Breaking News

Daily Archives: ಜುಲೈ 25, 2021

ಸಂಸತ್ ಅಧಿವೇಶನ ಮುಗಿಯುವವರೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ನೇಮಕ ಇಲ್ಲ?

ಬೆಂಗಳೂರು, ಜು. 25: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಳೆ ಜುಲೈ 26ಕ್ಕೆ ಎರಡು ವರ್ಷ ತುಂಬುತ್ತಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರದ ಸಿಎಂ, ಸಚಿವರು ಅಥವಾ ಬಿಜೆಪಿ ಶಾಸಕರಲ್ಲಿ ಆ ಸಂತೋಷ ಕಾಣುತ್ತಿಲ್ಲ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ನಿರ್ಣಾಯಕ ದಿನ. ನಾಯಕತ್ವ ಬದಲಾವಣೆ ಕುರಿತು ಇಂದು ಬಿಜೆಪಿ ಹೈಕಮಾಂಡ್‌ನಿಂದ ಸೂಚನೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಬಿಜೆಪಿ ವಲಯವಿದೆ. ಹೀಗಾಗಿ ನಾಳೆಯ ಎರಡು ವರ್ಷಗಳ …

Read More »

ಬದಲಾವಣೆ ಡ್ರಾಮಾಗೆ ಟ್ವಿಸ್ಟ್: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

ಪಣಜಿ: ಕರ್ನಾಟಕ ಬಿಜೆಪಿಯ ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ದೊರೆತಿದೆ. ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪರನ್ನು ಹಾಡಿಹೊಗಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, “ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಉತ್ತಮವಾಗಿ ನಡೆಯುತ್ತಿದೆ. ಉಳಿದಂತೆ, ಯಡಿಯೂರಪ್ಪನವರು ಕೂಡ ಎಲ್ಲ ವಿಷಯಗಳನ್ನೂ ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ” ಎಂದರು. ರಾಜಕೀಯ ಅಸ್ಥಿರತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, …

Read More »

ಕೊಟ್ಟ ಕುದುರೆ ಏರಲಾಗದೆ ಬಿಜೆಪಿ ಮುಗ್ಗರಿಸಿದೆ: ಕಾಂಗ್ರೆಸ್ ಟೀಕೆ

ಬೆಂಗಳೂರು,ಜು.25: ಆಪರೇಷನ್ ಕಮಲದ ಅನೈತಿಕ ಕೂಸಾಗಿ ಹುಟ್ಟಿದ ಈ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಜನಪರ ಯೋಜನೆ ಘೋಷಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಡವರಿಗೆ ಆಸರೆಯಾಗಿದ್ದ ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಯೋಜನೆಗಳಿಗೆ ಅನುದಾನ ಕಡಿತ ಮಾಡಿದ್ದೇ ರಾಜ್ಯ ಬಿಜೆಪಿಯ ಸಾಧನೆ. 2 ವರ್ಷಗಳ ಆಡಳಿತವನ್ನು ಲೂಟಿ, ಕಿತ್ತಾಟಲ್ಲಿಯೇ ಕಳೆದರು. ಈ ಸುಧೀರ್ಘಅವಧಿಯಲ್ಲಿ ಬಿಜೆಪಿ ಜನತೆಗೆ ನರಕದ ಹಾದಿ ತೋರಿಸಿದೆ, ಕೊಟ್ಟ ಕುದುರೆ …

Read More »

ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಫ್ರಾರಂಭ

ನಿಖಿಲ್ ಕುಮಾರಸ್ವಾಮಿ ಅಭಿನಯದ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.   ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಕಶ್ಮೀರಾ ಪರದೇಶಿ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರೊಮ್ಯಾಂಟಿಕ್ ಆಕ್ಷನ್‌ ಎಂಟರ್ ಟೇನರ್ …

Read More »

ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜೆ.ಪಿ ನಡ್ಡಾ

ಬೆಂಗಳೂರು/ಗೋವಾ: ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಡ್ಡಾ, ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಯಡ್ಡಿಯವರ ಬೆನ್ನು ತಟ್ಟಿದ್ದಾರೆ. ಜುಲೈ 25 ಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಲ್ಲದೇ ಬೆಳಗಾವಿಯಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಸಂಜೆ ಹೈಕಮಾಂಡ್‌ನಿಂದ …

Read More »

ಹೈಕಮಾಂಡ್ ಸೂಚನೆ ಎಲ್ಲರೂ ಪಾಲಿಸಬೇಕು; ಬಿ.ಎಸ್.ವೈ.ಗೆ ಪರೋಕ್ಷ ಟಾಂಗ್ ನೀಡಿದ ಸಿ.ಟಿ. ರವಿ

ಪಣಜಿ: ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಹಲವು ಮಠಾಧೀಶರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿ.ಎಸ್.ವೈ.ಗೆ ರಾಜೀನಾಮೆ ಕುರಿತು ಸಲಹೆ ನೀಡಿದ್ದಾರೆ. ಗೋವಾದಲ್ಲಿ ಮಾತನಾಡಿದ ಸಿ.ಟಿ. ರವಿ, ಸಿಎಂ ಯಡಿಯೂರಪ್ಪ ಜನಪ್ರಿಯ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿ.ಎಸ್.ವೈ.ಗೆ ಪಕ್ಷ ಎಲ್ಲವನ್ನೂ ನೀಡಿದೆ. ವಿಪಕ್ಷ ನಾಯಕನಾಗಿ, …

Read More »

ನೊಂದ ಕುಟುಂಬಗಳಿಗೆ ಆಸರೆಯಾಗೋಣ: ರಾಹುಲ್ ಜಾರಕಿಹೊಳಿ ನಿರ್ಗತಿಕರ ಸಾತ್ವಾಂನ ಹೇಳಿದ ಯುವ ನಾಯಕ ರಾಹುಲ್

    ಗೋಕಾಕ: ರಣ ಭೀಕರ ಮಳೆಗೆ ಘಟಪ್ರಭಾ ನದಿಯ ತೀರದ   ಗ್ರಾಮಗಳು  ಪ್ರವಾಹಕ್ಕೆ ತುತ್ತಾಗಿದ್ದು, ಪ್ರವಾಹ  ಪೀಡಿತ ಗ್ರಾಮಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ, ರವಿವಾರ  ಪರಿಸ್ಥಿತಿ ಅವಲೋಕಿಸಿದರು.   ಅರಭಾವಿ ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ  ಅಡಿಬಟ್ಟಿ, ಚಿಗದೊಳ್ಳಿ,  ಜಾಕ್ವೆಲ್ ಗೌಡನ್ ಕ್ರಾಸ್ ಮೆಳವಂಕಿ,  ಕಲಾರ್ಕೊಪ್ಪ,  ಹಡಗಿನಾಳ,  ತಳಕಟ್ನಾಳ , ಉದಗಟ್ಟಿ  ಗ್ರಾಮದ ಗಂಜಿ ಕೇಂದ್ರಗಳಲ್ಲಿರುವ  ನಿರ್ಗತಿಕರನ್ನು ಭೇಟಿ ಮಾಡಿ, …

Read More »

ಸ್ಮರಣೀಯವಾಗಲಿದೆ ಜೋಗ ಜಲಪಾತ ವೀಕ್ಷಣೆ: ಯಡಿಯೂರಪ್ಪ

ಸಾಗರ: ಜೋಗ ಜಲಪಾತ ಪ್ರದೇಶದಲ್ಲಿ ₹ 180 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಭವಿಷ್ಯದಲ್ಲಿ ನೋಡುಗರ ಪಾಲಿಗೆ ಜೋಗ ಜಲಪಾತ ವೀಕ್ಷಣೆ ಸ್ಮರಣೀಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವರ್ಚುಯಲ್ ಮೂಲಕ ಶನಿವಾರ ಚಾಲನೆ ನೀಡಿ, ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ ಸ್ಥಾಪನೆಗೊಂಡಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೋಗ ಜಲಪಾತವನ್ನು ಸರ್ವಋತು ಜಲಪಾತವನ್ನಾಗಿ ರೂಪಿಸುವ ದೃಷ್ಟಿಯಿಂದ …

Read More »

ಸಿಎಂ ಬಿಎಸ್​ವೈ ಕಡೆಯಿಂದ ಕೊಡಲಾದ ಲಕೋಟೆ​ಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..

ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ …

Read More »

ಸಿಎಂ ಹುದ್ದೆ ಖಾಲಿ ಇಲ್ಲ : ಸಚಿವ ಜಗದೀಶ ಶೆಟ್ಟರ

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಯಾವುದೇ ಸೂಚನೆ ಬಂದಿಲ್ಲ. ಸಿಎಂ ಹುದ್ದೆ ಖಾಲಿ ಇಲ್ಲ. ಸದ್ಯ ಈ ವಿಷಯ ಅಪ್ರಸ್ತುತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿಂದು (ಜು.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ಯಾವ ನಿರ್ಧಾರ ಏನೆಂಬುದು ನಮಗೆ ಗೊತ್ತಿಲ್ಲ ಮತ್ತು ಈ ಬಗ್ಗೆ ಯಡಿಯೂರಪ್ಪ ಅವರಿಗೂ ಅವರಿಂದ ಸೂಚನೆ ಬಂದಂತಿಲ್ಲ. ಅವರ ಸೂಚನೆಯಂತೆ ನಡೆದುಕೊಳ್ಳುವೆ …

Read More »