Breaking News

Daily Archives: ಜುಲೈ 23, 2021

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು, ಜು. 23: ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ. 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸಂಬಂಧಿಸಿದ ಸಚಿವರುಗಳಿಗೆ ದೂವರಾಣಿ ಕರೆ ಮಾಡಿ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರು ನಗರ ಪ್ರದಕ್ಷಿಣೆ …

Read More »

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ದ ಸುಳ್ಳು ಸುದ್ದಿ ಪ್ರಸಾರಿಸದಂತೆ ಟಿವಿ 5 ಚಾನೆಲ್‌ ಗೆ ನ್ಯಾಯಾಲಯ ಆದೇಶ

ಆನೇಕಲ್‌ ; ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಯಾವುದೇ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಟಿವಿ 5 ಕನ್ನಡಕ್ಕೆ ಆನೇಕಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಸುದ್ದಿ ವಾಹಿನಿ ಟಿವಿ 5 ಮುಂದಿನ ಆದೇಶದವರೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಯಾವುದೇ ಚಾರಿತ್ರ್ಯವಧೆ ಅಥವಾ ಮಾನಹಾನಿಕರ ವರದಿಯನ್ನು ತಮ್ಮ ಸುದ್ದಿಸರಣಿಯಲ್ಲಿ ಅಥವಾ ʼಆರ್ ವೀ ಸ್ಟುಪಿಡ್ʼ ಕಾರ್ಯಕ್ರಮದಲ್ಲಿ ಪ್ರಸಾರ ಮಾಡದಂತೆ ಆನೇಕಲ್‌ ನ ನ್ಯಾಯಾಲಯವೊಂದು ಇತ್ತೀಚೆಗೆ …

Read More »

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ …

Read More »

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ

ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …

Read More »

ಧಾರವಾಡದಲ್ಲಿ ಅಬ್ಬರದ ಮಳೆಗೆ ಜನ ತತ್ತರ: ಹಳ್ಳ – ಕೊಳ್ಳ, ಕೆರೆ ಕೋಡಿ ಒಡೆದು ಆತಂಕ ಸೃಷ್ಟಿ

ಹುಬ್ಬಳ್ಳಿ (ಜು. 23): ಕೆಲ ದಿನಗಳಿಂದ ತಣ್ಣಗೆ ಸುರಿಯುತ್ತಿದ್ದ ಮಳೆ ಇಂದು ಏಕಾಏಕಿ ಅಬ್ಬರಿಸಿದೆ. ರಾತ್ರಿಯಿಂದಲೂ ಧಾರವಾಡ ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹುಬ್ಬಳ್ಳಿ ಸಮೀಪದ ಬೆಣ್ಣೆ ಹಳ್ಳ, ಕಲಘಟಗಿ ತಾಲೂಕಿನ ಬೇಡ್ತಿ ಹಳ್ಳ ಉಕ್ಕಿ ಹರಿಯುತ್ತಿದ್ದು, ಹಲವು ರಸ್ತೆಗಳು ಸಂಪೂರ್ಣ ಬಂದ್ ಆಗಿವೆ. ಕೆಲವೆಡೆ ಕೆರೆಗಳು ಒಡೆದು, ಜಮೀನಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯ ಭೀತಿ ಸೃಷ್ಟಿಯಾಗಿದೆ. ಹುಬ್ಬಳ್ಳಿ ಸುತ್ತಮುತ್ತಲಿನ …

Read More »

ಮಹಾರಾಷ್ಟ್ರದಲ್ಲಿ ‘ಮಹಾ’ ಪ್ರವಾಹ – ಸೂಕ್ಷ್ಮ ಪ್ರದೇಶಗಳಲ್ಲಿನ ಜನರ ಸ್ಥಳಾಂತರ..!

ಮುಂಬೈ : ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ.. ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ …

Read More »

ಭಾರಿ ಮಳೆ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಪುಣೆ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ರಸ್ತೆಗಳು ಜಲಾವೃತಗೊಂಡಿರುವುದರಿಂದ, ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಕೊಲ್ಹಾಪುರದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲೆಯ ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿನ ಸಂಚಾರ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಕೊಲ್ಹಾಪುರದ ಜಿಲ್ಲಾ …

Read More »

ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ ಮಾಡಿ, ಮಳೆಯಿಂದ ಆಗಿರುವ ಅನಾಹುತಗಳನ್ನು, ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ, ಜನರ ಸಮಸ್ಯೆಗಳನ್ನು ಆಲಿಸಿ,ಸಮಸ್ಯೆ ಗಳನ್ನು ಸ್ಥಳದಲ್ಲೇ …

Read More »

ಬೆಳಗಾವಿ: ಕುಡಚಿ-ಉಗಾರ ಸೇತುವೆಯಲ್ಲಿ ಸಂಚಾರ ಬಂದ್

ಬೆಳಗಾವಿ: ರಾಯಬಾಗ ತಾಲ್ಲೂಕಿನಾದ್ಯಂತ ಶನಿವಾರವೂ ಜಿಟಿಜಿಟಿ ಮಳೆ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಾಗಿ ಕೃಷ್ಣಾ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದಾಗಿ, ರಾಯಬಾಗ ತಾಲ್ಲೂಕಿನ ಕುಡಚಿ-ಉಗಾರ ಸೇತುವೆ ಮುಳುಗಡೆಯಾಗಿದ್ದು, ನೆರೆಯ ಮಹಾರಾಷ್ಟ್ರ ರಾಜ್ಯದ ಸಂಪರ್ಕ ಕಡಿತಗೊಂಡಿದೆ. ಕುಡಚಿ ಸೇತುವೆ ಮೇಲೆ ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು, ವ್ಯಾಪಾರಿಗಳು, ಮೀರಜ್‌ ಆಸ್ಪತ್ರೆಗೆ ಹೋಗುವವರು ತೊಂದರೆ ಅನುಭವಿಸುವಂತಾಗಿದೆ. ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರಮುಖ …

Read More »

ಧುಮ್ಮಿಕ್ಕಿ ಹರಿದ ದೂಧಸಾಗರ ಜಲಪಾತ : ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತ

ಪಣಜಿ: ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾದ ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು ಈ ಭಾಗದಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತಗೊಂಡಿದೆ. ಗೋವಾದ ದೂಧಸಾಗರ ಜಲಪಾತದ ಬಳಿ ಭಾರಿ ಪ್ರಮಾಣದಲ್ಲಿ ಮಂಜುಗಟ್ಟಿದ್ದು ಶುಕ್ರವಾರ ಬೆಳಿಗ್ಗೆ ಬೆಳಗಾವಿ -ವಾಸ್ಕೊಡಗಾಮಾ ರೈಲು ಸಂಚಾರ ಜಲಪಾತದ ಬಳಿಯೇ ಸ್ಥಗಿತಗೊಂಡಿದೆ. ಕೊಂಕಣ ರೈಲು ಹಳಿಗಳ ಮೇಲೆ ಮಳೆಗೆ ಗುಡ್ಡ ಕುಸಿತವುಂಟಾಗಿರುವುದರಿಂದಲೂ ಮುಂಬಯಿ ಮತ್ತು …

Read More »