Breaking News
Home / 2021 / ಜುಲೈ / 21 (page 3)

Daily Archives: ಜುಲೈ 21, 2021

ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ದಾರುಣ ಸಾವು

ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಮೂಲದ ಕಾವ್ಯ (19) ಹಾಗೂ ವೇಣುಗೋಪಾಲ್ (22) ಮೃತರು. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿದ್ದ ಮನೆ ಮೇಲೆ ಕುಸಿದಿದ್ದು, ಘಟನೆಯಲ್ಲಿ ಸಂಪ್ರಥ್ (22) ಎಂಬ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ …

Read More »

ಬುಧವಾರ ಬೆಳಿಗ್ಗೆ ದೇಶದ ಹಲವೆಡೆ ಲಘು ಭೂಕಂಪ

ನವದೆಹಲಿ: ಬುಧವಾರ ಬೆಳಗಿನ ಜಾವ ದೇಶದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ರಾಜಸ್ಥಾನದ ಬಿಕಾನೆರ್‌ನಲ್ಲಿ 5.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದು ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ವೀಕ್ಷಣಾ ಕೇಂದ್ರದ (ಎನ್‌ಸಿಎಸ್‌) ಪ್ರಕಾರ, ಬಿಕಾನೆರ್‌ನಲ್ಲಿ ಬೆಳಗಿನ ಜಾವ 5:24ಕ್ಕೆ ಭೂಕಂಪ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಸಾವು-ನೋವು ಅಥವಾ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ. ಮೇಘಾಲಯದ ಪಶ್ಚಿಮ ಗಾರೊ ಹಿಲ್ಸ್‌ ಮತ್ತು ಲಡಾಖ್‌ ಪ್ರದೇಶಗಳಲ್ಲಿ ಕ್ರಮವಾಗಿ ಬೆಳಗಿನ ಜಾವ 2:10 ಮತ್ತು …

Read More »

ರಾಜ್ಯದ 27 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು – ರಾಜ್ಯದ 27 ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜುಲೈ 22ರ ವರೆಗೆ ವರ್ಗಾವಣೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ವಲಯಾರಣ್ಯಾಧಿಕಾರಿಗಳ ವರ್ಗಾವಣೆ ವಿವರ ಇಲ್ಲಿದೆ –

Read More »

ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಬೆಳಗಾವಿ: ಶಿಶು ಅಭಿವೃದ್ಧಿ ಇಲಾಖೆಯ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಖಾಲಿ ಇರುವ ನಗರ ಪ್ರದೇಶಗಳಲ್ಲಿ ಅದೇ ವಾರ್ಡಿನ ಇಚ್ಛೆಯುಳ್ಳ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ: anganwadiruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಜು.14 ರಿಂದ ಅಗಸ್ಟ್ 14 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲ ಭವನ ಕಟ್ಟಡ, …

Read More »

ರಾಜಾಹುಲಿ ಯನ್ನಾ ಸಿ ಎಂ ಸ್ಥಾನದಿಂದ ಇಳಿಸಿ ಬೆಳಗಾವಿ ಯವರೆ ಆಗ್ತಾರಾ ಮುಂದಿನ ಸಿ ಎಂ..?

ಈಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಿರುಗಾಳಿ ಬೀಸುತ್ತಿದೆ‌.ಜುಲೈ 26 ಕ್ಕೆ ಸಿಎಂ ಬದಲಾವಣೆ ಖಚಿತ ಎಂದು ಬಿಜೆಪಿಯ ಕೆಲವು ನಾಯಕರು ತಮ್ಮ ಆಪ್ತರ ಬಳಿ ಹೇಳಿಕೊಳ್ಳುತ್ತಿದ್ದಾರೆ.ಹಾಗಾದ್ರೆ ಮುಂದಿನ ಮುಖ್ಯಮಂತ್ರಿ ಯಾರು ? ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿದೆ.ಈ ಕುರಿತು ದೃಶ್ಯಮಾದ್ಯಮಗಳಲ್ಲಿ ಕ್ಷಣಕ್ಕೊಂದು ಬ್ರೇಕಿಂಗ್ ಸುದ್ಧಿ ಪ್ರಕಟವಾಗುತ್ತಿದೆ. ಸಿಎಂ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಯಾರೂ ಬಹಿರಂಗವಾಗಿ ಹೇಳುತ್ತಿಲ್ಲ‌.ಆದ್ರೆ ಅವರ ಅಧಿಕಾರದ ಅವಧಿ ಜುಲೈ 26 ರರವೆಗೆ ಮಾತ್ರ ಎನ್ನುವ ಸುದ್ಧಿ ರಾಜ್ಯದ …

Read More »

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ. ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ …

Read More »

ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ; ಬಿಜೆಪಿ ಅಧ್ಯಕ್ಷ ಕಟೀಲ್, ಹಲವು ಶಾಸಕರು ಪಾರು

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಶಾಸಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಇದ್ದ ಕಾರಣ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ರನ್ ವೇ ನಲ್ಲಿ ನೀರು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಆಗದೆ, ಮತ್ತೆ ಹಾರಾಟ ನಡೆಸಿದೆ 25 ನಿಮಿಷದ ಹಾರಾಟದ ನಂತರ ವಿಮಾನ ಲ್ಯಾಂಡಿಂಗ್ ಆಗಿದ್ದು, ಈ ವೇಳೆಯಲ್ಲಿ ಪ್ರಯಾಣಿಕರು ಆತಂಕದಿಂದ ಕಣ್ಣೀರು ಹಾಕಿದ್ದಾರೆನ್ನಲಾಗಿದೆ. …

Read More »

KSRTC ಬಸ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ

ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಸಮೀಪ ಮಂಗಳವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಹಾಸನ ಮೂಲದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು …

Read More »

ನದಿಯಲ್ಲಿ ಹುಚ್ಚು ಸಾಹಸ; ಸೇತುವೆ ಕೆಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್

ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯ ರಭಸಕ್ಕೆ ಸೇತುವೆಯ ಕೆಳಗೆ ಟ್ರ್ಯಾಕ್ಟರ್ ಉರುಳಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗುಂಡಕಾನಾಳ ಗ್ರಾಮದ ಮಧುಗೌಡ ಪಾಟೀಲ ಅವರ ಎಂಬುವವರಿಗೆ ಸೇರಿದ್ದ ಟ್ರ್ಯಾಕ್ಟರ್ ಹಡಗಿನಾಳ ಮಾರ್ಗದಲ್ಲಿ ಡೋಣಿ ಸೇತುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೆಲಮಟ್ಟದ ಸೇತುವೆಯ ಮೇಲೆ ವಾಹನ ಚಲಾಯಿಸುತ್ತಿರುವಾಗ ಟ್ರ್ಯಾಕ್ಟರ್ ಸೇತುವೆಯ ಕೆಳಗೆ ಉರುಳಿದೆ. ತಾಳಿಕೋಟಿ ಪಟ್ಟಣದಿಂದ ಮೂಕಿಹಾಳ ಗ್ರಾಮದತ್ತ ಹೊರಟಿದ್ದ ಟ್ರ್ಯಾಕ್ಟರ್ ಡೋಣಿ ನದಿಯ ಮೇಲೆ ಪ್ರವಾಹದ ನೀರು ಇದ್ದರೂ …

Read More »

ಅಪ್ಪ ಅಮ್ಮನ ಜೊತೆಗೆ ಖುಷಿ ಖುಷಿಯಾಗಿ ಮಾತನಾಡಿದ್ದ ಯೋಧ ಮಾತನಾಡಿದ ಒಂದೇ ಗಂಟೆಯಲ್ಲಿ ಯೋಧನ ಹುತಾತ್ಮನಾದ ಸುದ್ದಿ ಬರಸಿಡಿಲಂತೆ ಬಡಿದಿದೆ.

ಗದಗ: ಆತ 12 ವರ್ಷಗಳಿಂದ ಸೈನಿಕನಾಗಿ ದೇಶ ಕಾಯ್ತಿದ್ದ. ಒಂದು ತಿಂಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದ. ಬಳಿಕ ಮೇಲಾಧಿಕಾರಿಗಳ ಕರೆ ಮೇಲೆ ಮತ್ತೆ ಸೇವೆಗೆ ಹಾಜರಾದ. ಆದ್ರೆ ಬೆಳಿಗ್ಗೆ ಅಪ್ಪ ಅಮ್ಮನ ಜೊತೆಗೆ ಖುಷಿ ಖುಷಿಯಾಗಿ ಮಾತನಾಡಿದ್ದ ಯೋಧ ಮಾತನಾಡಿದ ಒಂದೇ ಗಂಟೆಯಲ್ಲಿ ಯೋಧನ ಹುತಾತ್ಮನಾದ ಸುದ್ದಿ ಬರಸಿಡಿಲಂತೆ ಬಡಿದಿದೆ. ಇಂದು ಛತ್ತೀಸ್​ಘಡದಲ್ಲಿ ಗದಗ ಮೂಲದ ಯೋಧ ಹುತಾತ್ಮನಾಗಿರೋ ಸುದ್ದಿ ತಿಳಿದು ಗೊಜನೂರು ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. …

Read More »