ಬೆಂಗಳೂರು: ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ದಿಲ್ಲಿ ಭೇಟಿಯ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಂದುವರಿಕೆ ಬಗ್ಗೆ ನಿಗೂಢತೆ ಮುಂದುವರಿದಿದೆ. ಬಿಜೆಪಿಯ ಎರಡೂ ಬಣಗಳಲ್ಲಿ ಜು. 26ರ ಅನಂತರದ ರಾಜಕೀಯ ಲೆಕ್ಕಾಚಾರ ಬಿರುಸಾಗಿ ನಡೆಯುತ್ತಿದೆ. ಬಿಎಸ್‌ವೈ ಅವರು ಪ್ರಧಾನಿ ಮೋದಿ ಸಹಿತ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮರಳಿದ ಬಳಿಕ ‘ರಾಜೀನಾಮೆ ನೀಡುವುದಿಲ್ಲ, ಹಾಗೆಂದು ಪಕ್ಷದ ನಾಯಕರು ಸೂಚಿಸಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಬಿಜೆಪಿ ವಲಯದಲ್ಲಿ …
Read More »Monthly Archives: ಜುಲೈ 2021
ಯಡಿಯೂರಪ್ಪ ಪರ ಎಂ.ಬಿ.ಪಾಟೀಲ ಬ್ಯಾಟಿಂಗ್
ವಿಜಯಪುರ : ಕಾಂಗ್ರೆಸ್ ಪಕ್ಷದ ಲಿಂಗಾಯತ ಸಮುದಾಯದ ಹಿರಿಯ ಶಾಸಕ ಎಂ.ಬಿ.ಪಾಟೀಲ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ,ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಪದಚ್ಯುತಿ ಮಾಡಕೂಡದು. ಒಂದೊಮ್ಮೆ ಬಿಜೆಪಿ ಇಂಥ ಕೆಲಸಕ್ಕೆ ಕೈ ಹಾಕಿದರೆ ಬಿಜೆಪಿ ವರಿಷ್ಠರು ಖಂಡಿತವಾಗಿ ಲಿಂಗಾಯತರ ಅವಕೃಪೆಗೆ ಗುರಿ ಆಗಲಿದ್ದಾರೆ ಎಂದೂ ಎಚ್ಚರಿಸಿದ್ದಾರೆ. ಯಡಿಯೂರಪ್ಪ ಅವರ ವಯಸ್ಸು, ಪಕ್ಷ ಹಾಗೂ ನಾಡಿಗೆ ನೀಡಿದ …
Read More »ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಈ ಆಡಿಯೋ ಸಂಚಲನ ಸೃಷ್ಟಿಸಿದೆ. ತುಳುವಿನಲ್ಲಿರುವ ಆಡಿಯೋದಲ್ಲಿ, ” ಯಾರಿಗೂ ಹೇಳ್ಬೇಡಿ, ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ತಂಡವನ್ನು ತೆಗೆದು ಹೊಸ ತಂಡ ಕಟ್ಟಲಾಗುವುದು. …
Read More »ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ: ಈಶ್ವರಪ್ಪ,
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಳೀನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ, ಅವರನ್ನು ಬಲಿಪಶು ಮಾಡಲು ಹೊರಟಂತಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಒಂದುವೇಳೆ ನನ್ನ ವಿರುದ್ಧ ಸಂಚು ನಡೆದರೂ ನಾನು ತಲೆ ಕೆಡಿಸಿಕೊಳ್ಳಲ್ಲ, ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ ಎಂದು ಅಸಮಾಧಾನ ಹೊಸಹಾಕಿದರು. ಇದೇ …
Read More »ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ: ಯತ್ನಾಳ್ ಹೊಸ ಬಾಂಬ್ …!
ವಿಜಯಪುರ: ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರಾದ ಬಿ.ವೈ ವಿಜಯೇಂದ್ರ, ರಾಘವೇಂದ್ರ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ ಎಂದು ಹೊಸ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಾರ್ಯಾರೋ ದೆಹಲಿಗೆ ಹೋಗುತ್ತಾರೆ ಬೇರೆ ಬೇರೆ ರೀತಿಯ ಆಮಿಷಗಳನ್ನು ಒಡ್ಡಿ ಸಿಎಂ ಮಾಡಿ ಎನ್ನುತ್ತಾರೆ. 2000 ಕೋಟಿ ಕೊಡ್ತೀವಿ ನಮ್ಮನ್ನು ಸಿಎಂ ಮಾಡಿ …
Read More »ವರುಣನ ಆರ್ಭಟಕ್ಕೆ ಬೆಣ್ಣೆನಗರಿ ಜನಜೀವನ ತತ್ತರ!
ಜುಲೈ 18: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಬೆಣ್ಣೆನಗರಿ ತತ್ತರಿಸಿದೆ. ನಗರದ ಕೆಇಬಿ ಕಾಲೋನಿ ಸೇರಿದಂತೆ ಹಲವೆಡೆ ನೀರು ನುಗ್ಗಿದ್ದು, ಜನರು ಪರದಾಡಿದ ಘಟನೆ ನಡೆದಿದೆ. ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಕೆರೆ ಕಟ್ಟೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ಹಾಗೂ ಜಗಳೂರು ಸೇರಿದಂತೆ ಜಿಲ್ಲೆಯ ಎಲ್ಲೆಡೆ ರಾತ್ರಿಪೂರ್ತಿ ಮಳೆ ಸುರಿದಿದ್ದು, ಜನರಿಗೆ ಸಮಸ್ಯೆಯಾಗಿದೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಜಲಾವೃತಗೊಂಡಿದೆ. …
Read More »ಕಚ್ಚಾ ತೈಲ ಪೂರೈಕೆ ಹೆಚ್ಚಿಸಲು ಒಪೆಕ್+ ಸಮ್ಮತಿ
ಮಾಸ್ಕೊ/ದುಬೈ/ಲಂಡನ್: ಆಗಸ್ಟ್ ತಿಂಗಳಿನಿಂದ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚುಮಾಡಲು ಪೆಟ್ರೋಲಿಯಂ ರಫ್ತುದಾರ ರಾಷ್ಟ್ರಗಳ ಒಕ್ಕೂಟ (ಒಪೆಕ್) ಮತ್ತು ಆ ಒಕ್ಕೂಟದ ಮಿತ್ರರಾಷ್ಟ್ರಗಳ (ಒಪೆಕ್+) ಪ್ರತಿನಿಧಿಗಳು ಸಮ್ಮತಿ ಸೂಚಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ದುಷ್ಪರಿಣಾಮದಿಂದ ವಿಶ್ವದ ಅರ್ಥ ವ್ಯವಸ್ಥೆಯು ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಎರಡೂವರೆ ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿತ್ತು. ಪೂರೈಕೆ ಜಾಸ್ತಿ ಮಾಡಲು ಒಪ್ಪಿರುವುದರ ಪರಿಣಾಮವಾಗಿ, ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತಗ್ಗಬಹುದು ಎನ್ನಲಾಗಿದೆ. ‘ಒಪ್ಪಂದವು …
Read More »ಜಾತ್ರೆ ಬಿಟ್ಟು ಎಲ್ಲ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ
ಬೆಂಗಳೂರು : ನಾಳೆಗೆ ಮೂರನೇ ಹಂತದ ಅಲ್ ಲಾಕ್ ಅವಧಿ ಮುಗಿಯಲಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಇನ್ನಷ್ಟು ಲಾಕ್ ಡೌನ್ ಸಡಿಲಿಕೆಗೆ ನಿರ್ಧರಿಸಿದ್ದಾರೆ. ಮುಖ್ಯವಾಗಿ ಎಲ್ಲಾ ದೇವಾಲಯಗಳಲ್ಲಿ ಭಕ್ತರು ಸೇವೆ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆ ಅನ್ ಲಾಕ್ 3.0 ನಲ್ಲಿ ದೇವಾಲಯಗಳನ್ನು ಓಪನ್ ಮಾಡಿದ್ರೂ, ಜನರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಹೊರೆತುಪಡಿಸಿದರೆ ಪ್ರಸಾದ, ತೀರ್ಥ, ವಿಶೇಷ ಪೂಜೆ, ಸೇವೆಗಳಿಗೆ ನಿಷೇಧ …
Read More »ಬಕ್ರೀದ್; ಈದ್ಗಾ ಮೈದಾನಗಳಲಿ ಪ್ರಾರ್ಥನೆ ನಿಷೇಧ
ಹುಬ್ಬಳ್ಳಿ: ಕೋವಿಡ್ ಸೋಂಕು ತಗ್ಗಿದ್ದರೂ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕೆಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದರು. ತಹಶೀಲ್ದಾರ್ ಕಾರ್ಯಾಲಯದಲ್ಲಿ ಶನಿವಾರ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರ ಜೊತೆ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು. ಬಕ್ರೀದ್ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಸ್ ಮಾಡಬೇಕು. ಪ್ರಾರ್ಥನೆ ವೇಳೆ ಪ್ರತಿಯೊಬ್ಬರ ನಡುವೆ ಆರು ಅಡಿ ಸಾಮಾಜಿಕ ಅಂತರ ಇರಬೇಕು. ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ …
Read More »ಭಾನುವಾರ ರಾತ್ರಿಯಿಂದ ಬುಧವಾರ ರಾತ್ರಿಯವರೆಗೆ ಪಶ್ಚಿಮ-ಉತ್ತರ ಭಾರತದಲ್ಲಿ ಭಾರಿ ಮಳೆ
ಪಶ್ಚಿಮ ಭಾರತದ ರಾಜ್ಯಗಳು ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಭಾನುವಾರ ರಾತ್ರಿಯಿಂದ ಬುಧವಾರ ರಾತ್ರಿಯವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಹಿತಕರ ಘಟನೆಗಳನ್ನು ಎದುರಿಸಲು ರಾಜ್ಯ ವಿಕೋಪ ನಿರ್ವಹಣಾ ಪಡೆಗಳು ಸಜ್ಜಾಗಿವೆ. ಗುರುವಾರದ ನಂತರ ಮಧ್ಯ ಭಾರತ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಹವಾಮಾನ ಇಲಾಖೆ ಹೇಳಿದೆ -ದೆಹಲಿ ಮತ್ತು ಚಂಡೀಗಡದಲ್ಲಿ ಸೋಮವಾರ ಭಾರಿ ಮಳೆಯಾಗುವ …
Read More »