ಬೆಂಗಳೂರು,ಜು.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ ತೆರವಾಗಲಿರುವ ಈ ಸ್ಥಾನಕ್ಕೆ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆ ರಾಜ್ಯದ ಜನತೆಯನ್ನು ಕಾಡುತ್ತಿದೆ. ಇದೇ 26ರಂದು ಸಿಎಂ ಬಿಎಸ್‍ವೈ ಅವರು ಸಂಜೆ ರಾಜ್ಯಪಾಲ ತಾವರ್ ಚಂದ್ರ ಗೆಲ್ಹೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ನೀವೇ ಮುಂದುವರೆಯಬೇಕೆಂದು ರಾಜ್ಯಪಾಲರು ಅವರಿಗೆ ನಿರ್ದೇಶನ ನೀಡುವರು. ಬಳಿಕ ಶಾಸಕಾಂಗ ಸಭೆ …
Read More »Monthly Archives: ಜುಲೈ 2021
ಕಾಂಗ್ರೆಸ್ ನ ಮಂಗಳೂರು ಸಭೆ ರದ್ದು: ಆಸ್ಕರ್ ಆರೋಗ್ಯ ವಿಚಾರಿಸಲು ಡಿಕೆ ಶಿವಕುಮಾರ್ ಮಂಗಳೂರಿಗೆ
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ. ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.
Read More »ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ
ಬೆಂಗಳೂರು: ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ. ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ವರಿಷ್ಠರ ಸೂಚನೆಯಂತೆ 26ರಿಂದ ಕೆಲಸ ಆರಂಭಿಸಲಿದ್ದೇನೆ ಎಂದಿದ್ದಾರೆ. ಧನ್ವಂತರಿ ಯಾಗದಲ್ಲಿ ಭಾಗಿಯಾದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೂ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ನನ್ನ ಕೆಲಸವನ್ನು ಮೆಚ್ಚಿ ಪ್ರಧಾನಿ ಮೋದಿ, ಅಮಿತ್ ಶಾ, …
Read More »ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆ: ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು!
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*
Read More »ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಎದುರಾಯ್ತು ಮತ್ತೊಂದು ಸಮಸ್ಯೆ!
ಬೆಂಗಳೂರು, ಜು. 22: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯತ ಸಮುದಾಯದ ನಾಯಕರು ಪಕ್ಷಬೇಧ ಮರೆತು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ. ಅದರೊಂದಿಗೆ ಈಗ ಮತ್ತೊಂದು ಒತ್ತಡ ಯಡಿಯೂರಪ್ಪ ಅವರಿಗೆ ಎದುರಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ …
Read More »ಡಿಕೆಶಿ ಬಿಟ್ಟು ಸಿದ್ದು ಜತೆ ರಾಹುಲ್ ಪ್ರತ್ಯೇಕ ಮಾತುಕತೆ : ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ
ಬೆಂಗಳೂರು: ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಪ್ರತ್ಯೇಕ ಮಾತುಕತೆ ನಡೆಸಿರುವುದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಸೇರಿ ಸಚಿವರಾಗಿರುವವರ ಮನಸ್ಥಿತಿ ಮತ್ತಿತರ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿರುವುದ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಬದಲಾವಣೆಯಾದರೆ ಆರು …
Read More »ವಿಜಯಪುರ : ಕುದುರಿಸಾಲವಾಡಗಿ ಸೈನಿಕನ ಮೇಲೆ ಹಲ್ಲೆ
ವಿಜಯಪುರ: ಜಿಲ್ಲೆಯಲ್ಲಿ ಸೈನಿಕನ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಸೈನಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ್ದಾನೆ. ಬಸವನ ಬಾಗೇವಾಡಿ ತಾಲೂಕಿನ ಕುದರೆಸಾಲವಾಡಗಿ ಗ್ರಾಮದ ಸಂತೋಷ ಶಿವಪ್ಪ ಹಟ್ಟಿ(30) ಸೇನೆಯಲ್ಲಿ ಹವಾಲ್ದಾರ ಆಗಿದ್ದು, 10 ವರ್ಷದಿಂದ ಸೇನೆಯಲ್ಲಿದ್ದಾರೆ. ತನ್ನ ಮದುವೆಗಾಗಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದು, ಗ್ರಾಮದ ಅರವಿಂದ ಕಡೇಮನಿ, ರಾಮಪ್ಪ ಕಡೇಮನಿ, ಬಸಗುಂಡಪ್ಪ ನಡುವಿನ ಮನಿ, ಮಲ್ಲವ್ವ ಕಡೇಮನಿ, ಭಾರತಿ ಕಡೇಮನಿ, ಸಾರ್ ಕಡೇಮನಿ, ರಮೇಶ ನಡುವಿನಮನಿ ಅವರು ಮಾರಕಾಸ್ತ್ರಗಳಿಂದ …
Read More »ಹೊಸ ಸರ್ಕಾರ ರಚನೆಯಾದ್ರೆ ಬಾಂಬೆ ಟೀಂನ ಯಾರಿಗೂ ಮಂತ್ರಿಸ್ಥಾನ ನೀಡಬೇಡಿ : ವಿಶ್ವನಾಥ್
ಮೈಸೂರು : ಹೊಸ ಸಿಎಂ ನೇತೃತ್ವದ ಸರ್ಕಾರ ರಚನೆಯಾದರೆ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬುಧವಾರ ಇಲ್ಲಿ ತಿಳಿಸಿದರು. ‘ಬದಲಾವಣೆಗಾಗಿ 17 ಮಂದಿ ಬೆಂಬಲ ನೀಡಿದ್ದರು. ಆದರೆ, ಅಧಿಕಾರ ಸಿಕ್ಕ ಮೇಲೆ ಅವರು ಬದಲಾದರು. ಇವರಿಗೆಲ್ಲಾ ಮುಖ್ಯಮಂತ್ರಿ ಆಗಿದ್ದವರು ಯಡಿಯೂರಪ್ಪ ಅಲ್ಲ. ಬದಲಾಗಿ ಅವರ ಪುತ್ರ ವಿಜಯೇಂದ್ರ. ಇವರ ಸಾಧನೆ ಶೂನ್ಯ. ಹೀಗಾಗಿ, ಈ 17 ಜನಕ್ಕೆ ಅಧಿಕಾರ ನೀಡದಿದ್ದರೂ ಪರವಾಗಿಲ್ಲ. …
Read More »ಲಂಚ ಸ್ವೀಕಾರ : ಯಾದಗಿರಿ ಜಿಲ್ಲೆಯ ಭ್ರಷ್ಟ ಭೂಮಾಪಕ ಎಸಿಬಿ ಬಲೆಗೆ
ಯಾದಗಿರಿ: ಜಿಲ್ಲೆಯ ಹುಣಸಗಿ ಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಭೂಮಾಪಕ ನ ಲಂಚಾವತಾರ ಬಯಲು ಮಾಡಿದ್ದಾರೆ. ಪಟ್ಟಣದ ಕಕ್ಕೇರಿ ಕ್ರಾಸ್ ಹತ್ತಿರ ರೋಡಿನಲ್ಲಿ ಸರ್ವೇಯರ್ ರವಿಕುಮಾರ್ ಬನಹಟ್ಟಿಯ ಮಹಾದೇವಪ್ಪ ಬಾಗನಗೌಡ ಬಡಿಗೇರ್ ಇವರ ಹೊಲ ಸರ್ವೆ ನಂಬರ್.53 ನೇದ್ದರ 12 ಎಕರೆ ಭೂಮಿಯಲ್ಲಿ 4 ಎಕರೆ 30 ಗುಂಟೆ ಪ್ರತ್ಯೇಕ ಮಾಡಿ ಸರ್ವೆ ಮಾಡುವ ವಿಷಯದಲ್ಲಿ 2,50,000/- ರೂ ಲಂಚದ ಹಣ ಪಡೆಯುತ್ತಿರುವಾಗ ಸಿಕ್ಕಿಬಿದ್ದಿದ್ದಾನೆ. ಕಲಬುರಗಿ ಎಸಿಬಿ …
Read More »ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಗುರುವಾರ ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ. ತೆರೆಮರೆಯಲ್ಲಿ ಈಗ ಹಲವು ಚಟುವಟಿಕೆಗಳು ವೇಗವಾಗಿ ನಡೆಯುತ್ತಿದ್ದು ಸಚಿವ ಸಂಪುಟ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳು ಹಲವು ಕ್ರಮಗಳನ್ನು ಇಂದಿನ ಸಭೆಯಲ್ಲಿ ಕೈಗೊಂಡು ಅದಕ್ಕೆ ಸಚಿವ ಸಂಪುಟ ಅನುಮೋದನೆಯನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ಈ …
Read More »