Breaking News
Home / 2021 / ಜೂನ್ (page 87)

Monthly Archives: ಜೂನ್ 2021

ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಶೂಬೂಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೂಬೂಜ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಶರಣಾಗಲು ಸೂಚನೆ ನೀಡಿದರೂ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದೆ. ಪಿಎಸ್‌ಐ ಶಿವರಾಜ್ ಮತ್ತು ದೇವೇಂದ್ರ ನಾಯಕ್ ಗಾಯಗೊಂಡಿದ್ದಾರೆ. …

Read More »

ಲಾಕ್‌ಡೌನ್‌ ಪರಿಣಾಮ: ಹೊಲದಲ್ಲೇ ಉಳಿದ ಹಣ್ಣು, ತರಕಾರಿ

ಹುಬ್ಬಳ್ಳಿ: ಲಾಕ್‌ಡೌನ್ ಪರಿಣಾಮ ಕೃಷಿ ಉತ್ಪನ್ನಗಳ ಮಾರಾಟದ ಮೇಲೂ ಆಗಿದೆ. ಮಾರುಕಟ್ಟೆ ಕೊರತೆ, ಬೇಡಿಕೆ ಕುಸಿತದ ಕಾರಣ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲವರು ಬೆಳೆಗಳನ್ನು ಹೊಲದಲ್ಲಿಯೇ ಬಿಟ್ಟಿದ್ದರೆ, ಇನ್ನು ಹಲವರು ನಾಶ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ತೆಲಸಂಗ ಭಾಗದಲ್ಲಿ ರೈತರು ಕಲ್ಲಂಗಡಿ ಹಣ್ಣುಗಳನ್ನು ಗಿಡದಲ್ಲೇ‌ ಬಿಟ್ಟಿದ್ದರು. ಕಣಬರ್ಗಿಯಲ್ಲಿ ರೈತರೊಬ್ಬರು ಕೊತ್ತಂಬರಿ ಸೊಪ್ಪು, ಖಾನಾಪುರ ತಾಲ್ಲೂಕಿನ ಪಾರಿಶ್ವಾಡದ ಹೂಕೋಸು, ಮೂಡಲಗಿ ತಾಲ್ಲೂಕಿನ ಹಳ್ಳೂರದಲ್ಲಿ ಮೆಣಸಿನಕಾಯಿ ಬೆಳೆಯನ್ನು ಹಾಗೇ …

Read More »

ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …

Read More »

ಜೆ.ಹೆಚ್.ಪಟೇಲರು ಕೈಯಲ್ಲಿ ಮೆಟ್ಟು ಹಿಡಿದುಕೊಂಡಿದ್ದೇಕೆ ? ಎಷ್ಟರಮಟ್ಟಿಗೆ ಸರಿ?

ಬೆಂಗಳೂರು, ಸುದ್ದಿಒನ್, ಜೂ.01: ಸಮಾಜವಾದಿ ಸಿದ್ಧಾಂತವನ್ನು ತನ್ನ ಬದುಕಿನಲ್ಲಿ ಅಳವಡಿಸಿಕೊಂಡು ವಿಭಿನ್ನ, ನೇರ ನಿಷ್ಠೂರತೆ ಕಾರಣಕ್ಕೆ ರಾಜ್ಯ ರಾಜಕಾರಣದಲ್ಲಿ ವರ್ಣರಂಜಿತವಾಗಿದ್ದ ಜೆ.ಹೆಚ್.ಪಟೇಲರು ನಾಡು ಕಂಡ ಅಪರೂಪದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದರು. ಹೆಚ್.ಡಿ.ದೇವೇಗೌಡರು, ರಾಮಕೃಷ್ಣಹೆಗಡೆ ಅವರೊಂದಿಗೆ ಅತ್ಯಂತ ಸಲಿಗೆಯಿಂದ ಮಾತನಾಡುವ ಶಕ್ತಿ, ವ್ಯಕ್ತಿತ್ವ ಹೊಂದಿದ್ದರು. ಜೊತೆಗೆ ಹಾಸ್ಯಭರಿತ, ನೇರ, ನಿಷ್ಠೂರತೆ ಮಾತು ಹೆಚ್ಚು ಆತ್ಮೀಯರನ್ನಾಗಿಸುತ್ತಿತ್ತು. ಆದರೆ ನಾಡಿನ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕಾದರೆ ಕೆಲ ಅರ್ಹತೆಗಳು ಅನಿವಾರ್ಯವಾಗಿ ಇರಲೇಬೇಕು. ಜೊತೆಗೆ ಕೆಲ …

Read More »

ಒಳ ಉಡುಪು ಹರಿದಿದೆ, ಬಟ್ಟೆ ಅಂಗಡಿ ಬಾಗಿಲು ತೆಗೆಸಿ ಸ್ವಾಮಿ’ : ಸಿಎಂ ‘BSY’ ಬಳಿ ವಿಚಿತ್ರ ಬೇಡಿಕೆಯಿಟ್ಟ ವ್ಯಕ್ತಿ.!

ಮೈಸೂರು : ರಾಜ್ಯದಲ್ಲಿ ಕೊರೊನಾ ಸ್ಪೋಟವಾದ ಹಿನ್ನೆಲೆ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಹಿನ್ನೆಲೆ ಬಟ್ಟೆ ಅಂಗಡಿ ಸೇರಿದಂತೆ ಎಲ್ಲವೂ ಬಂದ್ ಆಗಿದೆ. ಕೊರೊನಾ ಲಾಕ್‌ಡೌನ್‌ ಸಂದರ್ಭ ಅಗತ್ಯ ವಸ್ತು ಹೊರತುಪಡಿಸಿ ಬೇರೆ ಯಾವುದೇ ಅಂಗಡಿಗಳು ತೆರೆಯಲು ಅವಕಾಶವಿಲ್ಲ. ಈ ಹಿನ್ನೆಲೆ ಮೈಸೂರಿನಲ್ಲಿ ವ್ಯಕ್ತಿಯೋರ್ವ ನನ್ನ ಬಳಿ ಇರುವ ಎರಡು ಒಳಉಡುಪು ಹರಿದು ಹೋಗಿದೆ, ದಯವಿಟ್ಟು ಬಟ್ಟೆ ಅಂಗಡಿ ತೆರೆಸಿ ಎಂದು ಮುಖ್ಯಮಂತ್ರಿ ಬಿ …

Read More »

ಯೋಗೀಶ್ವರ್ ಗೆ ಇಂಧನ ಖಾತೆ ಸಹಿತ ಡಿಸಿಎಂ ಹುದ್ದೆ ನೀಡಿದರೂ ಅಚ್ಚರಿ ಪಡಬೇಕಿಲ್ಲ: ಯತ್ನಾಳ

ವಿಜಯಪುರ : ಸಚಿವ ಸ್ಥಾನದಿಂದ ಸಿ.ಪಿ.ಯೋಗೇಶ್ವರ ಅವರನ್ನು ವಜಾ ಮಾಡುವುದು ಅಸಾಧ್ಯ. ವಿಶಿಷ್ಟ ಕೋಟಾದಲ್ಲಿ ಮಂತ್ರಿಯಾಗಿರುವ ಅವರಿಗೆ ವಜಾ ಬದಲಾಗಿ ಅವರ ನಿರೀಕ್ಷೆಯ ಇಂಧನ ಖಾತೆ ಸಹಿತ ಉಪ ಮುಖ್ಯಮಂತ್ರಿ ಹುದ್ದೇ ನೀಡಿದರೂ ಅಚ್ಚರಿ ಪಡಬೇಕಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಯ ವಿಡಿಯೋ ಹಾಕಿರುವ ಯತ್ನಾಳ, ಸಿ.ಪಿ.ಯೋಗೇಶ್ವರ ಅವರ ವಿರುದ್ಧ ಕ್ರಮ ಕೈಗೊಳ್ಳುವ …

Read More »

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

ಅಭಿಷೇಕ್​ ಬಚ್ಚನ್​ ಅವರಿಗೆ ಕಳೆದ ವರ್ಷ ಕೊರೊನಾ ಕಾಣಿಸಿಕೊಂಡಿತ್ತು. 29 ದಿನಗಳ ಕಾಲ ಕೊವಿಡ್​ನಿಂದ ಬಳಲಿದ್ದ ಅವರು, ನಂತರ ಚೇತರಿಕೆ ಕಂಡಿದ್ದರು. ಈ ಅನುಭವ ಹೇಗಿತ್ತು ಎನ್ನುವ ಬಗ್ಗೆ ಅಭಿಷೇಕ್​ ಈಗ ಮಾತನಾಡಿದ್ದಾರೆ. ಕೊವಿಡ್​ 19ರ ವಿರುದ್ಧ ಹೋರಾಡುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಅನುಭವ ಹಂಚಿಕೊಂಡಿದ್ದಾರೆ. ‘ಕೊರೊನಾ ಬಂದ ದಿನಗಳು ನನಗೆ ಒಳ್ಳೆಯ ಅನುಭವ ಆಗಿರಲಿಲ್ಲ. ನನ್ನ ನಂಬಿಕೊಂಡಿದ್ದ ಕುಟುಂಬ ಕೂಡ ಇದರಿಂದ ತೊಂದರೆಗೆ ಒಳಗಾಗಿತ್ತು. ನಿಮಗೆ ರೋಗ ಬಂದಿದೆ …

Read More »

ರಾಜ್ಯದಲ್ಲೂ ರದ್ದಾಗುತ್ತಾ ‘ದ್ವಿತೀಯ PUC’ ಪರೀಕ್ಷೆ : ಈ ಕುರಿತು ಸಚಿವ ‘ಸುರೇಶ್ ಕುಮಾರ್’ ಹೇಳಿದ್ದೇನು..?

ಬೆಂಗಳೂರು : ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು, ಈ ನಡುವೆ ರಾಜ್ಯದಲ್ಲೂ ‘ದ್ವಿತೀಯ PUC’, ‘SSLC’ ಪರೀಕ್ಷೆ ರದ್ದಾಗುತ್ತಾ..ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲವಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಪರೀಕ್ಷೆ ನಡೆಸಬೇಕೋ/ಬೇಡವೋ ಎಂಬುದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಪಠ್ಯಕ್ರಮ ಅನುಸರಿಸಿ …

Read More »

ಪರೀಕ್ಷೆಗೆ ಹಾಜರಾಗುವ 2ನೇ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷ ಪರೀಕ್ಷೆಗೆ ಹಾಜರಾಗುವ ಎರಡನೇ ವರ್ಷದ ಪಿಯುಸಿ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಅವಲೋಕಿಸುತ್ತಿದೆ. ಈ ವರ್ಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಸರ್ಕಾರ ಉದ್ದೇಶಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ಕುರಿತು ನಿರ್ಧಾರವನ್ನು ತೆಗದುಕೊಳ್ಳಲಾಗುವುದು …

Read More »

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು; ಮೋದಿ

ನವದೆಹಲಿ : ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ, ಈ ವರ್ಷದ 12ನೇ ತರಗತಿ ಪರೀಕ್ಷೆಯನ್ನು ನಡೆಸದೇ ಇರುವಂತ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ವಿದ್ಯಾರ್ಥಿಗಳ …

Read More »