Home / 2021 / ಜೂನ್ (page 90)

Monthly Archives: ಜೂನ್ 2021

ಬೆಂಗಳೂರಲ್ಲಿ ಜೂನ್ 7ರಿಂದ ಬಿಎಂಟಿಸಿ ಬಸ್ ಸಂಚಾರ

ಬೆಂಗಳೂರು, ಮೇ 31; ಬೆಂಗಳೂರು ಜನರ ಜೀವನಾಡಿ ಬಿಎಂಟಿಸಿ ಬಸ್ ಸಂಚಾರ ಆರಂಭಿಸಲಿದೆ. ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್ ಜೂನ್ 7ರ ಸೋಮವಾರ ಬೆಳಗ್ಗೆ 6ಕ್ಕೆ ಮುಕ್ತಾಯಗೊಳ್ಳಲಿದ್ದು, ಮುಂದುವರೆಸುವ ಕುರಿತು ಸರ್ಕಾರ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಜೂನ್ 7ರ ಬಳಿಕ ಲಾಕ್‌ಡೌನ್ ವಿಸ್ತರಣೆಯಾದರೂ ಹಲವು ವಿನಾಯಿತಿ ಸಿಗುವ ಸಾಧ್ಯತೆ ಇದೆ. ಆದ್ದರಿಂದ ಜನದಟ್ಟಣೆ ಹೆಚ್ಚಿರುವ ಮಾರ್ಗದಲ್ಲಿ ಬಸ್ ಸಂಚಾರ ಆರಂಭಿಸಲು ಬಿಎಂಟಿಸಿ ಮುಂದಾಗಿದೆ. ಈ ಕುರಿತು ನೌಕರರಿಗೂ ನಿರ್ದೇಶನ ನೀಡಲಾಗಿದೆ. …

Read More »

5 ಜಿ ನೆಟ್ವರ್ಕ್ ಸ್ಥಾಪನೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜುಹಿ ಚಾವ್ಲಾ

ನವದೆಹಲಿ : ಈಗಾಗಲೇ ದೇಶದ ಎಲ್ಲೆಡೆ 4 ಜಿ ವೈರ್ಲೆಸ್ ನೆಟ್ವರ್ಕ್ ಪ್ರಚಲಿತದಲ್ಲಿದೆ. ಆದರೆ ಇದನ್ನು ಇನ್ನೂ ಉತ್ತಮಗೊಳಿಸುವ ಹಿನ್ನೆಲೆಯಲ್ಲಿ 5ಜಿ ನೆಟ್ವರ್ಕ್ ಗಳನ್ನು ತರುವ ಸಂಶೋಧನೆಗಳು ಹಾಗೂ ಪ್ರಯೋಗಗಳು ನಡೆಯುತ್ತವೆ. 5 ಜಿ ವೈರ್‌ಲೆಸ್ ನೆಟ್‌ವರ್ಕ್‌ಗಳನ್ನು ಸ್ಥಾಪನೆ ಮಾಡುವುದರ ವಿರುದ್ಧ ಅನೇಕ ಪರಿಸರವಾದಿಗಳು ಧ್ವನಿ ಎತ್ತಿದ್ದರು ಮತ್ತು ಇದನ್ನು ವಿರೋಧಿಸಿದ್ದರು. ಇದೀಗ ಇದರ ವಿರುದ್ಧ ಬಾಲಿವುಡ್ ಖ್ಯಾತ ನಟಿ ಪರಿಸರವಾದಿ ಜುಹಿ ಚಾವ್ಲಾ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 5 …

Read More »

46 ವರ್ಷ ವಯಸ್ಸಿನ ಅಂಧ ವ್ಯಕ್ತಿ​​​ ಮೌಂಟ್ ಎವರೆಸ್ಟ್ ಪರ್ವತ ಏರಿದ್ದಾರೆ.

ಝಾಂಗ್ ಹೋಂಗ್ ಎಂಬ 46 ವರ್ಷ ವಯಸ್ಸಿನ ಅಂಧ ವ್ಯಕ್ತಿ​​​ ಮೌಂಟ್ ಎವರೆಸ್ಟ್ ಪರ್ವತ ಏರಿದ್ದಾರೆ. ಚೀನಾ ಮೂಲದ ಇವರು ನೇಪಾಳ ಕಡೆಯಿಂದ ಪರ್ವತ ಹತ್ತಿ ದಾಖಲೆ ಬರೆದಿದ್ದಾರೆ. ಇಡೀ ಏಷ್ಯಾದಲ್ಲೇ ಮೌಂಟ್ ಎವರೆಸ್ಟ್ ಏರಿದ ಮೊದಲ ಅಂಧ ಅನ್ನೋ ಬಿರುದು ಪಡೆದಿದ್ದು, ವಿಶ್ವದಲ್ಲಿ ಮೌಂಟ್ ಎವರೆಸ್ಟ್ ಏರಿದ 3ನೇ ಅಂಧ ವ್ಯಕ್ತಿಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಝಾಂಗ್ ಹೋಂಗ್​​​, ಗಟ್ಟಿ ಮನಸ್ಸೊಂದಿದ್ರೆ ನಿನ್ ಕೈಲಿ ಆಗಲ್ಲ ಅನ್ನೋ ವಿಚಾರವನ್ನು …

Read More »

ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಕಮಾಲ್​ ಖಾನ್​:

ಸಲ್ಮಾನ್​ ಖಾನ್​ ಹಾಗೂ ಕಮಾಲ್​ ಖಾನ್​ ನಡುವೆ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಸದ್ಯಕ್ಕೆ ಆರುವ ರೀತಿ ಕಾಣುತ್ತಿಲ್ಲ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನಲಾಗಿತ್ತು. ಈಗ ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆಯನ್ನು ಕಮಾಲ್​ ಮಾಡಿದ್ದಾರೆ. ಇತ್ತೀಚೆಗೆ ಟ್ವೀಟ್​ ಒಂದನ್ನು ಮಾಡಿದ್ದ ಕಮಾಲ್​, ‘ಅವರು ಅನೇಕರ ಕೆರಿಯರ್​ ನಾಶ …

Read More »

ಬೆಳಗಾವಿ ಖಾಸಗಿ ಆಸ್ಪತ್ರೆಗಳಲ್ಲಿ COVID19 ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು: ಗೋವಿಂದ ಕಾರಜೋಳ

ಬೆಳಗಾವಿ: ಬಿಮ್ಸ್ ನಲ್ಲಿ ಕೋವಿಡ್ ಸಂಬಂಧಿಸಿದ ಬೆಡ್ ಗಳು ಭರ್ತಿಯಾಗಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು. ಇಂತಹ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಜಿಲ್ಲೆಯಲ್ಲಿ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜತೆ …

Read More »

ಪತಿಯನ್ನು ಹೋಮಕುಂಡದಲ್ಲಿ ಹಾಕಿ ಕೊಲೆ ಮಾಡಿದ್ದ ಪತ್ನಿ; ಬೆಚ್ಚಿಬೀಳಿಸಿದ್ದ ಹತ್ಯೆ ಪ್ರಕರಣದ ತೀರ್ಪು ಮುಂದೂಡಿಕೆ

ಉಡುಪಿ: ಪುತ್ರ ಹಾಗೂ ಪ್ರಿಯಕರನ ಜೊತೆಗೂಡಿ ಪತಿಯನ್ನು ಹೋಮಕುಂಡದಲ್ಲಿ ಹಾಕಿ ಸುಟ್ಟು ಕೊಲೆ ಮಾಡಿದ್ದ ಪ್ರಕರಣ ಇದೀಗ ಮತ್ತೆ ಸದ್ದು ಮಾಡಲಾರಂಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ನ್ಯಾಯಾಲಯ ಮುಂದೂಡಿದ್ದು, ಸದ್ಯದಲ್ಲೇ ತೀರ್ಪು ಹೊರಬೀಳುವ ಸಾಧ್ಯತೆ ಇರುವುದರಿಂದ ಕುತೂಹಲ ಮೂಡಿಸಿದೆ. ಅನಿವಾಸಿ ಉದ್ಯಮಿ ಭಾಸ್ಕರ ಶೆಟ್ಟಿಯನ್ನು ಕೊಲೆ ಮಾಡಿದ್ದ ಪತ್ನಿ ರಾಜೇಶ್ವರಿ ಶೆಟ್ಟಿ, ಪ್ರಿಯಕರ ನಿರಂಜನ್​ ಭಟ್​, ಪುತ್ರ ನವನೀತ್ ಶೆಟ್ಟಿ ಪ್ರಮುಖ ಆರೋಪಿಗಳು. 2016ರ ಜುಲೈ ತಿಂಗಳಲ್ಲಿ ಈ …

Read More »

ಕರೊನಾ ಸೋಂಕಿತನ ಶವ ಊರಿಗೆ ತರದಂತೆ ವಿರೋಧ; ಸ್ವತಃ ಆಂಬುಲೆನ್ಸ್ ಚಲಾಯಿಸಿಕೊಂಡು ಸ್ಮಶಾನಕ್ಕೆ ಕೊಂಡೊಯ್ದ ಶಾಸಕ

ದಾವಣಗೆರೆ: ಕರೊನಾದಿಂದ ಮೃತಪಟ್ಟ ಯುವಕನ ದೇಹವನ್ನು ತರದಂತೆ ಗ್ರಾಮಸ್ಥರು ವಿರೋಧಿಸಿದ ಅಮಾನವೀಯ ನಡೆ ಒಂದೆಡೆಯಾದರೆ, ಮತ್ತೊಂದೆಡೆ ಅದೇ ಶವವನ್ನು ಸ್ವತಃ ಆಂಬುಲೆನ್ಸ್​ ಚಲಾಯಿಸಿಕೊಂಡು ಬೇರೆಡೆಯ ಸ್ಮಶಾನಕ್ಕೆ ಕೊಂಡೊಯ್ದು ಸಂಸ್ಕಾರ ನಡೆಸಿ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ಕುಟುಂಬವೊಂದು ಹೊನ್ನಾಳಿಯಲ್ಲಿ ನೆಲೆಸಿದ್ದು, ಆ ಕುಟುಂಬಕ್ಕೆ ಸೇರಿದ 31 ವರ್ಷದ ವ್ಯಕ್ತಿ ಕರೊನಾ ಸೋಂಕಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ. ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಅವರು ಬೆಳಗ್ಗೆ ಈ ಸೋಂಕಿತನ ಯೋಗಕ್ಷೇಮ …

Read More »

ಸಚಿವ ಪ್ರಭು ಚವ್ಹಾಣ್ ವಿತರಿಸುತ್ತಿರುವ ಆಹಾರ ತಿನ್ನಲಿಕ್ಕೆ ಬಾರದಂತಿದೆ: ಅಲೆಮಾರಿ ಜನಾಂಗದ ಮಹಿಳೆಯರ ಆರೋಪ

ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ. ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ ಸಂದರ್ಭದಲ್ಲಿ ಅಲೆಮಾರಿ ಜನಾಂಗದ ಮಹಿಳೆಯರು, ನಿಮ್ಮ ಆಹಾರ ಚೆನ್ನಾಗಿದೆ, …

Read More »

ಏಳು ವರ್ಷದಲ್ಲಿ ದೇಶವನ್ನು 70 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ

ಬೆಂಗಳೂರು, ಮೇ 31- ಬಿಜೆಪಿ ನಾಯಕರು ನಿನ್ನೆಗೆ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಏಳು ವರ್ಷ ತುಂಬಿತೆಂದು ಖಾಲಿ ಕೊಡ ಹೊತ್ತುಕೊಂಡು ಸಂಭ್ರಮ ಪಟ್ಟಿದ್ದಾರೆ. ಹೋಗಿದೆ. ಮಾನವಂತ, ಸೂಕ್ಷ್ಮ ಸಂವೇದನೆಯ ಜನ ಏನೆನ್ನುತ್ತಾರೆ ಎಂಬ ಬಗ್ಗೆ ಸಣ್ಣ ಸ್ಪಂದನೆಯೂ ಇಲ್ಲದ ಬಿಜೆಪಿ ನಾಯಕರು ತಮ್ಮ ಬೆನ್ನು ತಾವೇ ತಟ್ಟಿಕೊಂಡು ಸಂಭ್ರಮಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ …

Read More »

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ.: ಸಿದ್ದರಾಮಯ್ಯ

ಬೆಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ. ಮೋದಿ ಅಭಿವೃದ್ಧಿ ಕಾರ್ಯಗಳಿಂದ ದೇಶ ಹಿಂದಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 7 ವರ್ಷಗಳಾದ ಹಿನ್ನೆಲೆಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ, ‘ಕಳೆದ ನಾಲ್ಕು ಐದು ದಿನಗಳಿಂದ ಮಾಧ್ಯಮಗಳ ವರದಿಯನ್ನ ನೋಡುತ್ತಿದ್ದೇನೆ. ಮೋದಿ ಸರ್ಕಾರ ಬಂದು 7 ವರ್ಷವಾದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಬಿಜೆಪಿಯವ್ರು ಖಾಲಿ …

Read More »