ಮುಂಬೈ,ಜು.21-ಕೊರೊನಾ ಎರಡನೆ ಅಲೆ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ತಮ್ಮವರನ್ನು ಕಳೆದುಕೊಂಡಿರುವವರು ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ಕೊರೊನಾ ಎರಡನೆ ಅಲೆ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಯಾರು ಸಾವನ್ನಪ್ಪಿಲ ಎಂದು ಸಮರ್ಥಿಸಿಕೊಂಡ ಬೆನ್ನಲ್ಲೆ ರಾವತ್ ಈ ಹೇಳಿಕೆ ನೀಡಿದ್ದಾರೆ. ಕೊರೊನಾ ಎರಡನೆ ಅಲೆ ಸಂದರ್ಭದಲ್ಲೂ ಆಕ್ಸಿಜನ್ ಕೊರತೆ ಇತ್ತು. ಆಗಲೂ ಹಲವು ರಾಜ್ಯಗಳಲ್ಲಿ ಆಮ್ಲಜನಕ …
Read More »Monthly Archives: ಜುಲೈ 2021
‘ಸಿಡಿ ಅಸ್ತ್ರ’ಕ್ಕೆ ಬೆಟ್ಟಿ ಬಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ : ‘ಶಾಸಕ ಎಂಪಿ ರೇಣುಕಾಚಾರ್ಯ’ ವಿರುದ್ಧ ‘CD ಷಡ್ಯಂತ್ರ’.?
ಬೆಂಗಳೂರು : ಸಿಎಂ ಬದಲಾವಣೆ ಬೆನ್ನಲ್ಲೇ, ಈಗ ಸಿಡಿ ಷಡ್ಯಂತ್ರದ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಿಡಿ ವಿಚಾರ ಕೂಡ ಈಗ ಮುನ್ನಲೆಗೆ ಬಂದಿದ್ದು, ಇದೇ ಕಾರಣಕ್ಕಾಗಿ ದಿಢೀರ್ ದೆಹಲಿಗೆ ಅವರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಎಂಪಿ ರೇಣುಕಾಚಾರ್ಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿದೆ ಎನ್ನಲಾಗಿದೆ. ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ದೆಹಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಂ ಪರವಾಗಿ …
Read More »ನಟ ದರ್ಶನ್ ಗೆ 5 ವರ್ಷ ನಿಷೇಧ ಹೇರಿ: ಫಿಲ್ಮಂ ಚೇಂಬರ್ ಗೆ ಮಾನವಹಕ್ಕುಗಳು, ಭ್ರಷ್ಟಚಾರ ನಿಗ್ರಹದಳದಿಂದ ದೂರು
ಬೆಂಗಳೂರು :ಕಳೆದ ಕೆಲವು ದಿನಗಳಿಂದ ಸ್ಯಾಂಡಲ್ವುಡ್ ನಟ ದರ್ಶನ್ ಅವರ ವಿರುದ್ಧ ಸಾಲಕ್ಕೆ ಶ್ಯೂರಿಟಿ ಪ್ರಕರಣ ಹಾಗು ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಆರೋಪ-ಪ್ರತ್ಯಾರೋಪಗಳು ಕನ್ನಡ ಚಿತ್ರರಂಗದಲ್ಲಿ ಬೇಸರ ಮೂಡಿಸಿದೆ. ಈ ಕುರಿತಾಗಿ ಇಂದು ಮಾನವ ಹಕ್ಕುಗಳು ಮತ್ತು ಭ್ರಷ್ಟಚಾರ ನಿಗ್ರಹದಳ ಸಂಸ್ಥೆಯ ಅಧ್ಯಕ್ಷ ಮೋಹನ್ ಅವರ ನಿಯೋಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ನಟನಿಗೆ ಐದು ವರ್ಷಗಳ ಕಾಲ ನಿಷೇಧ ಹೇರುವಂತೆ ಆಗ್ರಹಿಸಿ ಸೂಕ್ತ ಕ್ರಮಕ್ಕೆ …
Read More »ಬಾಯಿ ಮುಚ್ಚಿಸಿಕೊಂಡು ಇದ್ದರೆ ಎಲ್ಲ ಸರಿಹೋಗುತ್ತೆ : ಈಶ್ವರಪ್ಪ ಗರಂ
ಶಿವಮೊಗ್ಗ : ಕೇಂದ್ರೀಯ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಬದ್ಧ ಅಂತಾ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಯತ್ನಾಳ್ ಸೇರಿದಂತೆ ಯಾರು ಮಾತನಾಡದೆ ಬಾಯಿ ಮುಚ್ಚಿಸಿಕೊಂಡು ಇದ್ದರೆ ಎಲ್ಲವೂ ಸರಿಯಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸದ್ಯ ರಾಜಕೀಯ ಬೆಳವಣಿಗೆ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕರ್ನಾಟಕದಲ್ಲಿ ಏನು ಮಾಡಬೇಕೆಂದು ರಾಷ್ಟ್ರೀಯ ನಾಯಕರುಗಳು ಒಂದು ತೀರ್ಮಾನ ತೆಗೆದುಕೊಂಡಿದ್ದರು. ಪಕ್ಷದ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಬಂದು ಎಲ್ಲರ ಅಭಿಪ್ರಾಯ ಪಡೆದು ರಾಷ್ಟ್ರೀಯ …
Read More »ಸಿಎಂ ಯಡಿಯೂರಪ್ಪನವರನ್ನು ಬದಲಿಸಿದ್ರೆ ಬಿಜೆಪಿ ಸರ್ವನಾಶ; ಹೈಕಮಾಂಡ್ ಗೆ ದಿಂಗಾಲೆಶ್ವರ ಸ್ವಾಮೀಜಿ ಎಚ್ಚರಿಕೆ
ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಮಠಾಧೀಶರ ನಿಯೋಗ ಬಿಜೆಪಿ ಹೈಕಮಾಂಡ್ ಗೆ ಖಡಕ್ ಎಚ್ಚರಿಕೆ ನೀಡಿದೆ. ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಶ್ರೀ, ಸಮರ್ಥವಾಗಿ ಆಡಳಿತ ನಡೆಸುತ್ತಿರುವ ಯಡಿಯೂರಪ್ಪನರನ್ನು ಬದಲಾವಣೆ ಮಾಡಬೇಕು ಎಂಬುದು ಒಂದು ಕೆಟ್ಟ ಉದ್ದೇಶ. ಸಿಎಂ ಬಿ ಎಸ್ ವೈ ಕೇವಲ ಲಿಂಗಾಯತ ನಾಯಕ ಮಾತ್ರವಲ್ಲ, ಈ ರಾಜ್ಯದ …
Read More »ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಗಣಿ ಸಚಿವ ಮುರುಗೇಶ್ ನಿರಾಣಿ ಕಾಶಿ ವಿಶ್ವನಾಥ ದೇವರ ದರ್ಶನ ಪಡೆದು ವಾಪಸ್ ಆಗಿದ್ದ ಬೆನ್ನಲ್ಲೇ ಇದೀಗ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು …
Read More »ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ
ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ …
Read More »ಪೆಗಾಸಸ್ ವಿವಾದ: ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದ ಕರ್ನಾಟಕ ಕಾಂಗ್ರೆಸ್, ಸುಪ್ರೀಂಕೋರ್ಟ್ ನೇತೃತ್ವದಲ್ಲಿ ತನಿಖೆಗೆ ಆಗ್ರಹ
ಬೆಂಗಳೂರು: ಪೆಗಾಸಸ್ ಗೂಡಚಾರಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲೂ ಈ ಸಾಫ್ಟ್ ವೇರ್ ಬಳಸಿ ಪ್ರತಿಪಕ್ಷಗಳ ನಾಯಕರ ಆಪ್ತರ ಫೋನ್ ಕದ್ದಾಲಿಕೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿಯವರ ಆಪ್ತರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಬೇಹುಗಾರಿಕೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ …
Read More »ವೀರಶೈವ ಸಮುದಾಯದವರಿಗೇ ಸಿಎಂ ಹುದ್ದೆ ನೀಡಬೇಕು; ಹೋರಾಟದ ಎಚ್ಚರಿಕೆ ನೀಡಿದ ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ವಿವಿಧ ಸ್ವಾಮೀಜಿಗಳು ಬ್ಯಾಟಿಂಗ್ ಬೀಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರಿನ ಕೊಳದ ಮಠದ ಡಾ.ಶಾಂತವೀರ ಶ್ರೀಗಳು, ಯಡಿಯೂರಪ್ಪ ಬದಲಾವಣೆ ವಿಚಾರ ಕುರಿತು ಊಹಾಪೋಹ ಕೇಳಿ ಬರುತ್ತಿದೆ. ರಾಜ್ಯಕೀಯ ಅನ್ನೋದು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ವೀರಶೈವ ಲಿಂಗಾಯತ ಜನಾಂಗದವರು ಐವತ್ತಕ್ಕು ಹೆಚ್ಚು ಜನ ಸ್ಥಾನದಲ್ಲಿದ್ದಾರೆ. ಸಮುದಾಯವನ್ನು ಕಡೆಗಣಿಸುವ ಕೆಲಸ ಆಗಬಾರದು ಅಂತ ಹೇಳಿದರು. ನಾಯಕತ್ವ ಬದಲಾವಣೆ ಮಾಡುವುದಾದರೆ …
Read More »ಹೊಲಕ್ಕೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ, ರುಂಡ, ಕೈ ಕಾಲು ನಾಪತ್ತೆ; ಬಾಗಲಕೋಟೆಯಲ್ಲಿ ನರಬಲಿ ಶಂಕೆ
ಬಾಗಲಕೋಟೆ: ಮೇವು ತರಲೆಂದು ಹೊಲಕ್ಕೆ ಹೋದ ವೇಳೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ (Dead Body) ಪತ್ತೆಯಾದ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಮುಧೋಳ ತಾಲೂಕಿನ ಶಿರೋಳ ಬಳಿ ನಡೆದಿದೆ. ಜುಲೈ 16ರಂದು ಮೇವು ತರಲು ಹೊಲಕ್ಕೆ ಹೋಗಿದ್ದ ಮಹಿಳೆ (Women) ಮನೆಗೆ ವಾಪಾಸ್ಸಾಗಿರಲಿಲ್ಲ. ಇದೀಗ ನಾಪತ್ತೆಯಾಗಿದ್ದ ಮಹಿಳೆಯ ದೇಹ ರುಂಡ, ಕೈಕಾಲು ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ (Death) ಸುತ್ತ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮೃತ ಮಹಿಳೆಯನ್ನು ರಮೀಜಾ ಅಲಾಸ …
Read More »