Home / 2021 / ಜುಲೈ / 07 (page 2)

Daily Archives: ಜುಲೈ 7, 2021

ಕೇಂದ್ರ ಸಚಿವ ಸ್ಥಾನಕ್ಕೆ `ರಮೇಶ್ ಪೋಕ್ರಿಯಾಲ್ ನಿಶಾಂಕ್’ ರಾಜೀನಾಮೆ

ನವದೆಹಲಿ : ಇಂದು (ಬುಧವಾರ) ಸಂಜೆ ಕೇಂದ್ರ ಸಚಿವರ ಪರಿಷತ್ತಿನ ಪುನರ್ರಚನೆ ಮತ್ತು ವಿಸ್ತರಣೆಯ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವ್ರು ತಮ್ಮ ಅಧಿಕೃತ ನಿವಾಸದಲ್ಲಿ ಸಚಿವ ಹುದ್ದೆಯ ಸಂಭಾವ್ಯರನ್ನ ಭೇಟಿಯಾದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಧಾನಿ ನಿವಾಸದಲ್ಲಿ ಉಪಸ್ಥಿತರಿದ್ದರು.   …

Read More »

ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

ವಿಜಯನಗರ: ನಿನ್ನೆ ಸುರಿದ ಭಾರೀ ಮಳೆಗೆ ಗಂಡ ಹೆಂಡತಿಯಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಮೊತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55) ಹಾಗೂ ಅವರ ಪತ್ನಿ ಗದಗ ಜಿಲ್ಲೆಯಿಂದ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೂವಿನಹಡಗಲಿ ತಾಲೂಕಿನ ಪೂರ್ವ ಮತ್ತು ಪಶ್ಚಿಮ ಕಾಲ್ವಿ ಗ್ರಾಮಗಳ ಬಳಿ ಇರುವ ಹಳ್ಳದಲ್ಲಿ ನಿನ್ನೆ ದಂಪತಿ ಕೊಚ್ಚಿಹೋಗಿದ್ದು, ಮಲ್ಲಿಕಾರ್ಜುನ ಇಂದು …

Read More »

ಕಾರು-ಆಟೋ ಮಧ್ಯೆ ಭೀಕರ ಅಪಘಾತ; ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಹಾವೇರಿ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೌದಿಕಲ್ಲಾಪುರ ಕ್ರಾಸ್​ ಬಳಿ ನಡೆದಿದೆ. ಲಕ್ಷ್ಮವ್ವ ಕಲ್ಲೇಡಿ 55 ಮೃತ ದುರ್ದೈವಿಯಾಗಿದ್ದು ಇನ್ನುಳಿದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಮಾರ್ಗವಾಗಿ ಕಾಗಿನೆಲೆಗೆ ಹೋಗುತ್ತಿದ್ದ ಕಾರು ಮತ್ತು ಹಾವೇರಿಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ. ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ …

Read More »

ಸಬ್‌ ಇನ್ಸ್‌ಪೆಕ್ಟರ್‌ ನ್ನೇ ದರೋಡೆ ಮಾಡಲು ಯತ್ನ ; ಹೆಲ್ಮೆಟ್‌ ನೋಡಿ ಪರಾರಿ ; ಮೂವರ ಬಂಧನ

ಬೆಂಗಳೂರು, : ಕೊರೊನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ದರೋಡೆಕೋರರು ಫೀಲ್ಡ್‌ಗೆ ಇಳಿದಿದ್ದಾರೆ. ರಾತ್ರಿ ವೇಳೆ ಮನೆಗೆ ಹೋಗುತ್ತಿದ್ದ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಅಡ್ಡಗಟ್ಟಿ ಮೂವರು ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಪಿಎಸ್‌ಐ ಧರಿಸಿದ್ದ ಪೊಲೀಸ್ ಹೆಲ್ಮೆಟ್ ನೋಡಿ ಪರಾರಿಯಾಗಿದ್ದ ಮೂವರು ದರೋಡೆಕೋರರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರವಿಕುಮಾರ್, ಬಾಲು ಮತ್ತು ಅಶೀತ್ ಗೌಡ ಬಂಧಿತ ಆರೋಪಿಗಳು. ಆರ್‌.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಚ್‌.ಎಲ್. ಕೃಷ್ಣ ಜು. 3 ರಂದು …

Read More »

ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ : ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ

ನವದೆಹಲಿ: ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ ಎಂದು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಭಾವುಕರಾದರು. ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಖಚಿತವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ನಾರಾಯಣಸ್ವಾಮಿ ಆಗಮಿಸಿದ್ದರು. ನಿವಾಸದಿಂದ ಹೊರ ಬರುತ್ತಲೇ ಕೇಂದ್ರದ ಸಚಿವನಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಸ್ವಾಮಿ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಪಕ್ಷ ಅವಕಾಶ ನೀಡಿದೆ. ಸಿಕ್ಕ ಅವಕಾಶವನ್ನು …

Read More »

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್

ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.   ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …

Read More »

‘ಕೋವಿಡ್‌ ನಿರ್ವಹಣೆ: ಸರ್ಕಾರ ವಿಫಲ’

ಹಾವೇರಿ: ‘ಕೋವಿಡ್‌ ಎರಡನೇ ಅಲೆ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಅಗತ್ಯ ವೈದ್ಯಕೀಯ ಸೌಲಭ್ಯಗಳು ಮತ್ತು ಸಿದ್ಧತೆಯ ಕೊರತೆಯಿಂದ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆ, ವೆಂಟಿಲೇಟರ್‌ಗಳು ಸಿಗದೆ ಜನರು ಸಾವು-ನೋವು ಅನುಭವಿಸಿದ್ದಾರೆ. ತಜ್ಞರ ಶಿಫಾರಸುಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿತು. …

Read More »

ಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಸೈಕಲ್ ಜಾಥಾ

ಬೆಂಗಳೂರು, ಜು.7- ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಇಂದು ಸೈಕಲ್ ಜಾಥಾದ ಮೂಲಕ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲೂ ಕಾಂಗ್ರೆಸ್ ನಾಯಕರು ವಿಧಾನಸಭಾ ಕ್ಷೇತ್ರಗಳಲ್ಲಿ ಸೈಕಲ್ ತುಳಿದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಡುಪಿಯಲ್ಲಿ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿದ್ದು, ಅಲ್ಲಿಯೇ ಸೈಕಲ್ ಜಾಥಾದಲ್ಲಿ ಭಾಗವಹಿದ್ದಾರೆ. ಬೆಂಗಳೂರಿನ ಕೇಂದ್ರ, ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲಾ …

Read More »

ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆದು ಹಣ ಮಾಡುತ್ತಿದ್ದಾರೆ: ಸಿದ್ದು ಆಕ್ರೋಶ

ಮೈಸೂರು: ಇದು ಭಂಡ ಸರಕಾರ. ಮಾನವೀಯತೆಯ ಇಲ್ಲದ ಸರಕಾರ. ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10 ಸಾವಿರ ಕೊಡಬೇಕಿತ್ತು. ನಮ್ಮ ಸರಕಾರ ಇದ್ದಿದ್ದರೆ 10 ಸಾವಿರ ಹಣ, 10 ಕೆಜಿ ಅಕ್ಕಿ ಕೊಡುತ್ತಿದ್ದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇವರು ದುಡ್ಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಸರಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ. ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆಯುತ್ತಾ …

Read More »

ಸದಾನಂದಗೌಡಗೆ ಕೊಕ್; ಶೋಭಾ, ರಾಘವೇಂದ್ರ, ಜಿಗಜಿಗಣಿಗೆ ಸ್ಥಾನ? ಎಲ್ಲರ ಚಿತ್ತ ದೆಹಲಿಯತ್ತ!

ಬೆಳಗಾವಿ/ಚಿತ್ರದುರ್ಗ: ಇಂದು ಸಂಜೆ ಕೇಂದ್ರ ಸಂಪುಟ ಪುನಾರಚನೆಯಾಗಲಿದ್ದು ಎಲ್ಲರ ಗಮನ ದೆಹಲಿಯ ಮೇಲೆ ನೆಟ್ಟಿದೆ. ಕರ್ನಾಟಕದಿಂದ ಹಲವು ಸಂಸದರು ತಮಗೂ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯ ಕರೆಗಾಗಿ ಕಾಯುತ್ತಿದ್ದಾರೆ. ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತು ರಮೇಶ್ ಜಿಗಜಿಣಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹಿರಿಯ ಸಂಸದರನ್ನು ಹೊರತುಪಡಿಸಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಅವರು ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ. ಆದರೆ ಅವರಿಗೆ ದೆಹಲಿಯಿಂದ ಕರೆ …

Read More »