Daily Archives: ಜುಲೈ 24, 2021

ಜಾರಕಿಹೊಳಿಹೆಬ್ಬಾಳಕರ್ ಪ್ರವಾಹ ಪೀಡಿತ ಜನರ ಸಂಕಷ್ಟಕ್ಕೆ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕಡಿಮೆ, ರಾಜಕೀಯ ಜಾಸ್ತಿ

ಬೆಳಗಾವಿ – ​ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಆದೇಶದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದ ಕಾಂಗ್ರೆಸ್ ಕಾಂಗ್ರೆಸ್ ನಿಯೋಗ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ. ಶನಿವಾರ ಹುಕ್ಕೇರಿ, ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿದ್ದ ನಿಯೋಗ ಭಾನುವಾರ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಿಗೆ ಭೇಟಿ ನೀಡಲಿದೆ. ಈ ವೇಳೆ ಹುಕ್ಕೇರಿಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, ಸರಕಾರ ತಕ್ಷಣ ಜನರ …

Read More »

ಯಡಿಯೂರಪ್ಪ ಬದಲಾವಣೆ ವಿರೋಧಿಸಿ ಚಿಂಚೋಳಿಯಲ್ಲಿ ಪ್ರತಿಭಟನೆ

ಚಿಂಚೋಳಿ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡೋದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ನಿರ್ಧಾರ ವಿರೋಧಿಸಿ ಚಿಂಚೋಳಿಯಲ್ಲಿ ವೀರಶೈವ ಲಿಂಗಾಯತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರೂ ಭಾಗವಹಿಸಿದ್ದು, ವಿಶೇಷವಾಗಿತ್ತು. ಈ ಪ್ರತಿಭಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಬಸವೇಶ್ವರ ಸೇವಾ ಸಮಿತಿ ಆಯೋಜಿಸಿತ್ತು. ಸಮಾಜದ …

Read More »

ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಚೂರಿ ಹಾಕಲು ಸಾಧ್ಯವೇ?’ ಎಂದು ಕೇಳಿದರು. ‘ಯಾರನ್ನು ಬೆಳೆಸಿದರೋ, ಯಾರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರೋ ಅವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿದರು. ‘2019ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಪರಿಹಾರ …

Read More »

ಸಿ.ಎಂ. ಬದಲಾವಣೆ; ಕಾದು ನೋಡಬೇಕಿದೆ: ಶೆಟ್ಟರ್

ಹುಬ್ಬಳ್ಳಿ: ‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಸ್ಪಷ್ಟತೆಯಿಲ್ಲ. ಕಾದು ನೋಡಬೇಕಿದೆ’ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈಗಾಗಲೇ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆ‌ ನೀಡಿದ್ದಾರೆ. ನನಗೆ ಆ ಕುರಿತು ಯಾವುದೇ ಮಾಹಿತಿ ಇಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಲು ನಾನು ದೆಹಲಿಗೆ ಹೋಗಿಲ್ಲ. ಇಲಾಖೆ ವಿಚಾರಕ್ಕೆ ಸಂಬಂಧಿಸಿ ಗುಜರಾತ್-ದೆಹಲಿ ಭೇಟಿ ಮಾಡಿದ್ದೆ’ ಎಂದು ಸ್ಪಷ್ಟಪಡಿಸಿದರು. …

Read More »

ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕವರ್ ಕಾಣಿಕೆಯನ್ನ ತಿರಸ್ಕರಿಸಿದ್ದೆ: ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರು ಕವರ್ ಪಡೆದ ವಿಚಾರಕ್ಕೆ ಸಂಬಂಧಿಸಿ ಕವರ್ನಲ್ಲಿ ಏನಿತ್ತೆಂದು ಗೊತ್ತಿಲ್ಲ ಅಂತ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪುರಾಣ ಪುಸ್ತಕವಿತ್ತೋ, ವಚನ ಪುಸ್ತಕವಿತ್ತೋ ಗೊತ್ತಿಲ್ಲವೆಂದು ಹೇಳಿಕೆ ನೀಡಿದ ಸ್ವಾಮೀಜಿ, ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕಾಣಿಕೆ ತಿರಸ್ಕರಿಸಿದ್ದೆ. ಈಗ ಸ್ವಾಮೀಜಿಗಳಿಗೆ ಕೊಟ್ಟಿದ್ದ ಕವರ್ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಒಬ್ಬರ ಪರವಾಗಿ ಸ್ವಾಮೀಜಿಗಳು ಬ್ಯಾಟ್ ಬೀಸಿದ್ದು ಪ್ರಜಾಪ್ರಭುತ್ವದಲ್ಲಿ ಮಾರಕ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ …

Read More »

ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಮೊಟ್ಟೆ ಪ್ರೊಟೆಸ್ಟ್..!

ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಜೊಲ್ಲೆ ಪ್ರತಿಭಟನೆ ನೀಡಬೇಕೆಂದು ಬೀದಿಯಲ್ಲಿ ನಿಂತು ಒತ್ತಾಯ ಹಾಕಿದ್ರು. ಆ ಬಳಿಕ ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಘಟನೆ ಏನು..? ಅಂಗನವಾಡಿಗಳಲ್ಲಿ ಉಚಿತವಾಗಿ‌ ಮೊಟ್ಟೆ ಹಾಗೂ ಆಹಾರ ಪದಾರ್ಥಗಳನ್ನ ನೀಡಲಾಗುತ್ತದೆ. ಅದು ಮಕ್ಕಳು ಹಾಗೂ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ. ಆದ್ರೆ ಈ ಆಹಾರವೂ ಸಚಿವರ ಮಡಿಲಿಗೆ ಸೇರ್ತಾ ಇದೆ ಅನ್ನೋದೆ …

Read More »

ಮಳೆ ನಿಂತರೂ ಪ್ರವಾಹ ಭೀತಿ ಹೆಚ್ಚಳ

ಬೆಳಗಾವಿ: ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದೆ. ನದಿಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿರುವುದರಿಂದ ಮತ್ತು ಜಲಾಶಯಗಳಿಗೆ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ನದಿ ತೀರದ ಪ್ರವೇಶಗಳಲ್ಲಿ ಪ್ರವಾಹದ ಭೀತಿ ಜಾಸ್ತಿಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 2,24,435 ಕ್ಯುಸೆಕ್‌ ಹಾಗೂ ದೂಧ್‌ಗಂಗಾ ನದಿಯಿಂದ 51,920 ಕ್ಯುಸೆಕ್‌ ಸೇರಿ 2,72,295 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ದೂಧ್‌ಗಂಗಾ, ವೇದಗಂಗಾ ಮತ್ತು …

Read More »

ಬೆಳಗಾವಿಯಲ್ಲಿ ತಗ್ಗಿದ ಮಳೆ ಆರ್ಭಟ : ಕೊಂಚ ನಿಟ್ಟುಸಿರು ಬಿಟ್ಟ ನಿರಾಶ್ರಿತರು

ಬೆಳಗಾವಿ :ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟ ಪ್ರದೇಶಗಳನ್ನು ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅರ್ಭಟ ಅಲ್ಪಮಟ್ಟದಲ್ಲಿ ಕಡಿಯಾಗಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ 2 ಅಡಿ ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ವಸ್ತುಗಳನ್ನು ಕಳೆಕೊಂಡಿದ್ದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರದಲ್ಲಿ ಹಾಗೂ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಿರಣ್ಯಕೇಶಿ‌ …

Read More »

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲಘಿ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ: ನಿರಾಣಿ

ಕಲಬುರಗಿ,ಜು.24: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲಘಿ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನಗರದ ಐವಾನ್-ಈ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ವರಿಷ್ಠರ ಆದೇಶವನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಇಲ್ಲಿ …

Read More »

ಸಿಎಂ ರೇಸ್‌ನಲ್ಲಿ ನನ್ನ ಹೆಸರಿರುವುದು ಕೇವಲ ಮಾಧ್ಯಮಗಳ ಸೃಷ್ಟಿ : ಕೇಂದ್ರ ಸಚಿವ ಜೋಶಿ

ಧಾರವಾಡ: ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮತ್ತು ಹೈಕಮಾಂಡ ನಾಯಕರ ಮಧ್ಯೆ ಯಾವುದೊ ಮಾತುಕತೆ ನಡೆದಿರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆ ಆದರಿಸಿ ನಾನು ಹೇಳುವುದಾದರೆ, ಬಿಎಸ್ವೈ ಮತ್ತು ಬಿಜೆಪಿ ಹೈಕಮಾಂಡ ಮಧ್ಯ ಏನೋ ಮಾತುಕತೆ ನಡೆದಿರಬಹುದು. ಆದರೆ ಅದು ಏನು ಎಂಬುದು ನನಗೂ ಸಹ ಗೊತ್ತಿಲ್ಲ. …

Read More »