Breaking News
Home / 2021 / ಜುಲೈ / 27 (page 3)

Daily Archives: ಜುಲೈ 27, 2021

ನೂತನ ಸಂಪುಟದಲ್ಲಿ ಹೊಸಬರಿಗೆ ಚಾನ್ಸ್, ಹಿರಿಯರಿಗೆ ಕೊಕ್, ವಲಸಿಗರಿಗೆ ಶಾಕ್..!

ಬೆಂಗಳೂರು,ಜು.27- ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಹಲವರಿಗೆ ನೂತನ ಸಂಪುಟದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ. ವಲಸಿಗರಿಗೂ ಇದೇ ಭೀತಿ ಎದುರಾಗಿದ್ದು, ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಹೊಸ ಮುಖ್ಯಮಂತ್ರಿ ನೇಮಕ ಮಾಡುವುದರ ಜೊತೆಗೆ ಹೊಸ ಸಂಪುಟ ರಚನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಭವಿಷ್ಯದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕ್ಯಾಬಿನೆಟ್ ರಚನೆಗೆ ಮುಂದಾಗಿರುವ ಹೈಕಮಾಂಡ್ ಈಗಾಗಲೇ ಆಯ್ಕೆಗೆ ಕೆಲ ಮಾನದಂಡಗಳನ್ನು ಹಾಕಿದೆ. ಸಂಪುಟ ಸೇರಲು ಕ್ಲೀನ್ ಇಮೇಜ್ ಹೊಂದಿರಬೇಕು. ಜಾತಿವಾರು, …

Read More »

ಬಿ.ಎಲ್.ಸಂತೋಷ್ ರಾಜ್ಯದ ಮುಂದಿನ ಮುಖ್ಯಮಂತ್ರಿ: ಬಿಜೆಪಿ ಮೂಲಗಳು.?

ಬೆಂಗಳೂರು; ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ತೀವ್ರಗೊಂಡಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಮುಂದಿನ ಮುಖ್ಯಮಂತ್ರಿ ಯಾರನ್ನ ಮಾಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ಇದ್ದು, ಇದಕ್ಕಾಗಿ ಧರ್ಮೇಂದ್ರ ಪ್ರಧಾನ್, ಕರ್ನಾಟಕ ಸಿಎಂ ಆಯ್ಕೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಆದರೆ, ವೀಕ್ಷಕರ ತಂಡ ರಾಜ್ಯಕ್ಕೆ ಆಗಮಿಸುವ ಮೊದಲೇ ಬಿಎಲ್ ಸಂತೋಷ್ …

Read More »

ಇಂದು ಯಾವುದೇ ಕಾರ್ಯಕ್ರಮ ನಿಗದಿ ಮಾಡಿಕೊಳ್ಳದ ಹಂಗಾಮಿ ಸಿಎಂ ಯಡಿಯೂರಪ್ಪ; ಗುಪ್ತಚರ ಇಲಾಖೆ ಮುಖ್ಯಸ್ಥರ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ಹಂಗಾಮಿ ಸಿಎಂ ಆಗಿ ಮುಂದುವರೆದಿರುವ ಬಿ.ಎಸ್.ಯಡಿಯೂರಪ್ಪ (BS Yediyurappa) ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲೇ ಉಳಿದುಕೊಂಡಿದ್ದಾರೆ. ಯಾವುದೇ ಸಭೆ, ಸಮಾರಂಭ, ಆಡಳಿತ ಸಂಬಂಧ ಕಾರ್ಯಕ್ರಮಗಳನ್ನು ನಿಗದಿಪಡಿಸಿಕೊಳ್ಳದ ಯಡಿಯೂರಪ್ಪ ರಾಜೀನಾಮೆ (Resign) ಬೆನ್ನಲ್ಲೇ ಮೌನವಾಗಿ ನಿವಾಸದಲ್ಲೇ ಉಳಿದಿದ್ದಾರೆ. ಏತನ್ಮಧ್ಯೆ, ಸಿಎಂ ಅಧಿಕೃತ ನಿವಾಸ ಕಾವೇರಿಗೆ ಗುಪ್ತಚರ ಇಲಾಖೆಯ ಮುಖ್ಯಸ್ಥ ದಯಾನಂದ್ ಭೇಟಿ ನೀಡಿ ಕೆಲಕಾಲ ಇದ್ದು ವಾಪಾಸ್ಸಾಗಿದ್ದಾರೆ. ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಗೆ …

Read More »

1 ವರ್ಷದಿಂದ ರಾಜೀನಾಮೆ ವದಂತಿ, ಈಗ ನಿಜ!

ಬೆಂಗಳೂರು(ಜು.27): ಕಳೆದ ಒಂದು ವರ್ಷದಿಂದ ರಾಜ್ಯ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದರೊಂದಿಗೆ ನಿಜವಾಗಿದೆ. * ಸರ್ಕಾರ ಅಸ್ತಿತ್ವಕ್ಕೆ ಬಂದ ದಿನವೇ ಯಡಿಯೂರಪ್ಪ ರಾಜೀನಾಮೆ * 1 ವರ್ಷದಿಂದ ರಾಜೀನಾಮೆ ವದಂತಿ, ಈಗ ನಿಜ * ಯತ್ನಾಳ್ ಆರೋಪದೊಂದಿಗೆ ಶುರುವಾದ ಸಿಎಂ ಬದಲು ಚರ್ಚೆ ಸರ್ಕಾರ ರಚನೆಯಾಗಿ 8-10 ತಿಂಗಳ ನಂತರ ಸಣ್ಣದಾಗಿ ಶುರುವಾದ ನಾಯಕತ್ವ ಬದಲಾವಣೆ ವಿಚಾರವನ್ನು ಯಡಿಯೂರಪ್ಪ ಅವರೊಂದಿಗೆ …

Read More »

ಛಲದಂಕಮಲ್ಲನ ಹೋರಾಟದ ಹಾದಿ

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಯಾ ಕಾಲಘಟ್ಟದಲ್ಲಿ ರಾಜ್ಯವನ್ನಾಳಿದ ನಾಯಕರು ತಮ್ಮದೇ ಆದ ಛಾಪು ಮೂಡಿಸಿದ್ದು, ಜನನಾಯಕ ರಾಗಿ, ಸಮುದಾಯದ ನಾಯಕರಾಗಿ ಗುರುತಿಸಿ ಕೊಂಡಿದ್ದು, ಇನ್ನೂ ರಾಜ್ಯದ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ತೆರೆಯ ಹಿಂದೆ ಸರಿಯುವ ಪ್ರಮುಖ ನಾಯಕರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬಂದಿದೆ. ಹೋರಾಟದಿಂದಲೇ ಅಧಿಕಾರಕ್ಕೆ ಬಂದು, ಅಧಿಕಾರ ನಡೆಸುವಾಗಲೂ ಹೋರಾಟ ನಡೆಸುತ್ತಲೇ ಅಧಿಕಾರ ನಡೆಸುವಂತಾಯಿತು. ಪ್ರತಿಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವಿರುದ್ದ …

Read More »

ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ

ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಪೊಲೀಸ್ ತರಬೇತಿ ಶಾಲೆ ಬಳಿಯ ಸೇತುವೆಯನ್ನು ವೀಕ್ಷಣೆ ಮಾಡಿ, ದುರ್ಗಾನಗರದಲ್ಲಿ ನೆರೆಯಿಂದ ಮುಳಗಡೆಯಾಗಿದ್ದ ಮನೆಗಳನ್ನು ವೀಕ್ಷಿಸಿದರು. ಈ ನಡುವೆ ನೆರೆ ಸಂತ್ರಸ್ತರ ಅಳಲನ್ನು ಆಲಿಸಿದರು. ಅಲ್ಲದೇ ಮಲಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆಗೂ ಭೇಟಿ ನೀಡಿದರು. ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿದ್ದರಾಮಯ್ಯ …

Read More »

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, ‘ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು’ ಎಂಬ ಪರಿಸ್ಥಿತಿಗೆ ಬಂದಿದೆ. ಇದರ ನಡುವೆ ಇಂದು (ಜು.27) ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ …

Read More »

ಹೆದರಿಸಿ ಯಡಿಯೂರಪ್ಪನವರ ರಾಜೀನಾಮೆ ಪಡೆಯಲಾಗಿದೆ: ಸಿದ್ದರಾಮಯ್ಯ ಟೀಕೆ

ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ರಾಜ್ಯದಲ್ಲಿ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ …

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ‘ಅಭಿನೇತ್ರಿ’: ನೇತ್ರದಾನ ಮಾಡಿದ ಜಯಂತಿ

ಕನ್ನಡದ ಲೆಜೆಂಡ್ ನಟಿ ಜಯಂತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ. ಇಹಲೋಕ ತ್ಯಜಿಸಿದ ಹಿರಿಯ ನಟಿ ಜಯಂತಿ ನೇತ್ರದಾನ ಮಾಡುವ ಮೂಲಕ ಮತ್ತಿಬ್ಬರ ಬದುಕಿನಲ್ಲಿ ಬೆಳಕಾಗಿದ್ದಾರೆ. ಅಂತ್ಯಕ್ರಿಯೆಗೂ ಮುಂಚೆ ನಟಿ ಜಯಂತಿ ಅವರ ಕಣ್ಣುಗಳನ್ನು ವೈದ್ಯರು ತೆಗೆದುಕೊಂಡಿದ್ದಾರೆ. ಅದಕ್ಕೂ ಮುಂಚೆ ಕುಟುಂಬಸ್ಥರ ಒಪ್ಪಿಗೆ ಪಡೆದುಕೊಂಡರು. ಇದರೊಂದಿಗೆ ಸತ್ತ ಮೇಲೂ ಒಂದೊಳ್ಳೆ ಕೆಲಸ ಮಾಡುವ ಮೂಲಕ ‘ಅಭಿನಯ ಶಾರದೆ’ ಮಾದರಿಯಾದರು. ಡಾ ರಾಜ್ ಕುಮಾರ್ ಜೊತೆ ನಟಿ …

Read More »

ಯಾರಾಗ್ತಾರೆ ರಾಜ್ಯ ದ ಮುಂದಿನ ಸಿಎಂ?..

ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಗಾದಿ ಎಂಬ ಕುತೂಹಲ ಈಗ ತೀವ್ರವಾಗಿದೆ. ಬಿಜೆಪಿ ಹೈಕಮಾಂಡ್‌ ಭಾಗವಾಗಿರುವ ನಾಯಕರು, ಹಿರಿಯ ಸಚಿವರು, ಶಾಸಕರು ಸೇರಿದಂತೆ ಹಲವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿವೆ. ಸಂಭವನೀಯರ ಪಟ್ಟಿಯಲ್ಲಿರುವರ ಸಾಮರ್ಥ್ಯ- ದೌರ್ಬಲ್ಯದ ಅಂಶಗಳೇನು ಎಂಬ ವಿವರ ಇಲ್ಲಿದೆ. ಪ್ರಲ್ಹಾದ ಜೋಶಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಉತ್ತರ ಕರ್ನಾಟಕದವರು, ಸಂಘ ಪರಿವಾರದ ನಿಷ್ಠಾವಂತ ಮತ್ತು ಪ್ರಧಾನಿ ಮೋದಿ ಅವರೊಂದಿಗಿನ ನಿಕಟ ಒಡನಾಟ ಇರುವುದು ವರದಾನವಾಗಬಹುದು. ವಿವಾದಗಳಿಲ್ಲ. …

Read More »