Breaking News
Home / 2021 / ಜುಲೈ (page 10)

Monthly Archives: ಜುಲೈ 2021

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ನಾಳೆ (ಶುಕ್ರವಾರ) ಬೆಳಗ್ಗೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಬಗ್ಗೆ ಚಿಂತನೆಯಿದೆ. ಅಮಿತ್ ಶಾ, ಜೆಪಿ ನಡ್ಡಾ, ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕರೆ ಮಾಡಿ ಶುಭ ಕೋರಿದ್ದಾರೆ. ಉತ್ತಮ ಆಡಳಿತ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ. ದೆಹಲಿ ಭೇಟಿಯ ವೇಳೆ ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸತ್ ಸದಸ್ಯರನ್ನು, ಸಚಿವರನ್ನು ಭೇಟಿಯಾಗುತ್ತೇನೆ …

Read More »

ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ.: ಉಮೇಶ್ ಕತ್ತಿ,

ಬೆಂಗಳೂರು : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆಗಳು ಶುರುವಾಗಿದೆ. ಹೊಸ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ ಮಾಜಿ ಸಚಿವ ಉಮೇಶ್ ಕತ್ತಿ, ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ. ಈ ಹಿಂದೆ 4 ಬಾರಿ ಮಂತ್ರಿಯಾಗಿದ್ದೇನೆ. ಮುಂದೆಯೂ ಸಚಿವ ಆಗುತ್ತೇನೆ ಎಂಬ ನಂಬಿಕೆ …

Read More »

ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್​​ಗೆ ಇಳಿದಿದ್ದಾರೆ?

ಬದಲಾಣೆ ಬಡಿದಾಟದಲ್ಲಿ ಗೆದ್ದು, ಸಿಎಂ ಸಿಂಹಾಸನಕ್ಕೇರಿದ ಬಸವರಾಜ್ ಬೊಮ್ಮಾಯಿ ರಾಜ್ಯ ಸುತ್ತೋಕೆ ರೆಡಿಯಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಅನ್ನೋ ಚರ್ಚೆ ಮುನ್ನೆಲೆಗೆ ಬಂದಿದೆ. ಇವತ್ತು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿರೋ ಸಿಎಂ ಬಸವರಾಜ …

Read More »

ರಾಜ್ಯ ಸಚಿವ ಸಂಪುಟ ರಚನೆ: ಹೈಕಮಾಂಡ್ ಆದೇಶಕ್ಕೆ ಕಾದು ಕುಳಿತಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಕೂಡ ಪ್ರಮಾಣ ಸ್ವೀಕರಿಸಿದ್ದಾಗಿದೆ. ಈಗ ಅವರ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಇನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ. ಯಡಿಯೂರಪ್ಪ ಅವರ ಸಂಪುಟದಲ್ಲಿ 33 ಮಂದಿ ಸಚಿವರಿದ್ದರು. ಇದೀಗ ಹೊಸ ಸಂಪುಟ ರಚನೆ ಮಾಡುವ ಅವಕಾಶ ಬೊಮ್ಮಾಯಿಯವರಿಗೆ ಸಿಕ್ಕಿದೆ. ಸಂಪುಟ ರಚನೆ ಮಾಡಲು ತುದಿಗಾಲಲ್ಲಿ ನಿಂತಿರುವ ಬೊಮ್ಮಾಯಿಯವರು ಬಿಜೆಪಿ ಹೈಕಮಾಂಡ್ ಆದೇಶಕ್ಕಾಗಿ ಕಾದು ಕುಳಿತಿದ್ದಾರೆ. ಸಂಪುಟ ರಚನೆ ಕುರಿತು …

Read More »

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್

ಜೆಡಿಎಸ್ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ. ಹೌದು. ಇದೇ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ …

Read More »

ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ:ಶೆಟ್ಟರ್ ರೀತಿಯಲ್ಲೇ ನಿರ್ಧಾರ ಮಾಡ್ತಾರಾ BJPನಾಯಕ

ಶಿವಮೊಗ್: ರಾಜ್ಯದಲ್ಲಿ ಬಸವರಾಜ್ ಬೊಮ್ಮಯಿ ನೂತನ ಮುಖ್ಯಮಂತ್ರಿಯಾಗಿ ನೇಮಕವಾದ ಬಳಿಕ ಬಿಜೆಪಿ ಹಿರಿಯ ನಾಯಕರ ನಡೆಗಳು ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಪತ್ರಿಕಾಗೋಷ್ಠಿ ಕರೆದಿದ್ದು, ಕುತೂಹಲ ಮೂಡಿಸಿದೆ. ಬಿಎಸ್ವೈ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತನ್ನ ಭವಿಷ್ಯದ ರಾಜಕೀಯ ನಿರ್ಧಾರವನ್ನು ಈಶ್ವರಪ್ಪ ಘೋಷಣೆ ಮಾಡುತ್ತಾರೆ. ಜಗದೀಶ್ ಶೆಟ್ಟರ್ ರೀತಿಯಲ್ಲೆ ನಿರ್ಧಾರ …

Read More »

ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ :ಸಿದ್ದರಾಮಯ್ಯ

ಬೆಂಗಳೂರು: ಜವಾಬ್ದಾರಿಯುತ ಪ್ರತಿಪಕ್ಷವಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಅವಕಾಶವನ್ನು ಸಂವಿಧಾನ ಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರಿಗೆ ಹಾರ್ದಿಕ ಅಭಿನಂದನೆಗಳು. ಕಳೆದ 2 ವರ್ಷಗಳಿಂದ …

Read More »

ನಾನೂ ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಬೆಂಗಳೂರು: ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದು ಸ್ಮಾರ್ಟ್ ಆಗಿದ್ದೇನೆ. ಗಡ್ಡ ಬಿಟ್ಟಾಗ ಶಿವಾಜಿ ಆಗಿದ್ದೆ, ಈಗ ಬಸವಣ್ಣ ಆಗಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನೂ ಎಂದೂ ಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ. ಈ …

Read More »

ಇಷ್ಟು ದಿನ‌ ನೀವು ಏನು ಮಾಡಿದ್ದೀರಿ? ಎಂಬುದು ನನಗೆ ಬೇಕಿಲ್ಲ. ಆಡಳಿತದಲ್ಲಿ ನಾನು ಏನು ಆದೇಶ ಮಾಡುತ್ತೇನೊ ಅದು ಜಾರಿ ಆಗಲೇ ಬೇಕು: ಬೊಮ್ಮಾಯಿ ಗರಂ! .

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಗಳ ಮಹತ್ವದ ಸಭೆ ನಡೆಸಿದ್ದಾರೆ. ನಂತರ ರಾಜ್ಯ ಸಚಿವ ಸಂಪುಟ ಸಭೆಯನ್ನೂ ಮಾಡಿದ್ದಾರೆ. ಆದರೆ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ಸೂಚನೆಗಳನ್ನು ಕೊಡುವ ಮೂಲಕ ತಮ್ಮ ಮುಂದಿನ ಆಡಳಿತದ ಮುನ್ಸೂಚನೆಯನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ. ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. …

Read More »

ದಿನಕ್ಕೆ 70 ಸಾವಿರ ರೂಪಾಯಿ ಆಫರ್: ರಾಜ್​ ಕುಂದ್ರಾ ಕಂಪನಿ​ಯ ಕರಾಳತೆ ಬಿಚ್ಚಿಟ್ಟ ಮಾಡೆಲ್​!

ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ವಿತರಣೆ ಆರೋಪದಲ್ಲಿ ಉದ್ಯಮಿ ಹಾಗೂ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರ ಬಂಧನವು ಸದ್ಯದ ಮಟ್ಟಿಗೆ ಬಹು ಚರ್ಚಿತ ವಿಷಯವಾಗಿದೆ. ಕುಂದ್ರಾ ಬಂಧನವಾದಾಗಿನಿಂದ ಅವರ ಕುರಿತಾದ ಕರಾಳ ಸಂಗತಿಗಳು ಒಂದೊಂದಾಗಿ ಕಳಚಿ ಬೀಳುತ್ತಿವೆ. ಹಾಟ್​ಶಾಟ್ಸ್​ ಮತ್ತು ಇತರೆ ವೆಬ್​ಸೈಟ್​ಗಳಿಗಾಗಿ ಬೋಲ್ಡ್​ ಸಿನಿಮಾಗಳಲ್ಲಿ ನಟಿಸಿರುವ ಮಾಡೆಲ್​ ಜೊಯಾ ರಾಥೋಡ್ ಅವರು ರಾಜ್​​ ಕುಂದ್ರಾರಿಂದ ಆಫರ್​ ಸ್ವೀಕರಿಸಿದ್ದಾಗಿ ಮಾಧ್ಯಮವೊಂದಕ್ಕೆ ಬಹಿರಂಗಪಡಿಸಿದ್ದಾರೆ. ​ …

Read More »