆರೆಸಿಕ್ಕ ಚಿತ್ರಗಳಿವು. ಆಗತಾನೆ ತಲೆಸ್ನಾನ ಮಾಡಿ, ಎಳೆ ಬಿಸಿಲಿಗೆ ಮೈಯೊಡ್ಡಿದ ಯುವತಿಯಂತೆ ಸ್ಮಾರಕಗಳೆಲ್ಲ ಫಳ ಫಳ ಹೊಳೆಯುತ್ತಿದ್ದವು. ಅವುಗಳ ಆವರಣದಲ್ಲಿ ಬೆಳೆಸಲಾದ ಗಿಡ-ಬಳ್ಳಿಗಳು ಗಾಢ ಹಸಿರುಬಣ್ಣದ ಎಲೆಗಳನ್ನು ತೊಟ್ಟು, ಮೊಗ್ಗುಗಳನ್ನು ಮೈತುಂಬಾ ಧರಿಸಿಕೊಂಡು ನಿಂತಿದ್ದವು. ಸ್ಮಾರಕಗಳ ಲ್ಯಾಂಡ್‌ಸ್ಕೇಪ್‌ ಚಿತ್ರಗಳನ್ನು, ಆ ಸ್ಮಾರಕಗಳ ಜತೆಯಲ್ಲೇ ಬಾಳಿ ಬದುಕುವ …

Read More »

ಅತ್ಯುತ್ತಮ ಪ್ರವಾಸಿ ತಾಣ ಕರ್ನಾಟಕದ ಯಾಣ.!

ಉತ್ತರ ಕನ್ನಡ ಜಿಲ್ಲೆಯ ಪುಟ್ಟ ಹಳ್ಳಿ ಯಾಣ. ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗಲು ಹೇಳಿ ಮಾಡಿಸಿದ ತಾಣವಿದು. ನಗರದ ಜಂಜಾಟವನ್ನೆಲ್ಲಾ ಮರೆತು ಶುದ್ಧವಾದ ಗಾಳಿ ಸೇವಿಸುತ್ತಾ, ದಟ್ಟವಾದ ಕಾಡಲ್ಲಿ ವಿಹರಿಸುತ್ತಾ, ಹಕ್ಕಿಗಳ ಚಿಲಿಪಿಲಿ, ನೀರಿನ ಜುಳುಜುಳು ನಾದವನ್ನು ಸವಿಯುತ್ತಾ ದಿನ ಕಳೆಯಬಹುದು. ಇಲ್ಲಿ ಕಾಣಿಸುವ ಎರಡು ಎತ್ತರವಾದ ಬಂಡೆಗಳೇ ಇಲ್ಲಿನ ವಿಶೇಷತೆ. ಒಂದು ಬಂಡೆಯನ್ನು ಮೋಹಿನಿ ಶಿಖರ ಮತ್ತೊಂದನ್ನು ಭೈರವೇಶ್ವರ ಶಿಖರ ಎಂದು ಕರೆಯುತ್ತಾರೆ. ಭೈರವೇಶ್ವರ ಬಂಡೆಯಲ್ಲಿ ಒಂದು ಸಣ್ಣ …

Read More »