Home / 2021 / ಜುಲೈ / 19 (page 4)

Daily Archives: ಜುಲೈ 19, 2021

ಬಕ್ರೀದ್‌; ಈದ್ಗಾ ಮೈದಾನಗಳಲಿ ಪ್ರಾರ್ಥನೆ ನಿಷೇಧ

ಹುಬ್ಬಳ್ಳಿ: ಕೋವಿಡ್‌ ಸೋಂಕು ತಗ್ಗಿದ್ದರೂ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕೆಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದರು. ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಶನಿವಾರ ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರ ಜೊತೆ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು. ಬಕ್ರೀದ್‌ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಸ್‌ ಮಾಡಬೇಕು. ಪ್ರಾರ್ಥನೆ ವೇಳೆ ಪ್ರತಿಯೊಬ್ಬರ ನಡುವೆ ಆರು ಅಡಿ ಸಾಮಾಜಿಕ ಅಂತರ ಇರಬೇಕು. ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ …

Read More »

ಭಾನುವಾರ ರಾತ್ರಿಯಿಂದ ಬುಧವಾರ ರಾತ್ರಿಯವರೆಗೆ ಪಶ್ಚಿಮ-ಉತ್ತರ ಭಾರತದಲ್ಲಿ ಭಾರಿ ಮಳೆ

ಪಶ್ಚಿಮ ಭಾರತದ ರಾಜ್ಯಗಳು ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಭಾನುವಾರ ರಾತ್ರಿಯಿಂದ ಬುಧವಾರ ರಾತ್ರಿಯವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಹಿತಕರ ಘಟನೆಗಳನ್ನು ಎದುರಿಸಲು ರಾಜ್ಯ ವಿಕೋಪ ನಿರ್ವಹಣಾ ಪಡೆಗಳು ಸಜ್ಜಾಗಿವೆ. ಗುರುವಾರದ ನಂತರ ಮಧ್ಯ ಭಾರತ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಹವಾಮಾನ ಇಲಾಖೆ ಹೇಳಿದೆ -ದೆಹಲಿ ಮತ್ತು ಚಂಡೀಗಡದಲ್ಲಿ ಸೋಮವಾರ ಭಾರಿ ಮಳೆಯಾಗುವ …

Read More »

ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ

ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುವ ಸದ್ದು ಕೇಳುತ್ತಿದೆ. ಆದರೆ ಜಲಪಾತವನ್ನು …

Read More »

ಸಂಸತ್ ಮುಂಗಾರು ಅಧಿವೇಶನ; ಚರ್ಚೆಗೆ ಸರ್ವಪಕ್ಷಗಳು ಅಣಿ

ನವದೆಹಲಿ, ಜುಲೈ 19: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸದ್ಯಕ್ಕೆ ದೇಶದಲ್ಲಿನ ಸಮಸ್ಯೆಗಳಾದ ಇಂಧನ ಬೆಲೆ ಏರಿಕೆ, ಕೊರೊನಾ ನಿರ್ವಹಣೆ, ರೈತರ ಪ್ರತಿಭಟನೆ, ಲಸಿಕೆಯ ಕೊರತೆಯಂಥ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆಯಿದೆ. ಜುಲೈ 19ರಿಂದ 17ನೇ ಲೋಕಸಭೆಯ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಆಗಸ್ಟ್‌ 13ರಂದು ಮುಕ್ತಾಯವಾಗಲಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆದ ನಂತರ ನಡೆಸಲಾಗುತ್ತಿರುವ ಮೊದಲ ಮುಂಗಾರು ಅಧಿವೇಶನ ಇದಾಗಿದೆ. ಕಳೆದ …

Read More »

ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ?

ಬೆಂಗಳೂರು : ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಆಗಸ್ಟ್‌ ಮೊದಲ ವಾರದಲ್ಲಿ ನಡೆಸಲು ಸರಕಾರ ಚಿಂತನೆ ನಡೆಸಿದೆ. ಈ ಕುರಿತು ಸಿಎಂ ಯಡಿಯೂರಪ್ಪ ತಮ್ಮ ಆಪ್ತ ಸಚಿವರ ಜತೆಗೆ ಸಮಾಲೋಚನೆ ನಡೆಸಿದ್ದು, ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನವನ್ನೇ ನಡೆಸಿಲ್ಲ. ಹೀಗಾಗಿ ಈ ಬಾರಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವ ಮೂಲಕ ಉತ್ತರ ಕರ್ನಾಟಕ …

Read More »

ಸಿಎಂ ಬದಲಾವಣೆ ನಿಶ್ಚಿತ, ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಕೂಡ ಹೊರಕ್ಕೆ – ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ,ಈಶ್ವರಪ್ಪ  ಅವರನ್ನು ಕೂಡ ಹೊರಗಿಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಬಹಿರಂಗವಾಗಿದೆ. ತಮ್ಮ ಅಪ್ತರ ಬಳಿ ತುಳು ಭಾಷೆಯಲ್ಲಿ ಮಾತುಕತೆ ನಡೆಸಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು, ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ …

Read More »