Breaking News
Home / 2021 / ಜುಲೈ / 29 (page 2)

Daily Archives: ಜುಲೈ 29, 2021

ಪ್ರೀತಿಸಿ ಮದ್ವೆಯಾದ ಒಂದೇ ತಿಂಗಳಲ್ಲಿ ಮಹಿಳಾ ಕಾನ್ಸ್​​ಟೇಬಲ್ ಆತ್ಯಹತ್ಯೆ; ಹಲವು ಅನುಮಾನ

ಬೆಂಗಳೂರು: ನವವಿವಾಹಿತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ನೇತ್ರಾ ಮೃತ ಮಹಿಳಾ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ಆಗಿದ್ದ ನೇತ್ರಾ, ಕಳೆದ ತಿಂಗಳು ಪ್ರೀತಿಸಿ ಎರಡೂ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು. ಆದ್ರೆ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರ ಕೈಗೆ ಸ್ಮಾರ್ಟ್​ಫೋನ್; ಹೈಕೋರ್ಟ್​​ ಗರಂ

ಬೆಂಗಳೂರು: ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದುಕೊಂಡು ಕೋರ್ಟ್​ ಕಲಾಪವನ್ನ ವೀಕ್ಷಿಸಿದ ಪ್ರಕರಣದ ತನಿಖೆಯನ್ನ ನಡೆಸಲು ಹೈಕೋರ್ಟ್​ ಚಿಂತನೆ ನಡೆಸಿದೆ. ನಿನ್ನೆ ಹಾಗೂ ಇಂದು ವಿಚಾರಣೆಯನ್ನ ನಡೆಸಿದ ಕೋರ್ಟ್​, ಜೈಲಿನಲ್ಲಿ ಆರೋಪಿಗಳು ಫೋನ್ ಮೂಲಕ ಕಲಾಪವನ್ನ ವೀಕ್ಷಿಸಿರೋದನ್ನ ತನಿಖೆ ನಡೆಸಲು ಸೂಚನೆ ನೀಡಿದೆ. ನಿವೃತ್ತ ನ್ಯಾಯಮೂರ್ತಿ, ಐಪಿಎಸ್,‌ ಐಎಎಸ್ ಅಧಿಕಾರಿ‌ಗಳಿಂದ‌ ತನಿಖೆಗೆ ಚಿಂತನೆ ನಡೆಸಿದೆ. ಅದರಂತೆ ನಿವೃತ್ತ ಅಧಿಕಾರಿಗಳ‌ ಹೆಸರು ನೀಡಲು ಸರ್ಕಾರಕ್ಕೆ ಸೂಚನೆಯನ್ನ ಕೊಟ್ಟಿದೆ. ಹೀಗಾಗಿ ದಕ್ಷಿಣ ವಲಯ …

Read More »

ಸರ್ಕಾರ ಶಾಲೆ ಆರಂಭಕ್ಕೆ ಸೂಚಿಸದಿದ್ದರೆ ನಾವೇ ಆರಂಭಿಸ್ತೇವೆ: ನೂತನ ಸಿಎಂ ಬೊಮ್ಮಾಯಿಗೆ ಖಾಸಗಿ ಶಾಲೆಗಳ ಡೆಡ್​ಲೈನ್​

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಗೊಳಿಸಲಾಗಿತ್ತು. ಲಾಕ್​ಡೌನ್​ ಜಾರಿಯಾದ ವೇಳೆ ಶಾಲೆಗಳನ್ನ ಬಂದ್ ಮಾಡಲಾಗಿದೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಬಂದ ಕಾರಣ ಲಾಕ್​ಡೌನ್​ ತೆರವುಗೊಳಿಸಲಾಗಿದೆ. ಆದರೆ ಬಂದ್ ಆಗಿರುವ ಶಾಲೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಮಕ್ಕಳ ಆರೋಗ್ಯ ಹಿತಾದೃಷ್ಟಿಯಿಂದ ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗುತ್ತಿಲ್ಲ. ಆದರೆ ಕೂಡಲೇ ಶಾಲೆಗಳನ್ನು ಆರಂಭಿಸಬೇಕೆಂದು ಖಾಸಗಿ ಶಾಲೆಗಳ ಒಕ್ಕೂಟ ನೂತನ ಮುಖ್ಯಮಂತ್ರಿಗೆ ಡೆಡ್​ಲೈನ್​ ನೀಡಿದೆ. ಅಕ್ಟೋಬರ್ ಅಥವಾ …

Read More »

ನಾವು ಸನ್ಯಾಸಿಗಳಲ್ಲ. ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಶಿವಮೊಗ್ಗ: ಬೊಮ್ಮಾಯಿ ಸಂಪುಟದಲ್ಲಿ ನಾನು ಮಂತ್ರಿ ಆಗಲ್ಲ ಎಂದು ಜಗದೀಶ ಶೆಟ್ಟರ್​ ಘೋಷಿಸಿದ ಬೆನ್ನಲ್ಲೇ ಕೆ.ಎಸ್​.ಈಶ್ವರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಮಹತ್ವದ ತೀರ್ಮಾನ ಹೊರಹಾಕಿದ್ದಾರೆ. ಗುರುವಾರ ಮಧ್ಯಾಹ್ನ 12ಕ್ಕೆ ಶಿವಮೊಗ್ಗದಲ್ಲಿ ಸುದ್ದಿಘೋಷ್ಠಿ ನಡೆಸಿದ ಈಶ್ವರಪ್ಪ, ಸಾವಿರಾರು ಕಾರ್ಯಕರ್ತರ ನಡುವೆ ನಾನು ಒಂದು ಬಿಂದು. ಸಿಎಂ ಸ್ಥಾನಕ್ಕೆ ನನಗಿಂತಲೂ ಹಿರಿಯರಿದ್ದರು. ಬೊಮ್ಮಾಯಿ ಆಯ್ಕೆ ರಾಜಕೀಯ ದಾಳ ಅಷ್ಟೆ. ಬಸವರಾಜ ಬೊಮ್ಮಾಯಿ ಅವರನ್ನು ಪಕ್ಷವು ಸಿಎಂ ಮಾಡಿದೆ. ಎಲ್ಲರೂ ಸಂತಸ ಪಟ್ಟಿದ್ದಾರೆ‌. ಯಡಿಯೂರಪ್ಪ …

Read More »

ಸಿಎಂ ಪದಗ್ರಹಣ ವೇಳೆ ಗೈರು: ಇಂದು ದಿಢೀರ್​ ಸುದ್ದಿಗೋಷ್ಠಿ ನಡೆಸಿ ಶ್ರೀರಾಮುಲು ಹೇಳಿದ್ದೇನು?

ಬಳ್ಳಾರಿ: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಪದಗ್ರಹಣ ಮಾಡಿದ ಕಾರ್ಯಕ್ರಮಕ್ಕೆ ಶೀರಾಮುಲು ಗೈರು ಎದ್ದು ಕಾಣುತ್ತಿತ್ತು. ಡಿಸಿಎಂ ಸ್ಥಾನದ ವಿಚಾರವಾಗಿ ಅಸಮಾಧನ ಏರ್ಪಟ್ಟಿದ್ದು, ಶ್ರೀರಾಮುಲು ಮುನಿಸಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಎರಡು ದಿನದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಶ್ರೀರಾಮುಲು ಇಂದು ಸುದ್ದಿಗೋಷ್ಠಿ ನಡೆಸಿ ಎಲ್ಲ ಊಹಾಪೋಹಕ್ಕೂ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಬಳ್ಳಾರಿಯಲ್ಲಿ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಶ್ರೀರಾಮುಲು, ಬಹಳ ದಿನದಿಂದ ನಿಗದಿಯಾಗಿದ್ದ ಪೂಜೆಯಲ್ಲಿ ಭಾಗಿಯಾಗಿದ್ದೆ. ನನಗೆ ಯಾವುದೇ ಮುನಿಸಿಲ್ಲ. …

Read More »

ಮಹದಾಯಿ ಯೋಜನೆಗೆ ಮೊದಲ ಆದ್ಯತೆ ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಜು.29- ಮಹದಾಯಿ ಯೋಜನೆಗೆ ಮೊದಲ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ ನೀಡುತ್ತೇನೆ. ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ. ಗೆಜೆಟ್ ನೋಟಿಫಿಕೇಷನ್ ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಸಚಿವರಾದ …

Read More »

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಘಟನೆ ನಡೆಯುವಾಗ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ. ಘಟನೆಯ ವಿವರ: ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವರಾಮ್ ಹೆಬ್ಬಾರ್ ಇದ್ದರು. ವಿಮಾನ ನಿಲ್ದಾಣದಿಂದ …

Read More »

ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ; ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿ ಶ್ರಮಿಸುತ್ತೇನೆ. ಹುಬ್ಬಳ್ಳಿ-ಧಾರವಾಡದ …

Read More »

ಸಿಎಂ ಬೊಮ್ಮಾಯಿ ನಿವಾಸದ ಎದುರೇ ಬೈಕ್ ವ್ಹೀಲಿಂಗ್​ ಮಾಡ್ತಿದ್ದ ಪುಂಡರ ಬಂಧನ

ಬೆಂಗಳೂರು: ನೂತನ ಸಿಎಂ ಬಸವರಾಜ್​ ಬೊಮ್ಮಾಯಿಯವರ ಆರ್. ಟಿ ನಗರದ ಮನೆ ಸುತ್ತಮುತ್ತ ಬೈಕ್​ ವ್ಹೀಲಿಂಗ್​ ಮಾಡುವ ಪುಂಡರ ಹಾವಳಿ ಹೆಚ್ಚಾಗಿದೆ. ಸಿಎಂ ಮನೆ ಮುಂದೆ ವ್ಹೀಲಿಂಗ್​ ಮಾಡುತ್ತಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದು ಬೈಕ್​ಗಳನ್ನ ಸೀಜ್​ ಮಾಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮನೆ ಸುತ್ತಮುತ್ತ ಪೊಲೀಸ್​ರ ದಂಡೆ ಇದ್ದರು ಕ್ಯಾರೆ ಎನ್ನದ ಪುಂಡರ ಗುಂಪು ವ್ಹೀಲಿಂಗ್ ಮಾಡುತ್ತಿದ್ದರು. ಡಿಯೋ, ಌಕ್ಟಿವಾ ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಗ್ಯಾಂಗ್​ನ್ನು …

Read More »

ಮಳೆ ಕಡಿಮೆಯಾದ್ರು ತಗ್ಗದ ಕೃಷ್ಣೆಯ ಅಬ್ಬರ -ನಡುಗಡ್ಡೆಯಲ್ಲಿ ಸಿಲುಕಿದ್ದ 54 ಮಂದಿಯ ರಕ್ಷಣೆ

ಬೆಳಗಾವಿ: ಕಳೆದ ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಕೃಷ್ಣಾ ನದಿಯಲ್ಲಿ ಪ್ರವಾಹ ತಗ್ಗಿಲ್ಲ. ಪರಿಣಾಮ ಜಿಲ್ಲೆಯ ಕೆಲವು ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಅಥಣಿ ತಾಲೂಕಿನ ಸವದಿ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ್ದ 54 ಜನರನ್ನು ಎಸ್​ಡಿಆರ್​ಎಫ್​ ತಂಡ ರಕ್ಷಣೆ ಮಾಡಿದೆ. ಕಾರ್ಯಾಚರಣೆ ನಡೆಸಿದ ಎಸ್​ಡಿಆರ್​ಎಫ್ ತಂಡ ನಡುಗಡ್ಡೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ್ದಾರೆ. #KarnatakaRains UPDATE28/7/21?Water-logging/flooding ?Belagavi …

Read More »