Breaking News
Home / 2021 / ಜುಲೈ / 16 (page 2)

Daily Archives: ಜುಲೈ 16, 2021

ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಗಮನಿಸಿ: ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ಶಾಲೆ ಎದುರು ವಿದ್ಯಾರ್ಥಿ, ಕುಟುಂಬದವರಿಂದ ಧರಣಿ

ಬಾಗಲಕೋಟೆ: ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್​ ಟಿಕೆಟ್​​ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ವಿದ್ಯಾರ್ಥಿ …

Read More »

ಮಳೆರಾಯನ ಅಬ್ಬರ- ಕೃಷ್ಣಾ ನದಿ ನೀರಿನಲ್ಲಿ ಏರಿಕೆ, ಸೇತುವೆ ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ಆರಂಭವಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿ ಸೇತುವೆಗಳು ಜಲಾವೃತವಾಗಿದೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಕೃಷ್ಣಾ ನದಿಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದ ಪರಿಣಾಮ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಯ ಕಲ್ಲೋಳ – ಯಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಸದ್ಯ 56 ಸಾವಿರ ಕ್ಯೂಸೇಕ್ ನಷ್ಟು …

Read More »

ಸಿಡಿ ಪ್ರಕರಣ ಎಸ್ಐಟಿ ತನಿಖಾ ವರದಿ ರೆಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಲಾಗಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.   ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ …

Read More »

ಪೊಲೀಸರ ಎಷ್ಟೇ ಎಚ್ಚರಿಕೆ ನೀಡಿದ್ರು ಬಗ್ಗದ ರೌಡಿಗಳು: 10ಕ್ಕೂ ಹೆಚ್ಚು ಕಾರುಗಳು ಧ್ವಂಸ

ಬೆಂಗಳೂರು :ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದ್ರು ಕೂಡ ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ.. ಕುರುಬರಹಳ್ಳಿಯ ಪೈಪ್ ಲೈನ್ ರಸ್ತೆಯಲ್ಲಿ ಪುಂಡರು ಮತ್ತೆ ಬಾಲಬಿಚ್ಚಿದ್ದಾರೆ. ಅಪಾರ್ಟ್ ಮೆಂಟ್ ಎದುರು ನಿಲ್ಲಿಸಿದ್ದ 10ಕ್ಕೂ ಹೆಚ್ಚು ಕಾರುಗಳು ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ತಡರಾತ್ರಿ 1.30ರ ಸುಮಾರಿಗೆ ಬಂದ ಮೂವರು ಕಿಡಿಗೇಡಿಗಳಿಂದ ಕೃತ್ಯ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಬಸವೇಶ್ವರ ನಗರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಓರ್ವ ಆರೋಪಿಯನ್ನ ಬಂಧಿಸಿದ್ದಾರೆ.. …

Read More »

ಚಾಲೆಂಜಿಂಗ್ ಸ್ಟಾರ್ ವಿರುದ್ಧ ಗಂಭೀರ ಆರೋಪ: ಇಂದ್ರಜಿತ್ ನಿವಾಸಕ್ಕೆ ಭದ್ರತೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ಹಾಕಲಾಗಿದೆ. ನಟ ದರ್ಶನ್ ನಿರ್ಮಾಪಕ, ಆಪ್ತ ಸಂದೇಶ್ ನಾಗರಾಜ್ ಅವರ ದಿ ಪ್ರಿನ್ಸ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಅಂತ ಇಂದ್ರಜಿತ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದ್ರಜಿತ್ ಅವರ ಕೋರಮಂಗಲದ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆ ನೀಡಲಾಗಿದೆ. ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ. …

Read More »

ಆರ್‌ಟಿಐ ಕಾರ್ಯಕರ್ತ ಶ್ರೀಧರ್ ಹತ್ಯೆ

ಹರಪನಹಳ್ಳಿ: ಪಟ್ಟಣದ ಆರ್‌ಟಿಐ ಕಾರ್ಯಕರ್ತ ಟಿ.ಶ್ರೀಧರ್ (38) ಅವರನ್ನು ಗುರುವಾರ ಸಂಜೆ ಮಾರಕಾಸ್ತ್ರಗಳೊಂದಿಗೆ ಬಂದ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿ, ಪರಾರಿಯಾಗಿದೆ. ಎಡಿಬಿ ಕಾಲೇಜಿನ ಆವರಣದ ಸೈಕಲ್ ಪಾರ್ಕಿಂಗ್ ಸ್ಥಳದಲ್ಲಿ ತಾತ್ಕಾಲಿಕವಾಗಿ ತೆರೆದಿದ್ದ ಕ್ಯಾಂಟೀನ್ ಹಿಂಭಾಗದಲ್ಲಿ ಶ್ರೀಧರ್ ಕುರ್ಚಿಯ ಮೇಲೆ ಕುಳಿತಿದ್ದಾಗ ಸಂಜೆ ವೇಳೆಯಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ನಾಲ್ವರು ದುಷ್ಕರ್ಮಿಗಳು, ತಲೆ, ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದು ಪರಾರಿಯಾದರು. ಕ್ಯಾಂಟೀನ್ ಒಳಗಡೆ ಟೀ ಮಾಡುತ್ತಿದ್ದವ ತಕ್ಷಣವೇ ಠಾಣೆಗೆ ಮಾಹಿತಿ ನೀಡಿದರು. …

Read More »

ಮೋದಿ, ಶಾ ಭೇಟಿಗಾಗಿ ಸಿಎಂ ಯಡಿಯೂರಪ್ಪ ದೆಹಲಿಗೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಶುಕ್ರವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಅವರು ದೆಹಲಿಗೆ ತೆರಳಲಿದ್ದಾರೆ. ಸಂಜೆ 7 ಕ್ಕೆ ಪ್ರಧಾನಿ ಮೋದಿಯವರು ಸಮಯ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಇದೇ ಸಂದರ್ಭದಲ್ಲಿ ಅವರು ಮೇಕೆದಾಟು ಸಮತೋಲನ ಅಣೆಕಟ್ಟೆ ಯೋಜನೆಗೆ ಅನುಮತಿ …

Read More »

ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ …

Read More »

ಮೆಟ್ರೋ ಕಾಮಗಾರಿ: 350 ಮರಗಳನ್ನು ಕಡಿಯಲು ಹೈಕೋರ್ಟ್ ಸಮ್ಮತಿ

ಬೆಂಗಳೂರು, ಜುಲೈ 16: ನಮ್ಮ ಮೆಟ್ರೋ ಕಾಮಗಾರಿಗಾಗಿ 350 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶದಿಂದಾಗಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಮಾರ್ಗ ಕಾಮಗಾರಿ ಪುನಾರಂಭವಾಗಲಿದೆ. ಆದರೆ ಷರತ್ತೊಂದನ್ನು ವಿಧಿಸಿತ್ತು, ಅದರ ಬದಲಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಸೂಚಿಸಲಾಗಿದೆ ನಾಗವಾರ-ಗೊಟ್ಟಿಗೆರೆ ಮಾರ್ಗದ ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿರುವ ಹೈಕೋರ್ಟ್, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್‌ಸಿಎಲ್‌ಗೆ …

Read More »

ಮಹಾ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮೊದಲ ಬಲಿ

ಕೊಡಗು : ಮಹಾ ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮಡಿಕೇರಿಯ ಆವಂದೂರು ಗ್ರಾಮದ ಕಿರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ. ಬಾಬಿ ಚಿಣ್ಣಪ್ಪ(70) ಮೃತರಾಗಿದ್ದಾರೆ. ಬಾಬಿ ಚಿಣ್ಣಪ್ಪ ನಿನ್ನೆ ಸಂಜೆ ಕಿರು ಹೊಳೆ ದಾಟುವಾಗ ಆಯತಪ್ಪಿ ಬಿದ್ದು, ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯಚರಣೆ ಮುಂದುವರೆಸಿದ್ದರು. ಆದ್ರೆ ಮಳೆ ಹೆಚ್ಚಾದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಇಂದು …

Read More »