Breaking News

Daily Archives: ಜುಲೈ 29, 2021

ಹುಬ್ಬಳಿಗೆ ಬಂದ ಸಿಎಂ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಆರ್​​ಎಸ್​​ಎಸ್​ ಕಚೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದರು. ಮೊದಲ ಬಾರಿಗೆ ಹುಬ್ಬಳಿಗೆ ಬಂದ ಸಿಎಂಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಲಭಿಸಿತ್ತು. ಸಿಎಂ ಆದ ಬಳಿಕ ಮೊದಲ ಬಾರಿಗೆ ಹುಬ್ಬಳಿಗೆ ಆಗಮಿಸಿದ ಬೊಮ್ಮಾಯಿ ಅವರು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆರ್.ಎಸ್.ಎಸ್ ಕೇಶವ ಕುಂಜ ಕಚೇರಿಗೆ ಭೇಟಿ ನೀಡಿ ಸಂಘಟನೆಯ ಪ್ರಮುಖರೊಂದಿಗೆ ಚರ್ಚೆ ನಡೆಸಿದರು.   ತಂದೆ-ತಾಯಿ ಸಮಾಧಿಗೆ ಬೊಮ್ಮಾಯಿ …

Read More »

‘ಮಂತ್ರಿಗಿರಿ’ಗಾಗಿ ಹೈಕಮಾಂಡ್​ ಮುಂದೆ ಸೋಮಶೇಖರ್ ರೆಡ್ಡಿ ಲಾಬಿ

ಬಳ್ಳಾರಿ: ಬಿ.ಎಸ್​​ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಬಸವರಾಜ್​​ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಸದ್ಯದಲ್ಲೇ ಬಸವರಾಜ್​​ ಬೊಮ್ಮಾಯಿ ಹೈಕಮಾಂಡ್​​ ಆದೇಶದ ಮೇರೆಗೆ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಹೀಗಾಗಿ ಹಲವರು ಸಚಿವ ಸ್ಥಾನಕ್ಕೆ ಭಾರೀ ಲಾಬಿ ನಡೆಸುತ್ತಿದ್ದಾರೆ. ಈ ಸಾಲಿಗೆ ಈಗ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಸೇರ್ಪಡೆಗೊಂಡಿದ್ದಾರೆ. ಹೌದು, ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ತನಗೂ ಮಂತ್ರಿ ಸ್ಥಾನಕ್ಕೆ ನೀಡುವಂತೆ ಹೈಕಮಾಂಡ್​​ …

Read More »

ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನ

ಬೆಳಗಾವಿ – ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದಾಗಿ ಅವರು ಬೆಳಗಾವಿಯ ವಿಶ್ವೇಶ್ವರ ನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ನಿವೃತ್ತ ಶಿಕ್ಷಕರಾಗಿರುವ ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣುಕ್ಕಳಿದ್ದಾರೆ. ಬೆಳಗಾವಿಯ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.

Read More »

ರಾಜ್ಯಪಾಲ ಹುದ್ದೆಗಾಗಿ ಮನವೊಲಿಕೆ ಯತ್ನ? ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣವಾಗಿದೆ. ಬೆಂಗಳೂರಿನ ಕೇಶವ ಕೃಪಾ ಆರ್ ಎಸ್ ಎಸ್ ಕಚೇರಿಗೆ ತೆರಳಿರುವ ಯಡಿಯೂರಪ್ಪ ಆರ್ ಎಸ್ ಎಸ್ ಮುಖಂಡ ಮುಕುಂದ್ ಹಾಗೂ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈಗಾಗಲೇ ರಾಜ್ಯಪಾಲರ ಹುದ್ದೆ ಬೇಡವೆಂದಿರುವ ಯಡಿಯೂರಪ್ಪನವರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಮುಖಂಡರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Read More »

ಪಂಚಮಸಾಲಿ ಶ್ರೀ ರಾಜ್ಯಾದ್ಯಂತ ಅಭಿಯಾನ, ಸತ್ಯಾಗ್ರಹದ ಎಚ್ಚರಿಕೆ

ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ನೀಡಿದ್ದ ಭರವಸೆಗಳ ಬಗ್ಗೆ ಮತ್ತೆ ನೆನಪಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಸರ್ಕಾರಕ್ಕೆ ಅಂತಿಮ ಗಡುವಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಶ್ರೀಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 15ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುತ್ತದೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, …

Read More »

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.

      ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.     ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …

Read More »

ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು.   ಹಾನಿಯ …

Read More »

ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

    ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು …

Read More »

ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.   ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು.   …

Read More »

ಸಿಎಂ ನಿರ್ಧಾರಕ್ಕೆ ಬದ್ಧ: ಮಾಜಿ ಸಚಿವ ನಿರಾಣಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯನ್ನು ಯಾವಾಗ ಮಾಡಬೇಕು, ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರಬೇಕು ಎಂದರು. ನಿನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಮೊದಲ ಸಚಿವ …

Read More »