Breaking News

Monthly Archives: ಜುಲೈ 2021

ದುರಾಡಳಿತದಿಂದ ದಿಕ್ಕು ತಪ್ಪಿದ ರಾಜ್ಯಕ್ಕೆ ಸ್ನೇಹಿತ ಬೊಮ್ಮಾಯಿ ಸಿಎಂ ಆಗಿದ್ದಾರೆ, ಅವರಿಗೆ ಅಗತ್ಯ ಸಹಕಾರ ನೀಡುತ್ತೇನೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಎಸ್​ ಬೊಮ್ಮಾಯಿ (Basavaraj S Bommai) ಆಯ್ಕೆಯಾಗಿದ್ದಾರೆ. ಜನತಾದಳದಿಂದ ಬಂದು ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಅವರಿಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಶುಭಕೋರಿದ್ದು, ನನ್ನ ಸ್ನೇಹಿತ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುತ್ತಿದ್ದಾರೆ (Chief Minister of Karnataka), ಅವರಿಗೆ ಶುಭವಾಗಲಿ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದು ಅಧಿಕೃತ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಅಭಿನಂದನೆ …

Read More »

ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳ ಬಂಧನ

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳನ್ನು ಸೆರೆ ಹಿಡಿದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಂಬರೀಶ್, ಕವಿರಾಜ್‌ ಬಂಧಿತ ಆರೋಪಿಗಳು. ಇಂದಿರಾನಗರ ಫೈನಾನ್ಸಿಯರ್ ವಿಜಯ್‌ಕುಮಾರ್ ಎಂಬುವವರನ್ನು ಅಪಹರಿಸಿ ಹತ್ಯೆಗೈದಿದ್ದರು. ಕೇಸ್ ಸಂಬಂಧ ಆರೋಪಿಗಳ ಬಂಧನಕ್ಕೆ ಎಸಿಪಿ ಕುಮಾರ್, ಇನ್ಸ್‌ಪೆಕ್ಟರ್ ಹರೀಶ್ ತಂಡ ತೆರಳಿತ್ತು. ಈ ವೇಳೆ ಬೆಳಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅಂಬರೀಶ್, …

Read More »

ಕರ್ನಾಟಕದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. …

Read More »

ಕರ್ನಾಟಕಕ್ಕೆ ಮತ್ತೆ ಮೂವರು ಉಪ-ಮುಖ್ಯಮಂತ್ರಿಗಳು

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ, ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆನೀಡಿದ ನಂತ್ರ, ಕರ್ನಾಟಕ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ

Read More »

ಬಿಎಸ್​ವೈ ನಿರ್ಗಮನದ ಬೆನ್ನಲ್ಲೇ ಕೇಂದ್ರದಿಂದ ರಾಜ್ಯಕ್ಕೆ ₹629.3 ಕೋಟಿ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಇಂದು ಬರೋಬ್ಬರಿ 629.03 ಕೋಟಿ ಹಣವನ್ನ ಪ್ರಕೃತಿ ವಿಕೋಪದ ಪರಿಹಾರವಾಗಿ ಬಿಡುಗಡೆ ಮಾಡಿದೆ. ಕಳೆದ ಬಾರಿಯ ಮುಂಗಾರು ಮಳೆ ಸಂದರ್ಭದಲ್ಲಿ ಭಾರೀ ಪ್ರವಾಹ ಉಂಟಾಗಿತ್ತು. ಉತ್ತರ ಕರ್ನಾಟಕವು ಮಹಾಮಳೆಗೆ ನಲುಗಿ ಹೋಗಿತ್ತು. ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ಅಪಾರ ಹಾನಿಯುಂಟಾಗಿತ್ತು. ಮಾತ್ರವಲ್ಲ ಮಹಾರಾಷ್ಟದಲ್ಲೂ ತೀವ್ರ ಹಾನಿಯಾಗಿತ್ತು. ಇದೀಗ ಕೇಂದ್ರ ಸರ್ಕಾರ 2020ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಪರಿಹಾರವನ್ನ ನೀಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ …

Read More »

ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಮೊದಲೇ ಸುಳಿವು ನೀಡಿ, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯತ್ನಾಳ್ ಹೇಳಿದ್ದರು. ಅವರ ಭವಿಷ್ಯ ನಿಜವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ …

Read More »

ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

  ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ …

Read More »

ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಬೆಂಗಳೂರು – ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೊಮ್ಮಾಯಿ ಹೆಸರನ್ನು ಸೂಚಿಸಿದರು. ಗೋವಿಂದ ಕಾರಜೋಳ ಅನುಮೋದಿಸಿದರು. ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

Read More »

ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್​ ಓಪನ್ -ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ ಡ್ಯಾಂ

ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಖ್ಯಾತಿ ಪಡೆದ ತುಂಗಭದ್ರಾ ಜಲಾಶಯ ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ. ಈಗಾಗಲೇ ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು. ಡ್ಯಾಂ‌ನ 33 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರನ್ನು ಹರಿಸಲಾಗ್ತಿದೆ. ಗೇಟ್ ಗಳಿಗೆ ವಿವಿಧ ಬಣ್ಣಗಳ ವಿದ್ಯುತ್ ದೀಪಗಳನ್ನ ಅಳವಡಿಕೆ ಮಾಡಿ, ನೀರಿಗೆ ಬಣ್ಣ ಬಳಿದಂತೆ ಭಾಸವಾಗುತ್ತಿದೆ.     ಇನ್ನು ತುಂಗಭದ್ರಾ ಜಲಾಶಯದ ಪಾರ್ಕ್​​​ಗೂ ಜೀವ ಕಳೆ ಬಂದಿದೆ. ಕತ್ತಲಾಗುತ್ತಿಂದೆ ಜಲಾಶಯದ ಸೌಂದರ್ಯ ಜನರನ್ನ …

Read More »

ಬಿಎಸ್ ವೈ ಬಲಗೈ ಬಂಟ ಬಸವರಾಜ ಬೊಮ್ಮಾಯಿ..ಕರ್ನಾಟಕದ ನೂತನ ಮುಖ್ಯಮಂತ್ರಿ..

ಬೆಂಗಳೂರು – ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಗೊತ್ತಾಗಿದೆ. ಅಧಿಕೃತವಾಗಿ ಘೋಷಣೆ ಇನ್ನೂ ಆಗಬೇಕಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ. ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಸವರಾಜ …

Read More »