Breaking News

Monthly Archives: ಜುಲೈ 2021

ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.   ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಾರೆ. ಹೈಕಮಾಂಡ್ …

Read More »

ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ

ಬೆಂಗಳೂರು : ಇಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಪರಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ   ಈ ಕುರಿತಂತೆ ರಾಜಭವನದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮಾಜಿ ಸಚಿವ ಆರ್ ಅಶೋಕ್, ಇಂದು ಸಂಜೆ ನೂತನ ಸಿಎಂ ಆದಂತ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ …

Read More »

ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸಿಎಂ ಬದಲಾಗಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದ್ದೇನೆ. ಮುಂದೆ ಪಕ್ಷದಲ್ಲಿ ಅಥವಾ ಸರ್ಕಾರದೊಳಗೆ ಕೆಲಸ ಮಾಡಬೇಕು ಎಂಬುದನ್ನ ಹೈಕಮಾಂಡ್ ನಿರ್ಧರಿಸಲಿದೆ. 17 ಜನರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದವರು. ಎಲ್ಲರನ್ನು ಪಕ್ಷ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು. ಬಸವರಾಜ ಬೊಮ್ಮಾಯಿ ಅವರನ್ನು …

Read More »

ಗಡ್ಡ ಬಿಟ್ಟಾಗ ಶಿವಾಜಿ, ಈಗ ಬಸವಣ್ಣ: ಶಾಸಕ ಯತ್ನಾಳ್

ಬೆಂಗಳೂರು: ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದು ಸ್ಮಾರ್ಟ್ ಆಗಿದ್ದೇನೆ. ಗಡ್ಡ ಬಿಟ್ಟಾಗ ಶಿವಾಜಿ ಆಗಿದ್ದೆ, ಈಗ ಬಸವಣ್ಣ ಆಗಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನೂ ಎಂದೂ ಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ. ಈ …

Read More »

ರೈತರ ಮಕ್ಕಳಿಗೆ ಶಿಷ್ಯ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿಗಳು ತಮ್ಮ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ ಜೊತೆ ಕಡತ ಪರಿಶೀಲನೆ ನಡೆಸಿದರು. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸರ್ಕಾರದ  ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು ಸಿಎಂ …

Read More »

ನಿರಾಣಿ, ಬೆಲ್ಲದ್‍ಗೆ ಸಿಎಂ ಕುರ್ಚಿ ತಪ್ಪಿದ್ದು ಹೇಗೆ?

ಬೆಂಗಳೂರು: ಸಿಎಂ ರೇಸ್‍ನಲ್ಲಿದ್ದ ಬೆಲ್ಲದ್, ನಿರಾಣಿ ಪೈಕಿ ಒಬ್ಬರನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕ್ಲೈಮ್ಯಾಕ್ಸ್‍ನಲ್ಲಿ ಇವರಿಬ್ಬರಿಗೂ ಸಿಎಂ ಪಟ್ಟ ತಪ್ಪಿದ್ದು ಲಾಬಿ ಮಾಡದ ಬೊಮ್ಮಾಯಿ ಅವರಿಗೆ ಒಲಿದಿದೆ. ಮುಖ್ಯಮಂತ್ರಿ ರೇಸ್‍ನಲ್ಲಿದ್ದ ನಿರಾಣಿ ಮತ್ತು ಬೆಲ್ಲದ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಅಷ್ಟೇ ಅಲ್ಲದೇ ಇವರಿಬ್ಬರೂ ವಾರಣಾಸಿಗೆ ತೆರಳಿ ಗಂಗೆಯಲ್ಲಿ ಸ್ನಾನ ಮಾಡಿ ಕಾಶಿ ವಿಶ್ವನಾಥನ ದರ್ಶನ ಮಾಡಿದ್ದರು. ಹೀಗಾಗಿ ನಿರಾಣಿ ಮತ್ತು ಬೆಲ್ಲದ್ …

Read More »

ಆಗಸ್ಟ್ ತಿಂಗಳಲ್ಲಿ 12 ದಿನ ಬ್ಯಾಂಕ್ ಕಾರ್ಯ ನಿರ್ವಹಿಸಲ್ಲ ಏಕೆಂದ್ರೆ..

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ . ಭಾರತದಲ್ಲಿ ಬ್ಯಾಂಕ್ ರಜಾ ದಿನಗಳು ಆಯಾ ರಾಜ್ಯಗಳ ಮೇಲೂ ಅವಲಂಬನೆ ಆಗಿರುತ್ತದೆ . ಇನ್ನು ಭಾರತದ ವಿವಿಧ ಭಾಗಗಳಲ್ಲಿ ನಿರ್ಬಂಧಿತ ರಜಾಗಳು ಹಾಗೂ ಗೆಜೆಟೆಡ್ ರಜಾ ದಿನಗಳಿವೆ . ಗೆಜೆಟೆಡ್ ಅಥವಾ ಸಾರ್ವಜನಿಕ ರಜಾ ದಿನಗಳು ದೇಶದಾದ್ಯಂತ ಅನ್ವಯಿಸುತ್ತದೆ. ಬ್ಯಾಂಕ್ ಗಳು ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ …

Read More »

ರಿಯಾಲಿಟಿ ಶೋ ಜಡ್ಜ್ ಸ್ಥಾನದಿಂದ ಶಿಲ್ಪಾ ಔಟ್? ರಾಜ್ ಕುಂದ್ರ ಪತ್ನಿ ಜಾಗಕ್ಕೆ ಸ್ಟಾರ್ ದಂಪತಿ ಎಂಟ್ರಿ

ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಜುಲೈ 19ರಂದು ರಾಜ್ ಕುಂದ್ರ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪತಿಯ ಬಂಧನದಿಂದ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮುಜುಗರ ಅನುಭವಿಸಬೇಕಾಗಿದೆ. ಪತಿಯ ಬ್ಲೂ ಫಿಲ್ಮ್ ಪ್ರಕರಣ ಶಿಲ್ಪಾ ಶೆಟ್ಟಿ ಪರಿಣಾಮ ಬೀರಿದೆ. ಇತ್ತೀಚಿಗೆ ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿಯನ್ನು ವಿಚಾರಣೆ ನಡೆಸಿದ್ದರು. ಇದೆಲ್ಲದರ ನಡುವೆ …

Read More »

ಕಂಗನಾಗೆ ಮುಂಬೈ ಕೋರ್ಟ್ ಖಡಕ್ ಎಚ್ಚರಿಕೆ: ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ

ಚಿತ್ರಕತೆ ರಚನೆಕಾರ, ಚಿತ್ರಸಾಹಿತಿ, ಮಾಜಿ ಸಂಸದ ಜಾವೇದ್ ಅಖ್ತರ್ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಕಂಗನಾ ರಣಾವತ್‌ಗೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೊನೆಯ ಎಚ್ಚರಿಕೆ ನೀಡಿದೆ. ಮುಂದಿನ ವಿಚಾರಣೆಗೆ ನಟಿ ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ ಮಾಡಬೇಕಾಗುತ್ತದೆ ಎಂದು ಕಟುವಾಗಿ ಪ್ರತಿಕ್ರಿಯಿಸಿದೆ. ಕಂಗನಾ ಪರ ವಕೀಲರು, ”ಕಂಗನಾ ದೇಶದಲ್ಲಿಲ್ಲ, ಹಾಗಾಗಿ, ಇಂದಿನ (ಜುಲೈ 27) ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಇಂದಿನ ವಿಚಾರಣೆಗೆ ವಿನಾಯಿತಿ ಕೊಡಿ” ಎಂದು ನ್ಯಾಯಾಲಯಕ್ಕೆ ಕೋರಿದ್ದರು. …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಹೆಚ್ ಡಿ ಕುಮಾರಸ್ವಾಮಿ ನೀಡಿದ ಸಂದೇಶವೇನು?

ಬೆಂಗಳೂರು, ಜುಲೈ 27: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ. “ಪ್ರಸ್ತುತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ,” ಎಂದು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಭಾರತೀಯ …

Read More »