Breaking News

Daily Archives: ಜುಲೈ 15, 2021

ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …

Read More »

ದೇಸಿ ಬೀಡಿ ಪ್ರಚಾರಕ್ಕಿಳಿದ್ರಾ ಫುಟ್​ಬಾಲ್​ ಆಟಗಾರ ಲಿಯೋನೆಲ್ ಮೆಸ್ಸಿ?

ದಕ್ಷಿಣ ಅಮೆರಿಕಾ ತಂಡ ಬ್ರೆಜಿಲ್​ಅನ್ನು ಸೋಲಿಸಿ ಕೋಪಾ ಅಮೇರಿಕಾ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ, ಅರ್ಜೆಂಟೀನಾದ ಫುಟ್​ಬಾಲ್​ ಆಟಗಾರ ಲಿಯೋನೆಲ್​ ಮೆಸ್ಸಿ. ಇದೀಗ ಭಾರೀ ಸುದ್ದಿಯಲ್ಲಿರುವ ವಿಷಯ ಏನಂದ್ರೆ.. ಮೆಸ್ಸಿ ಬಿಡಿ ಪ್ಯಾಕೆಟ್​. ತಂಬಾಕು ಉತ್ಪನ್ನದ ಪ್ಯಾಕೆಟ್​ನಲ್ಲಿರುವ ಮೆಸ್ಸಿ ಅವರ ಫೋಟೋ ಫುಲ್​ ವೈರಲ್​ ಆಗುತ್ತಿದೆ. ಹಳದಿ ಬಣ್ಣದ ಬಾಕ್ಸ್​ ಒಳಗೆ ಮೆಸ್ಸಿ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೀಡಿ, ತಂಬಾಕು ಪದರಗಳಿಂದ ತುಂಬಿದ ತೆಳುವಾದ ಸಿಗರೇಟ್​ ಮತ್ತು ಸಾಮಾನ್ಯವಾಗಿ …

Read More »

ಡಿಸೆಂಬರ್‌ ವರೆಗೆ ತಾ. ಪಂ, ಜಿ.ಪಂ ಚುನಾವಣೆ ಇಲ್ಲ: ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್‌ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ …

Read More »

ನಳಿನ್ ಕುಮಾರ್ ಕಟೀಲ್ ನೇರ ಚರ್ಚೆಗೆ ಬರಲಿ: ಡಿ ಕೆ ಶಿವಕುಮಾರ್ ಸವಾಲು

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನುಡಿದಂತೆ ನಡೆದಿದ್ದಾರೆ, ಮಾತು ತಪ್ಪಿಲ್ಲ. ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧ ಪ್ರವೇಶ ಮಾಡಿದ್ದ ಅವರು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪೈಕಿ ಶೇ.99ರಷ್ಟು ಕೆಲಸ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಕಿದ್ದರೆ ಈ ಬಗ್ಗೆ ನೇರ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಹ್ವಾನ ನೀಡಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ …

Read More »

ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ 30 ಕೋಟಿ ರೂ. ಗೆ ಅನುಮೋದನೆ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಕಾಮಗಾರಿ, ಲ್ಯಾಬರೇಟರಿ, ಚಿಕಿತ್ಸಾ ಯಂತ್ರೋಪಕರಣಗಳು ಸೇರಿದಂತೆ ಅವಶ್ಯಕ ಸೌಕರ್ಯ ಪೂರ್ಣಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರೂ.30 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ವಲಯವಾರು ಪ್ರಾದೇಶಿಕ ಅಸಮತೋಲನೆ ಕುರಿತು ಡಾ.ನಂಜುಂಡಪ್ಪನವರ ವರದಿ ಅನ್ವಯ 2009ರಲ್ಲಿಯೇ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ರೂ.50 ಕೋಟಿಗೆ ಅಂದು …

Read More »

ರಸ್ತೆಯಲ್ಲೇ ಚಾಕಲೇಟ್‌ ಎಸೆದ ವ್ಯಾಪಾರಿ ..!

ಕಾರವಾರ: ಸಗಟು ವ್ಯಾಪಾರಿಯೊಬ್ಬರು ಒಬ್ಬರು ಕ್ವಿಂಟಾಲ್ ಗೂ ಹೆಚ್ಚು ತೂಕದ ಚಾಕ್ಲೇಟ್ ಅನ್ನು ರಸ್ತೆಯಲ್ಲಿ ಎಸೆದು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಡ್ಲಮನೆ ರಸ್ತೆಯಲ್ಲಿ ನಡೆದಿದೆ. ಕ್ಯಾಂಡಿ ಕಂಪನಿಗೆ ಸೇರಿದ ವಿವಿಧ ಬಗೆಯ ಪ್ಲೇವರ್ ಹೊಂದಿದ ಚಾಕ್ಲೇಟ್ ಇದಾಗಿದ್ದು ಕೊರೊನಾ ಲಾಕ್ ಡೌನ್ ನಿಂದ ಈ ಕಂಪನಿಯ ಚಾಕ್ಲೇಟ್ ಗಳು ಮಾರುಕಟ್ಟೆಯಲ್ಲಿ ಮಾರಾಟವಾಗಿಲ್ಲ. ಈ ಕಾರಣದಿಂದ ಇದರ ಅವಧಿ ಮುಗಿದಿದ್ದು, ಕಂಪನಿಯ ಡೀಲರ್ ನಗರಸಭೆಯ ಕಸ …

Read More »

ಬಾಲಕಿಯನ್ನು ಕಾಪಾಡಲು ಹೋದವರನ್ನು ಒಬ್ಬರ ಹಿಂದೆ ಒಬ್ಬರಂತೆ ಹೊತ್ತೊಯ್ದ ಜವರಾಯ..!

ಚೆನ್ನೈ: ಅವರೆಲ್ಲರೂ ಒಂದೇ ಗ್ರಾಮಕ್ಕೆ ಸೇರಿದವರು. ಎಲ್ಲರೂ ಒಟ್ಟಿಗೆ ತಮ್ಮ ಗ್ರಾಮದ ದೇವಸ್ಥಾನದ ಬಳಿಯಿರುವ ಕೆರೆಗೆ ಮಕ್ಕಳ ಜತೆಯಲ್ಲಿ ತೆರಳಿದ್ದರು. ಮಕ್ಕಳೆಂದ ಮೇಲೆ ಅಲ್ಲಿ ತುಂಟಾಟ, ಕಿತ್ತಾಟ ಇದ್ದೇ ಇರುತ್ತದೆ. ಮಹಿಳೆಯರು ನದಿಯಲ್ಲಿ ಬಟ್ಟೆ ಹೊಗೆಯುತ್ತಿರಬೇಕಾದರೆ ಮಕ್ಕಳು ನೀರಿನಲ್ಲಿ ಆಟವಾಡುತ್ತಿದ್ದರು. ಹೀಗಿರುವಾಗ ಬಾಲಕಿಯೊಬ್ಬಳು ನೀರಿನಲ್ಲಿ ಸಿಲುಕಿಕೊಂಡಾಗ ಆಕೆಯ ರಕ್ಷಣೆಗೆ ಹೋದ ಐವರು ನೀರುಪಾಲಾಗಿರುವ ದುರಂತ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ಬುಧವಾರ ನಡೆದಿದೆ. ಮೃತರನ್ನು ರಾಜು ಪತ್ನಿ ಸುಮತಿ (35), ಮಗಳು …

Read More »

ಮಗು ಹೆಣ್ಣಾಗಿದ್ದಕ್ಕೆ ದೇವಾಲಯದಲ್ಲೇ ಬಿಟ್ಟು ನಡೆದ ಪೋಷಕರು

ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ …

Read More »

ಹನಿಟ್ರ್ಯಾಪ್ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿ; ಪ್ರಾಧ್ಯಾಪಕರೊಬ್ಬರಿಗೆ ಹನಿಟ್ರ್ಯಾಪ್ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹುಬ್ಬಳ್ಳಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರೋಪಿಗಳಾದ ಯುವತಿ ಅನಘಾ, ಗಣೇಶ್ ಶೆಟ್ಟಿ, ರಮೇಶ್ ಹಜಾರೆ, ವಿನಾಯಕ ಹಜಾರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಕಾಲೇಜು ಕಾರ್ಯಕ್ರಮವೊಂದಕ್ಕೆ ಬಂದಿದ್ದ ಯುವತಿ ಹಾಗೂ ಗ್ಯಾಂಗ್ ಪ್ರಾಧ್ಯಾಪಕರೊಬ್ಬರನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿತ್ತು. ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಅವರಿಂದ 5 ಲಕ್ಷ …

Read More »

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:   ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …

Read More »