Breaking News

Monthly Archives: ಜುಲೈ 2021

ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ ಮಾಡಿ, ಮಳೆಯಿಂದ ಆಗಿರುವ ಅನಾಹುತಗಳನ್ನು, ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ, ಜನರ ಸಮಸ್ಯೆಗಳನ್ನು ಆಲಿಸಿ,ಸಮಸ್ಯೆ ಗಳನ್ನು ಸ್ಥಳದಲ್ಲೇ …

Read More »

ಬೆಳಗಾವಿ: ಕುಡಚಿ-ಉಗಾರ ಸೇತುವೆಯಲ್ಲಿ ಸಂಚಾರ ಬಂದ್

ಬೆಳಗಾವಿ: ರಾಯಬಾಗ ತಾಲ್ಲೂಕಿನಾದ್ಯಂತ ಶನಿವಾರವೂ ಜಿಟಿಜಿಟಿ ಮಳೆ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಾಗಿ ಕೃಷ್ಣಾ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದಾಗಿ, ರಾಯಬಾಗ ತಾಲ್ಲೂಕಿನ ಕುಡಚಿ-ಉಗಾರ ಸೇತುವೆ ಮುಳುಗಡೆಯಾಗಿದ್ದು, ನೆರೆಯ ಮಹಾರಾಷ್ಟ್ರ ರಾಜ್ಯದ ಸಂಪರ್ಕ ಕಡಿತಗೊಂಡಿದೆ. ಕುಡಚಿ ಸೇತುವೆ ಮೇಲೆ ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು, ವ್ಯಾಪಾರಿಗಳು, ಮೀರಜ್‌ ಆಸ್ಪತ್ರೆಗೆ ಹೋಗುವವರು ತೊಂದರೆ ಅನುಭವಿಸುವಂತಾಗಿದೆ. ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರಮುಖ …

Read More »

ಧುಮ್ಮಿಕ್ಕಿ ಹರಿದ ದೂಧಸಾಗರ ಜಲಪಾತ : ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತ

ಪಣಜಿ: ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾದ ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು ಈ ಭಾಗದಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತಗೊಂಡಿದೆ. ಗೋವಾದ ದೂಧಸಾಗರ ಜಲಪಾತದ ಬಳಿ ಭಾರಿ ಪ್ರಮಾಣದಲ್ಲಿ ಮಂಜುಗಟ್ಟಿದ್ದು ಶುಕ್ರವಾರ ಬೆಳಿಗ್ಗೆ ಬೆಳಗಾವಿ -ವಾಸ್ಕೊಡಗಾಮಾ ರೈಲು ಸಂಚಾರ ಜಲಪಾತದ ಬಳಿಯೇ ಸ್ಥಗಿತಗೊಂಡಿದೆ. ಕೊಂಕಣ ರೈಲು ಹಳಿಗಳ ಮೇಲೆ ಮಳೆಗೆ ಗುಡ್ಡ ಕುಸಿತವುಂಟಾಗಿರುವುದರಿಂದಲೂ ಮುಂಬಯಿ ಮತ್ತು …

Read More »

ಖಾನಾಪುರದ ಕೆಎಸ್​ಆರ್​ಪಿ ಮೈದಾನಕ್ಕೂ ನೀರು; ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಸುತ್ತ ಜಲಾವೃತ

ಬೆಳಗಾವಿ: ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಖಾನಾಪುರ ಪಟ್ಟಣಕ್ಕೆ ಮಲಪ್ರಭಾ ನದಿ ನೀರು (Heavy Rain) ನುಗ್ಗುತ್ತಿದೆ. ಇದರಿಂದಾಗಿ ಖಾನಾಪುರ ಪಟ್ಟಣದ ಹೊರವಲಯದ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ನಿರಂತರ ಮಳೆಯಿಂದ ಖಾನಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಖಾನಾಪುರ ಪಟ್ಟಣದ ಹೊರವಲಯದ ಮೀನಿನ ಮಾರುಕಟ್ಟೆಗೆ ನೀರು ನುಗ್ಗಿದೆ. ಅಲ್ಲದೆ ಪಟ್ಟಣದ ಕೆಎಸ್‌ಆರ್‌ಪಿ ತರಬೇತಿ ಕೇಂದ್ರದ ಮೈದಾನಕ್ಕೆ ನೀರು ನುಗ್ಗಿದ್ದು, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶ …

Read More »

ಬೆಳಗಾವಿ: ಕೃಷ್ಣೆಗೆ 1.56 ಲಕ್ಷ ಕ್ಯುಸೆಕ್ ನೀರು, ಪ್ರವಾಹ ಭೀತಿ ಹೆಚ್ಚಳ

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶ ಮತ್ತು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರೊಂದಿಗೆ ತೀರದಲ್ಲಿ ಪ್ರವಾಹ ಭೀತಿಯೂ ಹೆಚ್ಚಾಗ ತೊಡಗಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾಗಿದೆ. ಕೊಯ್ನಾ ಜಲಾಶಯದಿಂದ ಹೊರಬಿಡಲಾದ 10ಸಾವಿರ ಕ್ಯುಸೆಕ್, ದೂಧ್‌ಗಂಗಾ ನದಿಯಿಂದ 34,320 ಕ್ಯುಸೆಕ್ ಮತ್ತುಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ; ವಾಘವಾಡೆ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿ ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಈ ವೇಳೆ ಹಗ್ಗ ಎಸೆದು ಯುವಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ನಂದಗಡ ಡ್ಯಾಂಗೆ ಹರಿದು ಬರುತ್ತಿರುವ ನೀರು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದುರ್ಗಾಡಿ ಬೆಟ್ಟ ಪ್ರದೇಶದಿಂದ ಧಾರಾಕಾರವಾಗಿ ಮಳೆ ನೀರು …

Read More »

ಮಹಾರಾಷ್ಟ್ರದಲ್ಲಿ ಭಾರಿ‌ ಮಳೆ; ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ‌ ಮಳೆಯಾಗಿರುವ ಹಿನ್ನಲೆಯಲ್ಲಿ, ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಲ್ಲಿರುವ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಎಂಟು ಗಂಟೆಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,10 ಗಂಟೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇನ್ನು ಮಧ್ಯಾಹ್ನ ಎರಡು ಗಂಟೆಗೆ 50ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುವುದು. ಸದ್ಯ ಕೃಷ್ಣಾ ನದಿಯಲ್ಲಿ 1.34 ಲಕ್ಷ ಕ್ಯೂಸೆಕ್ ನೀರಿನ ಹರಿವು ಇದೆ. ಇಂದು ರಾತ್ರಿ …

Read More »

ವಿಜಯಪುರ: ಆಲಮಟ್ಟಿ ಜಲಾಶಯದಿಂದ 2.5 ಲಕ್ಷ ಕ್ಯೂಸೆಕ್‌ ನೀರು ನದಿಗೆ

ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಶುಕ್ರವಾರ ಮಧ್ಯಾಹ್ನ 1ರಿಂದ ಜಲಾಶಯದ 24 ಗೇಟ್‌ಗಳನ್ನು ತೆಗೆದು ಕೃಷ್ಣಾ ನದಿಗೆ 2.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಒಳಹರಿವನ್ನು ಪರಿಗಣಿಸಿ ಸಂಜೆ ವೇಳೆಗೆ 3 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುವುದು ಎಂದು ಆಲಮಟ್ಟಿ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದ್ದಾರೆ. ಜಲಾಶಯದ ಕೆಳಭಾಗದ …

Read More »

ಸಂಕೇಶ್ವರದಲ್ಲಿ ಪ್ರವಾಹ ಭೀತಿ: ರಾತ್ರೋರಾತ್ರಿ ರಕ್ಷಣಾ ಕಾರ್ಯ

ಸಂಕೇಶ್ವರ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆ ಗಡಿ ಭಾಗದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಪ್ರವಾಹ ಉಂಟಾಗಿರುವದರಿಂದ ಸಂಕೇಶ್ವರ ನಗರದಲ್ಲಿನ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಜನರನ್ನು ಸ್ಥಳಾಂತರಿಸಲು ಪುರಸಭೆ ಅಧಿಕಾರಿಗಳು ಹಾಗೂ ಪೊಲೀಸರು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಅಬ್ಬರದ ಮಳೆಯಿಂದಾಗಿ ಹಿರಣ್ಯಕೇಶಿ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ 8 …

Read More »

ಒಳ್ಳೆಯ ಆಡಳಿತ ನೀಡಲು ಆಗದ್ದಕ್ಕೆ ಸಿಎಂ ಬದಲಾವಣೆ ಮಾಡ್ತಿದ್ದಾರೆ: ಡಿ.ಕೆ. ಶಿವಕುಮಾರ್

ರಾಜ್ಯಕ್ಕೆ ಒಳ್ಳೆಯ ಸರ್ಕಾರ ನೀಡಲು ಆಗದವರು ಇದೀಗ ಮುಖ್ಯಮಂತ್ರಿ ಬದಲಾವಣೆ ಮಾಡುವ ಕಸರತ್ತು ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ರು. ಬಿಜೆಪಿ ರಾಜ್ಯಕ್ಕೆ ಒಳ್ಳೆಯ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ಎಡವಿದೆ. ಡಬಲ್​ ಎಂಜಿನ್​ ಸರ್ಕಾರ ಇದ್ದರೂ ಸಹ ಇವರ ಕೈಲಿ ಒಳ್ಳೆಯ ಆಡಳಿತ ನೀಡಲು ಸಾಧ್ಯವಾಗಲಿಲ್ಲ. ಈ ಸರ್ಕಾರ ಗೌರವ ಎಲ್ಲಿ ಉಳಿಸಿಕೊಂಡಿದೆ..? ಯಾವ …

Read More »